ಮಾ.3 : ರಾಷ್ಟ್ರೀಯ ಪಲ್ಸ್ ಪೊಲಿಯೋ ಕಾರ್ಯಕ್ರಮ | 5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಡಾ.ದೀಪಕ್ ರೈ ಕರೆ

ಪುತ್ತೂರು: ರಾಷ್ಟ್ರೀಯ ಪಲ್ಸ್ ಪೊಲಿಯೋ ಕಾರ್ಯಕ್ರಮದ ಅಂಗವಾಗಿ ಪೊಲಿಯೋ ಲಸಿಕೆ ಹಾಕುವ ಕಾರ್ಯಕ್ರಮ ಮಾ.3 ರಂದು ದೇಶಾದ್ಯಂತ ನಡೆಯಲಿದೆ. 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದಾಗಿದೆ. ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ತಪ್ಪದೆ ಪೋಷಕರು ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ರೋಗ ಬರದಂತೆ ತಮ್ಮ 5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸಿಕೊಳ್ಳಬೇಕೆಂದು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾ.3 : ರಾಷ್ಟ್ರೀಯ ಪಲ್ಸ್ ಪೊಲಿಯೋ ಕಾರ್ಯಕ್ರಮ | 5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಡಾ.ದೀಪಕ್ ರೈ ಕರೆ Read More »

ಅಕ್ಷಯ ಕಾಲೇಜು ಇನ್ವಿಕ್ತ ಕಾಮರ್ಸ್ ಅಸೋಸಿಯೇಷನ್ ನಿಂದ ‘ಬ್ಯಾಂಕಿಂಗ್ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ’

ಪುತ್ತೂರು: ಸಂಪ್ಯ ಅಕ್ಷಯ ಕಾಲೇಜಿನ ಇನ್ವಿಕ್ತ ಕಾಮರ್ಸ್ ಅಸೋಸಿಯೇಷನ್ ವತಿಯಿಂದ ದ್ವಿತೀಯ ಮತ್ತು ತೃತೀಯ ಪದವಿ ವಿದ್ಯಾರ್ಥಿಗಳಿಗೆ “ಬ್ಯಾಂಕಿಂಗ್ ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ” ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಸ್ಮಾರ್ಟ್ ಕ್ಲಾಸ್ಸಸ್ ಅಕಾಡೆಮಿ ತರಬೇತುದಾರೆ ಡಾ.ಸರಸ್ವತಿ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಸವಾಲುಗಳು ಮತ್ತು ಅದರ ತಯಾರಿಗಳ ಬಗ್ಗೆ ಮಾಹಿತಿ ನೀಡಿದರು. ತೃತೀಯ ಬಿ.ಕಾಂ ವಿದ್ಯಾರ್ಥಿನಿಯರಾದ ಸಾಕ್ಷಿ ಸ್ವಾಗತಿಸಿ, ಅಂಜಲಿ ವಂದಿಸಿದರು. ಕಾಲೇಜಿನ ಉಪನ್ಯಾಸಕರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಅಕ್ಷಯ ಕಾಲೇಜು ಇನ್ವಿಕ್ತ ಕಾಮರ್ಸ್ ಅಸೋಸಿಯೇಷನ್ ನಿಂದ ‘ಬ್ಯಾಂಕಿಂಗ್ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ’ Read More »

ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ಪುತ್ತೂರು: ನಿರಂತರ ಅಭ್ಯಾಸದಿಂದ ಸಾಮಾನ್ಯ ಮನುಷ್ಯ ಕೂಡ ಅಸಾಮಾನ್ಯ ಸಾಧನೆ ಮಾಡಲು ಸಾಧ್ಯ. ವಿದ್ಯಾರ್ಥಿಗಳು ನಿರಂತರ ಅಭ್ಯಾಸ ಮಾಡಿದಲ್ಲಿ ಸಾಧನೆಯ ಶಿಖರವನ್ನು ಏರಬಹುದು. ಕಾಲೇಜಿನಲ್ಲಿ ನಿರಂತರವಾಗಿ ಲಭಿಸಿದ ಪ್ರೇರಣಾತ್ಮಕ ವಿಚಾರಗಳು ಹಾಗು ಗುಣಾತ್ಮಕ ಶಿಕ್ಷಣವನ್ನು ಭವಿಷ್ಯತ್ತಿನಲ್ಲಿ ಬಳಕೆ ಮಾಡಿಕೊಳ್ಳಬೇಕು. ಭವಿಷ್ಯದ ಬಗ್ಗೆ ಗುರಿಯನ್ನು ಇಟ್ಟುಕೊಂಡು ತಮ್ಮ ಜೀವನದಲ್ಲಿ ಅಭಿವೃದ್ಧಿ ಸಾಧಿಸಲು ಯೋಚನೆ ಹಾಗೂ ಯೋಜನೆ ರೂಪಿಸಿಕೊಂಡು ಅದನ್ನು ಕಾರ್ಯಗತ ಮಾಡಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ, ವಿಶ್ರಾಂತ ಪ್ರಾಚಾರ್ಯ ಡಾ. ಎಚ್.

ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ Read More »

ಪರಿಶಿಷ್ಟ ಜಾತಿ ರೈತರಿಗೆ ವೈಜ್ಞಾನಿಕ ಜೇನು ಸಾಕಾಣಿಕೆ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಮತ್ತು ಕ್ಷೇತ್ರ ಭೇಟಿ ಕಾರ್ಯಕ್ರಮ

ಸುಳ್ಯ: ಮಂಗಳೂರು ಕೃಷಿ ವಿಜ್ಞಾನ ಕೇಂದ್ರ ಹಾಗೂ ಹೈದರಾಬಾದ್ ರಾಷ್ಟೀಯ ಕೃಷಿ ಸಂಶೋಧನಾ ನಿರ್ವಹಣಾ ಅಕಾಡೆಮಿ ಸಹಯೋಗದಲ್ಲಿ ಪರಿಶಿಷ್ಟ ಜಾತಿ ರೈತರಿಗೆ ವೈಜ್ಞಾನಿಕ ಜೇನು ಸಾಕಾಣಿಕೆ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಮತ್ತು ಕ್ಷೇತ್ರ ಭೇಟಿ ಕಾರ್ಯಕ್ರಮ ಉಬರಡ್ಕ ಗ್ರಾಮದ ಪ್ರಗತಿಪರ ಜೇನು ಕೃಷಿಕ ಪುಟ್ಟಣ್ಣ ಗೌಡರ ತೋಟದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗ್ರಾಪಂ ಮಹಾ ಒಕ್ಕೂಟದ ಅಧ್ಯಕ್ಷ ಹರೀಶ್ ಉಬರಡ್ಕ, ಪಾಲ್ಗೊಂಡು, ರೈತರು ತಮ್ಮ ಸುಸ್ಥಿರ ಅಭಿವೃದ್ದಿಗಾಗಿ ಜೇನು ಕೃಷಿಯಂತಹ ಉಪ ಕಸುಬುಗಳನ್ನು ಕೈಗೊಳ್ಳಬೇಕು

ಪರಿಶಿಷ್ಟ ಜಾತಿ ರೈತರಿಗೆ ವೈಜ್ಞಾನಿಕ ಜೇನು ಸಾಕಾಣಿಕೆ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಮತ್ತು ಕ್ಷೇತ್ರ ಭೇಟಿ ಕಾರ್ಯಕ್ರಮ Read More »

ಕಾಂಗ್ರೆಸ್ ಅಭ್ಯರ್ಥಿ ಪರ ಅಡ್ಡಮತದಾನ ಮಾಡಿದ ಶಾಸಕ ಎಸ್‍.ಟಿ. ಸೋಮಶೇಖರ್

ಪುತ್ತೂರು: ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್‍.ಟಿ. ಸೋಮಶೇಖರ್ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಅಡ್ಡಮತದಾನ ಮಾಡಿರುವ ಕುರಿತು ವರದಿಯಾಗಿದೆ. ಎಸ್‍.ಟಿ. ಸೋಮಶೇಖರ್ ಅವರು ಕಾಂಗ್ರೆಸ್‍ಗೆ ಅಡ್ಡಮತದಾನ ಮಾಡಿದ್ದಾರೆ ಎಂದು ಬಿಜೆಪಿ ಚುನಾವಣಾ ಏಜೆಂಟ್ ಒಬ್ಬರು ತಿಳಿಸಿದ್ದಾರೆ ಎನ್ನಲಾಗಿದೆ. ಮತದಾನಕ್ಕೂ ಮೊದಲು ಸೋಮಶೇಖರ್ ಪತ್ರಕರ್ತರೊಂದಿಗೆ ಮಾತನಾಡಿ, 11 ವರ್ಷದಿಂದ ಎಲ್ಲರಿಗೂ ಮತ ಹಾಕಿದ್ದೇನೆ. ಆದರೆ ರಾಜ್ಯಸಭೆಗೆ ಆಯ್ಕೆಯಾದವರು ಒಂದು ರೂಪಾಯಿ ಅನುದಾನ ಕೊಟ್ಟಿಲ್ಲ. ಈ ನಿಟ್ಟಿನಲ್ಲಿ ನಾನು ಈ ಬಾರಿ ಆತ್ಮಸಾಕ್ಷಿಯಾಗಿ ಮತ ಹಾಕುತ್ತೇನೆ ಎಂದು

ಕಾಂಗ್ರೆಸ್ ಅಭ್ಯರ್ಥಿ ಪರ ಅಡ್ಡಮತದಾನ ಮಾಡಿದ ಶಾಸಕ ಎಸ್‍.ಟಿ. ಸೋಮಶೇಖರ್ Read More »

ವಿವೇಕಾನಂದ ಶಿಶು ಮಂದಿರದಲ್ಲಿ ಮಕ್ಕಳ ಸಾಮೂಹಿಕ ಹುಟ್ಟುಹಬ್ಬ, ಮಾತೃವಂದನ ಕಾರ್ಯಕ್ರಮ

ಪುತ್ತೂರು: ವಿವೇಕಾನಂದ ಶಿಶು ಮಂದಿರದಲ್ಲಿ ಮಕ್ಕಳ ಸಾಮೂಹಿಕ ಹುಟ್ಟುಹಬ್ಬದ ಆಚರಣೆ, ಮಾತೃವಂದನ, ಸಾಮೂಹಿಕ ಭೋಜನ ಕಾರ್ಯಕ್ರಮ ಜರುಗಿತು. ಮಕ್ಕಳು ತಮ್ಮ ತಾಯಿಯ ಪಾದಪೂಜೆ ನೆರವೇರಿಸಿದ ನಂತರ ತಾಯಂದಿರು ತಮ್ಮ ಮಕ್ಕಳಿಗೆ ಆರತಿ ಬೆಳಗಿ ಸಿಹಿ ತಿನ್ನಿಸಿ ಆಶೀರ್ವಾದಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀನಿವಾಸ ಪೈ ವಹಿಸಿದ್ದರು. ಉಪನ್ಯಾಸಕ, ದೈವನರ್ತಕ ಡಾ. ರವೀಶ ಪಡುಮಲೆ ಅಭ್ಯಾಗತರಾಗಿ ಪಾಲ್ಗೊಂಡು, ವಿವೇಕಾನಂದ ಶಿಶು ಮಂದಿರದ ಈ ಕಾರ್ಯಕ್ರಮ ಅತ್ಯಂತ ಶ್ಲಾಘನೀಯ. ಎಳೆಯ ಮಕ್ಕಳಿಗೆ ಬಾಲ್ಯದಲ್ಲಿ ಕೊಡುವ ಈ ಸಂಸ್ಕಾರವು

ವಿವೇಕಾನಂದ ಶಿಶು ಮಂದಿರದಲ್ಲಿ ಮಕ್ಕಳ ಸಾಮೂಹಿಕ ಹುಟ್ಟುಹಬ್ಬ, ಮಾತೃವಂದನ ಕಾರ್ಯಕ್ರಮ Read More »

ಮಗುವಿಗೆ ಜೀವರಕ್ಷಕವಾದ ಶ್ವಾನ |  ಮಗು ಹಾವು ತುಳಿಯುವುದನ್ನು ತಪ್ಪಿಸಿದ ಶ್ವಾನ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಯಾತ್ರಾರ್ಥಿಗಳಾಗಿ ಬಂದಿದ್ದ ಭಕ್ತರ ಗುಂಪೊಂದರ ಜತೆಗಿದ್ದ ಮಗು ನಾಗರ ಹಾವೊಂದನ್ನು ತುಳಿಯುವುದನ್ನು ತಪ್ಪಿಸಿ ಶ್ವಾನವೊಂದು ಮೆಚ್ಚುಗೆಗೆ ಪಾತ್ರವಾಗಿದೆ.  ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಕುಕ್ಕೆಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯ ಬಳಿ ರಸ್ತೆಯಲ್ಲಿ ತೆರಳುತ್ತಿದ್ದ ಭಕ್ತರ ತಂಡದಲ್ಲಿ ಮಹಿಳೆಯೊಬ್ಬರು ಚಿಕ್ಕ ಮಗುವನ್ನು ರಸ್ತೆಯಲ್ಲಿ ಬಿಟ್ಟು ಪಕ್ಕದ ಅಂಗಡಿಗೆ ಹಣ್ಣುಕಾಯಿ ಖರೀದಿಸಲು ತೆರಳಿದ ವೇಳೆ ಮಗು ರಸ್ತೆಯ ಬದಿಗೆ ಬಂದಿದೆ. ಈ ಸಂದರ್ಭದಲ್ಲಿ ನಾಗರಹಾವೊಂದು ರಸ್ತೆ ದಾಟುತಿದ್ದು, ಮಗು ಹಾವನ್ನು ತುಳಿಯಬೇಕು ಅನ್ನುವಷ್ಟರಲ್ಲಿ ಅಲ್ಲಿಯೇ

ಮಗುವಿಗೆ ಜೀವರಕ್ಷಕವಾದ ಶ್ವಾನ |  ಮಗು ಹಾವು ತುಳಿಯುವುದನ್ನು ತಪ್ಪಿಸಿದ ಶ್ವಾನ Read More »

ಭಾರತ ಸಂವಿಧಾನ ಕುರಿತು ಭಾಷಣ ಮಾಡಲು ಬಂದ ಪಾಕಿಸ್ತಾನಿ ಯುವತಿ | ಹಿಂದಕ್ಕೆ ಕಳುಹಿಸಿ ಭದ್ರತಾ ಪಡೆ

ಭಾರತ ಸಂವಿಧಾನ ಬಗ್ಗೆ ಭಾಷಣ ಮಾಡಲು ಪಾಕಿಸ್ತಾನದಿಂದ ಬಂದಿದ್ದ ನಿತಾಷ ಕೌಲ್ ರನ್ನು ಕೇಂದ್ರೀಯ ಭದ್ರತಾ ಪಡೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹಿಂದೆ ಕಳುಹಿಸಿದ ಘಟನೆ ನಡೆದಿದೆ. ಕರ್ನಾಟಕ ಕಾಂಗ್ರೆಸ್ ಸರಕಾರದ ಆಮಂತ್ರಣದಂತೆ ಭಾರತದ ಸಂವಿಧಾನದ ಬಗ್ಗೆ ಭಾಷಣ ಮಾಡಲು ಪಾಕಿಸ್ತಾನದಿಂದ ಬಂದಿದ್ದ ನಿತಾಷ ಕೌಲ್ ರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಆದೇಶದಂತೆ ಕೇಂದ್ರೀಯ ಭದ್ರಾತಾ ಪಡೆ, ಬೆಂಗಳೂರು ವಿಮಾನನಿಲ್ದಾಣ ದಿಂದ ಪಾಕಿಸ್ತಾನಕ್ಕೆ ಹಿಂದೆ ಕಳಿಸಿದೆ. ಕರ್ನಾಟಕದ ಕಾಂಗ್ರೆಸ್ ಸರಕಾರ, ಸರಕಾರಿ ಇಂತಹಾ ಜಿಹಾದಿಗಳನ್ನು

ಭಾರತ ಸಂವಿಧಾನ ಕುರಿತು ಭಾಷಣ ಮಾಡಲು ಬಂದ ಪಾಕಿಸ್ತಾನಿ ಯುವತಿ | ಹಿಂದಕ್ಕೆ ಕಳುಹಿಸಿ ಭದ್ರತಾ ಪಡೆ Read More »

ಮಾ.9 : ಕುದ್ಮಾರು ಅನ್ಯಾಡಿ ಗ್ರಾಮದೈವ ಶ್ರೀ ಶಿರಾಡಿ ರಾಜನ್ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವ

ಕಡಬ: ಕಡಬ ತಾಲೂಕಿನ ಕುದ್ಮಾರು ಅನ್ಯಾಡಿ ಗ್ರಾಮದೈವ ಶ್ರೀ ಶಿರಾಡಿ ರಾಜನ್ ದೈವಸ್ಥಾನದಲ್ಲಿ ನೇಮೋತ್ಸವ ಮಾ.9 ಶನಿವಾರ ಕುದ್ಮಾರು ಕಟ್ಟತ್ತಾರು ಕಟ್ಟೆಯಲ್ಲಿ (ದೈಪಿಲ ದ್ವಾರದ ಬಳಿ) ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ನೇಮೋತ್ಸವದ ಅಂಗವಾಗಿ ಬೆಳಿಗ್ಗೆ 8 ಕ್ಕೆ ಗಣಪತಿ ಹೋಮ, ಸಂಜೆ 7.15 ಕ್ಕೆ ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವದ ದೈವಸ್ಥಾನ ಅನ್ಯಾಡಿಯ ಗ್ರಾಮ ಚಾವಡಿಯಿಂದ ದೈವದ ಭಂಡಾರ ತೆಗೆಯುವುದು, 8.30 ಕ್ಕೆ ದೈವಕ್ಕೆ ಎಣ್ಣೆ ಬೂಳ್ಯ ನೀಡುವುದು, ರಾತ್ರಿ 9 ಕ್ಕೆ

ಮಾ.9 : ಕುದ್ಮಾರು ಅನ್ಯಾಡಿ ಗ್ರಾಮದೈವ ಶ್ರೀ ಶಿರಾಡಿ ರಾಜನ್ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವ Read More »

ಮಾದಕ ಸೇವನೆ ಮಾಡಿ ಅನುಚಿತ ವರ್ತನೆ | ಇಬ್ಬರ ಬಂಧನ

ಉಪ್ಪಿನಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕದ್ರವ್ಯ ಸೇವನೆ ಮಾಡಿ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸವಣೂರು ನಿವಾಸಿ ಪಿ. ಹನೀಫ್, ಮಹಮ್ಮದ್ ಶಾಫಿ ಬಂಧಿತರು. ಉಪ್ಪಿನಂಗಡಿ ಠಾಣಾ ಉಪನಿರೀಕ್ಷಕರಾದ ಅವಿನಾಶ್ ಹೆಚ್ ಹಾಗೂ ಸಿಬ್ಬಂದಿಗಳು ಆರೋಪಿಗಳನ್ನು ಬಂಧಿಸಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕದ್ರವ್ಯ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾದಕ ಸೇವನೆ ಮಾಡಿ ಅನುಚಿತ ವರ್ತನೆ | ಇಬ್ಬರ ಬಂಧನ Read More »

error: Content is protected !!
Scroll to Top