ಫೆ.18-19 : ಒಡಿಯೂರು ಕ್ಷೇತ್ರದಲ್ಲಿ ತುಳುನಾಡ ಜಾತ್ರೆ ‘ಒಡಿಯೂರು ರಥೋತ್ಸವ, ಸಿರಿರಾಮೆ ತುಳು ಸಾಹಿತ್ಯ ಸಮ್ಮೇಳನ | ಪುತ್ತೂರಿನಿಂದ ಹೊರಟಿತು ಹಸಿರುವಾಣಿ ಹೊರೆಕಾಣಿಕೆ ಸಮರ್ಪಣಾ ಮೆರವಣಿಗೆ
ಪುತ್ತೂರು: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ನಲ್ಲಿ ಫೆ.18 ಹಾಗೂ 19 ರಂದು ನಡೆಯಲಿರುವ ತುಳುನಾಡ ಜಾತ್ರೆ ‘ಒಡಿಯೂರು ರಥೋತ್ಸವ’, ಸಿರಿರಾಮೆ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಪುತ್ತೂರಿನಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ಮೆರವಣಿಗೆ ಶುಕ್ರವಾರ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ರಥಬೀದಿಯಲ್ಲಿ ಹೊರೆಕಾಣಿಕೆ ಸಮಿತಿ ಗೌರವಾಧ್ಯಕ್ಷ ಡಾ.ಸುರೇಶ್ ಪುತ್ತೂರಾಯ, ಗೌರವ ಸಲಹೆಗಾರರು ಸವಣೂರು ಸೀತಾರಾಮ ರೈ ತೆಂಗಿನ ಕಾಯಿ ಒಡೆಯುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಹೊರೆಕಾಣಿಕೆ ಸಮಿತಿ ಕಾರ್ಯಾಧ್ಯಕ್ಷ […]










