ಕುಕ್ಕೆ ಸುಬ್ರಹ್ಮಣ್ಯ: ಮಾವುತನನ್ನು ಗೌರವಿಸಿ ಬೀಳ್ಕೊಟ್ಟ ‘ಯಶಸ್ವಿ’
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆನೆ ‘ಯಶಸ್ವಿ’ಯ ಮಾವುತರಾಗಿದ್ದ ಶ್ರೀನಿವಾಸ ಗೌಡ ಧರ್ಮಸ್ಥಳ ಅವರು ಭಾನುವಾರ ನಿವೃತ್ತರಾದರು. ಈ ಸಂದರ್ಭ ಯಶಸ್ವಿಯು ಶ್ರೀನಿವಾಸ ಅವರಿಗೆ ಹಾರ ಹಾಕಿ ಸೊಂಡಿಲನ್ನು ಅವರ ತಲೆಯ ಮೇಲಿರಿಸಿ ಗೌರವ ಸಲ್ಲಿಸಿತು. ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆನೆ ಮಾವುತರಾಗಿ ಸುಮಾರು 15 ವರ್ಷ ಅವರು ಸೇವೆ ಸಲ್ಲಿಸಿದ್ದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ಅವರು ಶ್ರೀನಿವಾಸ ಅವರನ್ನು ಸನ್ಮಾನಿಸಿದರು. ದೇವಳದ ಕಾರ್ಯನಿರ್ವಹಣಾಧಿಕಾರಿ ನಿಂಗಯ್ಯ ಉಪಸ್ಥಿತರಿದ್ದರು.
ಕುಕ್ಕೆ ಸುಬ್ರಹ್ಮಣ್ಯ: ಮಾವುತನನ್ನು ಗೌರವಿಸಿ ಬೀಳ್ಕೊಟ್ಟ ‘ಯಶಸ್ವಿ’ Read More »










