ಹಿಂಸಾಚಾರ ಪ್ರಕರಣ: ಆರೋಪಿ ಶ್ರೀಕಾಂತ್‌ ಪೂಜಾರಿಗೆ ಜಾಮೀನು

ಬಾಬರಿ ಮಸೀದಿ ಧ್ವಂಸ ಹಿಂಸಾಚಾರ ಪ್ರಕರಣದಲ್ಲಿ ಕಳೆದ ಶುಕ್ರವಾರ ಬಂಧನಕ್ಕೊಳಗಾಗಿದ್ದ ಆರೋಪಿ ಶ್ರೀಕಾಂತ್‌ ಪೂಜಾರಿಗೆ ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ.  ಡಿ. 5, 1992 ರಂದು ಹುಬ್ಬಳ್ಳಿ ನಗರದಲ್ಲಿ ಸಂಭವಿಸಿದ್ದ ಹಿಂಸಾಚಾರ ಸಂದರ್ಭ ಮಳಿಗೆಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 8 ಜನರ ವಿರುದ್ಧ ಹುಬ್ಬಳ್ಳಿಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಹಿಂಸಾಚಾರ ಪ್ರಕರಣ: ಆರೋಪಿ ಶ್ರೀಕಾಂತ್‌ ಪೂಜಾರಿಗೆ ಜಾಮೀನು Read More »

ಸೊಮಾಲಿಯಾ: ಭಾರತೀಯರಿದ್ದ ಹಡಗು ಹೈಜಾಕ್!! | ರಕ್ಷಣೆಗೆ ತೆರಳಿದ ಯುದ್ಧನೌಕೆ INS ಚೆನ್ನೈ!

ಭಾರತೀಯರಿದ್ದ ಲೈಬೀರಿಯನ್ ಧ್ವಜದ ಹಡಗನ್ನು ಸೊಮಾಲಿಯಾ ಕರಾವಳಿಯ ಬಳಿ ಅಪಹರಣ ಮಾಡಲಾಗಿದೆ ಎಂದು ಭಾರತೀಯ ನೌಕಾಪಡೆ ಹೇಳಿದೆ. ಲೈಬೀರಿಯನ್ ಧ್ವಜದ ಹಡಗು ‘ಎಂವಿ ಲೀಲಾ ನಾರ್ಫೋಕ್’ ಎಂದು ಗುರುತಿಸಲಾಗಿದ್ದು, ಇದರಲ್ಲಿ 15 ಭಾರತೀಯ ಸಿಬ್ಬಂದಿಗಳು ಇದ್ದರು ಎನ್ನಲಾಗಿದ್ದು, ಹಡಗನ್ನು ಭಾರತೀಯ ನೌಕಾಪಡೆ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ತಿಳಿದುಬಂದಿದೆ. ಅಪಹರಣಕ್ಕೊಳಗಾದ ಹಡಗಿನ ಚಲನವಲನಗಳ ಮೇಲೆ ಜಾಗರೂಕ ನಿಗಾ ಇಡಲು ಭಾರತೀಯ ನೌಕಾಪಡೆಯ ವಿಮಾನಗಳನ್ನು ನಿಯೋಜಿಸಲಾಗಿದೆ. ಭಾರತೀಯ ನೌಕಾಪಡೆಯ ಯುದ್ಧನೌಕೆ INS ಚೆನ್ನೈಯಿಂದ ಅಪಹರಣಕ್ಕೊಳಗಾದ ಹಡಗಿನ ಕಡೆಗೆ ಚಲಿಸುತ್ತಿದೆ ಎಂದು

ಸೊಮಾಲಿಯಾ: ಭಾರತೀಯರಿದ್ದ ಹಡಗು ಹೈಜಾಕ್!! | ರಕ್ಷಣೆಗೆ ತೆರಳಿದ ಯುದ್ಧನೌಕೆ INS ಚೆನ್ನೈ! Read More »

ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಕಡ್ಡಾಯ | ಜ. 15ರೊಳಗೆ ಸಮೀಕ್ಷೆ ಪೂರ್ಣಗೊಳಿಸಲು ಸೂಚನೆ

ಬೆಂಗಳೂರು: ನಗರದಾದ್ಯಂತ ಇರುವ ಕನ್ನಡ ನಾಮಫಲಕಗಳ ಸ್ಥಿತಿಗತಿ ಕುರಿತು ಜನವರಿ 15 ರೊಳಗೆ ಸಮೀಕ್ಷೆಯನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗುರುವಾರ ಸೂಚನೆ ನೀಡಿದೆ. ನಗರದ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡ ಅಳವಡಿಸುವ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಅವರು, ನಗರದಲ್ಲಿರುವ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಬರುವ ವಾಣಿಜ್ಯ ಮಳಿಗೆಗಳು, ಅಂಗಡಿ ಮುಂಗಟ್ಟುಗಳು ಹಾಗೂ ಎಲ್ಲಾ ವಲಯದ ಉದ್ದಿಮೆಗಳನ್ನು ಜನವರಿ 15ರ ಒಳಗೆ ಸರ್ವೇ ಕಾರ್ಯ ಪೂರ್ಣಗೊಳಿಸಬೇಕು. ಕನ್ನಡ ಭಾಷೆಯ

ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಕಡ್ಡಾಯ | ಜ. 15ರೊಳಗೆ ಸಮೀಕ್ಷೆ ಪೂರ್ಣಗೊಳಿಸಲು ಸೂಚನೆ Read More »

ಕೊಡಿಪ್ಪಾಡಿ ಕ್ಷೇತ್ರದಲ್ಲಿ ಶ್ರೀ ಡಾ.ಸುಗುಣೇಂದ್ರ ತೀರ್ಥ ಶ್ರೀಪಾದರಿಂದ ‘ತೊಟ್ಟಿಲು ಪೂಜೆ’  

ಪುತ್ತೂರು: ಪುತ್ತೂರಿನಲ್ಲಿ ಪೌರ ಸನ್ಮಾನ ಸ್ವೀಕರಿಸಲು ಗುರುವಾರ ಸಂಜೆ ಪುತ್ತೂರಿಗೆ ಆಗಮಿಸಲಿರುವ ಪುತ್ತಿಗೆ ಶ್ರೀ ಡಾ.ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಶ್ರಿ ಸುಶ್ರೀಂದ್ರ ತೀರ್ಥ ಸ್ವಾಮೀಜಿಗಳು ಕೊಡಿಪ್ಪಾಡಿ ಶ್ರೀ ಜನಾರ್ದನ ದೇವಸ್ಥಾನಕ್ಕೆ ರಾತ್ರಿ ಭೇಟಿ ನೀಡಿದರು. ಶ್ರೀ ಡಾ.ಸುಗುಣೇಂದ್ರ ತೀರ್ಥ ಶ್ರೀಪಾದರು ದೇವಸ್ಥಾನದಲ್ಲಿ ಪಟ್ಟದ ದೇವರಿಗೆ ‘ತೊಟ್ಟಿಲು ಪೂಜೆ ಸೇವೆ’ ನೆರವೇರಿಸಿ, ಆಶೀರ್ವಚನ ನೀಡಿದರು. ಭಕ್ತಾದಿಗಳು ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಪ್ರಾಯೋಜಕತ್ವ ವಹಿಸಿಕೊಂಡ ಹರಿಪ್ರಸಾದ್ ವೈಲಾಯ ಕರಾಯ ಹಾಗೂ ಮನೆಯವರು, ಶ್ರೀ ಕ್ಷೇತ್ರದ

ಕೊಡಿಪ್ಪಾಡಿ ಕ್ಷೇತ್ರದಲ್ಲಿ ಶ್ರೀ ಡಾ.ಸುಗುಣೇಂದ್ರ ತೀರ್ಥ ಶ್ರೀಪಾದರಿಂದ ‘ತೊಟ್ಟಿಲು ಪೂಜೆ’   Read More »

ತ್ರೋಬಾಲ್ ಪಂದ್ಯಾಟ: ವೈಗಾ ಎಂ. ರಾಷ್ಟ್ರಮಟ್ಟಕ್ಕೆ 

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಶಿವಮೊಗ್ಗದಲ್ಲಿ ನಡೆದ ರಾಜ್ಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ವೈಗಾ ಎಂ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವೈಗಾ ದರ್ಬೆ ಸುದರ್ಶನ್ ಎಂಟರ್ಪ್ರೈಸಸ್ ನ ಮಾಲಕ ಮನೋಜ್ ಟಿ.ವಿ. ಹಾಗೂ ಸಂಧ್ಯಾ ಎಂ. ದಂಪತಿ ಪುತ್ರಿ. ವಿದ್ಯಾರ್ಥಿನಿಯನ್ನು ಶಾಲಾ ಮುಖ್ಯ ಶಿಕ್ಷಕಿ, ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

ತ್ರೋಬಾಲ್ ಪಂದ್ಯಾಟ: ವೈಗಾ ಎಂ. ರಾಷ್ಟ್ರಮಟ್ಟಕ್ಕೆ  Read More »

ಬಿಜೆಪಿ ರಾಜ್ಯ ಮಾಧ್ಯಮ ವಿಭಾಗದ ಸಹಸಂಚಾಲಕರಾಗಿ ಪ್ರಶಾಂತ್ ಕೆಡೆಂಜಿ ನೇಮಕ

ಪುತ್ತೂರು: ಬಿಜೆಪಿ ರಾಜ್ಯ ಮಾಧ್ಯಮ ವಿಭಾಗದ ಸಹಸಂಚಾಲಕರಾಗಿ ಪ್ರಶಾಂತ್ ಕೆಡೆಂಜಿ ಅವರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆದೇಶಿಸಿದ್ದಾರೆ. ಸವಣೂರು ಗ್ರಾಮದ ಕೆಡೆಂಜಿ ಗಂಗಾಧರ ಗೌಡರ ಪುತ್ರರಾಗಿರುವ ಪ್ರಶಾಂತ್ ಕೆಡೆಂಜಿ ಡಿಪ್ಲೋಮಾ ಇನ್ ಸಿವಿಲ್ ಇಂಜಿನಿಯರಿಂಗ್ ಹಾಗೂ ಬಿ.ಇ. ಇನ್ ಜರ್ನಲಿಸಮ್ ಮಾಡಿರುತ್ತಾರೆ. ಆದಿಚುಂಚನಗಿರಿ ವಿದ್ಯಾಸಂಸ್ಥೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಪೂರೈಸಿದ್ದು, ಪ್ರಸ್ತುತ ರಾಜ್ಯ ಮಾಧ್ಯಮ ಸಮಿತಿ ಸದಸ್ಯರಾಗಿದ್ದಾರೆ. ಬಾಲ್ಯದಿಂದಲೇ ಸ್ವಯಂ ಸೇವಾ ಪ್ರಾಥಮಿಕ ಶಿಕ್ಷಣ ಪಡೆದಿರುವ ಅವರು, ಸರಹದ್ ಕೊ ಪ್ರಣಾಮ್ ಕುರಿತು

ಬಿಜೆಪಿ ರಾಜ್ಯ ಮಾಧ್ಯಮ ವಿಭಾಗದ ಸಹಸಂಚಾಲಕರಾಗಿ ಪ್ರಶಾಂತ್ ಕೆಡೆಂಜಿ ನೇಮಕ Read More »

ಅಡಕೆ ಹಳದಿ ರೋಗಕ್ಕೆ ಸುಳ್ಯದ ರೈತ ಬಲಿ: ಸರಕಾರ, ವಿಜ್ಞಾನಿಗಳೇ ನೇರ ಹೊಣೆ

ಪುತ್ತೂರು: ಸುಳ್ಯದಲ್ಲಿ ಅಡಿಕೆಗೆ ಹಳದಿ ರೋಗಕ್ಕೆ ಮನನೊಂದು ಆಲೆಟ್ಟಿ ಗ್ರಾಮದ ಬಡ್ಡಡ್ಕ ನಿವಾಸಿ ಜಗದೀಶ ಚಳ್ಳಂಗಾರು ಆತ್ಮಹತ್ಯೆಗೆ ಶರಣಾಗಿದ್ದು, ಇದಕ್ಕೆ ಸರಕಾರ, ಕೃಷಿ ಅಧಿಕಾರಿಗಳು ಮತ್ತು ಕೃಷಿ ವಿಜ್ಞಾನಿಗಳು ನೇರ ಹೊಣೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಓಸ್ವಾಲ್ಡ್ ಪ್ರಕಾಶ್ ಮಿನೇಜಸ್ ಆಪಾದಿಸಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಷ್ಟೋ ವರ್ಷದ ಮೊದಲೇ ಕಾಣಿಸಿಕೊಂಡ ಅಡಿಕೆ ಹಳದಿ ರೋಗವನ್ನು ನಿಯಂತ್ರಿಸುವಲ್ಲಿ ಹಾಗೂ ಪರ್ಯಾಯ ವ್ಯವಸ್ಥೆ ಕಲ್ಪಿಸುವುದರಲ್ಲಿ ಸರಕಾರ ಸಂಪೂರ್ಣವಾಗಿ ವಿಫಲರಾಗಿದೆ. ಸರಕಾರವು ಈ ಆತ್ಮಹತ್ಯೆಯ

ಅಡಕೆ ಹಳದಿ ರೋಗಕ್ಕೆ ಸುಳ್ಯದ ರೈತ ಬಲಿ: ಸರಕಾರ, ವಿಜ್ಞಾನಿಗಳೇ ನೇರ ಹೊಣೆ Read More »

ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ!!

ಕಾಡಾನೆ ದಾಳಿಯಿಂದ ಕೂಲಿ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೇಲೂರು ತಾಲ್ಲೂಕಿನ ಮತ್ತಾವರದಲ್ಲಿ ಗುರುವಾರ ಸಂಜೆ ನಡೆದಿದೆ. ಮತ್ತಾವರ ಗ್ರಾಮದ ವಸಂತ (43) ಮೃತಪಟ್ಟವರು. ಸಂಜೆಯ ವೇಳೆ ತೋಟದ ಮನೆಯಲ್ಲಿದ್ದ ಅವರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ತೀವ್ರವಾಗಿ ಗಾಯಗೊಂಡ ವಸಂತ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಆನೆ ದಾಳಿಗೆ ನಿರಂತರವಾಗಿ ಸಾವುಗಳು ಸಂಭವಿಸುತ್ತಿದ್ದರೂ, ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ!! Read More »

ಕರಸೇವಕ ಶ್ರೀಕಾಂತ್ ಪೂಜಾರಿ ಜಾಮೀನು ಆದೇಶ ಇಂದು!

ಬೆಂಗಳೂರು: ರಾಮ ಮಂದಿರ ನಿರ್ಮಾಣಕ್ಕೆ ಆಗ್ರಹಿಸಿ 1992ರಲ್ಲಿ ದೇಶಾದ್ಯಂತ ನಡೆದಿದ್ದ ಗಲಭೆಗಳ ವೇಳೆ ಹುಬ್ಬಳ್ಳಿಯಲ್ಲಿ ಸಂಭವಿಸಿದ್ದ ಕೋಮುಗಲಭೆ ಪ್ರಕರಣದಲ್ಲಿ ಆರೋಪಿಯಾಗಿರುವ ಶ್ರೀಕಾಂತ ಪೂಜಾರಿ ವಿರುದ್ಧದ ಜಾಮೀನು ಅರ್ಜಿಯ ಆದೇಶವನ್ನು ಹುಬ್ಬಳ್ಳಿ ನ್ಯಾಯಾಲಯವು ಶುಕ್ರವಾರ ಪ್ರಕಟಿಸಲಿದೆ. ಕಾಂತೇಶ್‌ ಅಲಿಯಾಸ್‌ ಶ್ರೀಕಾಂತ್‌ ಅಲಿಯಾಸ್‌ ಕಾಂತ್ಯ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಗುರುವಾರ ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಪರಮೇಶ್ವರ ಪ್ರಸನ್ನ ಬಿ. ಅವರು ನಡೆಸಿದರು. ತನಿಖಾಧಿಕಾರಿಯ ಆಕ್ಷೇಪಣೆಯ ಜೊತೆಗೆ ಸರ್ಕಾರಿ ಅಭಿಯೋಜಕಿ ಅವರು ಆಕ್ಷೇಪಣೆ

ಕರಸೇವಕ ಶ್ರೀಕಾಂತ್ ಪೂಜಾರಿ ಜಾಮೀನು ಆದೇಶ ಇಂದು! Read More »

The perfect addition.

Yes, selection is a challenge from time immemorial. Be it anything to select, everybody is puzzled with varying degrees, never the less. But, magically, exceptionally, sometimes the selection appears to be perfect by all angles. Here is one such example. Ashwin L. Shetty, an ex missile engineer by profession, was inducted into the world’s largest

The perfect addition. Read More »

error: Content is protected !!
Scroll to Top