ಅಯೋಧ್ಯೆಯಲ್ಲಿ ರಾಮಲಲ್ಲಾನಿಗೆ ಪಲ್ಲಕ್ಕಿ ಉತ್ಸವ, ಅಷ್ಟಾವಧಾನ

ಅಯೊಧ್ಯೆಯಲ್ಲಿ ಪ್ರತಿಷ್ಠಾಪನೆಗೊಂಡಿರುವ ರಾಮಲಲ್ಲಾನಿಗೆ ಪಲ್ಲಕ್ಕಿ ಉತ್ಸವ ನಡೆಯಿತು. ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ಶುಕ್ರವಾರ ಸಂಜೆ ಶ್ರೀ ರಾಮನ ಮೂರ್ತಿಯನ್ನು ಪಲ್ಲಕ್ಕಿಯಲ್ಲಿಟ್ಟು, ಉತ್ಸವ ನಡೆಸಲಾಯಿತು. ಶ್ರೀ ರಾಮಲಲ್ಲಾನ ವಿಗ್ರಹವನ್ನು ವಾದ್ಯಘೋಷ, ವಿಷ್ಣುಸಹಸ್ರನಾಮ, ಭಜನೆಗಳೊಂದಿಗೆ ಪಲ್ಲಕ್ಕಿಯಲ್ಲಿಟ್ಟು ಮಂಗಳಾರತಿ ಬೆಳಗಿದ ಬಳಿಕ ಮಂದಿರದ ಹೊರ ಆವರಣದ ಸುತ್ತ ಒಂದು ಸುತ್ತು ತಂದು, ಯಾಗ ಶಾಲೆಯಲ್ಲಿಟ್ಟು ಅಷ್ಟಾವಧಾನ ಸೇವೆ ನಡೆಸಲಾಯಿತು.

ಅಯೋಧ್ಯೆಯಲ್ಲಿ ರಾಮಲಲ್ಲಾನಿಗೆ ಪಲ್ಲಕ್ಕಿ ಉತ್ಸವ, ಅಷ್ಟಾವಧಾನ Read More »

ಯತ್ನಾಳ್ ಫ್ಯಾಕ್ಟರಿ ಬಂದ್’ಗೆ ಆದೇಶ!!

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಒಡೆತನದ ಫ್ಯಾಕ್ಟರಿಯನ್ನು ಬಂದ್ ಮಾಡಲು ರಾಜ್ಯ ಸರಕಾರ ಆದೇಶ ನೀಡಿದೆ. ಕಲಬುರಗಿ ತಾಲೂಕಿನ ಚಿಂಚೊಳ್ಳಿ ತಾಲೂಕಿನಲ್ಲಿ ಕಾರ್ಯಾಚರಿಸುತ್ತಿದ್ದ ಸಕ್ಕರೆ ಕಾರ್ಖಾನೆಯ ಮಾಲಿನ್ಯವನ್ನು ಜಲಾಶಯಕ್ಕೆ ಬಿಡಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಈ ಆದೇಶ ನೀಡಲಾಗಿದೆ ಎಂದು ಹೇಳಲಾಗಿದೆ. ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶದ ಹಿನ್ನೆಲೆಯಲ್ಲಿ ಆದೇಶ ಹೊರಡಿಸಿದ್ದು, ವಿದ್ಯುತ್ ಸಂಪರ್ಕ ಕಡಿತ ಮಾಡುವಂತೆ ಸೂಚನೆ ನೀಡಲಾಗಿದೆ.

ಯತ್ನಾಳ್ ಫ್ಯಾಕ್ಟರಿ ಬಂದ್’ಗೆ ಆದೇಶ!! Read More »

ಕೊಂಡಾಟದ ಕೋಣಗಳಿಂದ ದೇವರಿಗೆ ನಮನ; ಕರೆಗಿಳಿದ ಕೋಣಗಳಿಗೆ ಕಂಬಳಾಭಿಮಾನಿಗಳ ಸ್ವಾಗತ | ಹೀಗೆ ನೀಡಲಾಯ್ತು ಪುತ್ತೂರು ಕಂಬಳಕ್ಕೆ ಚಾಲನೆ

ಪುತ್ತೂರು: ಐತಿಹಾಸಿಕ ಪುತ್ತೂರು ಕೋಟಿ – ಚೆನ್ನಯ ಜೋಡುಕರೆ ಕಂಬಳಕ್ಕೆ ಶನಿವಾರ ಬೆಳಿಗ್ಗೆ ಚಾಲನೆ ನೀಡಲಾಯಿತು. ದೇವರಮಾರು ಗದ್ದೆಯಲ್ಲಿ ನಿರ್ಮಿಸಲಾದ ಅಚ್ಚುಕಟ್ಟಿನ ಕೋಟಿ – ಚೆನ್ನಯ ಕರೆಯಲ್ಲಿ ತೆಂಗಿನಕಾಯಿ ಒಡೆಯುವ ಮೂಲಕ ಎರಡು ದಿನದ ಹೊನಲು ಬೆಳಕಿನ ಕಂಬಳ ಉದ್ಘಾಟನೆಗೊಂಡಿತು. ಇನ್ನೊಂದೆಡೆ ಕಂಬಳಕ್ಕೆ ಆಗಮಿಸುತ್ತಿದ್ದ ಕೋಣಗಳನ್ನು ಶ್ರೀ ಮಹಾಲಿಂಗೇಶ್ವರ ದೇವರ ಮುಂಭಾಗಕ್ಕೆ ಕೊಂಡೊಯ್ದು, ದೇವರಿಗೆ ನಮಿಸಿ ಪ್ರಾರ್ಥನೆ ಸಲ್ಲಿಸುವ ದೃಶ್ಯ ಕಂಡುಬರುತ್ತಿದೆ. ಕೋಣಗಳು ಎರಡು ಮೊಣಕಾಲುಗಳನ್ನು ಊರಿ ದೇವರಿಗೆ ನಮಿಸುವುದನ್ನು ನೋಡುವುದೇ ಚಂದ. ಉದ್ಘಾಟನೆ ಬಳಿಕ ಕಂಬಳ

ಕೊಂಡಾಟದ ಕೋಣಗಳಿಂದ ದೇವರಿಗೆ ನಮನ; ಕರೆಗಿಳಿದ ಕೋಣಗಳಿಗೆ ಕಂಬಳಾಭಿಮಾನಿಗಳ ಸ್ವಾಗತ | ಹೀಗೆ ನೀಡಲಾಯ್ತು ಪುತ್ತೂರು ಕಂಬಳಕ್ಕೆ ಚಾಲನೆ Read More »

ಸಜಂಕಾಡಿ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ | ಇತಿಹಾಸದ ಮಾಹಿತಿಗಾಗಿ ಹೊರಸಂಚಾರ

ಪುತ್ತೂರು: ಸಜಂಕಾಡಿ ಹಿ.ಪ್ರಾ. ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಯಶೋಧ ಧ್ವಜಾರೋಹಣಗೈದು ಶುಭಹಾರೈಸಿದರು. ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ರಝಾಕ್, ನಿರ್ಗಮಿತ ಅಧ್ಯಕ್ಷ ಅಬೂಬಕ್ಕರ್, ಪೋಷಕ ಸತೀಶ್, ಶಿಕ್ಷಕ ವೃಂದ ಉಪಸ್ಥಿತರಿದ್ದರು. ಪ್ರಭಾರ ಮುಖ್ಯಗುರು ಸುಮಲತಾ ಸ್ವಾಗತಿಸಿ, ವಂದಿಸಿದರು. ವಿದ್ಯಾರ್ಥಿಗಳಿಂದ ಹೊರಸಂಚಾರ: ವಿದ್ಯಾರ್ಥಿಗಳಲ್ಲಿ ಸ್ಥಳೀಯ ಇತಿಹಾಸದ ಬಗ್ಗೆ ಆಸಕ್ತಿ ಬೆಳೆಸುವ ನಿಟ್ಟಿನಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ‘ಇಕೋ ಕ್ಲಬ್ ‘ವತಿಯಿಂದ ಹೊರಸಂಚಾರ ಹಮ್ಮಿಕೊಳ್ಳಲಾಗಿತ್ತು. ಅವಳಿ ಕಾರಣಿಕ ಪುರುಷರಾದ ಕೋಟಿ ಚೆನ್ನಯರ ಜನ್ಮಸ್ಥಳ ಪಡುಮಲೆ, ಪುರಾತನ ಕಾಲದ

ಸಜಂಕಾಡಿ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ | ಇತಿಹಾಸದ ಮಾಹಿತಿಗಾಗಿ ಹೊರಸಂಚಾರ Read More »

ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆ: ಐ.ಆರ್.ಸಿ.ಎಂ.ಡಿ. ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ 12 ಪ್ರಶಸ್ತಿ

ಪುತ್ತೂರು: ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ  ಅಬಾಕಸ್ ಸ್ಪರ್ಧೆಯಲ್ಲಿ ಪುತ್ತೂರಿನ  ಐ.ಆರ್.ಸಿ.ಎಂ.ಡಿ. ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಪುತ್ತೂರು ಮತ್ತು ಸುಳ್ಯದ ವಿದ್ಯಾರ್ಥಿಗಳು ಒಟ್ಟು ವಿದ್ಯಾರ್ಥಿಗಳು 12 ಪ್ರಶಸ್ತಿಗಳನ್ನು ಪಡೆದುಕೊಂಡಿದ್ದು, ಇವರೆಲ್ಲರೂ ಐ.ಆರ್.ಸಿ.ಎಂ.ಡಿ. ಶಿಕ್ಷಣ ಸಂಸ್ಥೆಯಲ್ಲಿ ತರಬೇತಿ ಪಡೆದುಕೊಂಡಿದ್ದು, ಸಂಸ್ಥೆಯ ಪ್ರಫುಲ್ಲಾ ಗಣೇಶ್ ಅವರು  ತರಬೇತಿ ನೀಡಿದ್ದಾರೆ. ತುಮಕೂರು ಎಸ್.ಆರ್.ಎಸ್ ಇಂಟರ್ನ್ಯಾಷನಲ್ ಸ್ಕೂಲ್ ಮತ್ತು  ಟಿ.ಆರ್.ಎಸ್ ಶಿಕ್ಷಣ ಸಂಸ್ಥೆಯು ಜ. 21ರಂದು ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆಯನ್ನು ಆಯೋಜಿಸಿತ್ತು. ರಾಜ್ಯದ ವಿವಿಧ

ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆ: ಐ.ಆರ್.ಸಿ.ಎಂ.ಡಿ. ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ 12 ಪ್ರಶಸ್ತಿ Read More »

ಯಡಿಯೂರಪ್ಪ ಪುತ್ರನ ಗೆಲ್ಲಿಸಲು ಮನವಿ ಮಾಡಿದ ಕಾಂಗ್ರೆಸ್ ಹಿರಿಯ ಶಾಸಕ!!

ಶಿವಮೊಗ್ಗ: ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರರನ್ನು ಮತ್ತೊಮ್ಮೆ ಗೆಲ್ಲಿಸಿ ಎಂದು ಕಾಂಗ್ರೆಸ್‌ ಹಿರಿಯ ನಾಯಕ ದಾವಣಗೆರೆ ದಕ್ಷಿಣ ಕ್ಷೇತ್ರ ಶಾಸಕ, ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ಬೆಕ್ಕಿನಕಲ್ಮಠದಲ್ಲಿಜಗದ್ಗುರು ಶ್ರೀ ಗುರುಬಸವ ಸ್ವಾಮೀಜಿಗಳ 112ನೇ ಪುಣ್ಯ ಸ್ಮರಣೋತ್ಸವ ಪ್ರಯುಕ್ತ ಶುಕ್ರವಾರ ಆಯೋಜಿಸಿದ್ದ ಭಾವೈಕ್ಯ ಸಮ್ಮೇಳನ ಹಾಗೂ ಗುರು ಬಸವಶ್ರೀ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಶಾಮನೂರು ಶಿವಶಂಕರಪ್ಪ ಅವರು, ”ರಾಘವೇಂದ್ರ ಅವರಂತಹ ಸಂಸತ್‌ ಸದಸ್ಯರನ್ನು ಪಡೆದ ನೀವೇ ಧನ್ಯರು. ಏಕೆಂದರೆ ತಮ್ಮ ಕ್ಷೇತ್ರದಲ್ಲಿ ಯಾವ ಕೆಲಸಗಳಾಗಬೇಕೆಂದು ನೋಡಿಕೊಂಡು ಆ ಎಲ್ಲವನ್ನು ತಮ್ಮ

ಯಡಿಯೂರಪ್ಪ ಪುತ್ರನ ಗೆಲ್ಲಿಸಲು ಮನವಿ ಮಾಡಿದ ಕಾಂಗ್ರೆಸ್ ಹಿರಿಯ ಶಾಸಕ!! Read More »

ಎವಿಜಿ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ ‘ಎವಿಜಿ ಚಿಣ್ಣರೋತ್ಸವ’

ಪುತ್ತೂರು: ಬನ್ನೂರು ಗ್ರಾಮದ ಅಲುಂಬುಡದಲ್ಲಿ ಕಾರ್ಯಾಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಸಮಾರಂಭ “ಎವಿಜಿ ಚಿಣ್ಣರೋತ್ಸವ” ಶುಕ್ರವಾರ ನಡೆಯಿತು. ಸಮಾರಂಭದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಪುತ್ತೂರಿನಲ್ಲಿ ಆಂಗ್ಲ ಮಾಧ್ಯಮ ಶಾಲಾ ಆರಂಭಗೊಳ್ಳುವುದು ಒಳ್ಳೆಯ ವಿಚಾರ. ಮಕ್ಕಳಿಗೆ ಉತ್ತಮ ಗುಣಮಟ್ಟದ ವಿದ್ಯಾಭ್ಯಾಸ ನೀಡುವುದು ಪೋಷಕರ ಆಶಯವಾಗಿದೆ. ದಿನದಿಂದ ದಿನಕ್ಕೆ ಶಾಲಾ ಮಕ್ಕಳ ಸಂಖ್ಯೆ ಜಾಸ್ತಿಯಾಗುತ್ತಿದ್ದು, ಸರಕಾರಿ ಶಾಲೆಗಳು ಕೆಪಿಎಸ್‍ ಮಾದರಿ ಶಾಲೆಗಳು ಇನ್ನಷ್ಟು ಬರಲಿದೆ. ಇದೀಗ ಈ ಪರಿಸರದ ಮಕ್ಕಳಿಗೆ ಎ.ವಿ.ನಾರಾಯಣ ಅವರು ಒಳ್ಳೆಯ

ಎವಿಜಿ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ ‘ಎವಿಜಿ ಚಿಣ್ಣರೋತ್ಸವ’ Read More »

ಕೊನೆಗೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಪಟ್ಟಿ ಬಿಡುಗಡೆ | ಆದೇಶ ಹೊರಡಿಸಿದ ರಾಜ್ಯ ಸರಕಾರ | 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ

ಬೆಂಗಳೂರು: ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಪಟ್ಟಿಯು ಕೊನೆಗೂ ಬಿಡುಗಡೆಯಾಗಿದೆ. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ. ನಿಗಮ ಮಂಡಳಿ ಅಧ್ಯಕ್ಷರನ್ನು ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಎರಡು ವರ್ಷದ ಅವಧಿಗೆ ನೇಮಕ ಮಾಡಲಾಗಿದ್ದು, ಶಾಂತಿನಗರ ಶಾಸಕ ಎನ್.ಎ ಹ್ಯಾರಿಸ್‌ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಸಾಗರದ ಬೇಳೂರು ಗೋಪಾಲಕೃಷ್ಣ ಅವರಿಗೆ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತ, ಮಾಗಡಿ ಶಾಸಕ ಎಚ್ ಸಿ ಬಾಲಕೃಷ್ಣ ಅವರಿಗೆ

ಕೊನೆಗೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಪಟ್ಟಿ ಬಿಡುಗಡೆ | ಆದೇಶ ಹೊರಡಿಸಿದ ರಾಜ್ಯ ಸರಕಾರ | 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ Read More »

ಸವಣೂರು ಮೆಸ್ಕಾಂ ಶಾಖೆಯಲ್ಲಿ 75ನೇ ಗಣರಾಜ್ಯೋತ್ಸವ

ಸವಣೂರು: 75 ನೇ ಗಣರಾಜೋತ್ಸವನ್ನು ಸವಣೂರು ಮೆಸ್ಕಾಂ ಶಾಖೆಯಲ್ಲಿ ಆಚರಿಸಲಾಯಿತು. ರಾಷ್ಟ್ರಧ್ವಜ ಹಾರಿಸುವ ಮೂಲಕ ಗಣರಾಜ್ಯೋತ್ಸವವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಸವಣೂರು ಮೆಸ್ಕಾಂ ಶಾಖೆಯ ಜೂನಿಯರ್ ಇಂಜಿನಿಯರ್ ರಾಜೇಶ್ ಕುಮಾರ್, ಗುತ್ತಿಗೆದಾರರಾದ ಮೊಹನ್ ರೈ ಕೆರೆಕ್ಕೊಡಿ, ಮೀಟರ್ ರೀಡರ್ ಬಾಲಚಂದ್ರ, ಪಂಚಾಯತ್ ವಾಟರ್ ಮ್ಯಾನ್ ಹಮೀದ್ ಮಾಂತೂರು, ಪವರ್  ಮ್ಯಾನ್ ಗಳಾದ  ಮೌನೇಶ್, ಶಿವಾನಂದ, ಮಹಾದೇವಪ್ಪ, ಸಂತೋಷ್, ಮುಕ್ತಾರ್ ಉಪಸ್ಥಿತರಿದ್ದರು

ಸವಣೂರು ಮೆಸ್ಕಾಂ ಶಾಖೆಯಲ್ಲಿ 75ನೇ ಗಣರಾಜ್ಯೋತ್ಸವ Read More »

‘ಪರೀಕ್ಷಾ ಪೇ ಚರ್ಚಾ-7’ ರಲ್ಲಿ ವೈಜ್ಞಾನಿಕ ಮಾದರಿ ಪ್ರದರ್ಶಿಸಲು ಸುಳ್ಯದ ಅಚಲ್ ಬಿಳಿನೆಲೆ ಆಯ್ಕೆ | ಪ್ರಧಾನಿ ನರೇಂದ್ರ ಮೋದಿಯವರ ವಿಶಿಷ್ಟ ಕಾರ್ಯಕ್ರಮ

ಸುಳ್ಯ: ಪ್ರಧಾನಿ ನರೇಂದ್ರ ಮೋದಿಯವರ ವಿಶಿಷ್ಟ ಕಾರ್ಯಕ್ರಮ ‘ಪರೀಕ್ಷಾ ಪೇ ಚರ್ಚಾ-7’ ದಲ್ಲಿ ವೈಜ್ಞಾನಿಕ ಮಾದರಿ ಪ್ರದರ್ಶಿಸಲು ಸುಳ್ಯದ ಅಚಲ್ ಬಿಳಿನೆಲೆ ಆಯ್ಕೆಯಾಗಿದ್ದಾರೆ. ಅಚಲ್ ಮುಡಿಪು ಜವಾಹರ್ ನವೋದಯ ವಿದ್ಯಾಲಯದ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಯಾಗಿದ್ದಾರೆ. ದೇಶದ 600ಕ್ಕೂ ಹೆಚ್ಚು ಜವಾಹರ್ ನವೋದಯ ವಿದ್ಯಾಲಯಗಳ ಪೈಕಿ ಎಂಟು ವಿದ್ಯಾಲಯಗಳಿಗೆ ಈ ಅವಕಾಶ ದೊರಕಿದ್ದು, ಇದರಲ್ಲಿ ಭಾಗವಹಿಸಲು ನವೋದಯ ವಿದ್ಯಾಲಯದ ಹೈದರಾಬಾದ್ ರೀಜನ್ ನ್ನು ಪ್ರತಿನಿಧಿಸುತ್ತಿರುವ ಅಚಲ್ ಬಿಳಿನೆಲೆಯವರು ಜ. 22ರಂದು ದೆಹಲಿ ತೆರಳಿದ್ದಾರೆ. ವಿದ್ಯಾರ್ಥಿಗಳಿಗೆ ಬಹಳ

‘ಪರೀಕ್ಷಾ ಪೇ ಚರ್ಚಾ-7’ ರಲ್ಲಿ ವೈಜ್ಞಾನಿಕ ಮಾದರಿ ಪ್ರದರ್ಶಿಸಲು ಸುಳ್ಯದ ಅಚಲ್ ಬಿಳಿನೆಲೆ ಆಯ್ಕೆ | ಪ್ರಧಾನಿ ನರೇಂದ್ರ ಮೋದಿಯವರ ವಿಶಿಷ್ಟ ಕಾರ್ಯಕ್ರಮ Read More »

error: Content is protected !!
Scroll to Top