ಎನನ್ ಬದ್ಕಾಯ ಮಗ… | ಶಾಸಕ ಮಠಂದೂರಿಗೆ ಕೃತಜ್ಞತೆ ಸಲ್ಲಿಸಿದ್ದ ಮಹಿಳೆ | ವೈರಲ್ ಆಗಿದ್ದ ಫೊಟೋದ ಅಸಲಿ ಕಥೆ ಇಲ್ಲಿದೆ ನೋಡಿ

ಪುತ್ತೂರು: “ಎನನ್ ಬದ್ಕಾಯ ಮಗ…” ತನ್ನ ಅನಾರೋಗ್ಯದ ಸಮಯದಲ್ಲಿ ನೆರವಾದ ಶಾಸಕ ಸಂಜೀವ ಮಠಂದೂರು ಅವರಿಗೆ ಮಹಿಳೆಯೊಬ್ಬರು ಕೃತಜ್ಞತೆ ಸಲ್ಲಿಸಿದ್ದ ಭಾವುಕ ಕ್ಷಣವಿದು. ಕೆಲ ದಿನಗಳ ಹಿಂದೆ ಪುರಭವನದಲ್ಲಿ ಕಾರ್ಯಕ್ರಮವೊಂದನ್ನು ಮುಗಿಸಿ ಮಠಂದೂರು ಅವರು ಹೊರಬರುತ್ತಿದ್ದಂತೆ, ಮಹಿಳೆಯೊಬ್ಬರು ಶಾಸಕರ ಕೈಹಿಡಿದು ತನ್ನ ಒಡಲಿನ ಮಾತುಗಳನ್ನು ಹೊರಗೆಡವಿದ ಬಗೆ ಇದು. ಕಳೆದ ಕೆಲ ದಿನಗಳಿಂದ ಬೇರೆ ಬೇರೆ ಸಾಲುಗಳನ್ನು ಹೊದ್ದುಕೊಂಡು, ಶಾಸಕರ ಫೊಟೋವೊಂದು ವೈರಲ್ ಆಗಿತ್ತು. ಹೆಚ್ಚಿನ ಮಂದಿ ತಮ್ಮ ಸಂದೇಹವನ್ನು ತೋಡಿಕೊಂಡಿದ್ದರೂ ಕೂಡ. ಮಹಿಳೆಯ ಕಣ್ಣಲ್ಲಿ ಕೃತಜ್ಞತಾ […]

ಎನನ್ ಬದ್ಕಾಯ ಮಗ… | ಶಾಸಕ ಮಠಂದೂರಿಗೆ ಕೃತಜ್ಞತೆ ಸಲ್ಲಿಸಿದ್ದ ಮಹಿಳೆ | ವೈರಲ್ ಆಗಿದ್ದ ಫೊಟೋದ ಅಸಲಿ ಕಥೆ ಇಲ್ಲಿದೆ ನೋಡಿ Read More »

ನಾಳೆಯಿಂದ ವೀರಮಂಗಲ ಶಾಲೆಯಲ್ಲಿ ವಾರ್ಷಿಕೋತ್ಸವ ಸಂಭ್ರಮ

ಪುತ್ತೂರು: ವೀರಮಂಗಲ ಶಾಲಾ ವಾರ್ಷಿಕೋತ್ಸವ ಡಿ. 31 ರಂದು ಶಾಲಾ ಆವರಣದಲ್ಲಿ  ನಡೆಯಲಿದೆ.  60 ವರ್ಷಗಳನ್ನು  ಪೂರೈಸಿದ  ಗ್ರಾಮೀಣ ಪ್ರದೇಶದ  ಕುಮಾರನದಿಯ ತಟದಲ್ಲಿರುವ ಈ  ಶಾಲೆಯಲ್ಲಿ 155 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಮಾದರಿ ಶಾಲೆಯಾಗಿ ಮೂಡಿಬಂದಿದೆ. ಶಾಸಕ ಸಂಜೀವ ಮಠಂದೂರು ಅವರು ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ. ಶಾಂತಿಗೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಅಧ್ಯಕ್ಷತೆ ವಹಿಸುವರು.ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್, ರೋಟರಿ ಕ್ಲಬ್ ಅಧ್ಯಕ್ಷ ಉಮಾನಾಥ್, ವೀರಮಂಗಲ ದೇವಸ್ಥಾನದ ಆಡಳಿತ ಮೊಕ್ತೇಸರ ಶಿವರಾಮ ಭಟ್ ಬಾವ, ವೀರಮಂಗಲ ಜುಮ್ಮಾ ಮಸೀದಿ ಅಧ್ಯಕ್ಷ ರಝಾಕ್ ವಿ.ಎಸ್. ಅತಿಥಿಗಳಾಗಿರುವರು. ಎಸ್ ಎಸ್ ಎಲ್ ಸಿ ಪರೀಕ್ಷೆಯ ಸಾಧಕ ವಿದ್ಯಾರ್ಥಿಗಳಾದ ಯಜ್ಣ ಇವರಿಗೆ ಗೌರವಾರ್ಪಣೆ ಹಮ್ಮಿಕೊಳ್ಳಲಾಗಿದೆ. ಮಕ್ಕಳಿಂದ ವೈವಿಧ್ಯಮಯ ನೃತ್ಯ, ಭಾರತೀಯ ಸಂಸ್ಕೃತಿ ಬಿಂಭಿಸುವ ಏಕ್ ಭಾರತ್ ಶ್ರೇಷ್ಠ ಭಾರತ್ ಸಂಸ್ಕೃತಿಗಳ ಅನಾವರಣಗೊಳ್ಳಲಿದೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ. ಬೆಳಗ್ಗೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ. ಶಾಂತಿಗೋಡು ಗ್ರಾಮ ಪಂಚಾಯತ್  ಉಪಾಧ್ಯಕ್ಷ ಸುಧಾಕರ ಕುಲಾಲ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಎಸ್ ಡಿ ಎಂ ಸಿ ಅಧ್ಯಕ್ಷೆ  ಅನುಪಮ  ಅಧ್ಯಕ್ಷತೆ ವಹಿಸಲಿದ್ದಾರೆ. ಗ್ರಾ.ಪಂ ಸದಸ್ಯ ಬಾಬು ಶೆಟ್ಟಿ ಬಹುಮಾನ  ವಿತರಣೆ  ಮಾಡಲಿದ್ದಾರೆ. ಗ್ರಾಮ  ಪಂಚಾಯಿತಿ  ಸದಸ್ಯರಾದ ಪದ್ಮಾವತಿ,  ವಸಂತಿ,  ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿಷ್ಣುಪ್ರಸಾದ್, ಸಮನ್ವಯಾಧಿಕಾರಿ ನವೀನ್ ವೇಗಸ್,  ಸಿ.ಆರ್.ಪಿ ಪರಮೇಶ್ವರಿ, ಶಾಲಾ ಮುಖ್ಯಗುರು  ತಾರಾನಾಥ ಸವಣೂರು, ಎಸ್ ಡಿ ಎಂ ಸಿ ಅಧ್ಯಕ್ಷೆಅನುಪಮ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಹಾಬಲ ರೈ, ವಾರ್ಷಿಕೋತ್ಸವ ಸಮಿತಿ ಅಧ್ಯಕ್ಷ ಆನಂದ ಗೌಡ ಗುತ್ತು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ. ಶಾಸಕರಾದಿಯಾಗಿ ಕೊಡುಗೆಗಳ

ನಾಳೆಯಿಂದ ವೀರಮಂಗಲ ಶಾಲೆಯಲ್ಲಿ ವಾರ್ಷಿಕೋತ್ಸವ ಸಂಭ್ರಮ Read More »

ವಿಕಲಚೇತನರ ಬಸ್ ಪಾಸ್ ಮಾನ್ಯತೆ ಮುಂದುವರಿಕೆ

ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ವಿಭಾಗದಿಂದ 2022ನೇ ಸಾಲಿನಲ್ಲಿ ವಿತರಿಸಿರುವ ವಿಕಲಚೇತನರ ಬಸ್ ಪಾಸುಗಳನ್ನು 2023ರ ಫೆ. 28ರವರೆಗೆ ಮಾನ್ಯ ಮಾಡಲಾಗಿದೆ. ಪ್ರಸ್ತುತ ಸಾಲಿನಲ್ಲಿ ವಿಕಲಚೇತನರ ಪಾಸುದಾರರ ನವೀಕರಣ ಅಥವಾ ಹೊಸ ಪಾಸು ಪಡೆಯುವ ಫಲಾನುಭವಿಗಳು ಅರ್ಜಿಯನ್ನು ಸೇವಾಸಿಂಧು ಪೋರ್ಟಲ್ ಮೂಲಕವೇ ಸಲ್ಲಿಸುವುದು ಕಡ್ಡಾಯ. ಅರ್ಜಿ ಸಲ್ಲಿಸುವಾಗ ವಿಕಲಚೇತನರು ವಾಸ್ತವ್ಯದ ದೃಢೀಕರಣ, ಆಧಾರ್ ಕಾರ್ಡ್ ಪ್ರತಿ, ಪಾಸ್‍ ಪೋರ್ಟ್ ಸೈಜಿನ ಫೊಟೋ, ಯಡಿಐಪಿ ಗುರುತಿನ ಚೀಟಿಯನ್ನು ಆನ್ ಲೈನಿನಲ್ಲಿ ಅಪ್ಲೋಡ್ ಮಾಡಬೇಕು. ಹೊಸದಾಗಿ

ವಿಕಲಚೇತನರ ಬಸ್ ಪಾಸ್ ಮಾನ್ಯತೆ ಮುಂದುವರಿಕೆ Read More »

ಜ. 1ರಿಂದ 10ರವರೆಗೆ ಎಸ್ಸೆಸ್ಸೆಫ್ ಸದಸ್ಯತ್ವ ಅಭಿಯಾನ

ಪುತ್ತೂರು: ಸಾಮಾಜಿಕ, ಶೈಕ್ಷಣಿಕ ಪ್ರಗತಿಗಾಗಿ ಕೆಲಸ ನಿರ್ವಹಿಸುತ್ತಿರುವ ಸುನ್ನಿ ವಿದ್ಯಾರ್ಥಿ ಒಕ್ಕೂಟ, ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ (ಎಸ್ಸೆಸ್ಸೆಫ್) ಇದರ ಸದಸ್ಯತ್ವ ಅಭಿಯಾನ 2023ರ ಜನವರಿ 1ರಿಂದ 10ರವರೆಗೆ ರಾಜ್ಯಾದ್ಯಂತ ನಡೆಯಲಿದೆ ಎಂದು ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಅಲಿ ತುರ್ಕಳಿಕೆ ಹೇಳಿದರು. ಕಳೆದ ನಾಲ್ಕು ವರ್ಷಗಳಿಂದ ರಾಜ್ಯದಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ಎಸ್ಸೆಸ್ಸೆಫ್, ಲಕ್ಷಾಂತರ ವಿದ್ಯಾರ್ಥಿಗಳನ್ನು ನಾಡಿಗೆ ಪರಿಚಯಿಸಿದೆ. ಹಾದಿ ತಪ್ಪುತ್ತಿರುವ ವಿದ್ಯಾರ್ಥಿ ಸಮೂಹಕ್ಕೆ ಧಾರ್ಮಿಕತೆ, ನೈತಿಕತೆ ಹಾಗೂ ಆಧ್ಯಾತ್ಮಿಕತೆಯನ್ನು ತುಂಬಿ, ಸಮಾಜದ ಸತ್ರ್ಪಜೆಗಳನ್ನಾಗಿ ಮಾಡಲು

ಜ. 1ರಿಂದ 10ರವರೆಗೆ ಎಸ್ಸೆಸ್ಸೆಫ್ ಸದಸ್ಯತ್ವ ಅಭಿಯಾನ Read More »

ರಕ್ತದಾನ, ನೇತ್ರದಾನ, ಉಚಿತ ಮಧುಮೇಹ, ಅಧಿಕ ರಕ್ತದೊತ್ತಡ ತಪಾಸಣಾ ಶಿಬಿರ | ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವವರಿಗೆ ಆಹಾರ ಸಾಮಗ್ರಿ ವಿತರಣೆ

ಪುತ್ತೂರು: ವಿಷನ್ ಸಹಾಯ ನಿಧಿ ಸೇವಾ ಟ್ರಸ್ಟ್ ದಾನಿಗಳಿಂದ ಸಂಗ್ರಹಿಸಿದ ಹಣದಿಂದ, ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಆಯ್ದ ಕುಟುಂಬಗಳಿಗೆ ಆಹಾರ ಸಾಮಗ್ರಿ ವಿತರಣೆ, ಸ್ವಯಂ ಪ್ರೇರಿತ ರಕ್ತದಾನ ಶಿಬಿರ, ನೇತ್ರದಾನ ಶಿಬಿರ, ಉಚಿತ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ತಪಾಸಣಾ ಶಿಬಿರ ಡಿ. 30ರಂದು ಅನುರಾಗ ವಠಾರದಲ್ಲಿ ನಡೆಯಿತು. ಆಹಾರ ಸಾಮಾಗ್ರಿ ವಿತರಿಸಿ ಮಾತನಾಡಿದ ಬೆಟ್ಟಂಪಾಡಿ ನವೋದಯ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಶರತ್ ಕುಮಾರ್ ಮಾತನಾಡಿ, ಸೇವೆ ಎಂಬ ಯಜ್ಞದಲ್ಲಿ ಸಮಿಧೆಯಂತೆ ಉರಿಯಬೇಕು ಎಂದು ಹಿರಿಯರು ತಿಳಿಸಿಕೊಟ್ಟಿದ್ದಾರೆ. ಜನರ

ರಕ್ತದಾನ, ನೇತ್ರದಾನ, ಉಚಿತ ಮಧುಮೇಹ, ಅಧಿಕ ರಕ್ತದೊತ್ತಡ ತಪಾಸಣಾ ಶಿಬಿರ | ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವವರಿಗೆ ಆಹಾರ ಸಾಮಗ್ರಿ ವಿತರಣೆ Read More »

ಜ. 7ರಂದು ತುಳುವೆರೆ ಮೇಳೊ 2023, ತುಳುಕೂಟೊದ ಸ್ವರ್ಣ ಮಹೋತ್ಸವ

ಪುತ್ತೂರು: ತುಳುಕೂಟೊ ಪುತ್ತೂರು ಇದರ ಸ್ವರ್ಣ ಮಹೋತ್ಸವದ ಉದ್ಘಾಟನೆ ಹಾಗೂ ಪುತ್ತೂರು ತಾಲೂಕು ತುಳುವೆರೆ ಮೇಳೊ 2023 ಜ. 7ರಂದು ಕೊಂಬೆಟ್ಟು ಬಂಟರ ಭವನದಲ್ಲಿ ನಡೆಯಲಿದೆ ಎಂದು ತುಳುವೆರೆ ಮೇಳೊ ಸಮಿತಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಹೇಳಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 9 ಗಂಟೆಗೆ ನಡೆಯುವ ಉದ್ಘಾಟನಾ ಸಮಾರಂಭವನ್ನು ಶಾಸಕ ಸಂಜೀವ ಮಠಂದೂರು ಉದ್ಘಾಟಿಸುವರು. ಪುತ್ತೂರು ತಾಲೂಕು ತುಳುವೆರೆ ಮೇಳೊ ಸಮಿತಿ ಗೌರವಾಧ್ಯಕ್ಷ ಸವಣೂರು ಕೆ. ಸೀತಾರಾಮ ರೈ ಅಧ್ಯಕ್ಷತೆ ವಹಿಸುವರು. ಸಹಾಯಕ

ಜ. 7ರಂದು ತುಳುವೆರೆ ಮೇಳೊ 2023, ತುಳುಕೂಟೊದ ಸ್ವರ್ಣ ಮಹೋತ್ಸವ Read More »

ಊರಿಗೆ ಅರಸನಾದರೂ ತಾಯಿಗೆ ಮಗ | ತಾಯಿ ಅಂತ್ಯಕ್ರಿಯೆ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ತನ್ನ ತಾಯಿ ಯಶೋದಾಬೆನ್ ಅವರ ಅಂತ್ಯಕ್ರಿಯೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಳಗ್ಗೆ ನೆರವೇರಿಸಿದರು. ಡಿಸೆಂಬರ್ ೩೦ರ ಬೆಳಗ್ಗಿನ ಜಾವ ೩.೩೯ಕ್ಕೆ ಯಶೋದಾಬೆನ್ (೧೦೦ ವ.) ಅಹಮದಾಬಾದ್ ಯು.ಎನ್. ಮೆಹ್ಯಾ ಇನ್ ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಆ್ಯಂಡ್ ರೀಸರ್ಚ್ ಸೆಂಟರಿನಲ್ಲಿ ಕೊನೆಯುಸಿರೆಳೆದರು. ಅಹಮದಾಬಾದಿನ ಗಾಂಧಿನಗರದಲ್ಲಿ ಚಿತಾಗಾರದಲ್ಲಿ ಬೆಳಿಗ್ಗೆ ಯಶೋದಾಬೆನ್ ಅವರ ಅಂತ್ಯಕ್ರಿಯೆ ನಡೆಯಿತು. ಅಂತ್ಯಕ್ರಿಯೆಗೆ ಮುನ್ನ ಯಶೋದಾಬೆನ್ ಅವರ ಶರೀರದ ಅಂತಿಮಯಾತ್ರೆಗೆ ಪ್ರಧಾನಿ ಮೋದಿ ಅವರು ಹೆಗಲುಕೊಟ್ಟು, “ಊರಿಗೆ ಅರಸನಾದರೂ ತಾಯಿಗೆ ಮಗ” ಎನ್ನುವ

ಊರಿಗೆ ಅರಸನಾದರೂ ತಾಯಿಗೆ ಮಗ | ತಾಯಿ ಅಂತ್ಯಕ್ರಿಯೆ ನೆರವೇರಿಸಿದ ಪ್ರಧಾನಿ ಮೋದಿ Read More »

ಭೀಕರ ಅಪಘಾತದಲ್ಲಿ ಕ್ರಿಕೆಟಿಗ ರಿಷಬ್‌ ಪಂತ್‌ಗೆ ಗಾಯ;ಏಮ್ಸ್‌ಗೆ ದಾಖಲು

ಸುಟ್ಟು ಕರಕಲಾದ ಬಿಎಂಡಬ್ಲ್ಯೂ ಕಾರು ಹೊಸದಿಲ್ಲಿ : ಭಾರತ ಕ್ರಿಕೆಟ್ ತಂಡದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್ ಭೀಕರ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ದಿಲ್ಲಿಯಲ್ಲಿ ಮನೆಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಪಂತ್ ಪ್ರಯಾಣಿಸುತ್ತಿದ್ದ ಕಾರು ಡಿವೈಡರ್​ಗೆ ಡಿಕ್ಕಿಯಾದ ರಭಸಕ್ಕೆ ಹೊತ್ತಿ ಉರಿದು ಸಂಪೂರ್ಣ ಭಸ್ಮವಾಗಿದೆ. ದಿಲ್ಲಿಯ ಏಮ್ಸ್ ಆಸ್ಪತ್ರೆಯಲ್ಲಿ ರಿಷಬ್ ಪಂತ್​ಗೆ ಚಿಕಿತ್ಸೆ ನೀಡಲಾಗುತ್ತಿದ್ದು ಸ್ಥಿತಿ ಗಂಭೀರವಾಗಿದೆ. ತಲೆ, ಬೆನ್ನು ಮತ್ತು ಕಾಲಿಗೆ ಗಂಭೀರ ಗಾಯವಾಗಿದ್ದು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ದೆಹಲಿ-ಡೆಹ್ರಾಡೂನ್

ಭೀಕರ ಅಪಘಾತದಲ್ಲಿ ಕ್ರಿಕೆಟಿಗ ರಿಷಬ್‌ ಪಂತ್‌ಗೆ ಗಾಯ;ಏಮ್ಸ್‌ಗೆ ದಾಖಲು Read More »

ಫುಟ್ಬಾಲ್‌ ದಂತಕಥೆ ಪೀಲೆ ನಿಧನ

ಜಗತ್ತಿನ ಸಾರ್ವಕಾಲಿಕ ಶ್ರೇಷ್ಠ ಆಟಗಾರ ಬ್ರೆಸಿಲಿಯಾ : ವಿಶ್ವ ಫುಟ್‌ಬಾಲ್‌ನ ಸಾರ್ವಕಾಲಿಕ ಶ್ರೇಷ್ಠ ಆಟಗಾರ, ಬ್ರೆಜಿಲ್‌ಗೆ 3 ವಿಶ್ವಕಪ್‌ಗಳನ್ನು ತಂದುಕೊಟ್ಟಿದ್ದ ಖ್ಯಾತ ಆಟಗಾರ ಪೀಲೆ (82) ಅನಾರೋಗ್ಯ ಕಾರಣದಿಂದ ನಿಧನರಾದರು. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಪೀಲೆ ಅವರು 2021ರಿಂದ ಚಿಕಿತ್ಸೆ ಪಡೆಯುತ್ತಿದ್ದರು. ಹಲವು ಕಾಯಿಲೆಗಳ ಕಾರಣದಿಂದಾಗಿ ಅವರನ್ನು ನ.29ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಫುಟ್‌ಬಾಲ್‌ ಇತಿಹಾಸದಲ್ಲಿ ದಂಥಕತೆಯಾಗಿದ್ದ ಪೀಲೆ ಬ್ರೆಜಿಲಿಯಾ ಫುಟ್‌ಬಾಲ್‌ ಕ್ಲಬ್‌ ಸ್ಯಾಂಟೋಸ್‌ ಮತ್ತು ಬ್ರೆಜಿಲ್‌ ರಾಷ್ಟ್ರೀಯ ತಂಡದೊಂದಿಗೆ ಸುಮಾರು 2 ದಶಕಗಳ ಕಾಲ ಆಡಿದ್ದರು. ಮೈದಾನದಲ್ಲಿ ತಮ್ಮ ವೇಗದ

ಫುಟ್ಬಾಲ್‌ ದಂತಕಥೆ ಪೀಲೆ ನಿಧನ Read More »

ಪಂಚಮಸಾಲಿ-ವೀರಶೈವ ಸಮುದಾಯದ ಮೀಸಲಾತಿ ಬೇಡಿಕೆ ಈಡೇರಿಕೆ

ಲಿಂಗಾಯತ, ಒಕ್ಕಲಿಗರಿಗೆ ಹೊಸ ಕೆಟಗರಿ ಸೃಷ್ಟಿ ಬೆಳಗಾವಿ: ಪಂಚಮಸಾಲಿ ಸೇರಿದಂತೆ ವೀರಶೈವ ಲಿಂಗಾಯತ ಸಮುದಾಯಕ್ಕೆ ಮತ್ತು ಒಕ್ಕಲಿಗ ಸಮುದಾಯಕ್ಕೆ ಪ್ರತ್ಯೇಕ ಪ್ರವರ್ಗ ಸೃಷ್ಟಿಸಿ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡುವ ಮಹತ್ವದ ತೀರ್ಮಾನವನ್ನು ಸರಕಾರ ತೆಗೆದುಕೊಂಡಿದೆ.ಲಿಂಗಾಯತ ಮತ್ತು ಒಕ್ಕಲಿಗರಿಗೆ ಹೊಸ ಕೆಟಗರಿ ಸೃಷ್ಟಿ ಮಾಡಿದ್ದು, 3ಎ ಯಲ್ಲಿದ್ದ ಒಕ್ಕಲಿಗರನ್ನು 2ಸಿಗೆ ಮತ್ತು 3 ಬಿ ಯಲ್ಲಿದ್ದ ಲಿಂಗಾಯತರಿಗೆ 2ಡಿ ಕೆಟಗರಿಯಲ್ಲಿ ಮೀಸಲಾತಿ ನೀಡಲಾಗಿದೆ. ಆದರೆ ಮೀಸಲಾತಿ ಪ್ರಮಾಣವನ್ನು ನಂತರ ನಿರ್ಧರಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ

ಪಂಚಮಸಾಲಿ-ವೀರಶೈವ ಸಮುದಾಯದ ಮೀಸಲಾತಿ ಬೇಡಿಕೆ ಈಡೇರಿಕೆ Read More »

error: Content is protected !!
Scroll to Top