ಎಂಆರ್‌ಪಿಎಲ್‌ ನೇಮಕಾತಿಯಲ್ಲಿ ಸ್ಥಳೀಯರಿಗಿಲ್ಲ ಅವಕಾಶ

ಮುನೀರ್‌ ಕಾಟಿಪಳ್ಳ ಆರೋಪ ಮಂಗಳೂರು : ಎಂಆರ್‌ಪಿಎಲ್ ಸಂಸ್ಥೆ ಸ್ಥಳೀಯರನ್ನು ಸಂಪೂರ್ಣ ಕಡೆಗಣಿಸಿ 96 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಈ ಮೂಲಕ ಸರೋಜಿನಿ ಮಹಿಷಿ ವರದಿಯ ಆಶಯಗಳನ್ನು ಕಂಪನಿ ಮತ್ತೊಮ್ಮೆ ಗಾಳಿಗೆತೂರಿ ಕನ್ನಡಿಗರನ್ನು ದೂರವಿಟ್ಟಿದೆ ಎಂದು ಜೋಕಟ್ಟೆ ನಾಗರಿಕ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ.2019-20 ರಲ್ಲಿ ನಡೆದ 234 ಹುದ್ದೆಗಳ ನೇಮಕಾತಿಯಲ್ಲಿ ಸ್ಥಳೀಯರಿಗೆ ಆದ್ಯತೆ ಒದಗಿಸದೆ ಪೂರ್ಣವಾಗಿ ಹೊರಗಿಟ್ಟ ವೇಳೆ ದೊಡ್ಡ ಹೋರಾಟ ನಡೆದಿತ್ತು. ಆ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲ್, […]

ಎಂಆರ್‌ಪಿಎಲ್‌ ನೇಮಕಾತಿಯಲ್ಲಿ ಸ್ಥಳೀಯರಿಗಿಲ್ಲ ಅವಕಾಶ Read More »

ಬಡವರಿಗೆ ಒಂದು ವರ್ಷ ಉಚಿತ ಪಡಿತರ

ಕೇಂದ್ರ ಸರಕಾರದಿಂದ 81.35 ಕೋಟಿ ಜನರಿಗೆ ಹೊಸವರ್ಷದ ಉಡುಗೊರೆ ಹೊಸದಿಲ್ಲಿ : ಬಡವರಿಗೆ ಹೊಸ ವರ್ಷದ ಉಡುಗೊರೆಯಾಗಿ ಕೇಂದ್ರ ಸರ್ಕಾರ ಒಂದು ವರ್ಷ ಉಚಿತ ಪಡಿತರ ನೀಡಲಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಬಡವರಿಗೆ ಉಚಿತ ಆಹಾರ ಧಾನ್ಯ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಎನ್‌ಎಫ್‌ಎಸ್‌ಎ ಅಡಿಯಲ್ಲಿ 81.35 ಕೋಟಿ ಬಡವರಿಗೆ ಒಂದು ವರ್ಷದವರೆಗೆ ಉಚಿತ ಪಡಿತರ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.ಅಂತ್ಯೋದಯ ಅನ್ನ ಯೋಜನೆ (ಎಎವೈ) ಅಡಿಯಲ್ಲಿ ಬರುವ ಬಡವರು ತಿಂಗಳಿಗೆ 35 ಕೆಜಿ ಆಹಾರ

ಬಡವರಿಗೆ ಒಂದು ವರ್ಷ ಉಚಿತ ಪಡಿತರ Read More »

ಕಲಾವಿದರ ಹಠಾತ್‌ ಸಾವು ಎಚ್ಚರಿಕೆ ಕರೆಗಂಟೆ

ಯಕ್ಷಗಾನ ಸಮ್ಮೇಳನದಲ್ಲಿ ನಡೆಯಲಿ ಕಲಾವಿದರ ಅಕಾಲಿಕ ಸಾವಿನ ಬಗ್ಗೆ ಮಂಥನ ಯಕ್ಷಗಾನ ಕಲಾವಿದರು ವೇದಿಕೆಯಲ್ಲೆ ಕುಸಿದು ಪ್ರಾಣ ಕಳೆದುಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ನಾವು ಹರಿಪಾದ ಸೇರಿದರು, ಸ್ವಾಯುಜ್ಯ ಹೊಂದಿದರು, ಯಕ್ಷ ಸರಸ್ವತಿಯ ಪಾದ ಸೇರಿದರು ಎಂದೆಲ್ಲ ಷರಾ ಬರೆದು ಈ ಪ್ರಕರಣಗಳನ್ನು ಮುಗಿಸುತ್ತಿದ್ದೇವೆ.ಯಕ್ಷಗಾನ ಕಲಾವಿದರು ಇಂದು ಒತ್ತಡದಲ್ಲಿ ಇದ್ದಾರೆ ಅನ್ನುವುದು ಗೋಡೆ ಬರಹದಷ್ಟೆ ಸತ್ಯ. ರಾತ್ರಿ ದೇವೇಂದ್ರ, ಕುಬೇರ ಮೊದಲಾದ ಪಾತ್ರಗಳನ್ನು ಮಾಡುವ ಮಹಾನ್‌ ಕಲಾವಿದರು ಬೇರೆ ವೃತ್ತಿಗಳಿಗೆ ಮತ್ತು ಕಲಾವಿದರಿಗೆ ಹೋಲಿಕೆ ಮಾಡಿದರೆ ಇನ್ನೂ ಬಡತನದಲ್ಲಿ

ಕಲಾವಿದರ ಹಠಾತ್‌ ಸಾವು ಎಚ್ಚರಿಕೆ ಕರೆಗಂಟೆ Read More »

ಡಿ. 25: ತಾಲೂಕು ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಯುವ ಕ್ರೀಡಾ ಸಂಭ್ರಮ

ಪುತ್ತೂರು: ತಾಲೂಕು ಯುವ ಒಕ್ಕಲಿಗ ಗೌಡ ಸೇವಾ ಸಂಘ, ಯುವ ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ವಲಯದ ಆಶ್ರಯದಲ್ಲಿ ಒಕ್ಕಲಿಗ ಗೌಡ ಸಮುದಾಯದ ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ ಡಿ. 25ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕ್ರೀಡಾ ಸಮಿತಿ ಸಂಚಾಲಕ ಎ.ವಿ. ನಾರಾಯಣ ಹೇಳಿದರು. ಪ್ರೆಸ್ ಕ್ಲಬ್ಬಿನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ. 25ರಂದು ಇಡೀ ದಿನ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 9  ಗಂಟೆಗೆ ಕ್ರೀಡಾಕೂಟವನ್ನು ಊರ ಗೌಡರಾದ ಕೊಡಿಪ್ಪಾಡಿಯ

ಡಿ. 25: ತಾಲೂಕು ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಯುವ ಕ್ರೀಡಾ ಸಂಭ್ರಮ Read More »

ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

ಪುತ್ತೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ಡಿ. 23ರಂದು ವಿದ್ಯಾಚೇತನ ಆಡಿಟೋರಿಯಂನಲ್ಲಿನಡೆಯಿತು.ಕಾರ್ಯಕ್ರಮ ಉದ್ಘಾಟಿಸಿದ ಸಂಸ್ಥೆಯ ಸಂಚಾಲಕ ಸೀತಾರಾಮ ರೈ ಸವಣೂರು ಮಾತನಾಡಿ, ಕಲಿತ ಶಾಲೆಗೆ ಕೊಡುಗೆ ನೀಡುವುದರಿಂದ ಸಮಾಜಕ್ಕೆ ಉತ್ತಮ ಸಂದೇಶ ರವಾನಿಸಿದಂತಾಗುತ್ತದೆ. ಅಲ್ಲದೇ, ಹಿರಿಯ ವಿದ್ಯಾರ್ಥಿಗಳು ಶಾಲೆಗೆ ಮತ್ತೊಮ್ಮೆ ಬಂದು, ಕಾರ್ಯಕ್ರಮ ಆಯೋಜಿಸುವುದರಿಂದ ವಿದ್ಯಾರ್ಥಿಗಳಿಗೆ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆ ನೀಡಿದಂತಾಗುತ್ತದೆ ಎಂದರು.ಇದೇ ಸಂದರ್ಭ ಹೊಸ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಧ್ರುವ ಮುಂದೋಡಿ, ಸಂಸ್ಥೆಯ ಆಡಳಿತಾಧಿಕಾರಿ ಅಶ್ವಿನ್

ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ Read More »

ಪುತ್ತೂರು ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಹುದ್ದೆ ಖಾಲಿಗೆ ಸದನದಲ್ಲಿ ಉತ್ತರ | ಶಾಸಕರ ಪ್ರಯತ್ನಕ್ಕೆ ಉನ್ನತ ಶಿಕ್ಷಣ ಸಚಿವರಿಂದ ಪರಿಹಾರದ ಭರವಸೆ

ಪುತ್ತೂರು: ಇಲ್ಲಿನ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕೊನೆಗೂ ಸಚಿವರು ಅಧಿವೇಶನದಲ್ಲಿ ಅಸ್ತು ಎಂದಿದ್ದಾರೆ. ಶಾಸಕ ಸಂಜೀವ ಮಠಂದೂರು ಅವರು ಕೇಳಿರುವ ಪ್ರಶ್ನೆಗೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಉತ್ತರ ನೀಡಿದ್ದರು. ಆದರೆ ಉತ್ತರ ತೃಪ್ತಿಕರವಾಗಿರದೇ ಇದ್ದುದರಿಂದ, ಸದನದಲ್ಲಿ ಮಾತನಾಡಲು ಅವಕಾಶ ಸಿಕ್ಕಾಗ, ಸಭಾಧ್ಯಕ್ಷರ ಗಮನ ಸೆಳೆದು, ಸಮಸ್ಯೆಗೆ ಪರಿಹಾರ ನೀಡುವಲ್ಲಿ ಶಾಸಕ ಸಂಜೀವ ಮಠಂದೂರು ಯಶಸ್ವಿಯಾಗಿದ್ದಾರೆ. ಹಳೆ ತಾಲೂಕು ಕಚೇರಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಪುತ್ತೂರು ಸರಕಾರಿ ಮಹಿಳಾ ಪ್ರಥಮ

ಪುತ್ತೂರು ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಹುದ್ದೆ ಖಾಲಿಗೆ ಸದನದಲ್ಲಿ ಉತ್ತರ | ಶಾಸಕರ ಪ್ರಯತ್ನಕ್ಕೆ ಉನ್ನತ ಶಿಕ್ಷಣ ಸಚಿವರಿಂದ ಪರಿಹಾರದ ಭರವಸೆ Read More »

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪುತ್ತೂರು, ಕಡಬ ಕೇಂದ್ರ ಒಕ್ಕೂಟದ ಪದಗ್ರಹಣ, ಸಾಧನ ಸಮಾವೇಶ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್  ಪುತ್ತೂರು ಹಾಗೂ ಕಡಬ ತಾಲೂಕು ಕೇಂದ್ರ ಒಕ್ಕೂಟದ ಪದಗ್ರಹಣ, ನವಜೀವನ ಸದಸ್ಯರ ಸಮಾವೇಶ ಮತ್ತು ಒಕ್ಕೂಟಗಳ ಸಾಧನ ಸಮಾವೇಶ ಡಿ. 23ರಂದು ಪುತ್ತೂರು ಕೊಂಬೆಟ್ಟು ಬಂಟರ ಭವನದಲ್ಲಿ ಜರಗಿತು. ಸ್ವ-ಸಹಾಯ ಸಂಘಗಳಿಗೆ ಸರ್ಕಾರದ ಸವಲತ್ತು ಸಹಾಯಕ ಆಯುಕ್ತ ಗಿರೀಶ್ ನಂದನ್ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಸ್ವಸಹಾಯ ಸಂಘ ಸೇರಿದಂತೆ ಪುತ್ತೂರಿನಲ್ಲಿ ಬಹಳಷ್ಟು ಸ್ವಸಹಾಯ ಸಂಘಗಳು ಕೆಲಸ ನಿರ್ವಹಿಸುತ್ತಿವೆ. ಇತ್ತೀಚೆಗೆ ಇಂತಹ ಸಂಘಗಳಿಗೆ ಸರ್ಕಾರದ ಸವಲತ್ತು

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪುತ್ತೂರು, ಕಡಬ ಕೇಂದ್ರ ಒಕ್ಕೂಟದ ಪದಗ್ರಹಣ, ಸಾಧನ ಸಮಾವೇಶ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಆಪ್ಟಮ್‌ ಕಂಪನಿಯ ಕ್ಯಾಂಪಸ್‌ ನೇಮಕಾತಿ ತರಬೇತಿ ಸಮಾರೋಪ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ವೃತ್ತಿ ಮಾರ್ಗದರ್ಶನ ಹಾಗೂ ನೇಮಕಾತಿ ಕೋಶ ಮತ್ತುಆಂತರಿಕ ಗುಣಮಟ್ಟ ಭರವಸೆ ಕೋಶಗಳ ಆಶ್ರಯದಲ್ಲಿ ಯುನೈಟೆಡ್‌ ಸ್ಟೇಟ್ಸ್‌ ಮೂಲದ ಬಹುರಾಷ್ಟ್ರೀಯ ಹೆಲ್ತ್‌ ಕೇರ್‌ ಮತ್ತು ಇನ್ಶೂರೆನ್ಸ್ ಕಂಪನಿ ಆಪ್ಟಮ್‌ನ ಮೆಡಿಕಲ್‌ ಕೋಡರ್‌ ಹುದ್ದೆಗಳಿಗಾಗಿ ನಡೆದ ನೇಮಕಾತಿ ತರಬೇತಿಯ ಸಮಾರೋಪ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ವಂ| ಡಾ| ಆ್ಯಂಟನಿ ಪ್ರಕಾಶ್‌ ಮೊಂತೆರೊ ಮಾತನಾಡಿ, ಯಾವುದೇ ಕಾರ್ಯದಲ್ಲಿ ನಾವು ಪ್ರಾಮಾಣಿಕ ಪ್ರಯತ್ನಪಟ್ಟರೆ ಯಶಸ್ಸು ನಿಶ್ಚಿತ. ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸುವುದು ಮಾತ್ರವಲ್ಲದೆ, ಉದ್ಯೋಗಕ್ಕಾಗಿ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಆಪ್ಟಮ್‌ ಕಂಪನಿಯ ಕ್ಯಾಂಪಸ್‌ ನೇಮಕಾತಿ ತರಬೇತಿ ಸಮಾರೋಪ Read More »

ಉತ್ತಮ ಸಮಾಜ ನಿರ್ಮಾಣಕ್ಕೆ ಯುವಜನತೆ ತಯಾರಾಗಬೇಕು

ಪುತ್ತೂರು:  ಆಧುನಿಕ ಯುಗದಲ್ಲಿ ಯುವಜನತೆಯು  ಸಾಕಷ್ಟು ಸವಾಲುಗಳನ್ನು ಎದುರಿಸುತ್ತಿದ್ದು, ಕೆಲವೊಮ್ಮೆ  ಎದುರಿಸುವ ಸಲುವಾಗಿ  ವಿಫಲವಾಗುತ್ತಾರೆ. ಕಷ್ಟಗಳು ಎದುರಾದಾಗ ಅದನ್ನು ಹಿಮ್ಮೆಟ್ಟಿ ಮುಂದುವೆರೆಯಬೇಕು. ಇತ್ತೀಚಿನ ದಿನಗಳಲ್ಲಿ ಯುವಜನತೆ ಬಹಿರಂಗವಾಗಿ ಗೆದ್ದರೂ ಕೂಡ ಅಂತರಂಗದಲ್ಲಿ  ಸೋಲುತ್ತಾರೆ. ಯಾವುದೇ  ಸಂದರ್ಭದಲ್ಲೂ  ಹಿಂಜರಿಯದೆ ಸದೃಡತೆಯಿಂದ, ಆತ್ಮಸ್ಥೈರ್ಯದಿಂದ  ಮುನ್ನುಗ್ಗಬೇಕು. ಯುವಜನತೆ ಯಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಆಗಲು ಸಾಧ್ಯ. ಆದರಿಂದ ರಾಷ್ಟ್ರ ನಮ್ಮನ್ನು ಕಟ್ಟುವುದಲ್ಲ ನಾವು  ರಾಷ್ಟ್ರವನ್ನು ಕಟ್ಟಬೇಕು ಎಂದು ಕುಕ್ಕೆ ಸುಬ್ರಹ್ಮಣ್ಯ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಉಪನ್ಯಾಸಕಿ ಆರತಿ ಹೇಳಿದರು. ಇವರು

ಉತ್ತಮ ಸಮಾಜ ನಿರ್ಮಾಣಕ್ಕೆ ಯುವಜನತೆ ತಯಾರಾಗಬೇಕು Read More »

ಡಿ. 24: ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಸಂವಾದ, ಡಾ.ಗುರುರಾಜ ಕರಜಗಿ ಉಪನ್ಯಾಸ

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಡಿ. ೨೪ರಂದು ಫ್ಯಾಕಲ್ಟಿ ಡೆವಲಪ್‌ಮೆಂಟ್ ಕಾರ್ಯಕ್ರಮ ಹಾಗೂ ಹೆತ್ತವರೊಂದಿಗೆ ಸಂವಾದ ನಡೆಯಲಿದೆ. ಅಂತಾರಾಷ್ಟ್ರೀಯ ತರಬೇತುದಾರ, ಶಿಕ್ಷಣ ತಜ್ಞ ಡಾ. ಗುರುರಾಜ ಕರಜಗಿ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಬೆಳಗ್ಗೆ 9ಕ್ಕೆ ಡಾ.ಕರಜಗಿ ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸುವರು. ತದನಂತರ 10.30ರಿಂದ 12.30ರ ವರೆಗೆ ಶಿಕ್ಷಕರೊಂದಿಗೆ ಸಂವಾದ ನಡೆಸಲಿದ್ದಾರೆ. ಅಪರಾಹ್ನ 1.30ರಿಂದ ಹೆತ್ತವರೊಂದಿಗೆ ಡಾ. ಗುರುರಾಜ ಕರಜಗಿ ಸಂವಾದ ನಡೆಸಲಿದ್ದು, ಸಾರ್ವಜನಿಕರಿಗೂ ಮುಕ್ತ ಅವಕಾಶ ಕಲ್ಪಿಸಿಕೊಡಲಾಗಿದೆ.

ಡಿ. 24: ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಸಂವಾದ, ಡಾ.ಗುರುರಾಜ ಕರಜಗಿ ಉಪನ್ಯಾಸ Read More »

error: Content is protected !!
Scroll to Top