ಮನೆಯ ಮೇಲ್ಛಾವಣಿಯಿಂದ ಬಿದ್ದು ಯುವಕ ಮೃತ್ಯು !

ಕಡಬ: ಮನೆಯ ಮೇಲ್ಛಾವಣಿಯಿಂದ ಬಿದ್ದು ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ. ಆಲಂಕಾರು ಗ್ರಾಮದ ಬಾರ್ಕುಲಿ ನಿವಾಸಿ ಉದಯ ಕುಮಾರ್ (27) ಮೃತಪಟ್ಟ ಯುವಕ. ಕಾಮಗಾರಿ ಸಂದರ್ಭ ನೂತನ ಮನೆಯ ಮೇಲ್ಛಾವಣಿಯಿಂದ ಇಳಿಯುತ್ತಿದ್ದ ಸಂದರ್ಭಆಯತಪ್ಪಿ ಕೆಳಗೆ ಬಿದ್ದ ಪರಿಣಾಮ ಕುತ್ತಿಗೆದೆ ಗಂಭೀರ ಗಾಯವಾಗಿತ್ತು. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಶಸ್ತ್ರ ಚಿಕಿತ್ಸೆಗೊಳಪಡಿಸಲಾಯಿತು. ಬಳಿಕ ಹೆಚ್ಚಿಕ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮನೆಯ ಮೇಲ್ಛಾವಣಿಯಿಂದ ಬಿದ್ದು ಯುವಕ ಮೃತ್ಯು ! Read More »

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖ ಡಾ.ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಕೇಸು ದಾಖಲು – ಬಜರಂಗದಳದಿಂದ ಖಂಡನೆ

ಪುತ್ತೂರು: ಹಲವಾರು ದಶಕಗಳಿಂದ ಹಿಂದೂ ಸಾಮಾಜದ ಜಾಗೃತಿಯ ಕೆಲಸ ಮಾಡುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರಾದ ಡಾ.ಕಲ್ಲಡ್ಕ ಪ್ರಭಾಕರ ಭಟ್ ರವರ ಮೇಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹನುಮಜಯಂತಿ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾಷಣ ಮಾಡಿರುವುದರ ಕುರಿತು ಕೇಸು ದಾಖಲಿಸಿರುವುದಕ್ಕೆ ಬಜರಂಗದಳ ತೀವ್ರ ಖಂಡನೆ ವ್ಯಕ್ತಪಡಿಸಿದೆ. ತ್ರಿವಳಿ ತಲಾಕ್ ನಿಷೇಧದಿಂದ ಮುಸ್ಲಿಂ ಮಹಿಳೆಯರಿಗೆ ಸಮಾಜದಲ್ಲಿ ಸಮಾನತೆಯ ಹಕ್ಕು ಕೇಂದ್ರ ಸರಕಾರ ನೀಡಿದನ್ನು ತನ್ನ ಭಾಷಣದಲ್ಲಿ ಉಲ್ಲೇಖಿಸಿ ಭಾಷಣ ಮಾಡಿದ್ದು ಆದರೆ ಇದನ್ನೆ ಅಸ್ತ್ರವಾಗಿ ಬಳಸಿಕೊಂಡು ಮುಸ್ಲಿಂ

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖ ಡಾ.ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಕೇಸು ದಾಖಲು – ಬಜರಂಗದಳದಿಂದ ಖಂಡನೆ Read More »

ಕುಡಿತ ಬಿಡುವ ಬಗ್ಗೆ ಸ್ವಯಂ ಮೂಗುದಾರ ಹಾಕುವ ಅಗತ್ಯವಿದೆ : 1777ನೇ ಮದ್ಯ ವರ್ಜನ ಶಿಬಿರದಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆ

ಪುತ್ತೂರು: ಮದ್ಯಪಾನಕ್ಕೆ ಪಂಚೇದ್ರಿಯಗಳು ಆಕರ್ಷಣೆಯಾಗದಂತೆ ದೂರವಿರುವುದರ ಜೊತೆಗೆ ಕುಡಿತ ನಿಲ್ಲಿಸುವ ವಿಚಾರದಲ್ಲಿ ಗಟ್ಟಿ ಮತ್ತು ದೃಡವಾದ ಮನಸ್ಸು, ಚಂಚಲತೆ ಇಲ್ಲದ ಹತೋಟಿ ಬೇಕಾಗಿದೆ. ಮದ್ಯವರ್ಜನ ಶಿಬಿರದಲ್ಲಿ ಭಾಗವಿಸಿದ ಎಲ್ಲರೂ ಕುಡಿತ ಬಿಡುವ ಬಗ್ಗೆ ಸ್ವಯಂ ಮೂಗುದಾರ ಹಾಕಿಕೊಂಡು ಹತೋಟಿಯಲ್ಲಿರಬೇಕು ಎಂದು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ನುಡಿದರು. ಅವರು ಮಂಗಳವಾರ ಕಲ್ಲೇಗ ಭಾರತ್ ಮಾತಾ ಸಮುದಾಯ ಭವನದಲ್ಲಿ ಕಳೆದ ಆರು ದಿನಗಳಿಂದ ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಬೆಳ್ತಂಗಡಿ

ಕುಡಿತ ಬಿಡುವ ಬಗ್ಗೆ ಸ್ವಯಂ ಮೂಗುದಾರ ಹಾಕುವ ಅಗತ್ಯವಿದೆ : 1777ನೇ ಮದ್ಯ ವರ್ಜನ ಶಿಬಿರದಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆ Read More »

ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ | ಅಧ್ಯಕ್ಷರಾಗಿ ಕೃಷ್ಭ ಭಟ್‍ ಕುಕ್ಕುಜೆ, ಉಪಾಧ್ಯಕ್ಷರಾಗಿ ಆಶಾ ರೈ ಕಲಾಯಿ

ಪುತ್ತೂರು: ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ಮುಂದಿನ ಐದು ವರುಷಗಳ ಅವಧಿಗೆ ಅಧ್ಯಕ್ಷರಾಗಿ ಕೃಷ್ಣ ಭಟ್ ಕುಕ್ಕುಜೆ ಹಾಗೂ ಉಪಾಧ್ಯಕ್ಷರಾಗಿ ಆಶಾ ರೈ ಕಲಾಯಿ ಅವಿರೋಧವಾಗಿ ಆಯ್ಕೆಯಾದರು. ಡಿ.26 ರಂದು ಸಂಘದ ಕಚೇರಿಯಲ್ಲಿ ಆಯ್ಕೆ ನಡೆಯಿತು. ಚುನಾವಣಾಧಿಕಾರಿ ಶೋಭಾ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು ನಿರ್ದೇಶಕರುಗಳಾದ ಜಯರಾಮ ರೈ ಸೊಂಪಾಡಿ, ಪ್ರೇಮಚಂದ್ರ ಮೆದು, ಪ್ರಶಾಂತ್ ಕುಮಾರ್, ಮಮತಾ ಕೆ.ಬಿ ದೇವಸ್ಯ, ಗೋಪಾಲಕೃಷ್ಣ ಗೌಡ, ಪದ್ಮಯ್ಯ ಗೌಡ ಪರಣೆ, ಗಂಗಾಧರ ಸುಣ್ಣಾಜೆ, ಆಶಾಲತಾ, ಗೀತಾ, ಸೂರಪ್ಪ ಗೌಡರವರು ಉಪಸ್ಥಿತರಿದ್ದರು

ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ | ಅಧ್ಯಕ್ಷರಾಗಿ ಕೃಷ್ಭ ಭಟ್‍ ಕುಕ್ಕುಜೆ, ಉಪಾಧ್ಯಕ್ಷರಾಗಿ ಆಶಾ ರೈ ಕಲಾಯಿ Read More »

ವಿದ್ಯೆಯಿಂದ ಸಮಾಜ ಕಟ್ಟುವ ಛಲ, ಧೈರ್ಯ ಸಹಜವಾಗಿ ಬರುತ್ತದೆ | ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಪದಗ್ರಹಣ, ನೂತನ ಸಮುದಾಯ ಭವನದ ಶಿಲಾನ್ಯಾಸ ಹಾಗೂ ಒಕ್ಕಲಿಗ ಸ್ಪಂದನಾ ಸಮುದಾಯ ಸಹಕಾರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

ಕಡಬ: ಸಮಾಜ ಕಟ್ಟುವ ನಿಟ್ಟಿನಲ್ಲಿ ಒಕ್ಕಲಿಗ ಸಮುದಾಯದವರು ತಮ್ಮ ಮಕ್ಕಳಿಗೆ ಒಳ್ಳೆಯ ವಿದ್ಯೆ ನೀಡಿ. ಆಗ ಹೂವಿಗೆ ಹೇಗೆ ಸಹಜವಾಗಿ ಪರಿಮಳೆ ಬರುತ್ತದೋ ಹಾಗೆಯೇ ಸಮಾಜ ಕಟ್ಟುವ ಛಲ, ಧೈರ್ಯ ಸಹಜವಾಗಿ ಬರುತ್ತದೆ ಎಂದು ಶ್ರೀ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ನುಡಿದರು. ಅವರು ಮಂಗಳವಾರ ಕಡಬ ತಾಲೂಕು ಗೌಡ ಸೇವಾ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ, ನೂತನ ಸಮುದಾಯ ಭವನದ ಶಿಲಾನ್ಯಾಸ ಹಾಗೂ ಒಕ್ಕಲಿಗ ಸ್ಪಂದನಾ ಸಮುದಾಯ ಸಹಕಾರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಶಿಲಾನ್ಯಾಸ

ವಿದ್ಯೆಯಿಂದ ಸಮಾಜ ಕಟ್ಟುವ ಛಲ, ಧೈರ್ಯ ಸಹಜವಾಗಿ ಬರುತ್ತದೆ | ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಪದಗ್ರಹಣ, ನೂತನ ಸಮುದಾಯ ಭವನದ ಶಿಲಾನ್ಯಾಸ ಹಾಗೂ ಒಕ್ಕಲಿಗ ಸ್ಪಂದನಾ ಸಮುದಾಯ ಸಹಕಾರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ Read More »

ಗೋಧೋಳಿ ಲಗ್ನದಲ್ಲಿ ನಡೆಯಿತು. ಶ್ರೀನಿವಾಸ ಕಲ್ಯಾಣೋತ್ಸವ | ಸಹಸ್ರಾರು ಭಕ್ತಾದಿಗಳ ಗೋವಿಂದ ಉದ್ಘೋಷದೊಂದಿಗೆ ಮಾಂಗಲ್ಯ ಧಾರಣೆ, ಮಹಾಮಂಗಳಾರತಿ, ಪೂಜೆ, ಪ್ರಸಾದ ವಿನಿಯೋಗದ ಮೂಲಕ ಶ್ರೀನಿವಾಸ ಕಲ್ಯಾಣೋತ್ಸವ ಸಂಪನ್ನ | ರಾತ್ರಿ ಸಹಸ್ರಾರು ಮಂದಿಗೆ ಅನ್ನಸಂತರ್ಪಣೆ

ಪುತ್ತೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಮೂಲಕ ಶತಮಾನಗಳ ಹೋರಾಟದ ಫಲವಾಗಿ ಕನಸು ನನಸಾಗುತ್ತಿದೆ. ಈ ನಿಟ್ಟಿನಲ್ಲಿ ವಿಶೇಷ ಜವಾಬ್ದಾರಿ ಇಂದಿನಿಂದ ಆರಂಭವಾಗುತ್ತಿದೆ. ಮುಂದೆ ಆಚಂದ್ರಾರ್ಕವಾಗಿ ರಾಮಮಂದಿರ ಉಳಿಯಬೇಕು. ಮತ್ತೊಮ್ಮೆ ಪರಕೀಯರ ಪಾಲಾಗಬಾರದು ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ನುಡಿದರು. ಪುತ್ತಿಲ ಪರಿವಾರ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಎರಡು ದಿನಗಳ ಕಾಲ ನಡೆದ ಶ್ರೀನಿವಾಸ ಕಲ್ಯಾಣೋತ್ಸವದ ಅಂಗವಾಗಿ ಸೋಮವಾರ ರಾತ್ರಿ ವೈಭವದಿಂದ

ಗೋಧೋಳಿ ಲಗ್ನದಲ್ಲಿ ನಡೆಯಿತು. ಶ್ರೀನಿವಾಸ ಕಲ್ಯಾಣೋತ್ಸವ | ಸಹಸ್ರಾರು ಭಕ್ತಾದಿಗಳ ಗೋವಿಂದ ಉದ್ಘೋಷದೊಂದಿಗೆ ಮಾಂಗಲ್ಯ ಧಾರಣೆ, ಮಹಾಮಂಗಳಾರತಿ, ಪೂಜೆ, ಪ್ರಸಾದ ವಿನಿಯೋಗದ ಮೂಲಕ ಶ್ರೀನಿವಾಸ ಕಲ್ಯಾಣೋತ್ಸವ ಸಂಪನ್ನ | ರಾತ್ರಿ ಸಹಸ್ರಾರು ಮಂದಿಗೆ ಅನ್ನಸಂತರ್ಪಣೆ Read More »

ಗ್ಯಾಸ್ ಸೋರಿಕೆ : ಯುವತಿ ಮೃತ್ಯು !

ಬೆಂಗಳೂರು: ಸ್ನಾನ ಮಾಡಲು ಬಾತ್‍ ರೂಮ್‍ ಹೋಗಿದ್ದ ಯುವತಿಯೋರ್ವಳು ಗ್ಯಾಸ್ ಸೋರಿಕೆಯಿಂದ ಮೃತಪಟ್ಟ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯದ ಮೀನಾಕ್ಷಿನಗರದಲ್ಲಿ ನಡೆದಿದೆ. ರಾಜೇಶ್ವರಿ (23) ಮೃತ ದುರ್ದೈವಿ. ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡಿತ್ತಿದ್ದ ರಾಜೇಶ್ವರಿ ಅಣ್ಣನ ಮದುವೆ ಪ್ರಯುಕ್ತ ರಜೆ ಹಾಕಿದ್ದಳು. ಬೆಳಗ್ಗೆ ಸ್ನಾನ ಮಾಡಲು ಬಾತ್‍ ರೂಮ್‍ ಗೆ ಹೋಗಿದ್ದು, ಗ್ಯಾಸ್ ಗೀಸರ್‍ ಸೋರಿಕೆಯಾದಾಗ ವಿಷಾನಿಲದಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಎಷ್ಟು ಹೊತ್ತಾದರೂ ಹೊರಬಾರದಾಗ ಮನೆಯವರು ಬಾಗಿಲು ಬಡಿದಿದ್ದಾರೆ. ಬಳಿಕ ಬಾಗಿಲು ಒಡೆದು ಒಳಗೆ ಹೋದಾಗ ಪ್ರಜ್ಞೆ

ಗ್ಯಾಸ್ ಸೋರಿಕೆ : ಯುವತಿ ಮೃತ್ಯು ! Read More »

ಡಿ.31: “ಶ್ರೀಮ ಹಿಲ್ಸ್ “ ವಸತಿ ಬಡಾವಣೆ ಉದ್ಘಾಟನೆ

ಪುತ್ತೂರು: “ಶ್ರೀಮ ಹಿಲ್ಸ್” ವಸತಿ ಬಡಾವಣೆಯ ಉದ್ಘಾಟನಾ ಸಮಾರಂಭ ಡಿ.31 ಭಾನುವಾರ ಪುತ್ತೂರು ಬಪ್ಪಳಿಗೆಯಲ್ಲಿ ನಡೆಯಲಿದೆ. ಸಂಜೆ 5 ಗಂಟೆಗೆ ನಡೆಯುವ ಉದ್ಘಾಟನಾ ಸಮಾರಂಭವನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕಲ್ಲಡ್ಕ ಪ್ರಭಾಕರ್ ಭಟ್ ಉದ್ಘಾಟಿಸಲಿದ್ದು, ಶಾಸಕ ಅಶೋಕ್ ಕುಮಾರ್ ರೈ ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಶಾಸಕ ಸಂಜೀವ ಮಠಂದೂರು, ನಗರಸಭಾ ಸದಸ್ಯ ಭಾಮಿ ಅಶೋಕ್ ಶೆಣೈ, ಸ್ವರ್ಣೋದ್ಯಮಿ ಬಲರಾಮ ಆಚಾರ್ಯ, ಕ್ಯಾಂಪ್ಕೋ ಮಾಜಿ ಅಧ್ಯಕ್ಷ

ಡಿ.31: “ಶ್ರೀಮ ಹಿಲ್ಸ್ “ ವಸತಿ ಬಡಾವಣೆ ಉದ್ಘಾಟನೆ Read More »

ಪಣಂಬೂರಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ !

ಪಣಂಬೂರು: ಉಡುಪಿಯಿಂದ ಮಂಗಳೂರಿಗೆ ತೆರಳುವ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆಯಾಗಿದೆ. ಒಡಿಶಾದ ರಶ್ಮಿ ರಂಜನ್ (44) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಎಪಿಎಂಸಿ ಯಾರ್ಡ್ ನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಅವರು ತಡರಾತ್ರಿ ರಸ್ತೆ ದಾಟುವ ಸಂದರ್ಭ ಅಪರಿಚಿತ ವಾಹನ ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ.

ಪಣಂಬೂರಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ ! Read More »

ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಬಲಿಷ್ಠ ಸಮಾಜ ನಿರ್ಮಾಣ‌ ಮಾಡಬೇಕಿದೆ | ಕಂಬಲದಡ್ಡ ಅಂಗನವಾಡಿ ಕೇಂದ್ರ ಉದ್ಘಾಟಿಸಿ ಶಾಸಕ ಅಶೋಕ್ ರೈ

ಪುತ್ತೂರು: ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಬಲಿಷ್ಡ ಸಮಾಜದ ನಿರ್ಮಾಣಕ್ಕೆ ಶ್ರಮ ಪಡಬೇಕಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಆರ್ಯಾಪು ಗ್ರಾಮದ ಕಂಬಲದಡ್ಡ ಅಂಗನವಾಡಿ ಕೇಂದ್ರ ಉದ್ಘಾಟಿಸಿ ಮಾತನಾಡಿದರು. ಅಂಗನವಾಡಿಗಳಿಗೆ ಮಕ್ಕಳನ್ನು ದಾಖಲಿಸುವ ಮೂಲಕ ನಾವು ಪುಟ್ಟ ಹೃದಯಗಳಿಗೂ ಸಂಸ್ಕಾರದ ಶಿಕ್ಷಣ ಎಳೆಯದರಲ್ಲೇ ನೀಡಬೇಕು ಎಂದು ಹೇಳಿದರು. ವೇದಿಕೆಯಲ್ಲಿ ಆರ್ಯಾಪು  ಗ್ರಾಪಂ ಅಧ್ಯಕ್ಷೆ ಗೀತಾ, ಉಪಾಧ್ಯಕ್ಷೆ ಅಶೋಕ ನಾಯ್ಕ, ಅಂಗನವಾಡಿ ಮೇಲ್ವಿಚಾರಕಿ ಜಲಜಾಕ್ಷಿ, ಗ್ರಾಪಂ ಪಿಡಿಒ ನಾಗೇಶ್, ಗ್ರಾಪಂ ಸದಸ್ಯರುಗಳಾದ ಪೂರ್ಣಿಮಾ, ರತ್ನಾವತಿ,

ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಬಲಿಷ್ಠ ಸಮಾಜ ನಿರ್ಮಾಣ‌ ಮಾಡಬೇಕಿದೆ | ಕಂಬಲದಡ್ಡ ಅಂಗನವಾಡಿ ಕೇಂದ್ರ ಉದ್ಘಾಟಿಸಿ ಶಾಸಕ ಅಶೋಕ್ ರೈ Read More »

error: Content is protected !!
Scroll to Top