ಮರುಜೀವ ಪಡೆದುಕೊಂಡ ಕಲ್ಲಡ್ಕ ಪ್ರಭಾಕರ ಭಟ್ ಕೇಸ್

ಮಂಗಳೂರು:  ಶ್ರೀರಂಗಪಟ್ಟಣದಲ್ಲಿ ಮಹಿಳಾ ವಿರೋಧಿ ದ್ವೇಷ ಭಾಷಣ ಮಾಡಿದ್ದ ಕಲ್ಲಡ್ಕ ಪ್ರಭಾಕರ ಭಟ್ ಪ್ರಕರಣ ಇದೀಗ ಮರುಜೀವ ಪಡೆದುಕೊಂಡಿದೆ. ಜ.3ರಂದು ಹಿರಿಯ ವಕೀಲ ಎಸ್ ಬಾಲನ್ ಐಪಿಸಿ ಸೆಕ್ಷನ್ 1860 (U/s 354, 294, 509, 506, 153A, 295, 295A, 298) ಅಡಿಯಲ್ಲಿ ಸುಪ್ರಿಂ ಕೋರ್ಟ್ ನ ಹಲವು ತೀರ್ಪುಗಳನ್ನು ಉಲ್ಲೇಖಿಸಿ ಶ್ರೀರಂಗಪಟ್ಟಣ ನ್ಯಾಯಾಲಯದಲ್ಲಿ ದೂರುದಾರರ ಪರವಾಗಿ ವಕಾಲತ್ತು ಹಾಕಿದ್ದಾರೆ. “ಮುಸ್ಲಿಂ ಮಹಿಳೆಯರಿಗೆ ದಿನಕ್ಕೊಬ್ಬರು ಗಂಡಂದಿರು” ಎಂದು ಭಾಷಣ ಮಾಡಿದ್ದ ಕಲ್ಲಡ್ಕ ಪ್ರಭಾಕರ ಭಟ್, ಮುಂದುವರೆದು […]

ಮರುಜೀವ ಪಡೆದುಕೊಂಡ ಕಲ್ಲಡ್ಕ ಪ್ರಭಾಕರ ಭಟ್ ಕೇಸ್ Read More »

ಸುಳ್ಯ ತಾಲೂಕು ಹೊಸ ಅಕ್ರಮ ಸಕ್ರಮ ಸಮಿತಿ ರಚನೆ | ಆದೇಶ ಹೊರಡಿಸಿದ ಸರಕಾರ

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಅಕ್ರಮ ಸಕ್ರಮ ಸಮಿತಿಗೆ ಬಿಜೆಪಿ ಪ್ರಮುಖರನ್ನೊಳಗೊಂಡು ಹಿಂದೆ ರಚಿಸಿದ್ದ ಸಮಿತಿಯನ್ನು ರದ್ದುಗೊಳಿಸಿ, ಇದೀಗ ಹೊಸದಾಗಿ ಸದಸ್ಯರ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಅಧ್ಯಕ್ಷತೆಯ ಸಮಿತಿಗೆ ಕಾಂಗ್ರೆಸ್ ಮುಖಂಡರಾದ  ಹೆಚ್. ಆದಂ , ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಪಿ.ವರ್ಗೀಸ್ ಹಾಗೂ ಸುಳ್ಯ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಗೀತಾ ಕೋಲ್ಚಾರು ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಿ ಹೊಸ ಸಮಿತಿ ರಚಿಸಿ ಆದೇಶಿಸಲಾಗಿದೆ.

ಸುಳ್ಯ ತಾಲೂಕು ಹೊಸ ಅಕ್ರಮ ಸಕ್ರಮ ಸಮಿತಿ ರಚನೆ | ಆದೇಶ ಹೊರಡಿಸಿದ ಸರಕಾರ Read More »

ಕುಮಾರಪರ್ವತದ ತುದಿಯ ಕುಮಾರನ ಪಾದಕ್ಕೆ ಪೂಜೆ

ಸುಬ್ರಹ್ಮಣ್ಯ: ಸುಮಾರು 4 ಸಾವಿರ ಅಡಿ ಎತ್ತರವಿರುವ ಕುಮಾರಪರ್ವತದ ತುತ್ತ ತುದಿಯಲ್ಲಿರುವ ಕುಮಾರನ ಪಾದಕ್ಕೆ ಮತ್ತು ಸಮೀಪದಲ್ಲಿರುವ ವಾಸುಕಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕ ಸೀತಾರಾಮ ಯಡಪಡಿತ್ತಾಯ ಅವರು ಮಂಗಳವಾರ ಪೂಜೆ ನೆರವೇರಿಸಿದರು. ಈ ಸಂಧರ್ಭ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ, ವ್ಯವಸ್ಥಾಪನ ಸಮಿತಿ ಸದಸ್ಯರಾದ ಪ್ರಸನ್ನ ದರ್ಬೆ, ಶ್ರೀವತ್ಸ ಬೆಂಗಳೂರು, ಲೋಕೇಶ್ ಮುಂಡೋಕಜೆ, ಶೋಭಾ ಗಿರಿಧರ್, ದೇವಸ್ಥಾನದ ಸಿಬ್ಬಂದಿ ಉಪಸ್ಥಿತರಿದ್ದರು. ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿಗಳು ಸೇರಿದಂತೆ 150ಕ್ಕೂ ಅಧಿಕ

ಕುಮಾರಪರ್ವತದ ತುದಿಯ ಕುಮಾರನ ಪಾದಕ್ಕೆ ಪೂಜೆ Read More »

‘ಕ್ರಿಟಿಕಲ್ ಇನ್ ಲೆಸ್ ಫಂಡ್’ ನ ಧನಸಹಾಯ ವಿತರಣೆ

ಪುತ್ತೂರು: ಕೆದಿಲ ಧರ್ಮಸ್ಥಳ ಗ್ರಾಮಾಭಿವೃದ್ಧಿ ಒಕ್ಕೂಟದ ಪ್ರಗತಿ ಸ್ವಸಹಾಯ ಸಂಘದ ವತಿಯಿಂದ ಒಕ್ಕೂಟದ ಸದಸ್ಯೆ ಮೀನಾಕ್ಷಿ ಇವರಿಗೆ ಕ್ಷೇತ್ರದ ‘ಕ್ರಿಟಿಕಲ್ ಇನ್ ಲೆಸ್ ಫಂಡ್’ 25,000 ಧನಸಹಾಯ ವಿತರಿಸಲಾಯಿತು. ಅವರು ದೀರ್ಘಕಾಲದ ಅನಾರೋಗ್ಯ ಸಮಸ್ಯೆಯಿಂದ ಬಳಲುತಿದ್ದರು. ಈ ಸಂದರ್ಭದಲ್ಲಿ ಪರ್ನೆ ವಲಯ ಮೇಲ್ವಿಚಾರಕಿ ಶಾರದ, ಸೇವಾಪ್ರತಿನಿಧಿ ಜಯಂತಿ, ಒಕ್ಕೂಟದ ಅಧ್ಯಕ್ಷೆ ಮೀನಾಕ್ಷಿ, ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಜಗದೀಶ, ಶೀನಪ್ಪ ಉಪಸ್ಥಿತರಿದ್ದರು.

‘ಕ್ರಿಟಿಕಲ್ ಇನ್ ಲೆಸ್ ಫಂಡ್’ ನ ಧನಸಹಾಯ ವಿತರಣೆ Read More »

ದಿಗ್ಭಂಧನದಲ್ಲಿದ್ದ ಮಹಿಳೆಯ ರಕ್ಷಣೆ | ಆಸ್ಪತ್ರೆಗೆ ದಾಖಲಿಸಿದ ಅಧಿಕಾರಿಗಳು

ಪುತ್ತೂರು: ದಿಗ್ಭಂಧನದಲ್ಲಿದ್ದ ಮಹಿಳೆಯೊಬ್ಬರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಆರೋಗ್ಯ ಇಲಾಖೆಯವರು ಪೊಲೀಸರ ಸಹಕಾರದೊಂದಿಗೆ ರಕ್ಷಿಸಿ ಚಿಕಿತ್ಸೆಗಾಗಿ ಸರಕಾರಿ ಆಸ್ಪತ್ರೆಗೆ ದಾಖಲಿಸಿರುವ ಕುರಿತು ವರದಿಯಾಗಿದೆ. ಕೆಮ್ಮಿಂಜೆ ಗ್ರಾಮದ ಇಡಬೆಟ್ಟು ಸಮೀಪದ ಕರೆಜ್ಜ ಎಂಬಲ್ಲಿ ಮಹಿಳೆಯನ್ನು ರಕ್ಷಣೆ ಮಾಡಲಾಗಿದ್ದು,  ಶ್ರೀಪತಿ ಹೆಬ್ಬಾರ್ ಎಂಬವರ ಪತ್ನಿ ಆಶಾ ಎಂಬವರನ್ನು ಮನೆಯ ಪಕ್ಕದ ಸಿಮೆಂಟ್ ಶೀಟ್ ಅಳವಡಿಸಿದ ಕಿಟಕಿ, ವಿದ್ಯುತ್ ಬೆಳಕು ಇಲ್ಲದ ಒಂದೇ ಬಾಗಿಲಿನ ಕೋಣೆಯಲ್ಲಿ ದಿಗ್ಭಂಧನದಲ್ಲಿರಿಸಲಾಗಿತ್ತು. ಅನಾಮಧೇಯ ಕರೆಯ ಹಿನ್ನಲೆಯಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಮಹಿಳೆಯನ್ನು

ದಿಗ್ಭಂಧನದಲ್ಲಿದ್ದ ಮಹಿಳೆಯ ರಕ್ಷಣೆ | ಆಸ್ಪತ್ರೆಗೆ ದಾಖಲಿಸಿದ ಅಧಿಕಾರಿಗಳು Read More »

ರಾಜಕೀಯ ಪ್ರವೇಶ ಮಾಡಲಿದ್ದಾರೆ ಅಶ್ವಿನ್ ಎಲ್. ಶೆಟ್ಟಿ | ನಾಳೆ ಮಂಗಳೂರಿನಲ್ಲಿ ಬಿಜೆಪಿ ಮುಖಂಡರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ

ಪುತ್ತೂರು: ಉದ್ಯಮಿ, ಸಹಕಾರಿ ಸವಣೂರು ಸೀತಾರಾಮ ರೈ ಅವರ ಅಳಿಯ ಅಶ್ವಿನ್ ಎಲ್‍. ಶೆಟ್ಟಿ ಜ.4 ರಂದು ಮಂಗಳೂರಿನಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಮೂಲಕ ರಾಜಕೀಯ ಪ್ರವೇಶ ಮಾಡಲಿದ್ದಾರೆ. ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಬೆಳಿಗ್ಗೆ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಸಂಸದ ನಳಿನ್ ಕುಮಾರ್ ಕಟೀಲ್‍ ಸಮ್ಮುಖದಲ್ಲಿ ಬಿಜೆಪಿ ಸೇರಲಿದ್ದಾರೆ ಎಂದು ತಿಳಿದು ಬಂದಿದೆ. ಅಶ್ವಿನ್ ಎಲ್‍. ಶೆಟ್ಟಿಯವರು ಜ.13 ರಂದು ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಯಾಗಿ

ರಾಜಕೀಯ ಪ್ರವೇಶ ಮಾಡಲಿದ್ದಾರೆ ಅಶ್ವಿನ್ ಎಲ್. ಶೆಟ್ಟಿ | ನಾಳೆ ಮಂಗಳೂರಿನಲ್ಲಿ ಬಿಜೆಪಿ ಮುಖಂಡರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ Read More »

ರಾಮನ ಕೆಲಸಕ್ಕೆ ಅಡ್ಡಿ ಮಾಡಿದರೆ, ಲಂಕೆಯ ಉತ್ತರ |  ಬೃಹತ್ ಪ್ರತಿಭಟನಾ ಸಭೆಯಲ್ಲಿ ಮುಖ್ಯಮಂತ್ರಿಗೆ ಮುರಳೀಕೃಷ್ಣ ಹಸಂತಡ್ಕ ಎಚ್ಚರಿಕೆ

ಪುತ್ತೂರು: ರಾಮನ ಕೆಲಸ ಮಾಡುವವರನ್ನು ಹತ್ತಿಕ್ಕುವ ಪ್ರಯತ್ನ ಸಿದ್ಧರಾಮಯ್ಯ ಸರಕಾರ ಮಾಡಿದರೆ ಲಂಕೆಯ ಉದಾಹರಣೆಯ ಮೂಲಕ ಸರಕಾರಕ್ಕೆ ಪ್ರತಿ ಉತ್ತರ ನೀಡಬೇಕಾಗಬಹುದು ಎಂದು ಬಜರಂಗದಳ ಪ್ರಾಂತ ಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಎಚ್ಚರಿಕೆ ನೀಡಿದರು. ಹುಬ್ಬಳ್ಳಿಯಲ್ಲಿ ರಾಮಭಕ್ತರನ್ನು ಬಂಧಿಸಿರುವ ಪೊಲೀಸ್ ಇಲಾಖೆಯ ವಿರುದ್ಧ ಹಾಗೂ ಕಾಂಗ್ರೆಸ್ ಸರಕಾರ ಹಿಂದೂ ವಿರೋಧಿ ಧೋರಣೆಯನ್ನು ಖಂಡಿಸಿ ಬುಧವಾರ ಇಲ್ಲಿನ ದರ್ಬೆ ವೃತ್ತದಲ್ಲಿ ಹಿಂದೂ ಜಾಗರಣಾ ವೇದಿಕೆ ಪುತ್ತೂರು ಜಿಲ್ಲೆ ವತಿಯಿಂದ ನಡೆಸಿದ ಬೃಹತ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ಕಾಂಗ್ರೆಸ್ ಏಜೆಂಟರ ಮೂಲಕ ಅಧಿಕಾರಿಗಳನ್ನು

ರಾಮನ ಕೆಲಸಕ್ಕೆ ಅಡ್ಡಿ ಮಾಡಿದರೆ, ಲಂಕೆಯ ಉತ್ತರ |  ಬೃಹತ್ ಪ್ರತಿಭಟನಾ ಸಭೆಯಲ್ಲಿ ಮುಖ್ಯಮಂತ್ರಿಗೆ ಮುರಳೀಕೃಷ್ಣ ಹಸಂತಡ್ಕ ಎಚ್ಚರಿಕೆ Read More »

5 ಲಕ್ಷ ವಲಸಿಗರನ್ನು ದೇಶದಿಂದ ಹೊರ ಹಾಕಿದ ಪಾಕ್: ವರದಿ

ಲಾಹೋರ್: ಪಾಕಿಸ್ತಾನ ಸರ್ಕಾರದ ಗಡಿಪಾರು ಕಾರ್ಯಾಚರಣೆಯ ಭಾಗವಾಗಿ ಈಗಾಗಲೇ ಸುಮಾರು 5,00,000ಕ್ಕೂ ಅಧಿಕ ಅಕ್ರಮ ವಲಸಿಗರನ್ನು ದೇಶದಿಂದ ಹೊರಹಾಕಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಪಾಕಿಸ್ತಾನ ಸರ್ಕಾರ ಸಂಸತ್ ನಲ್ಲಿ ಮಾಹಿತಿ ನೀಡಿದೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ. ಪಾಕಿಸ್ತಾನದ ಆಂತರಿಕ ಸಚಿವಾಲಯ ಸೆನೆಟ್ ಅಥವಾ ಸಂಸತ್ತಿನ ಮೇಲ್ಮನೆಗೆ ಗಡಿಪಾರು ಕಾರ್ಯಾಚರಣೆಯ ಮಾಹಿತಿ ನೀಡಿದ್ದು, ಅದರಂತೆ ಪಾಕಿಸ್ತಾನದಲ್ಲಿದ್ದ ಸುಮಾರು 5 ಲಕ್ಷಕ್ಕೂ ಅಧಿಕ ವಲಸಿಗರನ್ನು ದೇಶದಿಂದ ಹೊರಕ್ಕೆ ಕಳುಹಿಸಲಾಗಿದೆ ಎಂದು ಹೇಳಿದೆ. ವಾಪಸಾತಿ ಮತ್ತು ಗಡೀಪಾರು ಅಭಿಯಾನದ

5 ಲಕ್ಷ ವಲಸಿಗರನ್ನು ದೇಶದಿಂದ ಹೊರ ಹಾಕಿದ ಪಾಕ್: ವರದಿ Read More »

ಜ. 5ರಂದು ಸ್ವ- ನಿಧಿಯಿಂದ ಸಮೃದ್ಧಿ ಮೇಳ, ಮೈ ಬೀ ಡಿಜಿಟಲ್ ಶಿಬಿರ

ಪುತ್ತೂರು: ಸ್ವ- ನಿಧಿಯಿಂದ ಸಮೃದ್ಧಿ ಮೇಳ ಮತ್ತು ಮೈ ಬೀ ಡಿಜಿಟಲ್ ಶಿಬಿರ ಜ. 5ರಂದು ಬೆಳಿಗ್ಗೆ 11 ಗಂಟೆಯಿಂದ ನಗರಸಭಾ ಸಭಾಂಗಣದಲ್ಲಿ ನಡೆಯಲಿದೆ. ನಗರಸಭೆ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಸ್ವ-ನಿಧಿ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳ ಕಿರು ಸಾಲ ಸೌಲಭ್ಯ ಪಡೆದ ಎಲ್ಲಾ ಬೀದಿ ಬದಿ ವ್ಯಾಪಾರಿಗಳ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸಿ ಆಯ್ಕೆಯಾದ ಫಲಾನುಭವಿಗಳಿಗೆ ಮತ್ತು ಕುಟುಂಬದ ಸದಸ್ಯರಿಗೆ ಸಂಬಂಧಿಸಿದ ಇಲಾಖೆಗಳ ಸಹಯೋಗದಲ್ಲಿ ಶಿಬಿರ ಆಯೋಜಿಸಲಾಗಿದೆ. ಶಿಬಿರದಲ್ಲಿ ಪಿಎಂ ಸುರಕ್ಷಾ ವಿಮಾ ಯೋಜನೆ,

ಜ. 5ರಂದು ಸ್ವ- ನಿಧಿಯಿಂದ ಸಮೃದ್ಧಿ ಮೇಳ, ಮೈ ಬೀ ಡಿಜಿಟಲ್ ಶಿಬಿರ Read More »

ವಿಟ್ಲ ಸೀಮೆದೊಡೆಯನ ಜಾತ್ರೆಗೆ ಗೊನೆ ಮುಹೂರ್ತ

ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ ಬುಧವಾರ ನಡೆಯಿತು. ಬಸವನ ಗುಡಿ ರಾಮಣ್ಣ ಗೌಡರ ತೋಟದಲ್ಲಿ ದೇವಳದ ಅರ್ಚಕರು ಗೊನೆ ಮುಹೂರ್ತ ನೆರವೇರಿಸಿದರು. ಈ ಸಂದರ್ಭದಲ್ಲಿ ವಿಟ್ಲ ಅರಮನೆಯ ಸದಾಶಿವ ವಿ.ಆರ್., ಕೃಷ್ಣಯ್ಯ ಕೆ., ರಾಜಾರಾಮ ವರ್ಮ, ಜಯರಾಮ ಬಲ್ಲಾಳ, ಶ್ರೀಕಂಠ ವರ್ಮ ಮತ್ತು ಅರುಣ್ ಕುಮಾರ್ ವರ್ಮ, ದಿನೇಶ್ ರಾವ್, ಅನಂತ ಪ್ರಸಾದ್, ನಾಗರಾಜ್, ಕುಂಞಣ್ಣ ಗೌಡ ಬಸವನಗುಡಿ, ವಿ. ರಮಾನಾಥ ದೇವಾಡಿಗ, ಪದ್ಮನಾಭ ಮಂಜಲಾಡಿ, ಅಣ್ಣು ಗೌಡ, ರಾಮಣ್ಣ

ವಿಟ್ಲ ಸೀಮೆದೊಡೆಯನ ಜಾತ್ರೆಗೆ ಗೊನೆ ಮುಹೂರ್ತ Read More »

error: Content is protected !!
Scroll to Top