ಫೆ.5 : ಪುತ್ತಿಲ ಪರಿವಾರದಿಂದ ಸಮಾಲೋಚನಾ ಸಮಾವೇಶ
ಪುತ್ತೂರು: ಪುತ್ತಿಲ ಪರಿವಾರದ ವತಿಯಿಂದ ಸಮಾಲೋಚನಾ ಸಮಾವೇಶ ಫೆ.5 ಸೋಮವಾರ ಸಾಲ್ಮರ ಕೊಟೇಚಾ ಹಾಲ್ ನಲ್ಲಿ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ನಡೆಯುವ ಸಭೆಯ ಅಧ್ಯಕ್ಷತೆಯನ್ನು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ ವಹಿಸಲಿದ್ದು, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಉಪಸ್ಥಿತರಿರುವರು. ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ ಸಂಘಟನಾ ಸಂದೇಶ ನೀಡುವರು. ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಪುತ್ತಿಲ ಪರಿವಾರ ಪ್ರಕಟಣೆಯಲ್ಲಿ ತಿಳಿಸಿದೆ.
ಫೆ.5 : ಪುತ್ತಿಲ ಪರಿವಾರದಿಂದ ಸಮಾಲೋಚನಾ ಸಮಾವೇಶ Read More »










