ಫುಟ್ಬಾಲ್ ದಂತಕಥೆ ಪೀಲೆ ನಿಧನ

ಸಾವೊಪಾಲೊ: ಕ್ಯಾನ್ಸರ್ ಜೊತೆಗೆ ಮೂತ್ರಪಿಂಡ ಹಾಗೂ ಹೃದಯದ ಸಮಸ್ಯೆಗಳೊಂದಿಗೆ ಹೋರಾಡುತ್ತಿದ್ದ ಸಾರ್ವಕಾಲಿಕ ಶ್ರೇಷ್ಠ ಫುಟ್ಬಾಲ್ ಆಟಗಾರ, ಬ್ರೆಝಿಲ್ ನ ಫುಟ್ಬಾಲ್ ದಂತಕತೆ ಪೀಲೆ (Pele) ನಿಧನರಾಗಿದ್ದಾರೆ. ಪೀಲೆ ಅವರಿಗೆ 82 ವರ್ಷ ವಯಸ್ಸಾಗಿತ್ತು.  ಮೂರು ಬಾರಿ ವಿಶ್ವಕಪ್ ವಿಜೇತ ಪೀಲೆ ಅವರು ನ.29ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಪೀಲೆಗೆ ಇತ್ತೀಚೆಗೆ ಕೋವಿಡ್-19 ಸೋಂಕು ತಗಲಿತ್ತು.  ತನ್ನ 16ನೇ ವಯಸ್ಸಿನಲ್ಲಿ ಬ್ರೆಝಿಲ್ ರಾಷ್ಟ್ರೀಯ ತಂಡದ ಪರ ಆಡಲು ಆರಂಭಿಸಿದ ಪೀಲೆ 1958, 1962 ಹಾಗೂ 1970ರಲ್ಲಿ ಬ್ರೆಝಿಲ್ ಫಿಫಾ ವಿಶ್ವಕಪ್ […]

ಫುಟ್ಬಾಲ್ ದಂತಕಥೆ ಪೀಲೆ ನಿಧನ Read More »

ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್‌ ನಿಧನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್‌ (100) ಅವರು ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ. ಮೋದಿ ಅವರೇ ಟ್ವಿಟರ್‌ನಲ್ಲಿ ಈ ಮಾಹಿತಿಯನ್ನು ತಿಳಿಸಿದ್ದಾರೆ. ‘ಅಮ್ಮನಲ್ಲಿ ನಾನು ತ್ರಿಮೂರ್ತಿಗಳನ್ನು ಕಂಡಿದ್ದೇನೆ. ಅವರ ಜೀವನವು ತಪಸ್ವಿಯ ಪ್ರಯಾಣವಾಗಿತ್ತು. ನಿಷ್ಕಾಮ ಕರ್ಮಯೋಗಿಯ ಜೀವನ ಮತ್ತು ಮೌಲ್ಯಗಳಿಗೆ ಬದ್ಧವಾದ ಬದುಕಿನ ಸಂಕೇತವಾಗಿದ್ದರು’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಹೀರಾಬೆನ್‌ ಅವರನ್ನು ಅಹಮದಾಬಾದ್‌ನ ಯು.ಎನ್.ಮೆಹ್ತಾ ಇನ್‌ಸ್ಟಿಟ್ಯೂಟ್‌ ಆಫ್‌ ಕಾರ್ಡಿಯಾಲಜಿ ಆ್ಯಂಡ್‌ ರೀಸರ್ಚ್‌ ಸೆಂಟರ್‌ ಆಸ್ಪತ್ರೆಗೆ ಬುಧವಾರ ದಾಖಲಿಸಲಾಗಿತ್ತು. ‘ಶ್ರೀಮತಿ ಹೀರಾಬೆನ್‌ ಮೋದಿ

ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್‌ ನಿಧನ Read More »

Играйте В Казино Игры Для Android На Пк а Mac Бесплатн

Играйте В Казино Игры Для Android На Пк а Mac Бесплатно Скачать Вулкан Казино Бесплатно с Официального Сайта Приложение Vulkan На Андроид Content Скачать Приложение Казино Вулкан на Телефон И Пк Без Вирусов а Рекламы Скачивание Приложения Vulcan на Смартфон С Ос Андроид Mgm Slots Live – Vegas 3d Casino Slots Games Бесплатные Казино Игры

Играйте В Казино Игры Для Android На Пк а Mac Бесплатн Read More »

ಜ. 1: ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದ ವಠಾರದಲ್ಲಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯ

ಪುತ್ತೂರು: ಕೆಲಿಂಜ ಕೇಸರಿ ಫ್ರೆಂಡ್ಸ್, ಬಂಟ್ವಾಳ ತಾಲೂಕು ಅಮೆಚೂರು ಅಸೊಸಿಯೇಶನ್ ಆಶ್ರಯದಲ್ಲಿ 65 ಕೆ.ಜಿ. ವಿಭಾಗದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ ಜ. 1ರಂದು ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದ ವಠಾರದಲ್ಲಿ ನಡೆಯಲಿದೆ. ಬಿಪಿನ್ ರಾವತ್ ವೇದಿಕೆಯಲ್ಲಿ ಬೆಳಿಗ್ಗೆ 9.30ಕ್ಕೆ ಆರಂಭವಾಗುವ ಕಾರ್ಯಕ್ರಮವನ್ನು ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರ ಶಂಕರನಾರಾಯಣ ಭಟ್ ಪುಂಡಿಕೈ ಉದ್ಘಾಟಿಸಲಿದ್ದಾರೆ. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ವೀರಕಂಭ ಗ್ರಾ.ಪಂ. ಅಧ್ಯಕ್ಷ ದಿನೇಶ್ ಪೂಜಾರಿ ವೀರಕಂಭ, ನೇರಳಕಟ್ಟೆ ಸಹಕಾರಿ ವ್ಯವಸಾಯಿಕ ಬ್ಯಾಂಕ್

ಜ. 1: ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದ ವಠಾರದಲ್ಲಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯ Read More »

ಸಂಜೀವ ಪೂಜಾರಿ ಅಮಾನತಿಗೆ ಆಗ್ರಹಿಸಿ ಏಕಕಾಲದಲ್ಲಿ ಪ್ರತಿಭಟನೆ | ಪುತ್ತೂರು ನಗರ ಪೊಲೀಸ್ ಠಾಣೆ, ಉಪ್ಪಿನಂಗಡಿ, ಬೆಳ್ಳಾರೆ, ಕಡಬ, ಬೆಳ್ತಂಗಡಿ, ಸುಳ್ಯ ಪೊಲೀಸ್ ಠಾಣಾ ಮುಂಭಾಗ ಧರಣಿ

ಪುತ್ತೂರು: ಭಜನೆ ಹಾಗೂ ಭಜಕರ ಬಗ್ಗೆ, ಹಿಂದೂ ದೇವರ ಬಗ್ಗೆ ನಿಂದನೆಯ ಪೋಸ್ಟ್ ಗಳನ್ನು ಫೇಸ್ ಬುಕ್ ಹಾಗೂ ವಾಟ್ಸ್ ಆ್ಯಪ್ ಗಳಲ್ಲಿ ಹರಿಬಿಟ್ಟು ಹಿಂದೂಗಳ ಭಾವನೆಗೆ ಧಕ್ಕೆ ತಂದಿರುವ ಉಪವಲಯ ಅರಣ್ಯ ಅಧಿಕಾರ ಸಂಜೀವ ಪೂಜಾರಿ ಕಾಣಿಯೂರ್ ಅವರನ್ನು ತಕ್ಷಣವೇ ಅಮಾನತುಗೊಳಿಸುವಂತೆ ಆಗ್ರಹಿಸಿ ಪುತ್ತೂರು ನಗರ ಪೊಲೀಸ್ ಠಾಣೆ, ಉಪ್ಪಿನಂಗಡಿ, ಬೆಳ್ಳಾರೆ, ಕಡಬ, ಬೆಳ್ತಂಗಡಿ, ಸುಳ್ಯ ಪೊಲೀಸ್ ಠಾಣೆಗಳಲ್ಲಿ ಗುರುವಾರ ವಿಶ್ವ ಹಿಂದು ಪರಿಷದ್ ಹಾಗೂ ಭಜರಂಗದಳ ಏಕಕಾಲದಲ್ಲಿ ಪ್ರತಿಭಟನೆ ನಡೆಸಿತು. ಪುತ್ತೂರು ನಗರ ಪೊಲೀಸ್

ಸಂಜೀವ ಪೂಜಾರಿ ಅಮಾನತಿಗೆ ಆಗ್ರಹಿಸಿ ಏಕಕಾಲದಲ್ಲಿ ಪ್ರತಿಭಟನೆ | ಪುತ್ತೂರು ನಗರ ಪೊಲೀಸ್ ಠಾಣೆ, ಉಪ್ಪಿನಂಗಡಿ, ಬೆಳ್ಳಾರೆ, ಕಡಬ, ಬೆಳ್ತಂಗಡಿ, ಸುಳ್ಯ ಪೊಲೀಸ್ ಠಾಣಾ ಮುಂಭಾಗ ಧರಣಿ Read More »

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದರ್ಶನ ಬಲಿ

ಪುತ್ತೂರು: ಕಾರಣಿಕ ಕ್ಷೇತ್ರ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವದ ಅಂಗವಾಗಿ ಡಿ. 29ರಂದು ಮಧ್ಯಾಹ್ನ ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಿತು. ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಡಿ. 28 ಹಾಗೂ 29ರಂದು ಕಿರುಷಷ್ಠಿ ಉತ್ಸವ ನಡೆಯಿತು. ಡಿ. 29ರಂದು ಬೆಳಿಗ್ಗೆ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಗಂಧ – ಪ್ರಸಾದ, ನವಕ ಕಲಶ, ಮಹಾಪೂಜೆ, ಮಂತ್ರಾಕ್ಷತೆ ಜರಗಿತು. ಮಧ್ಯಾಹ್ನದ ನಂತರ ಶ್ರೀ ವ್ಯಾಘ್ರ

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದರ್ಶನ ಬಲಿ Read More »

ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ತಡೆ ಮಾಸಾಚರಣೆ

ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ‌ ಗುರುವಾರ ಅಪರಾಧ ತಡೆ ಮಾಸಾಚರಣೆ ನಡೆಯಿತು. ಭಜನೆ, ಪ್ರಾರ್ಥನೆಗೆ ಮಹತ್ವವಿದೆ:ಪೊಲೀಸ್ ನಿರೀಕ್ಷಕ ಸುನಿಲ್ ಕುಮಾರ್ ಮಾತನಾಡಿ, ಗಾಂಧೀಜಿ ಹೇಳಿರುವಂತೆ ಭಜನೆ ಹಾಗೂ ಪ್ರಾರ್ಥನೆಗೆ ಅದರದ್ದೆ ಆದ ಮಹತ್ವವಿದೆ. ನಮ್ಮ ಸಂಸ್ಕೃತಿ ಉಳಿವಿಗಾಗಿ ಭಜನಾ ಕಾರ್ಯ ಮಾಡುವುದು ಉತ್ತಮ ಕೆಲಸ. ಯಾವಾಗಲು ಅಪರಾಧ ಪ್ರಕರಣಗಳನ್ನು ದಾಖಲಿಸುವ ಠಾಣೆಯಲ್ಲಿ ಕಾರ್ಯಕರ್ತರು ಭಜನೆ ಮಾಡಿದ್ದು ತುಂಬಾ ಸಂತೋಷದ ವಿಷಯ ಎಂದರು.ಅಪರಾಧ ತಡೆಗಟುವಲ್ಲಿ ತಮ್ಮ ಸಹಕಾರ ಅತ್ಯಗತ್ಯ.ಮೊಬೈಲ್, ತಂತ್ರಜ್ಞಾನ ಅಭಿವೃದ್ಧಿ ಆಗುತ್ತಿದ್ದಂತೆ, ಅಪರಾಧಗಳು ಹೆಚ್ಚಾಗಿ ನಡೆಯುತ್ತವೆ.

ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ತಡೆ ಮಾಸಾಚರಣೆ Read More »

ಡೆಂಟಲ್‌ ವಿದ್ಯಾರ್ಥಿನಿಗೆ ಸಹಪಾಠಿಗಳಿಂದ ರ‍್ಯಾಗಿಂಗ್‌

ಆರು ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲು ಸುಳ್ಯ : ವಿದ್ಯಾರ್ಥಿನಿಗೆ ರ‍್ಯಾಗಿಂಗ್‌ ಮಾಡಿ ಮಾನಸಿಕ ಕಿರುಕುಳ ನೀಡಿದ ಆಘಾತಕಾರಿ ಘಟನೆ ಸುಳ್ಯದ ಪ್ರತಿಷ್ಠಿತ ಡೆಂಟಲ್‌ ಕಾಲೇಜಿನಲ್ಲಿ ಸಂಭವಿಸಿದೆ. ಈ ಸಂಬಂಧ ಆರು ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರಿನ ವೈಟ್ ಫೀಲ್ಡ್ ನಿವಾಸಿ ಡಾ.ಪಲ್ಲವಿ ರ‍್ಯಾಗಿಂಗ್‌ಗೆ ಒಳಗಾದ ಡೆಂಟಲ್ ವಿದ್ಯಾರ್ಥಿನಿ. ಮೂರನೇ ವರ್ಷದ ಡೆಂಡಲ್ ವಿದ್ಯಾರ್ಥಿನಿಯಾಗಿರುವ ಡಾ.ಪಲ್ಲವಿ ರ‍್ಯಾಂಕ್ ಹೋಲ್ಡರ್ ಆಗಿದ್ದಾರೆ.ಡಾ.ಪಲ್ಲವಿಗೆ ರ‍್ಯಾಂಗಿಗ್ ಮಾಡಿದ ಆರೋಪದ ಮೇಲೆ ಕೇರಳ ಮೂಲದ ಆರು ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಾಗಿದೆ.

ಡೆಂಟಲ್‌ ವಿದ್ಯಾರ್ಥಿನಿಗೆ ಸಹಪಾಠಿಗಳಿಂದ ರ‍್ಯಾಗಿಂಗ್‌ Read More »

ಕುವೆಂಪು ಜನ್ಮ ದಿನ ವಿಶ್ವ ಮಾನವ ದಿನಾಚರಣೆ

ಪುತ್ತೂರು: ರಾಷ್ಟ್ರಕವಿ ಕುವೆಂಪು ಅವರ ಹುಟ್ಟುಹಬ್ಬದ ದಿನವನ್ನು ವಿಶ್ವ ಮಾನವ ದಿನವನ್ನಾಗಿ ಆಚರಿಸುತ್ತಿದ್ದು, ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿ ಗುರುವಾರ ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಅಚರಣಾ ಸಮಿತಿಯಿಂದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಸಹಾಯಕ ಆಯುಕ್ತ ಗಿರೀಶ್ ನಂದನ್ ಮಾತನಾಡಿ, ನಮ್ಮ ದೇಶ ಸರ್ವ ಜನಾಂಗದ ಶಾಂತಿಯ ತೋಟ ಎನ್ನುವುದನ್ನು ತಿಳಿಸಿದವರು ಕುವೆಂಪು. ಈ ಮೂಲಕ ವಿಶ್ವ ಮಾನವ ಸಂದೇಶವನ್ನು ಜಗತ್ತಿಗೆ ಸಾರಿದ್ದಾರೆ ಎಂದರು. ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್

ಕುವೆಂಪು ಜನ್ಮ ದಿನ ವಿಶ್ವ ಮಾನವ ದಿನಾಚರಣೆ Read More »

ಸಂತ ಫಿಲೋಮಿನಾ ಕಾಲೇಜಿನಿಂದ ಕೆದಂಬಾಡಿ ಗ್ರಾಮ ದತ್ತು ಸ್ವೀಕಾರ

ಪುತ್ತೂರು: ಸಂತ ಫಿಲೋಮಿನಾ ಕಾಲೇಜು ಹಾಗೂ ಕೆದಂಬಾಡಿ ಗ್ರಾಮ ಪಂಚಾಯತ್‌ ಇವುಗಳ ನಡುವೆ ಕೆದಂಬಾಡಿ ಗ್ರಾಮ ದತ್ತು ಸ್ವೀಕಾರದ ಒಡಂಬಡಿಕೆ ನಡೆಸಲಾಯಿತು.ಕೆದಂಬಾಡಿ ಗ್ರಾಮ ಪಂಚಾಯತ್‌ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆದಂಬಾಡಿ ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಮತ್ತು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳು ಒಡಂಬಡಿಕೆಗೆ ಸಹಿ ಹಾಕಿದರು. ಸದರಿ ಒಡಂಬಡಿಕೆಯು 2027 ಡಿಸೆಂಬರ್‌ ತನಕ ಮಾನ್ಯವಾಗಿರುತ್ತದೆ. ಈ ಒಡಂಬಡಿಕೆಯನ್ನು ಕೆದಂಬಾಡಿ ಗ್ರಾಮದ ಸಾಮಾಜಿಕ ಉನ್ನತೀಕರಣ ಹಾಗೂ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಕಳಕಳಿ, ಪರಿಸರದ ಬಗ್ಗೆ ಕಾಳಜಿ ಹಾಗೂ ಸಾಮಾಜಿಕ

ಸಂತ ಫಿಲೋಮಿನಾ ಕಾಲೇಜಿನಿಂದ ಕೆದಂಬಾಡಿ ಗ್ರಾಮ ದತ್ತು ಸ್ವೀಕಾರ Read More »

error: Content is protected !!
Scroll to Top