ಮಗ ಆತ್ಮಹತ್ಯೆ ಮಾಡಿಕೊಂಡ 13ನೇ ದಿನಕ್ಕೆ ತಂದೆಯೂ ಆತ್ಮಹತ್ಯೆ !

ಬೆಳ್ತಂಗಡಿ: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ನೇಣು ಬಿಗಿದು ಆತ್ಚಹತ್ಯೆ ಮಾಡಿಕೊಂಡ ಘಟನೆ ಉಜಿರೆಯ ಪೆರ್ಲದಲ್ಲಿ ನಡೆದಿದೆ. ಉಜಿರೆ ಗ್ರಾಮದ ಪೆರ್ಲ ನಿವಾಸಿ ಯೋಗೀಶ್ ಪೂಜಾರಿ (41) ಆತ್ಮಹತ್ಯೆ ಮಾಡಿಕೊಂಡವರು. ಯೋಗೀಶ್ ಪೂಜಾರಿ ಅವರ ಮಗ ಯಶ್ಚಿತ್ (14) ಕ್ಷುಲ್ಲಕ ವಿಚಾರದಲ್ಲಿ 13 ದಿನಗಳ ಹಿಂದೆ ತಾಯಿಯ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಜ.14 ರಂದು ಆತನ ಉತ್ತರಕ್ರಿಯೆ ನಡೆದಿತ್ತು. ಇದೀಗ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಮಗನ ಆತ್ಮಹತ್ಯೆಯಿಂದ ನೊಂದು ತಂದೆಯೂ […]

ಮಗ ಆತ್ಮಹತ್ಯೆ ಮಾಡಿಕೊಂಡ 13ನೇ ದಿನಕ್ಕೆ ತಂದೆಯೂ ಆತ್ಮಹತ್ಯೆ ! Read More »

ನಾಳೆ : ಬೆಳಂದೂರಿನಲ್ಲಿ ವಿಕಸಿತ ಭಾರತ ಸಂಕಲ್ಪ

ಬೆಳಂದೂರು: ಬೆಳಂದೂರು ಗ್ರಾಮ ಪಂಚಾಯಿತಿ ಹಾಗೂ ಪುತ್ತೂರು ಯೂನಿಯನ್ ಬ್ಯಾಂಕ್‍ ಇಂಡಿಯಾ ವತಿಯಿಂದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಜ.17 ಬುಧವಾರ ಮಧ್ಯಾಹ್ನ 2 ಗಂಟೆಗೆ ಬೆಳಂದೂರು ಗ್ರಾಮ ಪಂಚಾಯಿತಿಯಲ್ಲಿ ನಡೆಯಲಿದೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದು, ಬೆಳಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರ್ವತಿ ಮರಕ್ಕಡ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿಶೇಷವಾಗಿ ಕೃಷಿಕರಿಗೆ ಆಧುನಿಕ ತಂತ್ರಜ್ಞಾನದ ಬಗ್ಗೆ ವೀಡಿಯೋ ಪ್ರಸಾರಗೊಳ್ಳಲಿದೆ. ಅಲ್ಲದೆ ಕಿಸಾನ್ ಕ್ರೆಡಿಟ್ ಕಾರ್ಡ್‍, ಆಯುಷ್ಮಾನ್ ಕಾರ್ಡ್‍, ಪ್ರಧಾನ ಮಂತ್ರಿ ಸುರಕ್ಷಾ ಭೀಮಾ

ನಾಳೆ : ಬೆಳಂದೂರಿನಲ್ಲಿ ವಿಕಸಿತ ಭಾರತ ಸಂಕಲ್ಪ Read More »

ಬೇಲಿ ವಿಚಾರದಲ್ಲಿ ಗಲಾಟೆ: ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

ಪುತ್ತೂರು : ಜಮೀನಿನಲ್ಲಿ ಅಳವಡಿಸಿದ ತಂತಿ ಬೇಲಿ ವಿಷಯದಲ್ಲಿ ಗಲಾಟೆ ನಡೆದು ಅವಾಚ್ಯವಾಗಿ ನಿಂದಿಸಿ, ಹಲ್ಲೆ, ಜೀವ ಬೆದರಿಕೆ ಹಾಕಿರುವ ಕುರಿತು ಇತ್ತಂಡಗಳು ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಮುಂಡೂರು ನಿವಾಸಿ ಸಂತೋಷ್ ಬಿ.ಕೆ ಎಂಬವರು ನೀಡಿರುವ ದೂರಿನ ಮೇರೆಗೆ ಕೇಶವ, ಧನಂಜಯ, ಜಗದೀಶ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಸಂತೋಷ್ ಸೋಮವಾರ ರಾತ್ರಿ ಆಕ್ಟಿವಾ ಸ್ಕೂಟರ್ ನಲ್ಲಿ ತಮ್ಮ ತೋಟದ ಹತ್ತಿರ ಬಂದು ವಾಹನ ನಿಲ್ಲಿಸಿ, ಅಲ್ಲಿಂದ ತಮ್ಮ ತೋಟದಲ್ಲಿ ನಡೆದುಕೊಂಡು ಮನೆಗೆ ಹೋಗುತ್ತಿರುವಾಗ

ಬೇಲಿ ವಿಚಾರದಲ್ಲಿ ಗಲಾಟೆ: ಇತ್ತಂಡಗಳಿಂದ ದೂರು, ಪ್ರಕರಣ ದಾಖಲು Read More »

ಗಣರಾಜ್ಯೋತ್ಸವ ಪ್ರಯುಕ್ತ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಭಾಷಣ, ಪ್ರಬಂಧ, ಚಿತ್ರಕಲಾ ಸ್ಪರ್ಧೆ

ಪುತ್ತೂರು: ಗಣರಾಜ್ಯೋತ್ಸವ ಪ್ರಯುಕ್ತ ಭಾಷಣ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ. ಪುತ್ತೂರು ಸಹಾಯಕರ ಮಾರ್ಗದರ್ಶನದಲ್ಲಿ ಗಣರಾಜ್ಯೋತ್ಸವದ ಮಹತ್ವ ಯುವ ಜನತೆಗೆ ತಿಳಿಯಪಡಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ನೇತೃತ್ವದಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಂಚಾಲಕತ್ವದಲ್ಲಿ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಪುತ್ತೂರು ತಾಲೂಕಿನ ಪ್ರಾಥಮಿಕ, ಪ್ರೌಢಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಸ್ಪರ್ಧೆ ಏರ್ಪಡಿಸಲಾಗಿದೆ. ಮೂರು  ಸ್ಪರ್ಧೆಗಳ ವಿಷಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಅದರ  ಮಹತ್ವ. ಪ್ರಬಂಧ

ಗಣರಾಜ್ಯೋತ್ಸವ ಪ್ರಯುಕ್ತ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಭಾಷಣ, ಪ್ರಬಂಧ, ಚಿತ್ರಕಲಾ ಸ್ಪರ್ಧೆ Read More »

ವಿಟ್ಲ ಜಾತ್ರೋತ್ಸವದಲ್ಲಿ ಸಮರ್ಪಣ್ ವಿಟ್ಲ ಅರ್ಪಿಸುವ ಶಾಂಭವಿ ನಾಟಕ ಪ್ರದರ್ಶನ | ಸಮರ್ಪಣ್ ವಿಟ್ಲದ ಸಾಮಾಜಿಕ ಕಾರ್ಯ ಶ್ಲಾಘನೀಯ: ರಾಜೇಂದ್ರ ಪ್ರಸಾದ್ ಶೆಟ್ಟಿ

ವಿಟ್ಲ: ಇಲ್ಲಿನ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಸಮರ್ಪಣ್ ವಿಟ್ಲ ಅರ್ಪಿಸುವ ಶಾಂಭವಿ ತುಳು ಹಾಸ್ಯಮಯ ನಾಟಕದ ಹಿನ್ನೆಲೆಯಲ್ಲಿ ಸಭಾ ಕಾರ್ಯಕ್ರಮ ಜ. 15ರಂದು ರಾತ್ರಿ ನಡೆಯಿತು. ಮುಖ್ಯ ಅತಿಥಿಯಾಗಿದ್ದ ಪುತ್ತೂರು ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ರಾಜೇಂದ್ರ ಪ್ರಸಾದ್ ಶೆಟ್ಟಿ ಮಾತನಾಡಿ, ಸಾಮಾಜಿಕ ಚಟುವಟಿಕೆಗೆ ಹಿನ್ನಡೆ ಆಗುತ್ತಿರುವ ಇಂದಿನ ಕಾಲದಲ್ಲಿ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಸಮರ್ಪಣ್ ವಿಟ್ಲ ಇದರ ಕಾರ್ಯ ಮೆಚ್ಚುವಂತಹದ್ದು. ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ತಲುಪಿ, ಅವರ ಸೇವೆಯನ್ನು ಗುರುತಿಸಿ

ವಿಟ್ಲ ಜಾತ್ರೋತ್ಸವದಲ್ಲಿ ಸಮರ್ಪಣ್ ವಿಟ್ಲ ಅರ್ಪಿಸುವ ಶಾಂಭವಿ ನಾಟಕ ಪ್ರದರ್ಶನ | ಸಮರ್ಪಣ್ ವಿಟ್ಲದ ಸಾಮಾಜಿಕ ಕಾರ್ಯ ಶ್ಲಾಘನೀಯ: ರಾಜೇಂದ್ರ ಪ್ರಸಾದ್ ಶೆಟ್ಟಿ Read More »

ಜ.21: ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ | ಕಾಂಗ್ರೆಸ್‍ ನಿಂದ ಪೂರ್ವಭಾವಿ ಸಭೆ

ಪುತ್ತೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನ ಗತ ವೈಭವ ಮತ್ತೆ ಮರಳಿ ಪಡೆಯಲಿದ್ದು, ರಾಜ್ಯದ ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಮತ್ತೆ ಇದು ಸಾಧ್ಯವಾಗಲಿದೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು. ಜ.21 ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಬೃಹತ್ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು, ಇದರ ಪೂರ್ವ ಭಾವಿ ಸಭೆಯಲ್ಲಿ ಕಾರ್ಯಕರ್ತರನ್ನುದ್ದೆಶಿಸಿ ಅವರು ಮಾತನಾಡಿದರು. ದೇಶದ ಯಾವ ರಾಜ್ಯದಲ್ಲೂ ಇಲ್ಲದ ಗ್ಯಾರಂಟಿ ಯೋಜನೆಯನ್ನು ನಾವು ಜನತೆಗೆ ನೀಡಿದ್ದೇವೆ, ಇದು ಪ್ರತೀ ಕುಟುಂಬಕ್ಕೂ ತಲುಪಿದೆ.

ಜ.21: ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ | ಕಾಂಗ್ರೆಸ್‍ ನಿಂದ ಪೂರ್ವಭಾವಿ ಸಭೆ Read More »

ಜ. 21ರಂದು ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಬಾಂಧವ್ಯ ಟ್ರೋಫಿ 2024 | 16 ತಂಡಗಳ ಭಾಗವಹಿಸುವಿಕೆ

ಪುತ್ತೂರು: ಕ್ರಿಕೆಟ್ ಪಂದ್ಯದ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿರುವ ಬಾಂಧವ್ಯ ಟ್ರೋಫಿ ಜ. 21ರಂದು ನೆಹರೂನಗರ ವಿವೇಕಾನಂದ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಬಾಂಧವ್ಯ ಫ್ರೆಂಡ್ಸ್ ಪುತ್ತೂರು ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ 7ನೇ ವರ್ಷದ ನಾಕೌಟ್ ಮಾದರಿಯ 16 ತಂಡಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಇದಾಗಿದೆ. ಜ. 21ರಂದು ಬೆಳಿಗ್ಗೆ 9ಕ್ಕೆ ಶಾಸಕ ಅಶೋಕ್ ಕುಮಾರ್ ರೈ ಪಂದ್ಯಾಟ ಉದ್ಘಾಟಿಸಲಿದ್ದಾರೆ. ಡಿವೈಎಸ್ಪಿ ಅರುಣ್ ನಾಗೇಗೌಡ ಅಧ್ಯಕ್ಷತೆ ವಹಿಸುವರು. ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ನಗರಸಭೆ ನಿಕಟಪೂರ್ವ

ಜ. 21ರಂದು ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಬಾಂಧವ್ಯ ಟ್ರೋಫಿ 2024 | 16 ತಂಡಗಳ ಭಾಗವಹಿಸುವಿಕೆ Read More »

ನಾಳೆಯಿಂದ ಫೆಡರೇಷನ್ ಆಪ್ ಕರ್ನಾಟಕ ಲಾರಿ ಓನರ್ಸ್ ಅಸೋಸಿಯೇಶನ್ ನಿಂದ ಮುಷ್ಕರ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಫೆಡರೇಷನ್ ಆಫ್ ಕರ್ನಾಟಕ ಲಾರಿ ಓನರ್ಸ್ ಅಸೋಸಿಯೇಶನ್ ಜ. 17ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದೆ. ಕೇಂದ್ರದ ಹಿಟ್ ಆಂಡ್ ರನ್ ಕಾನೂನು ವಿರೋಧಿಸಿ ಲಾರಿ ಮಾಲಕರು ಮುಷ್ಕರ ನಡೆಸಲಿದ್ದು, ಸಾರಿಗೆ ವಲಯದೊಂದಿಗೆ ಚರ್ಚಿಸದೆ ಈ ಕಾನೂನನ್ನು ಪರಿಚಯಿಸಿದೆ ಎಂದು ಆರೋಪಿಸಿದ್ದಾರೆ. ಈಗಾಗಲೇ ಶೇ. 27ರಷ್ಟು ಚಾಲಕರ ಕೊರತೆಯನ್ನು ಎದುರಿಸುತ್ತಿದ್ದು, ಈ ನಡುವೆ ಕಠಿಣ ಕಾನೂನಿನ ಭೀತಿಗೆ ಚಾಲಕ ವೃತ್ತಿಗೆ ಪ್ರವೇಶಿಸಲು ಹಿಂದೇಟು ಹಾಕುತ್ತಿದ್ದಾರೆ. ಪರಿಣಾಮ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲು ಕಾರಣವಾಗಬಹುದು

ನಾಳೆಯಿಂದ ಫೆಡರೇಷನ್ ಆಪ್ ಕರ್ನಾಟಕ ಲಾರಿ ಓನರ್ಸ್ ಅಸೋಸಿಯೇಶನ್ ನಿಂದ ಮುಷ್ಕರ Read More »

ಕಿರಣ್ ಕುಮಾರ್ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಪುತ್ತೂರು: ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ನಡೆದ 42ನೇ ರಾಜ್ಯ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಚಿಕ್ಕ ಮುಡ್ನೂರು ಗ್ರಾಮದ ಬೆದ್ರಾಳ ನಿವಾಸಿ ಕಿರಣ್ ಕುಮಾರ್ ಭಾಗವಹಿಸಿ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. 30ರ ವಯೋಮಾನದ ಜಾವೆಲಿನ್ ತ್ರೋದಲ್ಲಿ ಪ್ರಥಮ, 100 ಮೀ. ಹಾಗೂ 1500 ಮೀ. ಓಟದಲ್ಲಿ ತೃತೀಯ ಸ್ಥಾನ ಪಡೆದು ಫೆ.2 ರಿಂದ 4 ರ ತನಕ ತಮಿಳುನಾಡಿನ ತಿರುನಲ್ವೇಲಿಯಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಕ್ಯಾಂಪ್ಕೋ ಚಾಕಲೇಟ್ ಪ್ಯಾಕ್ಟರಿಯಲ್ಲಿ

ಕಿರಣ್ ಕುಮಾರ್ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ Read More »

ಪ್ರತಿಷ್ಠಿತ ಸಂಸ್ಥೆಗೆ ಪದವೀಧರ ಶಿಕ್ಷಕಿ ಬೇಕಾಗಿದ್ದಾರೆ

ಪುತ್ತೂರು: ಪ್ರತಿಷ್ಠಿತ ಸಂಸ್ಥೆಯೊಂದಕ್ಕೆ ಪದವೀಧರ ಶಿಕ್ಷಕಿ ಬೇಕಾಗಿದ್ದಾರೆ ಯಾವುದೇ ಪದವಿಯೊಂದಿಗೆ ಬಿ.ಎಡ್ ಆದವರಿಗೆ ಆದ್ಯತೆ ನೀಡಲಾಗುವುದು. ಆಸಕ್ತರು ತಕ್ಷಣ ಸಂಪರ್ಕಿಸಿ : 8904877721, 7204977721

ಪ್ರತಿಷ್ಠಿತ ಸಂಸ್ಥೆಗೆ ಪದವೀಧರ ಶಿಕ್ಷಕಿ ಬೇಕಾಗಿದ್ದಾರೆ Read More »

error: Content is protected !!
Scroll to Top