೭೮ನೇ ಜಯಂತ್ಯೋತ್ಸವ, ಸಂಸ್ಮರಣೆ: ಪೂರ್ವಭಾವಿ ಸಭೆ
ಪುತ್ತೂರು: ಭೈರವೈಕ್ಯ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ೭೮ನೇ ಜಯಂತ್ಯೋತ್ಸವ ಹಾಗೂ ಸಂಸ್ಮರಣಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಸರ್ವೋದಯ ಪ್ರೌಢಶಾಲೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಮಾತನಾಡಿ, ಕಾರ್ಯಕ್ರಮದ ರೂಪುರೇಷೆ ಬಗ್ಗೆ ವಿವರಿಸಿದರು.ಶಾಸಕ ಸಂಜೀವ ಮಠಂದೂರು ಮಾತನಾಡಿ, ಕಾರ್ಯಕ್ರಮದ ಯಶಸ್ಸಿಗೆ ಒಗ್ಗಟ್ಟಿನಿಂದ ಸಹಕರಿಸುವಂತೆ ಮನವಿ ಮಾಡಿಕೊಂಡರು.ಸುಂದರ ಗೌಡ, ಸಚಿನ್, ನಾಗೇಶ್ ಕೆಡೆಂಜಿ, ಪುರುಷೋತ್ತಮ ಮುಂಗ್ಲಿಮನೆ, ಮೋಹನ್ ಗೌಡ, ಮುಕುಂದ ಉಪಸ್ಥಿತರಿದ್ದರು.
೭೮ನೇ ಜಯಂತ್ಯೋತ್ಸವ, ಸಂಸ್ಮರಣೆ: ಪೂರ್ವಭಾವಿ ಸಭೆ Read More »