ಕುಕ್ಕೇಡಿ ಪಟಾಕಿ ಗೋಡೌನ್ ಸ್ಪೋಟ ಪ್ರಕರಣ | ನಾಲ್ಕನೇ ಆರೋಪಿ ಬಂಧನ

ಬೆಳ್ತಂಗಡಿ: ಕುಕ್ಕೇಡಿಯಲ್ಲಿ ಪಟಾಕಿ ಗೋಡೌನ್ ನಲ್ಲಿ ನಡೆದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದ ಮತ್ತೊಬ್ಬ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಉತ್ತರ ದಿವಾನರ ಪಾಳ್ಯ ನಿವಾಸಿ ಅನಿಲ್ ಎಂ. ಡೇವಿಡ್ (49) ಬಂಧಿತ ವ್ಯಕ್ತಿ. ಈತ ಪಟಾಕಿ ತಯಾರಿಕೆಗೆ ರಾಸಾಯನಿಕಗಳನ್ನು ಸರಬರಾಜು ಮಾಡುತ್ತಿದ್ದ ಎನ್ನಲಾಗಿದೆ. ಜ.28 ರಂದು ಕುಕ್ಕೇಡಿ ಎಂಬಲ್ಲಿ ಸಂಜೆ ಸುಮಾರು 5.30 ರ ಹೊತ್ತಿಗೆ ಪಟಾಕಿ ಗೋಡೌನ್‍ ನಲ್ಲಿ ಸ್ಪೋಟಗೊಂಡ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟಿದ್ದರು. ಈ ಸಂದರ್ಭ ಸ್ಥಳಕ್ಕೇ ಭೇಟಿ ನೀಡಿದ ಪೊಲೀಸರು […]

ಕುಕ್ಕೇಡಿ ಪಟಾಕಿ ಗೋಡೌನ್ ಸ್ಪೋಟ ಪ್ರಕರಣ | ನಾಲ್ಕನೇ ಆರೋಪಿ ಬಂಧನ Read More »

ಮಹಿಳೆಗೆ ಬಸ್ ಡಿಕ್ಕಿ ಹೊಡೆದು ಮೃತ್ಯು !

ಸುಳ್ಯ: ಮಹಿಳೆಯೊಬ್ಬರಿಗೆ ಕೆಎಸ್‍ ಆರ್‍ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ಕೆಎಸ್ಆರ್ ಟಿ ಸಿ ಬಸ್ ನಿಲ್ದಾಣ ಮುಂಭಾಗದಲ್ಲಿ ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದ್ದು, ರಸ್ತೆ ದಾಟುತ್ತಿದ್ದ ಮಹಿಳೆಗೆ ಲಾರಿ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಮೃತ ದೇಹವನ್ನು ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಅಂದಾಜು 40 ವರ್ಷದ ಮಹಿಳೆಯಾಗಿದ್ದು, ಮಹಿಳೆಯ ಗುರುತು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ

ಮಹಿಳೆಗೆ ಬಸ್ ಡಿಕ್ಕಿ ಹೊಡೆದು ಮೃತ್ಯು ! Read More »

ಬ್ಯಾಂಕ್‍ ಸಿಬ್ಬಂದಿಯೆಂದು ಒಟಿಪಿ ಪಡೆದು ಲಕ್ಷಾಂತರ ವಂಚನೆ | ಪ್ರಕರಣ ದಾಖಲು

ಪುತ್ತೂರು : ಕೆವೈಸಿ ಅಪ್‍ಡೇಟ್ ಇದೆ ಎಂದು ವ್ಯಕ್ತಿಯೊಬ್ಬರಿಂದ ಬ್ಯಾಂಕ್ ಸಿಬ್ಬಂದಿ ಎಂದು ಹೇಳಿಕೊಂಡು ಒಟಿಪಿ ಪಡೆದು ಖಾತೆಯಿಂದ ಲಕ್ಷಾಂತರ ರೂ. ವಂಚಿಸಿದ ಘಟನೆ ಕುರಿತು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಂದ್ರಶೇಖರ ಭಟ್ (62) ಒಟಿಪಿ ನೀಡಿ ಲಕ್ಷಾಂತರ ರೂಪಾಯಿ ಕಳೆದುಕೊಂಡವರು. ಮಂಗಳವಾರ ಚಂದ್ರಶೇಖರ ಭಟ್ ಅವರ ಮೊಬೈಲಿಗೆ ಕೆವೈಸಿ ಅಪ್‍ ಡೇಟ್ ಮಾಡುವ ಕುರಿತು ಸಂದೇಶ ಬಂದಿದೆ. ಸಂದೇಶದಲ್ಲಿ ತಿಳಿಸಿದ ದೂರವಾಣಿ ಸಂಖ್ಯೆಗೆ ಅವರು ಕರೆ ಮಾಡಿದಾಗ ನಿಮ್ಮ ಖಾತೆ ಬ್ಲಾಕ್ ಆಗಿದೆ.

ಬ್ಯಾಂಕ್‍ ಸಿಬ್ಬಂದಿಯೆಂದು ಒಟಿಪಿ ಪಡೆದು ಲಕ್ಷಾಂತರ ವಂಚನೆ | ಪ್ರಕರಣ ದಾಖಲು Read More »

ಅಯೋಧ್ಯೆ ಬಾಲರಾಮನಿಗೆ ರಾಜಸ್ಥಾನದ ತೊಟ್ಟಿಲು ಕೊಡುಗೆ ನೀಡಿದ ಕರಾವಳಿ ಮಾಜಿ ಶಾಸಕ!

ಶ್ರೀ ಪೇಜಾವರ ಶ್ರೀಗಳ ನೇತೃತ್ವದಲ್ಲಿ ಅಯೋಧ್ಯಾ ರಾಮನ ಸನ್ನಿಧಿಯಲ್ಲಿ ನಡೆಯುತ್ತಿರುವ ಮಂಡಲೋತ್ಸವದ ವೈಭವ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶ್ರೀಗಳ ಮಾರ್ಗದರ್ಶನದಂತೆ ಶ್ರೀಕಾಶೀ ಮಠಾಧೀಶ ಶ್ರೀ ಸಂಯಮೀಂದ್ರ ತೀರ್ಥ ಶ್ರೀಪಾದರು ರಜತ ಪಲ್ಲಕ್ಕಿಯನ್ನು ಅರ್ಪಿಸಲು ಸಿದ್ದರಾಗುತ್ತಿರುವಂತೆ ಇತ್ತ ಕಡೆ ಮಂಡಲೋತ್ಸವದಲ್ಲಿ ಸಂಘಟನಾತ್ಮಕವಾಗಿ ತೊಡಗಿಕೊಂಡಿರುವ ಉಡುಪಿಯ ಮಾಜಿ ಶಾಸಕ ಕೆ. ರಘುಪತಿ ಭಟ್‌ ಅವರು ಶ್ರೀರಾಮನ ತೊಟ್ಟಿಲು ಸೇವೆಗೆ ಕಾಷ್ಠಶಿಲ್ಪದಲ್ಲಿ ನಿರ್ಮಿಸಲಾದ ತೊಟ್ಟಿಲನ್ನು ಅರ್ಪಿಸಲು ಉತ್ಸುಕರಾಗಿದ್ದಾರೆ. ರಾಜಸ್ಥಾನದಲ್ಲಿ ಬೀಟಿಮರದಿಂದ ನಿರ್ಮಿಸಲಾದ ಅತ್ಯಂತ ಸುಂದರ ಕಾಷ್ಠ ರಚನೆಗಳುಳ್ಳ ತೊಟ್ಟಿಲನ್ನು ಖರೀದಿಸಲಾಗಿದ್ದು, ಇದೀಗ

ಅಯೋಧ್ಯೆ ಬಾಲರಾಮನಿಗೆ ರಾಜಸ್ಥಾನದ ತೊಟ್ಟಿಲು ಕೊಡುಗೆ ನೀಡಿದ ಕರಾವಳಿ ಮಾಜಿ ಶಾಸಕ! Read More »

ಸಿಎಂ ಸಿದ್ದರಾಮಯ್ಯಗೆ ದಂಡ ವಿಧಿಸಿದ ಹೈಕೋರ್ಟ್!!

ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ಬಿಸಿ ಇದೀಗ ಪಕ್ಷಕ್ಕೆ ತಟ್ಟಿದೆ. ಆಗ ವಿಪಕ್ಷ ನಾಯಕರಾಗಿದ್ದ ಈಗಿನ ಸಿಎಂ ಸಿದ್ದರಾಮಯ್ಯ, ರಾಮಲಿಂಗ ರೆಡ್ಡಿ, ಎಂ.ಬಿ. ಪಾಟೀಲ್, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ ಅವರಿಗೆ ಹೈಕೋರ್ಟ್ ತಲಾ 10 ಸಾವಿರ ರೂ. ದಂಡ ವಿಧಿಸಿದೆ. ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದ ಸಮಯದಲ್ಲಿ ಉಡುಪಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಶರಣಾಗಿದ್ದ. ಇದರಲ್ಲಿ ಆಗಿನ ಸಚಿವ ಕೆ.ಎಸ್. ಈಶ್ವರಪ್ಪ ಹೆಸರೂ ಕೇಳಿಬಂದಿತ್ತು. ಈಶ್ವರಪ್ಪ

ಸಿಎಂ ಸಿದ್ದರಾಮಯ್ಯಗೆ ದಂಡ ವಿಧಿಸಿದ ಹೈಕೋರ್ಟ್!! Read More »

ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನಕ್ಕೆ ಭೇಟಿ ನೀಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಾಣಿ: ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ ನಡೆಯುತ್ತಿದ್ದು, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕ್ಯಾ.ಬ್ರಿಜೇಶ್ ಚೌಟ ಭೇಟಿ ನೀಡಿದರು. ದೈವಸ್ಥಾನಕ್ಕೆ ಭೇಟಿ ನೀಡಿದ ಅವರು ಶ್ರೀ ಉಳ್ಳಾಲ್ತಿ ಅಮ್ಮನವರ ದರ್ಶನ ಪಡೆದು ಗಂಧ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮಂಡಳಿ ಮುಖ್ಯಸ್ಥರು, ಭಕ್ತಾದಿಗಳು ಉಪಸ್ಥಿತರಿದ್ದರು.

ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನಕ್ಕೆ ಭೇಟಿ ನೀಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ Read More »

ಕುಂದರ್ ಕುಟುಂಬಸ್ಥರ ನಾಗಬನದಲ್ಲಿ ನಾಗಪ್ರತಿಷ್ಠೆ

ಪಂಜ : ಕುಂದರ್ ಕುಟುಂಬಸ್ಥರ ನಾಗಬನದ ನಾಗಾಪ್ರತಿಷ್ಠೆ ಕಾರ್ಯಕ್ರಮ ಪಂಜದ ಶೆಟ್ಟಿಮೂಲೆ ಎಂಬಲ್ಲಿ ನಡೆಯಿತು. ಕುಟುಂಬದ ಹಿರಿಯರಾದ ರತ್ನಾಕರ ಸುವರ್ಣ, ಆನಂದ ಪೂಜಾರಿ ಅಡೆಕಲ್ಲು, ಹಾಗೂ 150 ಮಂದಿ ಕುಟುಂಬಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪಂಜದ ಶೆಟ್ಟಿಮೂಲೆಯಲ್ಲಿನ ನಾಗಬನದ ಉಸ್ತುವಾರಿಯನ್ನು ಪ್ರಸ್ತುತ ಮಂಗಳೂರಿನ ಕುಂದರ್ ಕುಟುಂಬಸ್ಥರು ನಡೆಸಿಕೊಂಡು ಬರುತಿದ್ದಾರೆ. ಮಂಗಳೂರಿನ ಕುಂದರ್ ಕುಟುಂಬಸ್ಥರು ಮೂಲತಃ ಪಂಜದ ಶೆಟ್ಟಿಮೂಲೆಯವರು. ಹಲವು ವರ್ಷಗಳ ಹಿಂದೆ ಕುಂದರ್ ವಂಶಸ್ಥರು ಎರಡು ಕವಲುಗಳಾಗಿ ಒಂದು ಕವಲು ಮಂಗಳೂರಿನತ್ತ ಪಯಣ ಬೆಳೆಸಿತು ಎಂದು ತಿಳಿದು ಬಂದಿರುತ್ತದೆ.

ಕುಂದರ್ ಕುಟುಂಬಸ್ಥರ ನಾಗಬನದಲ್ಲಿ ನಾಗಪ್ರತಿಷ್ಠೆ Read More »

ಈಶ್ವರಮಂಗಲ ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಯುವ ಕ್ರೀಡಾ ಸಂಗಮ-2024

ಪುತ್ತೂರು: ಈಶ್ವರಮಂಗಲ ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ ನೇತೃತ್ವದಲ್ಲಿ ಒಕ್ಕಲಿಗ ಗೌಡ ಸೇವಾ ಸಂಘ ಈಶ್ವರಮಂಗಲ ವಲಯ, ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟ, ಒಕ್ಕಲಿಗ ಗೌಡ ಮಹಿಳಾ ಘಟಕದ ಸಹಭಾಗಿತ್ವದಲ್ಲಿ ಮಾಡ್ನೂರು, ಬಡಗನ್ನೂರು, ನೆಟ್ಟಣಿಗೆ ಮುಡ್ನೂರು, ಪಡವನ್ನೂರು, ನಿಡ್ಪಳ್ಳಿ, ನೆಟ್ಟಣಿಗೆ ಬೆಳ್ಳೂರು ಗ್ರಾಮಗಳನ್ನೊಳಗೊಂಡ ವಲಯ ಮಟ್ಟದ ಯುವ ಕ್ರೀಡಾ ಸಂಗಮ ಪಟ್ಟೆ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ಜರಗಿತು. ಪೆರಿಗೇರಿ ಶ್ರಿ ಅಯ್ಯಪ್ಪ ಭಜನಾ ಮಂದಿರದ ಮಾಜಿ ಅಧ್ಯಕ್ಷ ಗಣಪತಿ ಗೌಡ ಕೊಡಿಯಡ್ಕ ದೀಪ ಬೆಳಗಿಸಿ

ಈಶ್ವರಮಂಗಲ ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಯುವ ಕ್ರೀಡಾ ಸಂಗಮ-2024 Read More »

ಫೆ.13: ಕೆಲಿಂಜ ಶ್ರೀ ಉಳ್ಳಾಲ್ತಿ ಅಮ್ಮನವರ, ಪರಿವಾರ ದೈವಗಳ ಕಾಲಾವಧಿ ಮೆಚ್ಚಿ ಜಾತ್ರೆ

ಕೆಲಿಂಜ: ಕೆಲಿಂಜ ಶ್ರೀ ಉಳ್ಳಾಲ್ತಿ ಅಮ್ಮನವರ ಹಾಗೂ ಪರಿವಾರ ದೈವಗಳ ಕಾಲಾವಧಿ ಮೆಚ್ಚಿ ಜಾತ್ರೆ ಫೆ. 14 ಬುಧವಾರ ರಾತ್ರಿ ನಡೆಯಲಿದೆ. ಜಾತ್ರೆಯ ಪ್ರಯುಕ್ತ ಫೆ.13 ಮಂಗಳವಾರ ರಾತ್ರಿ ಶ್ರೀ ಉಳ್ಳಾಲ್ತಿ ಮಲರಾಯ ಮೂಲ ಭಂಡಾರ ಚಾವಡಿ ಬೆಂಞಣ್ತಿಮಾರ್ ಗುತ್ತಿನಿಂದ ಕೆಲಿಂಜ ಶ್ರೀ ಅಮ್ಮನವರ ಸನ್ನಿಧಾನಕ್ಕೆ ಭಂಡಾರ ಆಗಮನವಾಗಲಿದೆ. ಬೆಳಿಗ್ಗೆ 8 ಗಂಟೆಗೆ ತಂತ್ರಿವರ್ಯರ ಆಗಮನ, 9ಕ್ಕೆ ಪ್ರಾರ್ಥನೆ, ಬಿಂಬ ಶುದ್ಧಿ ನಡೆದು ಬಳಿಕ ಬೆಳಿಗ್ಗೆ 10ಕ್ಕೆ ಬಂಟ್ವಾಳ ಬಡ್ಡಕಟ್ಟೆ ಶ್ರೀ ಸದ್ಗುರು ನಿತ್ಯಾನಂದ ಗೋವಿಂದ ಸ್ವಾಮಿ

ಫೆ.13: ಕೆಲಿಂಜ ಶ್ರೀ ಉಳ್ಳಾಲ್ತಿ ಅಮ್ಮನವರ, ಪರಿವಾರ ದೈವಗಳ ಕಾಲಾವಧಿ ಮೆಚ್ಚಿ ಜಾತ್ರೆ Read More »

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜೇಷ್ಠ ಕಾರ್ಯಕರ್ತ ಗೋಪಾಲ ಚೆಟ್ಟಿಯಾರ್ ನಿಧನ

ಪೆರ್ಲ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಜೇಷ್ಠ ಕಾರ್ಯಕರ್ತ  ಪೆರ್ಲದ ಗೋಪಾಲ ಚೆಟ್ಟಿಯಾರ್ ( 78) ಇಂದು ನಿಧನ ಹೊಂದಿದ್ದಾರೆ. ಕಳೆದ ಐದು ದಶಕಗಳಿಂದ ವಿಭಾಗ, ಪ್ರಾಂತ, ಕ್ಷೇತ್ರೀಯ ಸ್ಥರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ಮುನ್ನಡೆಸಿದ್ದಾರೆ. ಮೂಲತಃ ಕೇರಳದ ಪೆರ್ಲದವರಾಗಿದ್ದ ಅವರು ವಿದ್ಯಾರ್ಥಿ ಜೀವನದಲ್ಲೇ  ಸಂಘದ ಸ್ವಯಂ ಸೇವಕರಾಗಿ, ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ್ದರು. ತಹಸೀಲ್ದಾರರಾಗಿದ್ದ ಅವರು ನಿವೃತ್ತಿ ಬಳಿಕ ಪೂರ್ಣ ಪ್ರಮಾಣದಲ್ಲಿ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜೇಷ್ಠ ಕಾರ್ಯಕರ್ತ ಗೋಪಾಲ ಚೆಟ್ಟಿಯಾರ್ ನಿಧನ Read More »

error: Content is protected !!
Scroll to Top