ಫೆ.11 : ಯುವ ಒಕ್ಕಲಿಗ ಗೌಡ ಸೇವಾ ಸಂಘ ಬನ್ನೂರು ವಲಯದ ಆತಿಥ್ಯದಲ್ಲಿ ಪುತ್ತೂರು ತಾಲೂಕು ಮಟ್ಟದ ‘‘ಯುವ ಕ್ರೀಡಾ ಸಂಭ್ರಮ-2024’’
ಪುತ್ತೂರು: ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪ್ರಾಯೋಜಕತ್ವದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘ ಬನ್ನೂರು ವಲಯದ ಆತಿಥ್ಯದಲ್ಲಿ ಪುತ್ತೂರು ತಾಲೂಕು ಮಟ್ಟದ ‘ಯುವ ಕ್ರೀಡಾ ಸಂಭ್ರಮ-2024’ ಫೆ.11 ಭಾನುವಾರ ತೆಂಕಿಲ ವಿವೇಕಾನಂದ ಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕ್ರೀಡಾ ಸಂಚಾಲಕ ಮಾಧವ ಗೌಡ ಪೆರಿಯತ್ತೋಡಿ ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕ್ರೀಡಾ ಸಂಭ್ರಮದ ಅಂಗವಾಗಿ ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ಪ್ರತ್ಯೇಕ ವಿಭಾಗಗಳಲ್ಲಿ ಆಟೋಟ ಸ್ಪರ್ಧೆಗಳು ನಡೆಯಲಿವೆ ಎಂದು ತಿಳಿಸಿದರು. ಭಾನುವಾರ ಬೆಳಿಗ್ಗೆ […]










