ಸಿಎ ಅಂತಿಮ ಪರೀಕ್ಷೆಯಲ್ಲಿ ಕೃತಿಕಾ ಎ.ಎಸ್‍. ಉತ್ತೀರ್ಣ

ಪುತ್ತೂರು: ನವೆಂಬರ್ ತಿಂಗಳಲ್ಲಿ ನಡೆದ ಚಾರ್ಟರ್ಡ್ ಎಕೌಂಟೆಂಟ್ (ಸಿ.ಎ.) ಅಂತಿಮ ಪರೀಕ್ಷೆಯಲ್ಲಿ ಕೃತಿಕಾ ಎ.ಎಸ್‍. ಉತ್ತೀರ್ಣರಾಗಿದ್ದಾರೆ. ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿರುವ ಅವರು ಪುತ್ತೂರಿನ ಸಿಎ ರಾಮಭಟ್ ಹಾಗೂ ಸಿಎ ಅರವಿಂದ ಕೃಷ್ಣ ಅವರ ಮಾರ್ಗದರ್ಶನದಲ್ಲಿ ಸಿಎ ತರಬೇತಿ ಪಡೆದಿದ್ದರು. ಕೃತಿಕಾ ಎ.ಎಸ್‍. ಬಿಎಸ್‍ಎನ್‍ಎಲ್ ನಿವೃತ್ತ ಉಪಮಂಡಲ ಅಧಿಕಾರಿ ಎ.ಸೀತಾರಾಮ ಗೌಡ ಹಾಗೂ ಚಂದ್ರಾವತಿ ದಂಪತಿ ಪುತ್ರಿ.

ಸಿಎ ಅಂತಿಮ ಪರೀಕ್ಷೆಯಲ್ಲಿ ಕೃತಿಕಾ ಎ.ಎಸ್‍. ಉತ್ತೀರ್ಣ Read More »

ಗಣರಾಜ್ಯೋತ್ಸವ ಪರೇಡ್: ರಾಜ್ಯದ ಮನವಿ ತಿರಸ್ಕರಿಸಿದ ಕೇಂದ್ರ!!

ಜನವರಿ 26ರಂದು ದಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಭಾಗವಹಿಸುವಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಕೇಂದ್ರ ಸರಕಾರ ತಿರಸ್ಕರಿಸಿದೆ. ಗಣರಾಜ್ಯೋತ್ಸವದ ಪರೇಡ್‌ನಲ್ಲಿ ವಿವಿಧ ರಾಜ್ಯಗಳ ಸ್ತಬ್ಧ ಚಿತ್ರಗಳು ಪಾಲ್ಗೊಳ್ಳುತ್ತವೆ. ಈ ಬಾರಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ನಗರದ ಅಣ್ಣಮ್ಮ ದೇವಿಯ ಪ್ರತಿಕೃತಿಗಳ ಸ್ತಬ್ಧ ಚಿತ್ರಕ್ಕೆ ಅವಕಾಶ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರ ರಾಜ್ಯದ ಮನವಿಯನ್ನು ತಳ್ಳಿ ಹಾಕಿದೆ. ಕಳೆದ ವರ್ಷವೂ ಇದೇ ರೀತಿ ಸ್ತಬ್ಧ ಚಿತ್ರ ಮೆರವಣಿಗೆಗೆ ಅನುಮತಿ

ಗಣರಾಜ್ಯೋತ್ಸವ ಪರೇಡ್: ರಾಜ್ಯದ ಮನವಿ ತಿರಸ್ಕರಿಸಿದ ಕೇಂದ್ರ!! Read More »

ತರಕಾರಿ ಅಂಗಡಿಗೆ ನುಗ್ಗಿದ ಓಮ್ನಿ! | ಅಂಗಡಿ, ದ್ವಿಚಕ್ರ ವಾಹನಕ್ಕೆ ಹಾನಿ!

ವಿಟ್ಲ: ಓಮ್ನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ತರಕಾರಿ ಅಂಗಡಿಗೆ ನುಗ್ಗಿದ ಘಟನೆ ಕಂಬಳಬೆಟ್ಟು ದರ್ಗಾದ ಬಳಿ ನಡೆದಿದೆ. ಸುಳ್ಯ ಮೂಲದ ವ್ಯಕ್ತಿಯೊಬ್ಬರು ಚಲಾಯಿಸುತ್ತಿದ್ದ ಓಮ್ನಿ ಕಾರು ನಿಯಂತ್ರಣ ತಪ್ಪಿ ತರಕಾರಿ ಅಂಗಡಿಗೆ ನುಗ್ಗಿದೆ ಎನ್ನಲಾಗಿದೆ. ಅಂಗಡಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೂ ಹಾನಿಯುಂಟಾಗಿದೆ. ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ತರಕಾರಿ ಅಂಗಡಿಗೆ ನುಗ್ಗಿದ ಓಮ್ನಿ! | ಅಂಗಡಿ, ದ್ವಿಚಕ್ರ ವಾಹನಕ್ಕೆ ಹಾನಿ! Read More »

ಗ್ರಾಮಾಂತರ ಸೇರಿದಂತೆ ಹಲವೆಡೆ ಮಳೆ!

ಪುತ್ತೂರು: ಪುತ್ತೂರಿನ ಗ್ರಾಮಾಂತರ ಭಾಗದಲ್ಲಿ ಮಂಗಳವಾರ ಸಂಜೆ ಭಾರೀ ಮಳೆಯಾಗಿದ್ದು, ನಗರ ಪ್ರದೇಶದಲ್ಲಿ ಸಣ್ಣಗೆ ಮಳೆ ಸುರಿದಿದೆ. ಮಧ್ಯಾಹ್ನದ ಬಳಿಕ ಮೋಡ ಕವಿದ ವಾತಾವರಣವಿದ್ದು, ಸಂಜೆ ಹೊತ್ತಿಗೆ ಮಳೆಯಾಗಿದೆ. ಎರಡು ದಿನಗಳ ಬಳಿಕ ಪುತ್ತೂರು ಪರಿಸರದಲ್ಲಿ ಮತ್ತೆ ಮಳೆಯಾಗಿದ್ದು, ಪರಿಸರಕ್ಕೆ ತಂಪೆರೆದಿದೆ.

ಗ್ರಾಮಾಂತರ ಸೇರಿದಂತೆ ಹಲವೆಡೆ ಮಳೆ! Read More »

ಪರಾರಿಯಾಗಲೆತ್ನಿಸಿದ ನಟೋರಿಯಸ್ ರೌಡಿಯ ಕಾಲಿಗೆ ಗುಂಡು, ಬಂಧನ! | ಮಂಗಳೂರು ಪೊಲೀಸರ ಕಾರ್ಯಾಚರಣೆ!

ಮಂಗಳೂರು: ನಟೋರಿಯಸ್ ರೌಡಿ ಆಕಾಶಭವನ ಶರಣ್ ನ ಕಾಲಿಗೆ ಮಂಗಳವಾರ ಪೊಲೀಸರು ಗುಂಡು ಹಾರಿಸಿದ್ದಾರೆಂದು ತಿಳಿದು ಬಂದಿದೆ. ಪರಾರಿಯಾಗಲು ಯತ್ನಿಸಿದಾಗ ಫೈರಿಂಗ್ ಮಾಡಲಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಕಾಶಭವನ ಶರಣ್ ವಿರುದ್ದ ಕೊಲೆ, ಸುಲಿಗೆ, ಅತ್ಯಾಚಾರದಂತಹ 21 ಪ್ರಕರಣಗಳು ದಾಖಲಾಗಿದ್ದವು. ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ಆಡಳಿತಾಧಿಕಾರಿ ರಾಮಕೃಷ್ಣ ಅವರ ಕೊಲೆ ಪ್ರಕರಣದಲ್ಲಿಯೂ ದೋಷಿಯಾಗಿದ್ದ. ಇತ್ತೀಚೆಗೆ ಪೊಲೀಸರ ವಾಹನಕ್ಕೆ ಕಾರು ಢಿಕ್ಕಿ ಮಾಡಿ ಕೊಲೆಗೆ ಯತ್ನಿಸಿ ಪರಾರಿಯಾಗಿದ್ದ.

ಪರಾರಿಯಾಗಲೆತ್ನಿಸಿದ ನಟೋರಿಯಸ್ ರೌಡಿಯ ಕಾಲಿಗೆ ಗುಂಡು, ಬಂಧನ! | ಮಂಗಳೂರು ಪೊಲೀಸರ ಕಾರ್ಯಾಚರಣೆ! Read More »

ಜ. 25ರಿಂದ ಅಯೋಧ್ಯೆಗೆ ದೇಶದ 430 ಕಡೆಯಿಂದ 35 ರೈಲು ಸಂಚಾರ!

ನವದೆಹಲಿ: ದೇಶದ 430 ಕಡೆಯಿಂದ ಆಯೋಧ್ಯೆಗೆ ರೈಲು ಸೇವೆ ನೀಡಲು ನಿರ್ಧರಿಸಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಜನವರಿ 25 ರಿಂದ 60 ದಿನಗಳ ಕಾಲ ವಿಶೇಷ ಹಾಗೂ ಹೆಚ್ಚುವರಿ ರೈಲುಗಳು ಆಯೋಧ್ಯೆಯತ್ತ ಸಂಚರಿಸಲಿವೆ. ಪ್ರತಿ ದಿನ 35 ರೈಲುಗಳು ಆಯೋಧ್ಯೆ ತೆರಳುವ ಭಕ್ತರಿಗೆ ಸೇವೆ ನೀಡಲಿವೆ ಎಂದು ಬಿಜೆಪಿ ಸಭೆಯಲ್ಲಿ ಹೇಳಿದರು. ಈ‌ ಮೂಲಕ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಶ್ರೀರಾಮ ಮಂದಿರ ದರ್ಶನಕ್ಕೆ ವಿಶೇಷ ವ್ಯವಸ್ಥೆ ಮಾಡಿದೆ. ದೇಶಾದ್ಯಂತ ದೀಪಾವಳಿ ಸಡಗರ ಮನೆ

ಜ. 25ರಿಂದ ಅಯೋಧ್ಯೆಗೆ ದೇಶದ 430 ಕಡೆಯಿಂದ 35 ರೈಲು ಸಂಚಾರ! Read More »

ಚುನಾವಣೆ ಹಿನ್ನೆಲೆಯಲ್ಲಿ ಸೆಂಟ್ರಲ್ ವಾರ್ ರೂಂ ರಚಿಸಿದ ಕಾಂಗ್ರೆಸ್! | ದ.ಕ. ಡಿಸಿಯಾಗಿದ್ದ ಶಶಿಕಾಂತ್ ಸೆಂಥಿಲ್ ಹೆಗಲಿಗೆ ಮತ್ತೆ ವಾರ್ ರೂಂ ನೇತೃತ್ವದ ಹೊಣೆ!

2024ರ ಸಾರ್ವತ್ರಿಕ ಚುನಾವಣೆಗಾಗಿ ಕಾಂಗ್ರೆಸ್ ತನ್ನ ‘ಸೆಂಟ್ರಲ್ ವಾರ್ ರೂಮ್’ ಅನ್ನು ರಚಿಸಿದೆ. ಇದರ ಅಧ್ಯಕ್ಷರಾಗಿ ಶಶಿಕಾಂತ್ ಸೆಂಥಿಲ್ ಅವರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಮಾಡಿದ್ದಾರೆ. 2023ರಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನಲ್ಲಿ ವಾರ್ ರೂಮ್ ಪಾತ್ರ ಪ್ರಮುಖವಾಗಿತ್ತು. ಇದನ್ನು ಗಮನದಲ್ಲಿಟ್ಟುಕೊಂಡು ಮತ್ತೆ ಮುಂದಿನ ಚುನಾವಣೆಗೆ ವಾರ್ ರೂಂ ತೆರೆಯಲಾಗಿದೆ. ಅಂದ ಹಾಗೇ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಬಳಿಕ ರಾಜೀನಾಮೆ ನೀಡಿದ್ದ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್ ಅವರೇ ಸೆಂಟ್ರಲ್ ವಾರ್

ಚುನಾವಣೆ ಹಿನ್ನೆಲೆಯಲ್ಲಿ ಸೆಂಟ್ರಲ್ ವಾರ್ ರೂಂ ರಚಿಸಿದ ಕಾಂಗ್ರೆಸ್! | ದ.ಕ. ಡಿಸಿಯಾಗಿದ್ದ ಶಶಿಕಾಂತ್ ಸೆಂಥಿಲ್ ಹೆಗಲಿಗೆ ಮತ್ತೆ ವಾರ್ ರೂಂ ನೇತೃತ್ವದ ಹೊಣೆ! Read More »

ಶ್ರೀ ದೇವಿ ಮಹಾತ್ಮೆ ಇನ್ನು ಪೂರ್ಣ ರಾತ್ರಿ ಪ್ರದರ್ಶನ | ಕಟೀಲು ಮೇಳಕ್ಕೆ ಹೈಕೋರ್ಟ್ ಅನುಮತಿ!

ಕಾಲಮಿತಿಯಲ್ಲಿ ನಡೆಯುತ್ತಿದ್ದ ಕಟೀಲು ಮೇಳದ ಯಕ್ಷಗಾನ ಇನ್ನು ಪೂರ್ಣರಾತ್ರಿ ನಡೆಯಲಿದೆ. ಹಳೆ ಪದ್ಧತಿಯಂತೆ ರಾತ್ರಿಯಿಡೀ ಯಕ್ಷಗಾನ ನಡೆಸಲು ಹೈಕೋರ್ಟ್ ಅನುಮತಿ ನೀಡಿದ್ದು, ಯಕ್ಷಗಾನ ಪ್ರಿಯರ ಸಂತಸಕ್ಕೆ ಕಾರಣವಾಗಿದೆ. ಜ. 14ರಿಂದ ಮತ್ತೆ ಹಿಂದಿನಂತೆ ಪೂರ್ಣರಾತ್ರಿ ಪ್ರದರ್ಶನ ನೀಡಲು ಕಟೀಲಿನ 6 ಮೇಳಗಳು ಸಿದ್ಧವಾಗಿವೆ. ಶಬ್ದಮಾಲಿನ್ಯ ಮಿತಿಯ ನಿಯಮದಿಂದಾಗಿ ಕಳೆದ ವರ್ಷದಿಂದ ಕಾಲಮಿತಿಗೆ ಒಳಪಟ್ಟಿದ್ದ ಕಟೀಲು ಮೇಳ ಈ ಬಾರಿಯೂ ಸುಮಾರು ಒಂದೂವರೆ ತಿಂಗಳ ಕಾಲ ಕಾಲಮಿತಿಯಲ್ಲಿ ಪ್ರದರ್ಶನ ನೀಡಿದೆ. ಹೈಕೋರ್ಟ್‌ ಆದೇಶ ಮತ್ತು ಶ್ರೀ ಕ್ಷೇತ್ರದ ಭಕ್ತರ

ಶ್ರೀ ದೇವಿ ಮಹಾತ್ಮೆ ಇನ್ನು ಪೂರ್ಣ ರಾತ್ರಿ ಪ್ರದರ್ಶನ | ಕಟೀಲು ಮೇಳಕ್ಕೆ ಹೈಕೋರ್ಟ್ ಅನುಮತಿ! Read More »

ಗ್ಯಾರೇಜಿಗೆ ನುಗ್ಗಿದ ಲಾರಿ: ಪಲ್ಟಿಯಾದ ಟೆಂಪೋ ರಿಕ್ಷಾ

ಉಪ್ಪಿನಂಗಡಿ: ಕೆಲವೇ ಕ್ಷಣಗಳೊಳಗೆ ಪೆರ್ನೆಯ ಒಂದೇ ಪ್ರದೇಶದಲ್ಲಿ ಎರಡು ಅಪಘಾತಗಳು ನಡೆದಿರುವ ಬಗ್ಗೆ ವರದಿಯಾಗಿದೆ. ಜ.8 ಸೋಮವಾರ ಸಂಜೆ ಪೆರ್ನೆ ಜಂಕ್ಷನ್‍ನಿಂದ ಕೆಲವೇ ಅಂತರ ದೂರದಲ್ಲಿ ನಿಲ್ಲಿಸಿದ್ದ ಈಚರ್ ಲಾರಿಯೊಂದು ಇಳಿಜಾರು ಪ್ರದೇಶದಲ್ಲಿ ತನ್ನಷ್ಟಕ್ಕೆ ಹಿಮ್ಮುಖವಾಗಿ ಚಲಿಸಿ ರಸ್ತೆ ಬದಿಯಲ್ಲಿದ್ದ ಚಂದ್ರಶೇಖರ್ ಎಂಬವರ ಗ್ಯಾರೇಜಿಗೆ ನುಗ್ಗಿದೆ. ಈ ಸಂದರ್ಭ ಗ್ಯಾರೇಜ್‍ನಲ್ಲಿ ಯಾರೂ ಇಲ್ಲದ್ದರಿಂದ ಅಪಾಯವೇನೂ ಸಂಭವಿಸಿಲ್ಲ. ಆದರೆ ಗ್ಯಾರೇಜ್ ಮುಂದೆ ನಿಲ್ಲಿಸಿದ್ದ ಎರಡು ಬೈಕ್‍ಗಳಿಗೆ ಹಾಗೂ ಗ್ಯಾರೇಜ್‍ಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ ಮೇಲಿನ ಘಟನೆ ನಡೆದ

ಗ್ಯಾರೇಜಿಗೆ ನುಗ್ಗಿದ ಲಾರಿ: ಪಲ್ಟಿಯಾದ ಟೆಂಪೋ ರಿಕ್ಷಾ Read More »

ಅರ್ಜುನ ಪ್ರಶಸ್ತಿ ಪಡೆದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ

ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಶಮಿ ಅವರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅರ್ಜುನ ಪ್ರಶಸ್ತಿಯನ್ನು ನೀಡಿದರು. 2023ರ ಏಕದಿನ ವಿಶ್ವಕಪ್‌ನಲ್ಲಿನ ಅವರ ಸಾಧನೆಯನ್ನು ಗಣನೆಗೆ ತೆಗೆದುಕೊಂಡ ನಂತರ ಬಿಸಿಸಿಐ ಶಮಿ ಹೆಸರನ್ನು ಪ್ರಶಸ್ತಿಗಾಗಿ ಶಿಫಾರಸು ಮಾಡಿತ್ತು. ಕೇವಲ 7 ಪಂದ್ಯಗಳಿಂದ 24 ವಿಕೆಟ್ ಕಬಳಿಸುವ ಮೂಲಕ ಶಮಿ 2023ರ ವಿಶ್ವಕಪ್ ಪಂದ್ಯಾವಳಿಯಲ್ಲಿ ಅತ್ಯುತ್ತಮ ಬೌಲರ್ ಆಗಿ ಮಿಂಚಿದ್ದರು. ನಾನು ಈ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಕ್ಕೆ ಸಂತೋಷವಾಗಿದೆ. ನನ್ನ ಜೀವನದಲ್ಲಿ ಈ ಪ್ರಶಸ್ತಿಯನ್ನು ಪಡೆದ ಅನೇಕರನ್ನು ನೋಡಿದ್ದೇನೆ.

ಅರ್ಜುನ ಪ್ರಶಸ್ತಿ ಪಡೆದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ Read More »

error: Content is protected !!
Scroll to Top