ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ

ಪುತ್ತೂರು: ವಿದ್ಯಾಸಂಸ್ಥೆಯ ಕೀರ್ತಿಯನ್ನು ಎಲ್ಲೆಡೆ ಪಸರಿಸುವವರು ಹಿರಿಯ ವಿದ್ಯಾರ್ಥಿಗಳಾಗಿದ್ದು, ಅವರೇ ಕಾಲೇಜಿನ ರಾಯಭಾರಿಗಳಾಗಿದ್ದಾರೆ. ಹಿರಿಯ ವಿದ್ಯಾರ್ಥಿಗಳು ಕಾಲೇಜಿಗೆ ಭೇಟಿ ನೀಡಿ ತಮ್ಮಿಂದಾದ ಸಹಾಯವನ್ನು ನೀಡುತ್ತಾ ಬಂದಿದ್ದಾರೆ. ಸಂಸ್ಥೆಯ ಬೆಳವಣಿಗೆ ದೃಷ್ಟಿಯಿಂದ ಹಿರಿಯ ವಿದ್ಯಾರ್ಥಿಗಳ ಸಂಘ ಬಹಳ ಅಗತ್ಯ ಎಂದು ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿ. ಗಣಪತಿ ಭಟ್ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದ 2000-03 ರ ಸಾಲಿನ ಕಲಾ ಪದವಿ ವಿದ್ಯಾರ್ಥಿಗಳು ಆಯೋಜಿಸಿದ ಸ್ನೇಹ ಸಮ್ಮಿಲನ ಕಾರ್ಯಕ್ರಮದ ಅಧ್ಯಕ್ಷತೆ […]

ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ Read More »

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಪುತ್ತೂರಿನಲ್ಲಿ ಸಂತ ಸೇವಾಲಾಲ್ ಹಾಗೂ ಸವಿತಾ ಮಹರ್ಷಿ ಜಯಂತಿ ಆಚರಣಾ ಕಾರ್ಯಕ್ರಮ

ಪುತ್ತೂರು: ಸಮಾಜದಲ್ಲಿ ಜಾತಿಪದ್ಧತಿಯಂತಹ ದುಷ್ಟ ಪದ್ಧತಿಗಳ ವಿರುದ್ಧ ಹೋರಾಟ ನಡೆಸಿದ ದಾರ್ಶನಿಕರು ಮಾನವ ಜನ್ಮಕ್ಕೆ ಅಭೂತಪೂರ್ವ ಚಿಂತನೆಗಳನ್ನು ನೀಡುವ ಮೂಲಕ ಈ ಸಮಾಜದಲ್ಲಿ ಒಂದಾಗಿ ಬದುಕಬೇಕು ಎನ್ನುವ ಪಾಠ ಮಾಡಿದ್ದಾರೆ. ಇದಕ್ಕೆ ಪೂರಕವಾಗಿ ನಾವು ನಡೆದುಕೊಳ್ಳಬೇಕಾಗಿದೆ ಎಂದು ಪುತ್ತೂರು ತಹಶೀಲ್ದಾರ್ ಪುರಂದರ ಅವರು ಅಭಿಪ್ರಾಯಪಟ್ಟರು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪುತ್ತೂರು ಆಡಳಿತ ಸೌಧದ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಂತ ಸೇವಾಲಾಲ್ ಹಾಗೂ ಸವಿತಾ ಮಹರ್ಷಿ ಜಯಂತಿ ಆಚರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಪುತ್ತೂರಿನಲ್ಲಿ ಸಂತ ಸೇವಾಲಾಲ್ ಹಾಗೂ ಸವಿತಾ ಮಹರ್ಷಿ ಜಯಂತಿ ಆಚರಣಾ ಕಾರ್ಯಕ್ರಮ Read More »

ಲಿಟ್ಲ್ ಫ್ಲವರ್ ಶಾಲೆಯಲ್ಲಿ ಮೇಳೈಸಿದ ಶಾಲಾ ಸ್ಕೌಟ್, ಗೈಡ್, ಕಬ್, ಬುಲ್ ಬುಲ್ ದಳದ ವಾರ್ಷಿಕ ಮೇಳ

ಪುತ್ತೂರು: ದರ್ಬೆ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ದಳದ ವಾರ್ಷಿಕ ಮೇಳ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಶಾಲಾ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ಮಕ್ಕಳಿಂದ ಗೂಡುದೀಪ ರಚನೆ, ನಕ್ಷತ್ರ ರಚನೆ, ರಾಷ್ಟ್ರಧ್ವಜದ ಚಿತ್ರ ರಚನೆ, ಎಲೆಗಳಿಂದ ಆಕೃತಿ ತಯಾರಿ ನಡೆಯಿತು. ರಂಗಬೆಳಕು ತಂಡ ಪುತ್ತೂರು ವತಿಯಿಂದ ಕೃಷ್ಣಪ್ಪ ಬಂಬಿಲ ನೇತೃತ್ವದಲ್ಲಿ ಜಾಗೃತಿ ಗೀತೆಗಳ ಗಾಯನ ನಡೆಯಿತು. ದರ್ಬೆ ವೃತ್ತದಿಂದ 352 ವಿದ್ಯಾರ್ಥಿಗಳು,

ಲಿಟ್ಲ್ ಫ್ಲವರ್ ಶಾಲೆಯಲ್ಲಿ ಮೇಳೈಸಿದ ಶಾಲಾ ಸ್ಕೌಟ್, ಗೈಡ್, ಕಬ್, ಬುಲ್ ಬುಲ್ ದಳದ ವಾರ್ಷಿಕ ಮೇಳ Read More »

ಆರೋಗ್ಯ ವ್ಯತ್ಯಯ | 6 ತಿಂಗಳ ಗರ್ಭಿಣಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಬಂಟ್ವಾಳ: ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದ 6 ತಿಂಗಳ ಗರ್ಭಿಣಿ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ನಡೆದಿದೆ. ತೆಂಕಕಜೆಕಾರು ನಿವಾಸಿ ವಸಂತ ಅವರ ಪತ್ನಿ ಸುಜಾತ ಮೃತಪಟ್ಟವರು. ಗರ್ಭಸ್ಥ ಶಿಶುವಿನ ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರು ಲೇಡಿಗೋಶನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಏಕಾಏಕಿ ಆರೋಗ್ಯ ಏರುಪೇರಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಶಿಶುವಿಗೆ ಹೃದಯ ಸಂಬಂಧಿ ತೊಂದರೆ ಇದೆ ಎನ್ನುವ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದರು. ಸುಮಾರು 10 ವರ್ಷಗಳ ಹಿಂದೆ ವಿವಾಹವಾಗಿದ್ದು, ಬಹಳ ವರ್ಷಗಳ

ಆರೋಗ್ಯ ವ್ಯತ್ಯಯ | 6 ತಿಂಗಳ ಗರ್ಭಿಣಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು Read More »

ಫೆ.16-21: ಮಾಣಿಲಬೀಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಬಂಟ್ವಾಳ: ತಾಲೂಕಿನ ವಿಟ್ಲ ಮಾಣಿಲಬೀಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಇಂದಿನಿಂದ ಫೆ.21 ರ ವರೆಗೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಕ್ಷೇತ್ರದ ತಂತ್ರಿ ಬ್ರಹ್ಮಶ್ರೀ ಉಳಿತ್ತಾಯ ವಿಷ್ಣು ಅಸ್ರ ಅವರ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳು ಜರಗಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡು ಶ್ರೀ ವಿಷ್ಣುಮೂರ್ತಿ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ಶ್ರೀ ವಿಷ್ಣುಮೂರ್ತಿ ಕ್ಷೇತ್ರಾಡಳಿತ ಸೇವಾ ಸಮಿತಿ, ಜೀರ್ಣೋದ್ಧಾರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಫೆ.16-21: ಮಾಣಿಲಬೀಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ Read More »

ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ಆರ್. ಸಿ. ನಾರಾಯಣ ರೆಂಜ ನೇಮಕ

ಪುತ್ತೂರು: ಕರ್ನಾಟಕ ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ಆರ್. ಸಿ. ನಾರಾಯಣ ರೆಂಜ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯಾಧ್ಯಕ್ಷರಾದ ರಘು ಕೌಟಿಲ್ಯಾ ಘೋಷಿಸಿದ್ದಾರೆ. 36 ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತರಾಗಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷರಾಗಿ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲಿ ನಂ. ವನ್ ಜಿಲ್ಲೆಯಾಗಿ ಸಂಘಟನೆಯಲ್ಲಿ ಮುಂಚೂಣಿಯಲ್ಲಿತ್ತು. ಬೂತ್ ನಿಂದ  ರಾಜ್ಯಮಟ್ಟದವರೆಗೆ ತನ್ನ ಸಂಘಟನೆ ಕಾರ್ಯಶೈಲಿಯಿಂದ ಬಿಜೆಪಿಗೆ ಬಲ ತುಂಬಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕನಾಗಿ, ಎ.ಬಿ.ವಿ.ಪಿ. ಯಲ್ಲಿ

ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ಆರ್. ಸಿ. ನಾರಾಯಣ ರೆಂಜ ನೇಮಕ Read More »

ಗ್ರಾಮೀಣ ಪ್ರದೇಶದ ಪತ್ರಕರ್ತರಿಗೆ ಉಚಿತ ಬಸ್ ಪಾಸ್ | ಬಜೆಟ್ ನಲ್ಲಿ ಘೋಷಣೆ ಮಾಡಿದ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಇಂದು ಘೋಷಿಸಿದ ಬಜೆಟ್‍ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಪ್ರಕಟಿಸಿದ್ದು ಈ ಮೂಲಕ ದಶಕಗಳ ಕನಸು ನನಸಾಗಿದೆ. ದಾವಣಗೆರೆಯಲ್ಲಿ ಇದೇ ಫೆ.3&4 ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಭರವಸೆಯನ್ನು ಈಡೇರಿಸಿರುವುದಕ್ಕೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಧನ್ಯವಾದ ಸಲ್ಲಿಸಿದ್ದಾರೆ. ಬಸ್ ಪಾಸ್ ಬೇಡಿಕೆ ಈಡೇರಿಸಲು ಸ್ಪಂದಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಎಲ್ಲಾ ಹಂತದಲ್ಲಿಯೂ ಸಹಕಾರ

ಗ್ರಾಮೀಣ ಪ್ರದೇಶದ ಪತ್ರಕರ್ತರಿಗೆ ಉಚಿತ ಬಸ್ ಪಾಸ್ | ಬಜೆಟ್ ನಲ್ಲಿ ಘೋಷಣೆ ಮಾಡಿದ ಸಿಎಂ ಸಿದ್ಧರಾಮಯ್ಯ Read More »

ನಾಳೆ (ಫೆ.17) : ಸಹ್ಯಾದ್ರಿ ಕಾಲೇಜಿನ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್‌ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಮಾವೇಶ| ಪುತ್ತೂರಿನಿಂದ 10 ಸಾವಿರ ಮಂದಿ ಕಾರ್ಯಕರ್ತರು

ಪುತ್ತೂರು: ಮುಂಬರುವ ಲೋಕಸಭಾ ಚುನಾವಣೆಯ ಸಿದ್ಧತೆಗಾಗಿ ದೇಶದ ವಿವಿಧ ರಾಜ್ಯಗಳಲ್ಲಿ ಪಕ್ಷದ ಕಾರ್ಯಕರ್ತರನ್ನು ಇದಕ್ಕೆ ಸಜ್ಜುಗೊಳಿಸಲು ಈಗಾಗಲೇ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶ ಕರ್ನಾಟಕದಲ್ಲಿ ಪ್ರಥಮವಾಗಿ ಮಂಗಳೂರನ್ನು ಆಯ್ಕೆ ಮಾಡಿಕೊಂಡು ಫೆ.17ರಂದು ಮಂಗಳೂರಿನ ಅಡ್ಯಾರಿನಲ್ಲಿರುವ ಸಹ್ಯಾದ್ರಿ ಕಾಲೇಜಿನ ಮುಂಭಾಗದ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್‌ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಾವೇಶದ ಪ್ರಚಾರ ಮಾಧ್ಯಮ ಮುಖ್ಯಸ್ಥ ಕೆಪಿಸಿಯ ಸಂಯೋಜಕ ಕಾವು ಹೇಮನಾಥ ಶೆಟ್ಟಿಯವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದಕ್ಷಿಣ ಕನ್ನಡ ಹಾಗೂ ಉಡುಪಿ

ನಾಳೆ (ಫೆ.17) : ಸಹ್ಯಾದ್ರಿ ಕಾಲೇಜಿನ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್‌ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಮಾವೇಶ| ಪುತ್ತೂರಿನಿಂದ 10 ಸಾವಿರ ಮಂದಿ ಕಾರ್ಯಕರ್ತರು Read More »

ರಿಕ್ಷಾ ಪಲ್ಟಿ ! ಮೂವರಿಗೆ ಗಾಯ

ಪುತ್ತೂರು: ರಿಕ್ಷಾವೊಂದು ಪಲ್ಟಿಯಾಗಿ ಮೂವರು ಗಾಯಗೊಂಡ ಘಟನೆ ತಿಂಗಳಾಡಿ ಬಳಿಯ ನಿಡ್ಯಾನ ಎಂಬಲ್ಲಿ ಇಂದು ನಡೆದಿದೆ. ನಾಸಿರ್ ಎಂಬವರು ಮಾಡಾವಿನಿಂದ ತಿಂಗಳಾಡಿ ಕಡೆಗೆ ಚಲಾಯಿಸಿಕೊಂಡು ಬರುತ್ತಿದ್ದ ರಿಕ್ಷಾ ನಿಡ್ಯಾನ ಬಸ್ ತಂಗುದಾಣದ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಾಯಗೊಂಡರು ಎನ್ನಲಾಗಿದೆ. ಬಳಿಕ ಸ್ಥಳೀಯ ಸಹಕಾರದಿಂದ ಗಾಯಾಳುಗಳನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ನಾಸಿರ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ರಿಕ್ಷಾ ಪಲ್ಟಿ ! ಮೂವರಿಗೆ ಗಾಯ Read More »

ಸೌಜನ್ಯ ಅತ್ಯಾಚಾರ, ಕೊಲೆ | ನ್ಯಾಯೋಚಿತ ತನಿಖೆಗೆ ಆಗ್ರಹಿಸಿ ಫೆ.18 ರಂದು ಬೃಹತ್ ಜನಾಂದೋಲನ

ಉಪ್ಪಿನಂಗಡಿ: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ನ್ಯಾಯೋಚಿತ ತನಿಖೆ ನಡೆಸಬೇಕೆಂದು ಆಗ್ರಹಿಸಿ ಫೆ.18 ರಂದು ಅಪರಾಹ್ನ 3 ಗಂಟೆಗೆ ಉಪ್ಪಿನಂಗಡಿಯ ಎಚ್‌. ಎಂ. ಅಡಿಟೋರಿಯಂನ ವಠಾರದಲ್ಲಿ ಬೃಹತ್ ಜನಾಂದೋಲನ ಸಭೆ ನಡೆಯಲಿದೆ ಎಂದು ಸಾಮಾಜಿಕ ಹೋರಾಟಗಾರ ಅಲಿಮಾರ ಜತೀಂದ್ರ ಶೆಟ್ಟಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸೌಜನ್ಯ ಎಂಬ ಅಮಾಯಕ ವಿದ್ಯಾರ್ಥಿನಿಯ ಬರ್ಬರ ಹತ್ಯೆ, ಅತ್ಯಾಚಾರ ಪ್ರಕರಣದ ಬಗ್ಗೆ ಸರಕಾರ ಮರು ತನಿಖೆಯನ್ನು ನಡೆಸಬೇಕು. ಪ್ರಕರಣದ ನೈಜ ಆರೋಪಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು.

ಸೌಜನ್ಯ ಅತ್ಯಾಚಾರ, ಕೊಲೆ | ನ್ಯಾಯೋಚಿತ ತನಿಖೆಗೆ ಆಗ್ರಹಿಸಿ ಫೆ.18 ರಂದು ಬೃಹತ್ ಜನಾಂದೋಲನ Read More »

error: Content is protected !!
Scroll to Top