ಭಾರತ ಸಂವಿಧಾನ ವಿಶ್ವದಲ್ಲಿಯೇ ಶ್ರೇಷ್ಠವಾದ ಸಂವಿಧಾನವಾಗಿದೆ | ತಾಲೂಕು ಗಣರಾಜ್ಯೋತ್ಸವದಲ್ಲಿ ಸಹಾಯಕ ಆಯುಕ್ತ ಜುಬಿನ್ ಮಹಾಪಾತ್ರ

ಪುತ್ತೂರು; ಗಣರಾಜ್ಯೋತ್ಸವವು ಭಾರತದ ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡ ಐತಿಹಾಸಿಕ ದಿನವಾಗಿದ್ದು, ನಮ್ಮ ಸಂವಿಧಾನವೂ ವಿಶ್ವದ ಅತೀ ಶ್ರೇಷ್ಠ ಸಂವಿಧಾನ ಎಂದೆಣಿಸಿಕೊಂಡಿದೆ ಎಂದು ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ ಅಭಿಪ್ರಾಯಪಟ್ಟರು. ಅವರು ಕೊಂಬೆಟ್ಟು ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ನಡೆದ ೭೫ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿ ನಾಡಿಗೆ ಸಂದೇಶ ನೀಡಿದರು. ನಮ್ಮ ಸಂವಿಧಾನದಲ್ಲಿ ಎಲ್ಲಾ ಜನರ ಆಶೋತ್ತರಗಳ ಅಂಶಗಳ ಜತೆಗೆ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳಿವೆ. ಸರ್ಕಾರಕ್ಕೆ ನೀತಿ ನಿರ್ದೇಶನವಿದೆ. ಸಂವಿಧಾನದ […]

ಭಾರತ ಸಂವಿಧಾನ ವಿಶ್ವದಲ್ಲಿಯೇ ಶ್ರೇಷ್ಠವಾದ ಸಂವಿಧಾನವಾಗಿದೆ | ತಾಲೂಕು ಗಣರಾಜ್ಯೋತ್ಸವದಲ್ಲಿ ಸಹಾಯಕ ಆಯುಕ್ತ ಜುಬಿನ್ ಮಹಾಪಾತ್ರ Read More »

ಸಂವಿಧಾನದ ಮೂಲ ಆಶಯವನ್ನು ಎತ್ತಿ ಹಿಡಿಯೋಣ: ದಿನೇಶ್ ಗುಂಡೂರಾವ್

ಮಂಗಳೂರು: ಪಿತೃವಾಕ್ಯ ಪರಿಪಾಲನೆಯ ಮೂಲಕ ಹಾಗೂ ಜನರ ಸಂಕಷ್ಟಗಳನ್ನು ಬಗೆಹರಿಸುವ ಮೂಲಕ ರಾಮ ಹೇಗೆ ಆದರ್ಶ ಪುರುಷನಾದನೋ ಅದೇ ರೀತಿ ರಾಮನ ಆದರ್ಶದಂತೆ ನಾಡಿನ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಮೂಲಕ ನಾವು ನಿಜವಾದ ರಾಮರಾಜ್ಯದ ಆಡಳಿತ ನೀಡುತ್ತಿದ್ದೇವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಶುಕ್ರವಾರ ನಗರದ ನೆಹರು ಮೈದಾನದಲ್ಲಿ ದ.ಕ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡ 75ನೇ ಗಣರಾಜ್ಯೋತ್ಸವ ಸಮಾರಂಭದ ಧ್ವಜಾರೋಹಣ ನೆರವೇರಿಸಿದ ದ.ಕ ಜಿಲ್ಲಾ ಉಸ್ತುವಾರಿ ಸಚಿವರು ಸಂದೇಶ

ಸಂವಿಧಾನದ ಮೂಲ ಆಶಯವನ್ನು ಎತ್ತಿ ಹಿಡಿಯೋಣ: ದಿನೇಶ್ ಗುಂಡೂರಾವ್ Read More »

ದ.ಕ.ಜಿಲ್ಲಾ ಗ್ರಂಥಾಲಯ ನೌಕರರ ಸಂಘದ ಸಭೆ | ಪದಾಧಿಕಾರಿಗಳ ಆಯ್ಕೆ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಗ್ರಂಥಾಲಯ ನೌಕರರ ಸಂಘದ ಸಭೆ ಬಂಟ್ವಾಳ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.  ಸಭೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮೋಹನ್ ಹಾಸನ, ರಾಜ್ಯ ಸಂಘದ ಉಪಾಧ್ಯಕ್ಷ ಶಿವರಾಮೇ ಗೌಡ, ರಾಜ್ಯ ಸಂಘದ ಕಾರ್ಯದರ್ಶಿ  ಶ್ರೀರಾಮ, ರಾಜ್ಯ ಸಂಘಟನಾ ಕಾರ್ಯದರ್ಶಿ ಸಾವಿತ್ರಿ ರಾಮ್ ಕಣೆಮರಡ್ಕ ಹಾಗೂ ಜಿಲ್ಲಾ ಸಂಘದ ನಿಕಟಪೂರ್ವ ಅಧ್ಯಕ್ಷ ವಿನ್ಸೆಂಟ್ ಅವರ ಉಪಸ್ಥಿತಿಯಲ್ಲಿ ಕೆಲವೊಂದು ವಿಚಾರ ವಿನಿಮಯ ನಡೆಸಲಾಯಿತು. ಜಿಲ್ಲಾ ಸಂಘದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನಡೆಯಿತು. ಜಿಲ್ಲಾ ಸಂಘದ ಗೌರವಾಧ್ಯಕ್ಷರಾಗಿ

ದ.ಕ.ಜಿಲ್ಲಾ ಗ್ರಂಥಾಲಯ ನೌಕರರ ಸಂಘದ ಸಭೆ | ಪದಾಧಿಕಾರಿಗಳ ಆಯ್ಕೆ Read More »

ಗಣರಾಜ್ಯೋತ್ಸವ ಪರೇಡ್ ವೇಳೆ ಭದ್ರತಾ ಲೋಪ!

ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್ ವೇಳೆ ಅಪರಿಚಿತ ವ್ಯಕ್ತಿಯೋರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ನುಗ್ಗಿ ಬರಲು ಯತ್ನ ನಡೆಸಿರುವ ಘಟನೆ ಶುಕ್ರವಾರ ನಡೆದಿದೆ. ಮೈಸೂರು ಮೂಲದ ಪರಶುರಾಮ್​ ಕರ ಪತ್ರ ಹಿಡಿದು ಸಿಎಂ ಬಳಿ ನುಗ್ಗಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಕೆಪಿಎಸ್’ಸಿ ಆರ್ಡರ್ ವಿಳಂಬದ ಬಗ್ಗೆ ಸಿಎಂಗೆ ಮನವಿ ಸಲ್ಲಿಸಲು ಬಂದಿದ್ದ ಪರಶುರಾಮ್ ಅವರನ್ನು ಸಿಎಂ ಬಳಿ ಬಿಡದಿದ್ದಕ್ಕೆ ಏಕಾಏಕಿ ನುಗ್ಗಲು ಯತ್ನಿಸಿದ್ದಾರೆ ಎಂದು ಮಾಹಿತಿ ತಿಳಿದು

ಗಣರಾಜ್ಯೋತ್ಸವ ಪರೇಡ್ ವೇಳೆ ಭದ್ರತಾ ಲೋಪ! Read More »

ಮಗನನ್ನೇ ಗುಂಡಿಟ್ಟು ಕೊಂದ ತಂದೆ!!

ವ್ಯಕ್ತಿಯೋರ್ವ ಕೋಪದ ಭರದಲ್ಲಿ ತನ್ನ ಮಗನನ್ನೇ ಗುಂಡಿಟ್ಟು ಕೊಂದಿರುವ ಆಘಾತಕಾರಿ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯದ ಬಳಿ ನಡೆದಿದೆ. ಮೃತರನ್ನು ಕರೆಕಲ್ಮನೆ ನಿವಾಸಿ 32 ವರ್ಷದ ನರ್ತನ್ ಬೋಪಣ್ಣ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ವಿಷಯವೊಂದಕ್ಕೆ ನರ್ತನ್ ಮತ್ತು ಅವರ ತಂದೆ ಸುರೇಶ್ ನಡುವೆ ಜಗಳ ಉಂಟಾಗಿದೆ. ಈ ಸಂದರ್ಭದಲ್ಲಿ ಕೋಪದ ಭರದಲ್ಲಿ ತಂದೆ ಮಗನನ್ನು ಹತೈಗೆದಿದ್ದಾರೆ. ಗುಂಡಿನ ಸದ್ದು ಕೇಳಿದ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿದಾಗ ನರ್ತನ್ ರಕ್ತದ ಮಡುವಿನಲ್ಲಿ ಬಿದ್ದಿರುವುದು

ಮಗನನ್ನೇ ಗುಂಡಿಟ್ಟು ಕೊಂದ ತಂದೆ!! Read More »

ಹಿರೇಬಂಡಾಡಿ ಗ್ರಾ.ಪಂ.ನಲ್ಲಿ ಗಣರಾಜ್ಯೋತ್ಸವ ಆಚರಣೆ

ಉಪ್ಪಿನಂಗಡಿ: ಹಿರೇಬಂಡಾಡಿ ಗ್ರಾಮ ಪಂಚಾಯತ್’ನಲ್ಲಿ ಗಣರಾಜ್ಯೋತ್ಸವ ದಿನವನ್ನು ಆಚರಿಸಲಾಯಿತು. ಧ್ವಜಾರೋಹಣ ನೆರವೇರಿಸಿ, ಧ್ವಜ ನಮನ ಮಾಡಲಾಯಿತು. ಇದೇ ಸಂಧರ್ಭ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯತ್ ಸದಸ್ಯರು, ಪಂಚಾಯತ್ ಸಿಬ್ಬಂದಿ ವರ್ಗ, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ಹಿರೇಬಂಡಾಡಿ ಗ್ರಾ.ಪಂ.ನಲ್ಲಿ ಗಣರಾಜ್ಯೋತ್ಸವ ಆಚರಣೆ Read More »

ಆಸ್ಟ್ರೇಲಿಯದ ಬೀಚಿನಲ್ಲಿ ದುರಂತ: ನಾಲ್ವರು ಭಾರತೀಯರ ಸಾವು

ಮೆಲ್ಬೋರ್ನ್: ಆಸ್ಟ್ರೇಲಿಯದ ವಿಕ್ಟೋರಿಯಾ ರಾಜ್ಯದ ಬೀಚ್ ಒಂದರಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಭಾರತೀಯರು ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ. ವಿಕ್ಟೋರಿಯಾ ಫಿಲಿಪ್ ಐಲ್ಯಾಂಡ್ನಲ್ಲಿ ಈ ದುರಂತ ಸಂಭವಿಸಿದೆ. ಮಧ್ಯಾಹ್ನ 3:30ರ ಸಮಯ ಸಮುದ್ರದಲ್ಲಿ ಈಜಲು ಹೋದ ಈ ನಾಲ್ವರು ಮುಳುಗಿ ಸಾವನ್ನಪ್ಪಿದ್ದಾರೆ. ಈ ಬೀಚಿನಲ್ಲಿ ಜೀವರಕ್ಷಕ ಸಿಬ್ಬಂದಿಗಳನ್ನು ನಿಯೋಜಿಸಲಾಗಿರಲಿಲ್ಲವೆಂದು ಸ್ಥಳೀಯ ಸುದ್ದಿಸಂಸ್ಥೆಗಳು ವರದಿ ಮಾಡಿವೆ. ಆನಂತರ ಧಾವಿಸಿದ ಜೀವ ರಕ್ಷಕ ದಳದ ಸಿಬ್ಬಂದಿಗಳು ಈ ನಾಲ್ವರನ್ನು ಸಮುದ್ರದ ತೀರಕ್ಕೆ ತಂದಾಗ ಅವರೆಲ್ಲರೂ ಆಗಲೇ ಸಾವನ್ನಪ್ಪಿದ್ದರು ಎಂದು

ಆಸ್ಟ್ರೇಲಿಯದ ಬೀಚಿನಲ್ಲಿ ದುರಂತ: ನಾಲ್ವರು ಭಾರತೀಯರ ಸಾವು Read More »

ಜ್ಞಾನವಾಪಿ ಮಸೀದಿ: ಎಎಸ್ಐ ಸಮೀಕ್ಷೆ ವರದಿ ಬಹಿರಂಗ

ವಾರಣಾಸಿ: ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಗೆ ಸಂಬಂಧಿಸಿದ ಸಮೀಕ್ಷಾ ವರದಿಯನ್ನು ಭಾರತೀಯ ಪುರಾತತ್ವ ಇಲಾಖೆ(ಎಎಸ್ಐ) ಬಹಿರಂಗಪಡಿಸಿದ್ದು, ಮೊದಲೇ ಅಸ್ತಿತ್ವದಲ್ಲಿರುವ ದೇವಾಲಯದ ಅವಶೇಷಗಳ ಮೇಲೆ ಮಸೀದಿ ನಿರ್ಮಿಸಲಾಗಿದೆ ಎಂದು ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಅವರು ಗುರುವಾರ ಹೇಳಿದ್ದಾರೆ. 839 ಪುಟಗಳ ಸಮೀಕ್ಷಾ ವರದಿಯ ಪ್ರತಿಗಳನ್ನು ಗುರುವಾರ ತಡರಾತ್ರಿ ನ್ಯಾಯಾಲಯವು ಸಂಬಂಧಪಟ್ಟ ಕಕ್ಷಿದಾರರಿಗೆ ನೀಡಿದೆ ಎಂದು ಜೈನ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಹಿಂದೆ ಇದ್ದ ದೇವಸ್ಥಾನವನ್ನು ಕೆಡವಿದ ಅವಶೇಷಗಳ ಮೇಲೆ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಸಮೀಕ್ಷೆಯ

ಜ್ಞಾನವಾಪಿ ಮಸೀದಿ: ಎಎಸ್ಐ ಸಮೀಕ್ಷೆ ವರದಿ ಬಹಿರಂಗ Read More »

ಯೋಗ್ಯರನ್ನೇ ಪಕ್ಷಕ್ಕೆ ಕರೆತನ್ನಿ: ಖರ್ಗೆ ಸೂಚನೆ

ಬೆಂಗಳೂರು: ಪಕ್ಷಕ್ಕೆ ಯಾರನ್ನೇ ಕರೆತರುವಾಗ ಅವರ ಪೂರ್ವಾಪರ ವಿಚಾರಿಸಿ ಅವರು ನಮ್ಮ ಪಕ್ಷಕ್ಕೆ ಯೋಗ್ಯರೇ ಎಂಬುದನ್ನು ಯೋಚಿಸಿ ಕರೆತರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಶುಕ್ರವಾರ ಕರೆ ನೀಡಿದರು. ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿರುವ ಖರ್ಗೆ ಅವರು, ಹೀಗೆ ಬಂದ್ರು ಹಾಗೆ ಹೋದ್ರು ಅಂತಾಗಬಾರದು. ಯಾರನ್ನೇ ಪಕ್ಷಕ್ಕೆ ಕರೆತರುವಾಗ ಯೋಚಿಸಿ, ಯೋಗ್ಯವಾದವರನ್ನು ಕರೆತರಬೇಕು ಎಂದು ಹೇಳಿದರು. ಮಾರುಕಟ್ಟೆಯಲ್ಲಿ ಯಾವೊಂದು ಸಣ್ಣ ವಸ್ತು ಖರೀದಿಸುವಾಗಲೂ ಅದರ ಗುಣಮಟ್ಟ

ಯೋಗ್ಯರನ್ನೇ ಪಕ್ಷಕ್ಕೆ ಕರೆತನ್ನಿ: ಖರ್ಗೆ ಸೂಚನೆ Read More »

ಡಾ.ಸುರೇಶ್‍ ಪುತ್ತೂರಾಯರಿಗೆ ಮಧುಮೇಹ ಜಾಗೃತಿ-2024 ರಾಷ್ಟ್ರಪ್ರಶಸ್ತಿ | ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಸುತ್ತಿರುವ ಉಚಿತ ವೈದ್ಯಕೀಯ ಶಿಬಿರಕ್ಕಾಗಿ ಈ ಗೌರವ

ಪುತ್ತೂರು: ಪುತ್ತೂರಿನ ವೈದ್ಯ ಡಾ.ಸುರೇಶ್‍ ಪುತ್ತೂರಾಯ ಅವರು ಮಧುಮೇಹ ಜಾಗೃತಿ-2024 ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾರ್ವಜನಿಕ ಭಕ್ತಾದಿಗಳ ಅನುಕೂಲಕ್ಕಾಗಿ ಪ್ರತಿ ತಿಂಗಳು ನಡೆಸುತ್ತಿರುವ ಉಚಿತ ವೈದ್ಯಕೀಯ ಶಿಬಿರದ ಮೂಲಕ ಅವರು ರಾಷ್ಟ್ರ ಮಟ್ಟದಲ್ಲಿ ಗುರುತಿಸಲ್ಪಟ್ಟಿದ್ದಾರೆ. ಶಿಬಿರದ ಮೂಲಕ ಮಧುಮೇಹ ತಪಾಸಣೆಯಲ್ಲಿ ನೀಡಿದ ಅದ್ವಿತೀಯ ಸೇವೆ ಹಾಗೂ ಜನರಲ್ಲಿ ಆರೋಗ್ಯ ಜಾಗೃತಿಗಾಗಿ ಈ ಶಿಬಿರದ ರೂವಾರಿಯಾಗಿರುವ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿರುವ ಡಾ.ಸುರೇಶ್ ಪುತ್ತೂರಾಯ ಮಧುಮೇಹ ಜಾಗೃತಿ-2024 ರಾಷ್ಟ್ರ

ಡಾ.ಸುರೇಶ್‍ ಪುತ್ತೂರಾಯರಿಗೆ ಮಧುಮೇಹ ಜಾಗೃತಿ-2024 ರಾಷ್ಟ್ರಪ್ರಶಸ್ತಿ | ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಸುತ್ತಿರುವ ಉಚಿತ ವೈದ್ಯಕೀಯ ಶಿಬಿರಕ್ಕಾಗಿ ಈ ಗೌರವ Read More »

error: Content is protected !!
Scroll to Top