ಕಾರ್ಪಾಡಿ ದೇವಸ್ಥಾನದಲ್ಲಿ ಕರಸೇವೆ

ಪುತ್ತೂರು: ಜಾತ್ರೋತ್ಸವ ಸಂಭ್ರಮದಲ್ಲಿರುವ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕರಸೇವೆ ಮಾಡಿದ ಬಲ್ನಾಡು ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ಕುಂಜೂರುಪಂಜ ಒಕ್ಕೂಟದ ಸದಸ್ಯರಿಗೆ ದೇವಸ್ಥಾನದಲ್ಲಿ ಪ್ರಸಾದ ನೀಡಲಾಯಿತು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುಧಾಕರ್ ರಾವ್ ಆರ್ಯಾಪು, ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಬಲ್ನಾಡು ವಲಯದ ಮೇಲ್ವಿಚಾರಕ ಹರೀಶ್ ಕೆ., ಸೇವಾ ಪ್ರತಿನಿಧಿ ಆಶಾಲತಾ, ಶೌರ್ಯ ತಂಡದ ಪ್ರತಿನಿಧಿಗಳಾದ ವಿನಯ್ ಕೋಟ್ಲಾರ್, ಸದಸ್ಯರಾದ ಜಗದೀಶ್, ನವೀನ, ವಿನೋದ್, ಅರುಣ, ಸಂಧ್ಯಾ, ದಿವ್ಯಾ, ಧನ್ಯಾ, ಸ್ವಾತಿ, […]

ಕಾರ್ಪಾಡಿ ದೇವಸ್ಥಾನದಲ್ಲಿ ಕರಸೇವೆ Read More »

ಡಿ. ೨೯: ಅರಣ್ಯ ಇಲಾಖೆ ಅಧಿಕಾರಿ ವಜಾಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

೫ ಪೊಲೀಸ್ ಠಾಣೆ ಮುಂಭಾಗ ಏಕಕಾಲದಲ್ಲಿ ಪ್ರತಿಭಟನೆ ಪುತ್ತೂರು: ಭಜನೆ ಹಾಗೂ ಭಜಕರ ಹಾಗೂ ಹಿಂದೂ ದೇವರ ಬಗ್ಗೆ ನಿಂದನೆಯ ಪೋಸ್ಟ್ ಹಾಕುತ್ತಿರುವ ಅರಣ್ಯ ಇಲಾಖೆಯ ಅಧಿಕಾರಿಯನ್ನು ಅಮಾನತುಗೊಳಿಸದಿದ್ದರೆ ಡಿ. ೨೯ರಂದು ಬೆಳಿಗ್ಗೆ ೧೦ಕ್ಕೆ ಪುತ್ತೂರು ಜಿಲ್ಲಾ ವ್ಯಾಪ್ತಿಯ ಪುತ್ತೂರು ನಗರ, ಉಪ್ಪಿನಂಗಡಿ, ಬೆಳ್ಳಾರೆ, ಸುಳ್ಯ, ಕಡಬ, ಬೆಳ್ತಂಗಡಿ ಠಾಣಾ ಮುಂಭಾಗ ಏಕಕಾಲದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ವಿಶ್ವ ಹಿಂದು ಪರಿಷದ್, ಭಜರಂಗದಳ ಪುತ್ತೂರು ಜಿಲ್ಲೆ ಪ್ರಕಟಣೆ ನೀಡಿದೆ. ಅರಣ್ಯ ಇಲಾಖೆಯ ಅಧಿಕಾರಿ ಸಂಜೀವ ಅವರನ್ನು ಡಿ.

ಡಿ. ೨೯: ಅರಣ್ಯ ಇಲಾಖೆ ಅಧಿಕಾರಿ ವಜಾಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ Read More »

ಸಾಂಸ್ಕೃತಿಕ ಚಟುವಟಿಕೆಗಳಿಂದ ಸಂಸ್ಕಾರ ಬೆಳೆಯುತ್ತದೆ: ಸತೀಶ್ ರಾವ್

ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಮೇಧಾನ್ವೇಷ- 2022′ ಉದ್ಘಾಟನೆ ಪುತ್ತೂರು: ,ಡಿ 28.ಸಾಂಸ್ಕೃತಿಕ ಚಟುವಟಿಕೆಗಳಿಂದ ಸಂಸ್ಕಾರ ಬೆಳೆಯುತ್ತದೆ. ಮೆದುಳಿಗೆ ಶಿಕ್ಷಣ, ಶರೀರಕ್ಕೆ ಪೋಷಣೆ, ಹೃದಯಕ್ಕೆ ಸಂಸ್ಕಾರ ಎನ್ನುವ ಮಾತಿಗೆ ಪೂರಕವಾಗಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳನ್ನು ಈ ಎಲ್ಲಾ ಆಯಾಮಗಳಲ್ಲೂ ಸಮರ್ಥರನ್ನಾಗಿಸಲು ಹಲವು ವೇದಿಕೆಗಳ ಮುಖೇನ ಪ್ರಯತ್ನಿಸುತ್ತದೆ. ಅದೇ ರೀತಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಕ್ಷೇತ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಸಕ್ತಿ ವಹಿಸುತ್ತಿ ರುವುದು ಶ್ಲಾಘನೀಯ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್ ಹೇಳಿದರು. ಅವರು ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ

ಸಾಂಸ್ಕೃತಿಕ ಚಟುವಟಿಕೆಗಳಿಂದ ಸಂಸ್ಕಾರ ಬೆಳೆಯುತ್ತದೆ: ಸತೀಶ್ ರಾವ್ Read More »

ಅಪರಾಧ ತಡೆ ಮಾಸಾಚಾರಣೆ, ಜಾಗೃತಿ ಜಾಥಾ | ರೋಟರಿ, ಇಂಟರ್ಯಾಕ್ಟ್, ಪೊಲೀಸ್, ಶ್ರೀ ರಾಮಕೃಷ್ಣ ಪ್ರೌಢಶಾಲೆಯಿಂದ ಜಾಥಾ

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಯುವ, ಇಂಟರ್ಯಾಕ್ಟ್ ಕ್ಲಬ್ ರಾಮಕೃಷ್ಣ ಯುವ, ದ.ಕ. ಜಿಲ್ಲಾ ಪೊಲೀಸ್, ಪುತ್ತೂರು ನಗರ ಪೊಲೀಸ್ ಠಾಣೆ, ಪುತ್ತೂರು ಸಂಚಾರ ಪೊಲೀಸ್ ಠಾಣೆ ಆಶ್ರಯದಲ್ಲಿ ಶ್ರೀ ರಾಮಕೃಷ್ಣ ಪ್ರೌಢಶಾಲೆಯ ವಿದ್ಯಾರ್ಥಿಗಳೊಂದಿಗೆ ಡಿ. 28ರಂದು ಅಪರಾಧ ತಡೆ ಮಾಸಾಚರಣೆ ಜಾಗೃತಿ ಜಾಥಾ ನಡೆಯಿತು. ಕೊಂಬೆಟ್ಟಿನಿಂದ ಆರಂಭಗೊಂಡ ಜಾಗೃತಿ ಜಾಥಾ, ಗಾಂಧಿಕಟ್ಟೆಯಲ್ಲಿ ಸಮಾರೋಪಗೊಂಡಿತು. ಪುತ್ತೂರು ನಗರ ಠಾಣೆಯ ಪೊಲೀಸ್ ನಿರೀಕ್ಷಕ ಸುನಿಲ್ ಕುಮಾರ್ ಮಾತನಾಡಿ, ಪೊಲೀಸರಿಂದಷ್ಟೇ ಅಪರಾಧ ತಡೆ ಸಾಧ್ಯ ಎಂದುಕೊಂಡರೆ ತಪ್ಪು. ಸಾರ್ವಜನಿಕರು ಪೊಲೀಸರೊಂದಿಗೆ

ಅಪರಾಧ ತಡೆ ಮಾಸಾಚಾರಣೆ, ಜಾಗೃತಿ ಜಾಥಾ | ರೋಟರಿ, ಇಂಟರ್ಯಾಕ್ಟ್, ಪೊಲೀಸ್, ಶ್ರೀ ರಾಮಕೃಷ್ಣ ಪ್ರೌಢಶಾಲೆಯಿಂದ ಜಾಥಾ Read More »

ಸನ್ಮಾನ: ಗೌಡ ಸಮಾಜದ ಸಾಧಕರ ಮಾಹಿತಿಗೆ ಮನವಿ

ಪುತ್ತೂರು: ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜದ ವತಿಯಿಂದ ಗೌಡ ಸಮಾಜದ ರಾಜ್ಯಮಟ್ಟದ, ರಾಷ್ಟ್ರಮಟ್ಟದ, ಅಂತಾರಾಷ್ಟ್ರೀಯ ಮಟ್ಟದ ಸಾಧಕರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಸಮಾಜದ ಸಾಧಕರ ಪರಿಚಯವನ್ನು ನೀಡುವಂತೆ ಪ್ರಕಟಣೆ ತಿಳಿಸಿದೆ. ಜ. 8ರಂದು ಬೆಂಗಳೂರಿನ ಲಗ್ಗೆರೆ ಕೆಡಿಕೆ ನಮ್ಮನೆಯಲ್ಲಿ ಗೌಡ ಸಮಾಜದ ಹತ್ತು ಕುಟುಂಬ ಹದಿನೆಂಟು ಗೋತ್ರದ 5 ಸಾಧಕರಿಗೆ ಸನ್ಮಾನಿಸು ಕಾರ್ಯಕ್ರಮ ನಡೆಯಲಿದೆ. ಗೌಡ ಸಮಾಜದ ರಾಜ್ಯಮಟ್ಟದ, ರಾಷ್ಟ್ರಮಟ್ಟದ, ಅಂತಾರಾಷ್ಟ್ರೀಯ ಮಟ್ಟದ ಸಾಧಕರ ಪರಿಚಯ ನೀಡಲು ಕೊನೆ ದಿನ ಡಿ.

ಸನ್ಮಾನ: ಗೌಡ ಸಮಾಜದ ಸಾಧಕರ ಮಾಹಿತಿಗೆ ಮನವಿ Read More »

ಇಂದು ಕುದ್ಮಾರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಕಿರುಷಷ್ಠಿ ಪೂಜೆ, ಶ್ರೀ ಸತ್ಯನಾರಾಯಣ ಪೂಜೆ

ಪುತ್ತೂರು: ಶಾಂತಿಮೊಗರು ಕುದ್ಮಾರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಡಿ. 28ರಂದು ಕಿರು ಷಷ್ಠಿ ಪೂಜೆ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು.. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.

ಇಂದು ಕುದ್ಮಾರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಕಿರುಷಷ್ಠಿ ಪೂಜೆ, ಶ್ರೀ ಸತ್ಯನಾರಾಯಣ ಪೂಜೆ Read More »

ಯುವಕನ ಹತ್ಯೆ : ಕರವೇ ಅಧ್ಯಕ್ಷನ ಸಹಿತ ಐದು ಮಂದಿ ಸೆರೆ

9 ತಿಂಗಳ ಬಳಿಕ ನಿಗೂಢ ಕೊಲೆ ಪ್ರಕರಣ ಭೇದಿಸಿದ ಪೊಲೀಸರು ಬೆಂಗಳೂರು: ಒಂಬತ್ತು ತಿಂಗಳ ಹಿಂದೆ ನಡೆದಿದ್ದ ಅಪಹರಣ ಹಾಗೂ ಹತ್ಯೆ ಪ್ರಕರಣವನ್ನು ಕೊನೆಗೂ ಭೇದಿಸಿರುವ ಪೊಲೀಸರು ಕರ್ನಾಟಕ ರಕ್ಷಣಾ ವೇದಿಕೆಯ ಚಿಕ್ಕಬಳ್ಳಾಪುರ ಘಟಕದ ಅಧ್ಯಕ್ಷ ಎಚ್‌.ಜಿ.ವೆಂಕಟಾಚಲಪತಿ, ಆತನ ಪುತ್ರ ಎ.ವಿ.ಶರತ್‌ ಕುಮಾರ್‌ ಸಹಿತ ಐವರನ್ನು ಬಂಧಿಸಿದ್ದಾರೆ. ಆರ್‌.ಶ್ರೀಧರ್‌, ಕೆ.ಧನುಷ್‌ ಮತ್ತು ಎಂ.ಪಿ.ಮಂಜುನಾಥ್‌ ಸೆರೆಯಾಗಿರುವ ಇತರ ಆರೋಪಿಗಳು. ಹಣಕಾಸಿನ ವಿಚಾರವಾಗಿ ಈ ಹತ್ಯೆ ನಡೆದಿದೆ ಎಂದು ತನಿಖೆಯಿಂದ ತಿಳಿದುಬಂದಿದೆ.ಶರತ್ ಯುವಕನನ್ನು ಬೆಂಗಳೂರಿನಿಂದ ಕಿಡ್ನಾಪ್‌ ಮಾಡಿ ಚಿತ್ರಹಿಂಸೆ ಕೊಟ್ಟು

ಯುವಕನ ಹತ್ಯೆ : ಕರವೇ ಅಧ್ಯಕ್ಷನ ಸಹಿತ ಐದು ಮಂದಿ ಸೆರೆ Read More »

ಕಾಶ್ಮೀರದಲ್ಲಿ ಮೂವರು ಉಗ್ರರ ಹತ್ಯೆ

ಶ್ರೀನಗರ : ಕಾಶ್ಮೀರದ ಸಿಧ್ರಾದಲ್ಲಿ ಭದ್ರತಾ ಪಡೆ ಜತೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಉಗ್ರರು ಹತರಾಗಿದ್ದಾರೆ.ಟ್ರಕ್‌ನಲ್ಲಿದ್ದ ಉಗ್ರರ ಜತೆ ಗುಂಡಿನ ಚಕಮಕಿ ನಡೆದಿದೆ. ಟ್ರಕ್ಕಿನಲ್ಲಿದ್ದ ಎಲ್ಲ ಮೂರು ಉಗ್ರರನ್ನು ಸಾಯಿಸಲಾಗಿದೆ ಮತ್ತು ಅವರ ಶವಗಳನ್ನು ವಶಕ್ಕೆ ತೆಗೆದುಕೊಂಡಿದ್ದೇವೆ ಎಂದು ಭದರತಾ ಪಡೆ ಅಧಿಕಾರಿ ತಿಳಿಸಿದ್ದಾರೆ.

ಕಾಶ್ಮೀರದಲ್ಲಿ ಮೂವರು ಉಗ್ರರ ಹತ್ಯೆ Read More »

ದೇವಸ್ಥಾನಗಳ ಸಮಗ್ರ ಸಮೀಕ್ಷೆಗೆ ನಿರ್ಧಾರ

ಆಸ್ತಿ ರಕ್ಷಣೆಗೆ ಕ್ರಮ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿಕೆ ಬೆಳಗಾವಿ : ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿರುವ 35 ಸಾವಿರಕ್ಕೂ ಹೆಚ್ಚಿನ ದೇವಸ್ಥಾನಗಳ ಆಸ್ತಿ ಸಂರಕ್ಷಣೆ ಮಾಡುವ ಉದ್ದೇಶದಿಂದ, ರಾಜ್ಯದ ಇತಿಹಾಸದಲ್ಲೇ ಪ್ರಥಮ ಬಾರಿಗೆ ದೇವಾಲಯಗಳು ಮತ್ತು ಅವುಗಳ ಆಸ್ತಿ ವಿವರಗಳನ್ನ ಸಮಗ್ರ ಸಮೀಕ್ಷೆ ಮಾಡಲು ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ನಿರ್ಧರಿಸಲಾಗಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ರಾಜ್ಯ ಧಾರ್ಮಿಕ ಪರಿಷತ್ತಿನ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಧಾರ್ಮಿಕ ದತ್ತಿ

ದೇವಸ್ಥಾನಗಳ ಸಮಗ್ರ ಸಮೀಕ್ಷೆಗೆ ನಿರ್ಧಾರ Read More »

ನಾಳೆ ಅಮಿತ್‌ ಶಾ ರಾಜ್ಯಕ್ಕೆ : ಸಂಪುಟ ವಿಸ್ತರಣೆ ಕುತೂಹಲ

ಚುನಾವಣೆ ರಣತಂತ್ರಕ್ಕೆ ಮಾರ್ಗದರ್ಶನ ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಿ.29 ರಿಂದ ಮೂರು ದಿನ ರಾಜ್ಯಕ್ಕೆ ಭೇಟಿ ನೀಡಲಿದ್ದು, ಮುಖ್ಯವಾಗಿ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಶಾ ರಾಜ್ಯ ಭೇಟಿ ಬಳಿಕವೇ ಬಹು ನಿರೀಕ್ಷಿತ ಸಂಪುಟ ವಿಸ್ತರಣೆ ಬಗ್ಗೆ ಸ್ಪಷ್ಟ ಚಿತ್ರಣ ಹೊರ ಬೀಳುವ ಸಾಧ್ಯತೆಯಿದೆ.ಶಾ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇದು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ನವೋತ್ಸಾಹ ತುಂಬಲಿದೆ. ಅವರ ಈ ಭೇಟಿಯು ಪಕ್ಷದ ಗೆಲುವಿನ ಓಟಕ್ಕೆ

ನಾಳೆ ಅಮಿತ್‌ ಶಾ ರಾಜ್ಯಕ್ಕೆ : ಸಂಪುಟ ವಿಸ್ತರಣೆ ಕುತೂಹಲ Read More »

error: Content is protected !!
Scroll to Top