ನೀಡಿದ ಪರಿಷತ್ ಜವಾಬ್ದಾರಿಯನ್ನು ಸಮರ್ಥವಾಗಿ ನಡೆಸುತ್ತಿದ್ದಾರೆ | ಹಿರೇಬಂಡಾಡಿ ಗ್ರಾಮ ಸಾಹಿತ್ಯ ಸಂಭ್ರಮದಲ್ಲಿ ಸಂಜೀವ ಮಠಂದೂರು
ಪುತ್ತೂರು: ಯುವ ಜನತೆಗೆ ಸಾಹಿತ್ಯ ಪರಿಷತ್ ಜವಾಬ್ದಾರಿ ನೀಡಿರುವ ಕಾರಣ ಅದಕ್ಕೊಂದು ಹೊಸ ಆಯಾಮವನ್ನೇ ನೀಡುವ ಮೂಲಕ ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಹಿರೇಬಂಡಾಡಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಕ ಸಾ ಪ ಪುತ್ತೂರು ನೇತೃತ್ವದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಹಿರೇಬಂಡಾಡಿ ಗ್ರಾಮ ಪಂಚಾಯಿತಿ ಹಾಗೂ ಚಿಗುರೆಲೆ ಸಾಹಿತ್ಯ ಬಳಗದ ಸಹಕಾರದಲ್ಲಿ ಮಿತ್ರಂಪಾಡಿ ಜಯರಾಮ ರೈ ಅವರ ಮಹಾ ಪೋಷಕತ್ವದಲ್ಲಿ “ಸಾಹಿತ್ಯದ ನಡೆಗೆ ಗ್ರಾಮದ ಕಡೆಗೆ” ಎಂಬ ಘೋಷ […]










