ಸಮಾಜರತ್ನ ಕಾಪು ಲೀಲಾಧರ ಶೆಟ್ಟಿ ಸಾಕುಮಗಳ ಅಪಹರಣ | ನಾಲ್ವರು ಆರೋಪಿಗಳ ಬಂಧನ

ಉಡುಪಿ: ಸಮಾಜರತ್ನ ಕಾಪು ಲೀಲಾಧರ ಶೆಟ್ಟಿ ಅವರ ಸಾಕು ಮಗಳು ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಪು ಪೊಲೀಸರು ಆಕೆಯ ಸ್ನೇಹಿತ ಸೇರಿದಂತೆ ನಾಲ್ವರನ್ನು ಕಾಸರಗೋಡು ಜಿಲ್ಲೆಯ ಕುಂಬ್ಳೆ ಬಳಿ ಬಂಧಿಸಿದ್ದಾರೆ. ಸ್ನೇಹಿತ ಶಿರ್ವ ನಿವಾಸಿ ಗೀರಿಶ್ (20), ಮತ್ತು ನಾಪತ್ತೆಯಾಗಲು ಸಹಕರಿಸಿದ ಶಿರ್ವ ನಿವಾಸಿ ರೂಪೇಶ್ (22), ಜಯಂತ್ (23) ಹಾಗೂ ಮಜೂರು ನಿವಾಸಿ ಮೊಹ್ಮದ್ ಅಝೀಜ್  ಬಂಧಿತ ಆರೋಪಿಗಳು ಲೀಲಾಧರ ಶೆಟ್ಟಿಯವರು 16 ವರ್ಷಗಳ ಹಿಂದೆ ಹೆಣ್ಣು ಮಗುವನ್ನು ದತ್ತು ಪಡೆದಿದದ್ದು ಆಕೆ ಮನೆ ಬಿಟ್ಟು […]

ಸಮಾಜರತ್ನ ಕಾಪು ಲೀಲಾಧರ ಶೆಟ್ಟಿ ಸಾಕುಮಗಳ ಅಪಹರಣ | ನಾಲ್ವರು ಆರೋಪಿಗಳ ಬಂಧನ Read More »

ಬೆಳಿಯೂರುಕಟ್ಟೆ ಸರಕಾರಿ  ಪ ಪೂ ಕಾಲೇಜು ವಾರ್ಷಿಕೋತ್ಸವ

ಪುತ್ತೂರು: ಮಕ್ಕಳನ್ನು ತಿದ್ದುವ ಮತ್ತು ಉತ್ತಮ ದಾರಿ ತೋರಿಸುವ ಕೆಲಸ ಕೇವಲ ಶಿಕ್ಷಕರಿಂದ ‌ಮಾತ್ರವಲ್ಲ ಪೋಷಕರಿಂದಲೂ ಆಗಬೇಕು ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಬೆಳಿಯೂರು ಕಟ್ಟೆ ಸರಕಾರಿ ಪ ಪೂ ಕಾಲೇಜಿನಲ್ಲಿ ನಡೆದ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸರಕಾರಿ ಶಾಲೆಯಲ್ಲಿ ಶಿಸ್ತು ಕಡಿಮೆ ಎಂದು ಕೆಲವರು ಆಪಾದನೆ ಮಾಡುತ್ತಾರೆ. ಸರಕಾರಿ ಶಾಲೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲಾಗುತ್ತದೆ. ಶಿಸ್ತು ಪಾಲನೆ ಮಾಡಬೇಕಾದರೆ ಪೋಷಕರ ಸಹಕಾರ ಅತೀ ಅಗತ್ಯವಾಗಿದೆ ಎಂದ ಅವರು,

ಬೆಳಿಯೂರುಕಟ್ಟೆ ಸರಕಾರಿ  ಪ ಪೂ ಕಾಲೇಜು ವಾರ್ಷಿಕೋತ್ಸವ Read More »

ಡಿ.24-25 : ಶ್ರೀನಿವಾಸ ಕಲ್ಯಾಣೋತ್ಸವ | ಸವಣೂರು ಸಮಿತಿ ರಚನೆ

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಪುತ್ತಿಲ ಪರಿವಾರದ ಆಶ್ರಯದಲ್ಲಿ ಡಿ.24 ಹಾಗೂ 25 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವದ ಸವಣೂರು ಸಮಿತಿಯನ್ನು ರಚಿಸಲಾಯಿತು. ಸಮಿತಿ ಗೌರವಾಧ್ಯಕ್ಷರಾಗಿ ವೆಂಕಟೇಶ್‍ ಭಟ್‍ ಕೊಯಿಕುಡೆ, ಸಂಚಾಲಕರಾಗಿ ಪುಷ್ಪರಾಜ ಆರೇಲ್ತಡಿ ಅಧ್ಯಕ್ಷರಾಗಿ ದೇವಿಪ್ರಸಾದ್ ಪಂಚೋಡಿ ಆಯ್ಕೆಯಾಗಿದ್ದಾರೆ. ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಕೌಶಿಕ್‍ ಶಾಂತಿನಗರ, ಕಾರ್ಯದರ್ಶಿಗಳಾಗಿ ಶ್ರೀಧರ ಸುಣ್ಣಾಜೆ, ಮೋಕ್ಷಿತ್ ಇಡ್ಯಾಡಿ, ದಿಲೀಪ್‍ ಹೆಗ್ಡೆ, ಪ್ರಖ್ಯಾತ್ ಪಂಚೋಡಿ, ಚೇತನ್‍ ಇಡ್ಯಾಡಿ, ಪ್ರಶಾಂತ್‍ ನೂಜಾಜೆ, ಮಿಥುನ್‍

ಡಿ.24-25 : ಶ್ರೀನಿವಾಸ ಕಲ್ಯಾಣೋತ್ಸವ | ಸವಣೂರು ಸಮಿತಿ ರಚನೆ Read More »

ಮೀನುಗಾರಿಕೆ ದೋಣಿ ಮುಳುಗಿ ಇಬ್ಬರು ಮೃತ್ಯು !

ಮೀನುಗಾರಿಕೆ ದೋಣಿ ಮುಳುಗಿ ಇಬ್ಬರು ಮೀನುಗಾರರು ಮೃತಪಟ್ಟ ಘಟನೆ ಶಿರೂರು ಕಳುವಿಷ್ಣುವಿನಲ್ಲಿ ನಡೆದಿದೆ. ಹಡವಿನಕೋಣೆ ಶಿರೂರಿನ ಅಬ್ದುಲ್ ಸತ್ತರ್ (45 ) ಹಾಗೂ ಕುದ್ವಾಯಿ ರೋಡ್, ಭಟ್ಕಳ ನಿವಾಸಿ ಮಿಸ್ಟಾಯೂಸುಫ್ (48) ಮೃತಪಟ್ಟವರು ಎಂದು ಗುರತಿಸಲಾಗಿದೆ. ಶಿರೂರು ಕಳುಹಿತ್ತುವಿನಿಂದ ಮೀನುಗಾರಿಕೆ ತೆರಳಿದ್ದ ಮೂರು ಜನ ಮೀನುಗಾರರು ಮೀನುಗಾರಿಕೆ ಮುಗಿಸಿ ವಾಪಾಸ್ಸು ಬರುವಾಗ ಮುಂಜಾನೆ ವೇಳೆಗೆ ಶಿರೂರು ಕಳುಹಿತ್ತು ಅಳಿವೆ ಸಮೀಪ ಅರಬ್ಬಿ ಸಮುದ್ರದಲ್ಲಿ ದೋಣಿ ಮಗುಚಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಮತ್ತೋರ್ವ ಬುಡ್ಡು ಮುಖಾರ್

ಮೀನುಗಾರಿಕೆ ದೋಣಿ ಮುಳುಗಿ ಇಬ್ಬರು ಮೃತ್ಯು ! Read More »

ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ-ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಪಂಚಮಿ ಉತ್ಸವ

ಪುತ್ತೂರು: ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ವೈಭವದ ಪಂಚಮಿ ಉತ್ಸವ ನಡೆಯಿತು. ಉತ್ಸವದ ಅಂಗವಾಗಿ ಬೆಳಿಗ್ಗೆ ಶ್ರೀ ಕ್ಷೇತ್ರದ ನಾಗಬನದಲ್ಲಿ ಸಾಮೂಹಿಕ ಆಶ್ಲೇಷಾ ಬಲಿ, ನಾಗತಂಬಿಲ ಸೇವೆಗಳು ಜರಗಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಿತು. ರಾತ್ರಿ 7 ಗಂಟೆಯಿಂದ ಮಹಾಪೂಜೆ, ಶ್ರೀ ದೇವರ ಬಲಿ ಹೊರಟು ಪಂಚಮಿ ಉತ್ಸವ, ಪಲ್ಲಕ್ಕಿ ಉತ್ಸವ, ಕಟ್ಟೆಪೂಜೆ, 5 ರಿಂದ ಶಿರಾಡಿ ದೈವದ ಕಿರುವಾಳು ಆಗಮಿಸಿತು. ಬಳಿಕ ಮಂಗಳೂರು ಶ್ರೀ ಮುನೀಶ್ವರ

ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ-ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಪಂಚಮಿ ಉತ್ಸವ Read More »

ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ವಿಷಪ್ರಾಶನ : ಆಸ್ಪತ್ರೆಗೆ ದಾಖಲು

ಆರೋಗ್ಯ ಸಮಸ್ಯೆ ಉಂಟಾಗಿರುವ ಹಿನ್ನೆಲೆಯಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ಪಾಕಿಸ್ತಾನದ ಕರಾಚಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಟ್ಟುನಿಟ್ಟಿನ ಭದ್ರತೆಯಲ್ಲಿ ಇರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸದ್ಯಕ್ಕೆ ಆಸ್ಪತ್ರೆಯ ಮಹಡಿಯಲ್ಲಿ ದಾವೂದ್ ನನ್ನು ಮಾತ್ರ ಇರಿಸಲಾಗಿದ್ದು ಹತ್ತಿರದ ಕುಟುಂಬ ಸದಸ್ಯರಿಗೆ ಮಾತ್ರ ಪ್ರವೇಶಾವಕಾಶ ನೀಡಲಾಗಿದೆ. ಆತ ವಿಷ ಸೇವಿಸಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದರೂ ಯಾವುದೇ ದೃಢೀಕರಣವಿಲ್ಲ. ಕ್ರಿಮಿನಲ್ ಚಟುವಟಿಕೆಗಳಿಗೆ ಹೆಸರಾದ ಕುಖ್ಯಾತ ವ್ಯಕ್ತಿ ಕಳೆದ ಎರಡು ದಿನಗಳಿಂದ ವೈದ್ಯಕೀಯ ಆರೈಕೆಯಲ್ಲಿದ್ದು, ವಿಷ ಸೇವಿಸಿರಬಹುದು

ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ವಿಷಪ್ರಾಶನ : ಆಸ್ಪತ್ರೆಗೆ ದಾಖಲು Read More »

ಬಸ್ಸಿಗೆ ಡಿಕ್ಕಿ ಹೊಡೆದ ಕಾರು | ನಾಲ್ವರಿಗೆ ಗಾಯ

ನೆಲ್ಯಾಡಿ: ಕಾರೊಂದು ಕೆಎಸ್‍ ಆರ್ ಟಿಸಿ ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿಯಲ್ಲಿ ನಡೆದಿದೆ. ಕಾರಿನಲ್ಲಿದ್ದ ಮಹೇಶ್‍ (28), ಅಭಿಷೇಕ್‍ (30), ಮುತ್ತುರಾಜ್ (30), ಹಾಗೂ ನವೀನ್ (29) ಗಾಯಗೊಂಡವರು. ಮುಂಜಾನೆ 5.30ರ ಸುಮಾರಿಗೆ ಈ ಅಪಘಾತ ನಡೆದಿದ್ದು, ಗಾಯಗೊಂಡವರು ಬೆಂಗಳೂರಿನ ಬನಶಂಕರಿ ಲೇ ಔಟ್ ನಿವಾಸಿಗಳೆಂದು ತಿಳಿದು ಬಂದಿದೆ. ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ಸಿಗೆ ಡಿಕ್ಕಿ ಹೊಡೆದ ಕಾರು | ನಾಲ್ವರಿಗೆ ಗಾಯ Read More »

ಚಾರ್ವಾಕ ಕೃಷಿ ಪತ್ತಿನ ಸಹಕಾರ ಸಂಘ ಸಹಕಾರ ಭಾರತಿ ತೆಕ್ಕೆಗೆ

ಕಾಣಿಯೂರು: ಚಾರ್ವಾಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರಿ ಭಾರತಿ ಎಲ್ಲಾ 12 ಸ್ಥಾನಗಳಲ್ಲಿ ಜಯಭೇರಿ ಗಳಿಸಿದ್ದು, ಈ ಮೂಲಕ ಆಡಳಿತ ಸಹಕಾರಿ ಭಾರತಿ ತೆಕ್ಕೆಗೆ ಬಿದ್ದಿದೆ. ಭಾನುವಾರ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿಯ ಅನಂತ ಕುಮಾರ್, ಗಣೇಶ್ ಉದನಡ್ಕ, ಪರಮೇಶ್ವರ ಅನಿಲ, ಬಾಲಕೃಷ್ಣ ಇಡ್ಯಡ್ಕ, ಸುಂದರ, ವಿಶ್ವನಾಥ ದೇವಿನಗರ, ಲೋಕೇಶ್ ಆತಾಜೆ, ರತ್ನಾವತಿ, ರಮೇಶ್ ಉಪ್ಪಡ್ಕ, ವೀಣಾ ಅಂಬುಲ, ಶೀಲಾವತಿ ಮುಗರಂಜ ಹಾಗೂ ಸಾಲಗಾರರಲ್ಲದ ಕ್ಷೇತ್ರದಿಂದ ದಿವಾಕರ

ಚಾರ್ವಾಕ ಕೃಷಿ ಪತ್ತಿನ ಸಹಕಾರ ಸಂಘ ಸಹಕಾರ ಭಾರತಿ ತೆಕ್ಕೆಗೆ Read More »

ಖೋಟಾ ನೋಟು ಚಲಾವಣೆಗೆ ಯತ್ನ | ಆರೋಪಿ ಬಂಧನ

ಮಂಗಳೂರು : ಖೋಟಾ ನೋಟು ಚಲಾವಣೆ ಮಾಡಲು ಯತ್ನಿಸುತ್ತಿದ್ದ ಕೇರಳ ಮೂಲದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಕಂಕನಾಡಿ ಬಳಿ ಬಂಧಿಸಿದ್ದಾರೆ. ಮಂಜೇಶ್ವರದ ಆಬುಪಡ್ಡು ನಿವಾಸಿ ಪ್ರಶ್ಚಿತ್ (25) ಬಂಧಿತ ಆರೋಪಿ. ಆರೋಪಿ 500 ರೂ., 200 ರೂ., 100 ರೂ. ಮುಖಬೆಲೆಯ ಖೋಟಾ ನೋಟುಗಳನ್ನು ಚಲಾವಣೆ ಮಾಡಿದ್ದು, ಈವರೆಗೆ ಸುಮಾರು 8 ರಿಂದ 9 ಸಾವಿರ ರೂ. ಖೋಟಾ ನೋಟುಗಳನ್ನು ಚಲಾವಣೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆರೋಪಿಯಿಂದ 500 ರೂ. ಮುಖಬೆಲೆಯ 3 ನೋಟುಗಳು, 200

ಖೋಟಾ ನೋಟು ಚಲಾವಣೆಗೆ ಯತ್ನ | ಆರೋಪಿ ಬಂಧನ Read More »

ಡಿ.26: ಶಿಲಾನ್ಯಾಸ ಕಾರ್ಯಕ್ರಮ | ಯಶಸ್ಸಿಗೆ ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಪ್ರಾರ್ಥನೆ

ಕೆಮ್ಮಲೆ: ಡಿ.26 ರಂದು ನಡೆಯುವ ಕಡಬ ತಾಲೂಕು ಒಕ್ಕಲಿಗ ಗೌಡ ಸಮುದಾಯ ಭವನದ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನದ ಗರ್ಭಗುಡಿಯಲ್ಲಿ ಇಟ್ಟು ಪ್ರಾರ್ಥಿಸಲಾಯಿತು. ಪಂಚಮಿ ದಿನವಾದ ಭಾನುವಾರ ಶ್ರೀ ಕ್ಷೇತ್ರ ಕೆಮ್ಮಲೆಯಲ್ಲಿ ವಿಶೇಷ ದಿನವಾದ್ದರಿಂದ ಶಿಲಾನ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲಿ ಎಂದು ಅರ್ಚಕರು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಕಡಬ ತಾಲೂಕು ಒಕ್ಕಲಿಗ ಗೌಡ ಸಂಘದ ಪದಾಧಿಕಾರಿಗಳಾದ ಗೋಪಾಲಕೃಷ್ಣ ಐಪಳ, ನಾರಾಯಣ ಕೊರ್ಜೆ, ಕುಸುಮಾವತಿ ಕೊರ್ಜೆ, ಬಾಲಕೃಷ್ಣ ಹೇಮಳ, ವಸಂತ ಹೇಮಳ, ಅಶೋಕ

ಡಿ.26: ಶಿಲಾನ್ಯಾಸ ಕಾರ್ಯಕ್ರಮ | ಯಶಸ್ಸಿಗೆ ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಪ್ರಾರ್ಥನೆ Read More »

error: Content is protected !!
Scroll to Top