ಪದ್ಮ ಪ್ರಶಸ್ತಿ ಪುರಸ್ಕೃತ 132 ಸಾಧಕರಿಗೆ ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ: ದೇಶಾದ್ಯಂತ 75ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಧ್ವಜಾರೋಹಣ ನೆರವೇರಿದೆ. ಈ ಸಂದರ್ಭದಲ್ಲಿ 2024ನೇ ಸಾಲಿನ ಪದ್ಮ ಪ್ರಶಸ್ತಿಗಳಿಗೆ ಆಯ್ಕೆಯಾಗಿರುವ 132 ಸಾಧಕರಿಗೂ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಕರ್ನಾಟಕದ 9 ಮಂದಿ ಸೇರಿ ಒಟ್ಟು 132 ಮಂದಿಗೆ ಪ್ರಶಸ್ತಿ ಲಭಿಸಿದ್ದು, ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅಭಿನಂದನೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ […]

ಪದ್ಮ ಪ್ರಶಸ್ತಿ ಪುರಸ್ಕೃತ 132 ಸಾಧಕರಿಗೆ ಪ್ರಧಾನಿ ಮೋದಿ ಅಭಿನಂದನೆ Read More »

ಸಂವಿಧಾನವನ್ನು ನಾವು ರಕ್ಷಿಸಿದರೆ, ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ | ಗಣರಾಜ್ಯೋತ್ಸವ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಂವಿಧಾನವನ್ನು ನಾವು ರಕ್ಷಿಸಿದರೆ, ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ. ಸಂವಿಧಾನವನ್ನು ಅರಿಯುವ ಮೂಲಕ ಸಂವಿಧಾನವನ್ನು ಬಲಪಡಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಾಡಿನಲ್ಲಿ 75ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ, ಮಹಾತ್ಮಾ ಗಾಂಧೀಜಿ ಹಾಗೂ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಗೌರವ ನಮನ ಸಲ್ಲಿಸಿದರು. ಬಳಿಕ ರಾಜ್ಯದ ಜನತೆಗೆ ಗಣರಾಜ್ಯೋತ್ಸವ ಜನತೆಗೆ ಶುಭಾಶಯಗಳನ್ನು ಕೋರಿದರು. ಈ ನಡುವೆ ಸಾಮಾಜಿಕ ಜಾಲತಾಣ ಎಕ್ಸ್’ನಲ್ಲಿ ಪೋಸ್ಟ್

ಸಂವಿಧಾನವನ್ನು ನಾವು ರಕ್ಷಿಸಿದರೆ, ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ | ಗಣರಾಜ್ಯೋತ್ಸವ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ Read More »

ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿಗೆ ಶೈಲೇಶ್ ಅಂಬೆಕಲ್ಲು ಆಯ್ಕೆ

ಪುತ್ತೂರು: ಸ್ವಾಮಿ ವಿವೇಕಾನಂದರ 161ನೇ ಜಯಂತ್ಯೋತ್ಸವದ ಪ್ರಯುಕ್ತ ನೀಡುವ ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ದೇವಚಳ್ಳ ಗ್ರಾ.ಪಂ. ಅಧ್ಯಕ್ಷ ಶೈಲೇಶ್‌ ಅಂಬೆಕಲ್ಲು ಆಯ್ಕೆಯಾಗಿದ್ದಾರೆ. ಸಾಂಘಿಕ ಪ್ರಶಸ್ತಿಗೆ ಪೆರುವಾಜೆಯ ಭಾವೈಕ್ಯ ಯುವಕ ಮಂಡಲ ಆಯ್ಕೆಯಾಗಿದೆ. ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು, ವಿಜಯಪುರ ಜಿಲ್ಲಾ ಹಾಗೂ ತಾಲೂಕು ಘಟಕ ಮುದ್ದೇಬಿಹಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯಪುರ, ಸಾಧನಾ ಮಹಿಳಾ ಒಕ್ಕೂಟ ಮುದ್ದೇಬಿಹಾಳ, ಧರ್ಮಯುದ್ಧ ದಿನ ಪತ್ರಿಕಾ ಬಳಗ ಮುದ್ದೇಬಿಹಾಳ ಇವುಗಳ ಸಂಯುಕ್ತ

ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿಗೆ ಶೈಲೇಶ್ ಅಂಬೆಕಲ್ಲು ಆಯ್ಕೆ Read More »

ಜ.27 ರಂದು ಕೊಕ್ಕಪುಣಿ ಶ್ರೀ ಅರಸು ಕುರಿಯಾಡಿತ್ತಾಯ ಚಾವಡಿಯಲ್ಲಿ ಪಂಚಮ ವರ್ಷದ ಪ್ರತಿಷ್ಠಾ ವರ್ಧಂತಿ

ಪುತ್ತೂರು: ಬೋಳಂತೂರು ಗ್ರಾಮದ ಕೊಕ್ಕಪುಣಿ ಶ್ರೀ ಅರಸು ಕುರಿಯಾಡಿತ್ತಾಯ ಚಾವಡಿಯಲ್ಲಿ ಪಂಚಮ ವರ್ಷದ ಪ್ರತಿಷ್ಠಾ ವರ್ಧಂತಿ ಜ.27 ಶನಿವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 7 ಕ್ಕೆ ಗಣಹೋಮ, ಸಂಜೆ 3.30 ರಿಂದ 4 ರ ವರೆಗೆ ತುಳಸೀವನ ಶ್ರೀ ಸಿದ್ಧಿ ವಿನಾಯಕ ಭಜನಾ ಮಂಡಳಿ, 5 ರಿಂದ 6 ರ ವರೆಗೆ ಗುಂಡಿಮಜಲು ಶೃಂಗಗಿರಿ ಶ್ರೀ ಶಾರದಾಂಬಾ ಭಜನಾ ಮಂಡಳಿ ವತಿಯಿಂದ ಕುಣಿತ ಭಜನೆ ನಡೆಯಲಿದೆ. ರಾತ್ರಿ 7.30 ರಿಂದ ದೈವಗಳಿಗೆ

ಜ.27 ರಂದು ಕೊಕ್ಕಪುಣಿ ಶ್ರೀ ಅರಸು ಕುರಿಯಾಡಿತ್ತಾಯ ಚಾವಡಿಯಲ್ಲಿ ಪಂಚಮ ವರ್ಷದ ಪ್ರತಿಷ್ಠಾ ವರ್ಧಂತಿ Read More »

ನಾಳೆ : ಕುದ್ಮಾರು ಸ್ಕಂದಗಣೇಶ ನಗರದಲ್ಲಿ “ಸ್ಕಂದಶ್ರೀ” ಬಾರ್ & ರೆಸ್ಟೋರೆಂಟ್ ಶುಭಾರಂಭ

ಪುತ್ತೂರು: ‘ಸ್ಕಂದಶ್ರೀ ‘ ಬಾರ್ & ರೆಸ್ಟೋರೆಂಟ್ ಕುದ್ಮಾರು ಸ್ಕಂದಗಣೇಶ ನಗರದಲ್ಲಿರುವ ಸ್ಕಂದಶ್ರೀ ಕಾಂಪ್ಲೆಕ್ಸ್  ನಲ್ಲಿ ಜ.26 ರಂದು ಶುಭಾರಂಭಗೊಳ್ಳಲಿದೆ. ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಿಠಲ ಗೌಡ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಮಾಲಕರಾದ ಪವಿತ್ರ, ಚೆನ್ನಪ್ಪ ಗೌಡ ನೂಜಿ ಹಾಗೂ ಜಸ್ಮಿತಾ, ಪ್ರಖ್ಯಾತ್

ನಾಳೆ : ಕುದ್ಮಾರು ಸ್ಕಂದಗಣೇಶ ನಗರದಲ್ಲಿ “ಸ್ಕಂದಶ್ರೀ” ಬಾರ್ & ರೆಸ್ಟೋರೆಂಟ್ ಶುಭಾರಂಭ Read More »

ಮತದಾನದ ಹಕ್ಕು ನೀಡಿದ ಭಾರತದ ಕ್ರಮ ಇತಿಹಾಸದಲ್ಲೇ ಪ್ರಥಮ

ಪುತ್ತೂರು: ಮತದಾನ ಜಾರಿಗೆ ಬಂದ ಪ್ರಥಮ ದಿನದಲ್ಲೇ ಪ್ರತಿಯೊಬ್ಬರಿಗೂ ಮತದಾನ ಮಾಡುವ ಹಕ್ಕು ನೀಡಿದ್ದು ಇತಿಹಾಸದಲ್ಲೇ ಭಾರತ ಪ್ರಥಮ. ಆದ್ದರಿಂದ ಯಾವುದೇ ಆಮಿಷಕ್ಕೊಳಗಾಗದೆ ಮತ ಚಲಾವಣೆ ಮಾಡುವುದನ್ನು ಯುವಜನತೆ ಅರಿತಿರಬೇಕು ಎಂದು ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮಹಾಪಾತ್ರ ಹೇಳಿದರು. ಪುರಭವನದಲ್ಲಿ ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ’ ಎಂಬ ಧ್ಯೇಯ ವಾಕ್ಯದೊಂದಿಗೆ ನಡೆದ 14ನೇ ರಾಷ್ಟ್ರೀಯ ಮತದಾರರ ದಿನಾಚರಣೆಯ ಪ್ರತಿಜ್ಞಾವಿಧಿ ಬೋಧಿಸಿ ಯುವ ಮತದಾರರನ್ನುದ್ದೇಶಿಸಿ ಮಾತನಾಡಿದರು. ಸ್ವಾತಂತ್ರ್ಯ ಪೂರ್ವದ ಬ್ರಿಟಿಷ್ ಸರಕಾರದಲ್ಲಿ ಶ್ರೀಮಂತರಿಗೆ, ಗಣ್ಯರಿಗೆ

ಮತದಾನದ ಹಕ್ಕು ನೀಡಿದ ಭಾರತದ ಕ್ರಮ ಇತಿಹಾಸದಲ್ಲೇ ಪ್ರಥಮ Read More »

ಜ. 27ರಂದು ಶಿವಸುಜ್ಞಾನ ತೀರ್ಥ ಶ್ರೀಗಳಿಂದ ಪುತ್ತೂರು ವಲಯ ಭಕ್ತರ ಸಮಾಲೋಚನಾ ಸಭೆ

ಪುತ್ತೂರು: ಅರೆಮಾದನಹಳ್ಳಿ ಶ್ರೀ ಶಿವಸುಜ್ಞಾನ ತೀರ್ಥ ಮಹಾಸ್ವಾಮಿಗಳ ನೇತೃತ್ವದಲ್ಲಿ ಇಲ್ಲಿನ ಬೊಳುವಾರು ಶ್ರೀ ವಿಶ್ವಕರ್ಮ ಸಭಾಭವನದಲ್ಲಿ ಜ. 27ರಂದು ಪುತ್ತೂರು ವಲಯ ಭಕ್ತರ ಸಮಾಲೋಚನಾ ಸಭೆ ನಡೆಯಲಿದೆ. ಸಂಜೆ 4 ಗಂಟೆಗೆ ಸರಿಯಾಗಿ ನಡೆಯುವ ಸಭೆಯಲ್ಲಿ ಮಹಾಸ್ವಾಮೀಜಿ ಅವರು ಆಶೀರ್ವಚನ ನೀಡಲಿದ್ದಾರೆ. ಅಲ್ಲದೇ, ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮದ ಕಜ್ಕೆಯ ಶಾಖಾ ಮಠದಲ್ಲಿ ನಿರ್ಮಾಣಗೊಂಡಿರುವ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಬಗ್ಗೆಯೂ ಶ್ರೀಗಳು ಮಾತನಾಡಲಿದ್ದಾರೆ. ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ದೇವಸ್ಥಾನದ ಪುನರ್ ನಿರ್ಮಾಣಕ್ಕೆ

ಜ. 27ರಂದು ಶಿವಸುಜ್ಞಾನ ತೀರ್ಥ ಶ್ರೀಗಳಿಂದ ಪುತ್ತೂರು ವಲಯ ಭಕ್ತರ ಸಮಾಲೋಚನಾ ಸಭೆ Read More »

ಜ.27 ರಂದು 31ನೇ ವರ್ಷದ ಹೊನಲು ಬೆಳಕಿನ ಪುತ್ತೂರು ‘ಕೋಟಿ-ಚೆನ್ನಯ’ ಜೋಡುಕರೆ ಕಂಬಳ

ಪುತ್ತೂರು: 31ನೇ ವರ್ಷದ ಹೊನಲು ಬೆಳಕಿನ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಜ.27 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಎನ್‍. ಚಂದ್ರಹಾಸ ಶೆಟ್ಟಿ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ದಿ.ಜಯಂತ ರೈ ಹಾಗೂ ದಿ.ಎನ್. ಮುತ್ತಪ್ಪ ರೈ ಅವರ ನೇತೃತ್ವದಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಗೌರವಾಧ್ಯಕ್ಷತೆಯಲ್ಲಿ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರ ಗೌರವ ಉಪಸ್ಥಿತಿಯಲ್ಲಿ ಕಳೆದ ಮೂವತ್ತು ವರ್ಷಗಳಿಂದ

ಜ.27 ರಂದು 31ನೇ ವರ್ಷದ ಹೊನಲು ಬೆಳಕಿನ ಪುತ್ತೂರು ‘ಕೋಟಿ-ಚೆನ್ನಯ’ ಜೋಡುಕರೆ ಕಂಬಳ Read More »

ಶೆಟ್ಟರ್ ಘರ್ ವಾಪ್ಸಿ, ದೆಹಲಿಯಲ್ಲಿ ಘೋಷಣೆ! | ರಾಜೀನಾಮೆ ಪತ್ರ ತಲುಪಿಲ್ಲ ಎಂದ ಡಿಕೆಶಿ!

ಬೆಂಗಳೂರು: ಜಗದೀಶ್ ಶೆಟ್ಟರ್ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ನವದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಸೇರ್ಪಡೆ ಬಗ್ಗೆ ಮಾಹಿತಿ ನೀಡಲಾಯಿತು. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ನಿವಾಸದಲ್ಲಿ ಸಭೆ ನಡೆದು, ಈ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು. ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಉಪಸ್ಥಿತರಿದ್ದರು. ಶೆಟ್ಟರ್ ಬಿಜೆಪಿ ಮರು ಸೇರ್ಪಡೆ ಬಗ್ಗೆ ಹೇಳಿಕೆ ನೀಡಿರುವ ಡಿ.ಕೆ. ಶಿವಕುಮಾರ್, ಶೆಟ್ಟರ್ ಅವರು ಬಿಜೆಪಿಯಿಂದ ಸ್ಪರ್ಧಿಸಿ

ಶೆಟ್ಟರ್ ಘರ್ ವಾಪ್ಸಿ, ದೆಹಲಿಯಲ್ಲಿ ಘೋಷಣೆ! | ರಾಜೀನಾಮೆ ಪತ್ರ ತಲುಪಿಲ್ಲ ಎಂದ ಡಿಕೆಶಿ! Read More »

ಜಗದೀಶ್ ಶೆಟ್ಟರ್ ಬಿಜೆಪಿಗೆ ಮರುಸೇರ್ಪಡೆ!!??

ಬೆಂಗಳೂರು: ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿಗೆ ಮರು ಸೇರ್ಪಡೆ ಮಾಡುವ ಸುದ್ದಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಬಿಜೆಪಿಗೆ ಮರು ಸೇರ್ಪಡೆಯಾಗುವ ಬಗ್ಗೆ ಜಗದೀಶ್ ಶೆಟ್ಟರ್ ಒಪ್ಪಿಗೆ ಸೂಚಿಸಿದ್ದಾರೆ. ಕಾಂಗ್ರೆಸ್ ಗೆ ಗುಡ್ ಬೈ ಹೇಳುವ ಬಗ್ಗೆಯೂ ತೀರ್ಮಾನ ಕೈಗೊಂಡಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಆದರೆ ಈ ಬಗ್ಗೆ ಪರ ವಿರೋಧ ಅಭಿಪ್ರಾಯಗಳು ಹರಿದಾಡುತ್ತಿವೆ. ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿಗೆ ಸೇರ್ಪಡೆ ಮಾಡುವ ಬಗ್ಗೆ ಕೆಲವೇ ಕ್ಷಣದಲ್ಲಿ ಘೋಷಣೆ ಹೊರಬೀಳುವ ಸಾಧ್ಯತೆ ಇದೆ ಎಂದೂ ಹೇಳಲಾಗುತ್ತಿದೆ. ಇದರ ನಡುವೆ

ಜಗದೀಶ್ ಶೆಟ್ಟರ್ ಬಿಜೆಪಿಗೆ ಮರುಸೇರ್ಪಡೆ!!?? Read More »

error: Content is protected !!
Scroll to Top