ಸಂಸತ್ ಭದ್ರತಾ ವೈಫಲ್ಯ | ಮತ್ತೋರ್ವ ಆರೋಪಿ ಬಂಧನ

ನವದೆಹಲಿ: ಸಂಸತ್ ಭವನದಲ್ಲಿ ನಡೆದಿದ್ದ ಭದ್ರತಾ ವೈಫಲ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿ ಮಹೇಶ್ ಕುಮಾವತ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ದೆಹಲಿಯ ಪಟಿಯಾಲ ಹೌಸ್‌ ಕೋರ್ಟ್‌ನ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಡಿ.14ರ ರಾತ್ರಿ ಲಲಿತ್ ಝಾ ಪೊಲೀಸರಿಗೆ ಶರಣಾಗಿದ್ದು, ಇದೇ ವೇಳೆ ಝಾ ಜೊತೆಗಿದ್ದ ಮಹೇಶ್ ಕುಮಾವತ್ ನನ್ನೂ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು. ರಾಜಸ್ಥಾನದಲ್ಲಿ ಝಾ ಅಡಗಿಕೊಳ್ಳಲು ಮಹೇಶ್ ನೆರವಾಗಿದ್ದರು ಎಂದು ಹೇಳಲಾಗಿದೆ. ವಿಚಾರಣೆಗೆ ಒಳಗಾಗಿರುವ ಮಹೇಶ್, ಸಂಸತ್ತಿನ ಭದ್ರತೆ ಉಲ್ಲಂಘಿಸಿದ ತಂಡದ […]

ಸಂಸತ್ ಭದ್ರತಾ ವೈಫಲ್ಯ | ಮತ್ತೋರ್ವ ಆರೋಪಿ ಬಂಧನ Read More »

ಅಪರಾಧ ಮಾಸಾಚರಣೆ  | ವಿವಿಧ ಸಂಘಟನೆಗಳ ಸಹಕಾರದಲ್ಲಿ ಜಾಗೃತಿ ಜಾಥಾ

ಪುತ್ತೂರು: ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಡಿಸೆಂಬರ್ ಮಾಹೆಯನ್ನು ಅಪರಾಧ ಮಾಸಾಚರಣೆಯನ್ನಾಗಿ ಮಾಡುತ್ತಿರುವ ನಿಟ್ಟಿನಲ್ಲಿ ದ.ಕ.ಜಿಲ್ಲಾ ಪೊಲೀಸ್ ಮತ್ತು ರೋಟರಿ ಕ್ಲಬ್ ಸಮೂಹ ಸಂಸ್ಥೆ, ಜೆಸಿಐ, ಲಯನ್ಸ್ ಕ್ಲಬ್‌ಗಳ ಸಹಯೋಗದೊಂದಿಗೆ ಪುತ್ತೂರು ನಗರ ಪೊಲೀಸ್ ಠಾಣೆ ವತಿಯಿಂದ ಅಪರಾಧ ಮಾಸಾಚರಣೆ ಅಂಗವಾಗಿ ಶನಿವಾರ ಪುತ್ತೂರಿನಲ್ಲಿ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಯಿತು. ಬೊಳುವಾರಿನಿಂದ ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ತನಕ ಜಾಗೃತಿ ಜಾಥಾ ನಡೆಯಿತು.ಪುತ್ತೂರು ನಗರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಸುನಿಲ್ ಕುಮಾರ್ ಅವರು ಅಪರಾಧ ತಡೆ

ಅಪರಾಧ ಮಾಸಾಚರಣೆ  | ವಿವಿಧ ಸಂಘಟನೆಗಳ ಸಹಕಾರದಲ್ಲಿ ಜಾಗೃತಿ ಜಾಥಾ Read More »

ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಗಡಿಪಾರು ನೋಟೀಸ್….!

ಪುತ್ತೂರು: ಪುತ್ತೂರಿನಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರ ಗಡಿಪಾರು ನೋಟೀಸ್‌ ಮತ್ತೆ ಮುಂದುವರಿದಿದೆ. ಇದೀಗ ಇನ್ನೋರ್ವ ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಗಡಿಪಾರು ನೋಟೀಸ್ ಜಾರಿ ಮಾಡಲಾಗಿದೆ. ನೆಟ್ಟಿಣಿಗೆ ಮುಡ್ನೂರು ನಿವಾಸಿ ಪ್ರವೀಶ್‌ ಕುಮಾರ್‌ ನಾಯರ್‌ ವಿರುದ್ದ ಪುತ್ತೂರು ಸಹಾಯಕ ಆಯುಕ್ತರು ಗಡಿಪಾರು ಏಕೆ ಮಾಡಬಾರದು ಎಂದು ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದಾರೆ. ಪ್ರಸ್ತುತ ಅಯ್ಯಪ್ಪ ಮಾಲಾಧಾರಿಯಾಗಿರುವ ಪ್ರವೀಶ್‌ ಕುಮಾರ್‌ ಹಿಂದೂ ಜಾಗರಣ ವೇದಿಕೆಯ ಸಕ್ರಿಯ ಕಾರ್ಯಕರ್ತನಾಗಿದ್ದು ಎರಡು ಪ್ರಕರಣದಲ್ಲಿ  ಆರೋಪಿಯಾಗಿದ್ದಾನೆ. ಡಿ.20 ರಂದು ಪುತ್ತೂರು ಸಹಾಯಕ ಆಯುಕ್ತರ

ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಗಡಿಪಾರು ನೋಟೀಸ್….! Read More »

ಬೈಕ್‍-ರಿಕ್ಷಾ ಡಿಕ್ಕಿ : ಈಜು ತಜ್ಞರೊಬ್ಬರಿಗೆ ಗಂಭೀರ ಗಾಯ

ಬೆಳ್ತಂಗಡಿ: ರಿಕ್ಷಾ-ಬೈಕ್‍ ಡಿಕ್ಕಿ ಹೊಡೆದ ಪರಿಣಾಮ ಬಂದಾರಿನ ಈಜು ತಜ್ಞ ಮುಹಮ್ಮದ್ ಓಟೆಚ್ಚಾರು ಬಟ್ಲಡ್ಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಗಾಯಾಳು ಮುಹಮ್ಮದ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ರಿಕ್ಷಾ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಬೈಕ್‍-ರಿಕ್ಷಾ ಡಿಕ್ಕಿ : ಈಜು ತಜ್ಞರೊಬ್ಬರಿಗೆ ಗಂಭೀರ ಗಾಯ Read More »

ಕಾರು ಡಿಕ್ಕಿಯಾಗಿ ವಿಕಲಚೇತನರೊಬ್ಬರು ಮೃತ್ಯು !

ಕಡಬ: ರಸ್ತೆ ದಾಟುತ್ತಿದ್ದ ವಿಕಲಚೇತನರೊಬ್ಬರ ಮೇಲೆ ಕಾರೊಂದು ಹರಿದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಕಡಬದ ಮುಖ್ಯ ರಸ್ತೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಕಡಬದ ಅಂಗಡಿ ಮನೆ ನಿವಾಸಿ ಧರ್ನಪ್ಪ ಮೃತರ ವಿಕಲಚೇತನರಾಗಿದ್ದಾರೆ. ಶುಕ್ರವಾರ ಸಾಯಂಕಾಲ ರಸ್ತೆ ದಾಟಲು ಯತ್ನಿಸುತ್ತಿದ್ದಾಗ ಮಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ತಲೆ ಹಾಗೂ ಕಾಲಿಗೆ ಗಂಭೀರ ಗಾಯವಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಕಾರು ಡಿಕ್ಕಿಯಾಗಿ ವಿಕಲಚೇತನರೊಬ್ಬರು ಮೃತ್ಯು ! Read More »

ವೀರಪ್ಪನ್‌ ಸಹಚರ ಜ್ಞಾನಪ್ರಕಾಶ್‌ ನಿಧನ | ಬಾಂಬ್‌ ಸ್ಪೋಟ ಪ್ರಕರಣದಲ್ಲಿ 29 ವರ್ಷ ಜೈಲಿನಲ್ಲಿದ್ದ ಆರೋಪಿ

ಪಾಲಾರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿ ಅನಾರೋಗ್ಯದ ಕಾರಣಕ್ಕೆ ಜಾಮೀನು ಪಡೆದು ಜೈಲಿನಿಂದ ಹೊರ ಬಂದ, ವೀರಪ್ಪನ್ ಸಹಚರ ಜ್ಞಾನಪ್ರಕಾಶ್ (69) ಕೊನೆಯುಸಿರೆಳೆದಿದ್ದಾರೆ. 1993ರಲ್ಲಿ ನಡೆದಿದ್ದ ಪಾಲಾರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಕಾಡುಗಳ್ಳ ವೀರಪ್ಪನ್, ಬಿಲವೇಂದ್ರನ್ ಸೈಮನ್, ಮೀಸೆಕಾರ ಮಾದಯ್ಯ ಅವರೊಂದಿಗೆ ಭಾಗಿಯಾಗಿದ್ದ ಆರೋಪದ ಮೇಲೆ ಮೈಸೂರಿನ ಟಾಡಾ ನ್ಯಾಯಾಲಯ 1997ರಲ್ಲಿ ಜ್ಞಾನಪ್ರಕಾಶ್‌ ಗೆ ಗಲ್ಲು ಶಿಕ್ಷೆ ವಿಧಿಸಿತ್ತು. 2014ರಲ್ಲಿ ಸುಪ್ರಿಂ ಕೋರ್ಟ್ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಿ ಆದೇಶಿಸಿತ್ತು. ಈ ವೇಳೆ

ವೀರಪ್ಪನ್‌ ಸಹಚರ ಜ್ಞಾನಪ್ರಕಾಶ್‌ ನಿಧನ | ಬಾಂಬ್‌ ಸ್ಪೋಟ ಪ್ರಕರಣದಲ್ಲಿ 29 ವರ್ಷ ಜೈಲಿನಲ್ಲಿದ್ದ ಆರೋಪಿ Read More »

ಕಾರು-ಸ್ಕೂಟರ್ ಡಿಕ್ಕಿ | ವಿದ್ಯಾರ್ಥಿ ಮೃತ್ಯು

ಕಡಬ: ಕಾರು ಮತ್ತು ಸ್ಕೂಟ‌ರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಶಾಲಾ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ಕಡಬ ತಾಲೂಕಿನ ಕಳಾರದಲ್ಲಿ ನಡೆದಿದೆ. ಕಳಾರದಲ್ಲಿ ವಾಸವಿರುವ ಚಂದ್ರಶೇಖರ ಎಂಬವರ ಪುತ್ರ ಸರಸ್ವತಿ ಶಾಲಾ ಎಂಟನೇ ತರಗತಿ ವಿದ್ಯಾರ್ಥಿ ಬಿಪಿನ್ ಮೃತಪಟ್ಟ ಬಾಲಕ. ಮೃತ ಬಾಲಕನ ತಂದೆ ಹಾಗೂ ತಂಗಿ ಗಂಭೀರ ಗಾಯಗೊಂಡಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ತಮ್ಮ ನಿವಾಸದಿಂದ ಸುಮಾರು ನೂರು ಮೀಟರ್ ಅಂತರದಲ್ಲಿ ಈ ಅಪಘಾತ ನಡೆದಿದ್ದು, ಸರಸ್ವತಿ ಶಾಲೆಯಲ್ಲಿ ನಡೆದಿದ್ದ ಕ್ರೀಡೋತ್ಸವ

ಕಾರು-ಸ್ಕೂಟರ್ ಡಿಕ್ಕಿ | ವಿದ್ಯಾರ್ಥಿ ಮೃತ್ಯು Read More »

ರೈತರ ಬೆಳೆಸಾಲ ಬಡ್ಡಿ ಮನ್ನಾ | ಬೆಳಗಾವಿ ಅಧಿವೇಶನದಲ್ಲಿ ಸಿಎಂ ಘೋಷಣೆ

ಬೆಳಗಾವಿ: ಕೃಷಿ ಸಾಲವನ್ನು ಪಡಕೊಂಡು ಅಸಲನ್ನು ಮರುಪಾವತಿ ಮಾಡುವವರಿಗೆ ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಬೆಳಗಾವಿಯಲ್ಲಿ ನಡೆದ ಚಳಿಗಾಲದ ವಿಧಾನಸಭೆ ಅಧಿವೇಶನದ ಕೊನೆಯ ದಿನವಾದ ಶುಕ್ರವಾರ ಕಲಾಪದಲ್ಲಿ ಉತ್ತರ ಕರ್ನಾಟಕ ಭಾಗದ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಈ ವಿಚಾರ ತಿಳಿಸಿದರು. ರೈತರ ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡುತ್ತೇವೆ ಎಂದು ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿರಲಿಲ್ಲ. ಆದರೂ ಮಾಡುತ್ತೇವೆ. ಬರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸಹಕಾರ ಸಂಘಗಳು ಮತ್ತು ಬ್ಯಾಂಕ್‌ಗಳಲ್ಲಿ ರೈತರು ಪಡೆದಿರುವ

ರೈತರ ಬೆಳೆಸಾಲ ಬಡ್ಡಿ ಮನ್ನಾ | ಬೆಳಗಾವಿ ಅಧಿವೇಶನದಲ್ಲಿ ಸಿಎಂ ಘೋಷಣೆ Read More »

ವಾಹನ ಚಾಲನೆ ವೇಳೆ ಎದೆನೋವು ಕಾಣಿಸಿಕೊಂಡು ಚಾಲಕ ಮೃತ್ಯು !

ಸುಳ್ಯ: ಪಿಕಪ್ ವಾಹನ ಚಾಲನೆ ಸಂದರ್ಭ ಚಾಲಕರೊಬ್ಬರಿಗೆ ಎದೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟ ಘಟನೆ ಸುಳ್ಯ ಪೈಚಾರಿನಲ್ಲಿ ನಡೆದಿದೆ. ಗದಗ ತಾಲೂಕು ಹೊಸೂರು ಗ್ರಾಮದ ಹುಸೇನಸಾಬ ಹೆಬಸುರ (45) ಮೃತಪಟ್ಟವರು. ಬೆಳ್ತಂಗಡಿಯಲ್ಲಿ ಶಾಮಿಯಾನ ಅಂಗಡಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅವರು ಮಡಿಕೇರಿಯಲ್ಲಿ ಕಾರ್ಯಕ್ರಮವೊಂದಕ್ಕೆ ಅಳವಡಿಸಲಾಗಿದ್ದ ಶಾಮಿಯಾನವನ್ನು ತರಲೆಂದು ಮಡಿಕೇರಿಗೆ ಗುರುವಾರ ರಾತ್ರಿ ಹೊರಟ್ಟಿದ್ದರು. ವಾಹನ ಸುಳ್ಯದ ಪೈಚಾರು ಸಮೀಪ ಬರುತ್ತಿದ್ದಂತೆ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದ್ದು ಅಲ್ಲೇ ಬದಿಯಲ್ಲಿ ವಾಹನವನ್ನು ನಿಲ್ಲಿಸಿ ಬಳಿಯಲ್ಲಿ ಕುಳಿತಿದ್ದ ವ್ಯಕ್ತಿಗೆ

ವಾಹನ ಚಾಲನೆ ವೇಳೆ ಎದೆನೋವು ಕಾಣಿಸಿಕೊಂಡು ಚಾಲಕ ಮೃತ್ಯು ! Read More »

ತಲೆಮರೆಸಿಕೊಂಡಿದ್ದ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳಿಗೆ ಶೋಧ | ಮಾಹಿತಿ ಇದ್ದಲ್ಲಿ ತಿಳಿಸುವಂತೆ ಎನ್‍ಐಎ ಮನವಿ

ಸುಳ್ಯ: ಬೆಳ್ಳಾರೆ ಪ್ರವೀಣ್‍ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸಿ ತಲೆ ಮರೆಸಿಕೊಂಡಿದ್ದ ಐವರು ಆರೋಪಿಗಳು ಪತ್ತೆಯಾದಲ್ಲಿ ಮಾಹಿತಿ ನೀಡುವಂತೆ ಎನ್‍ಐಎ ಮನವಿ ಮಾಡಿದೆ. ಆರೋಪಿಗಳಾದ ಎಂ.ಡಿ.ಮುಸ್ತಫ, ಮಸೂದ್ ಅಗ್ನಾಡಿ, ಮಸೂದ್ ಕೆ.ಎ, ಮೊಹಮ್ಮದ್ ಶರೀಫ್ ಕೊಡಾಜೆ, ಉಮ್ಮರ್ ಆರ್. ಉಮ್ಮರ್ ಫಾರೂಕ್, ಅಬೂಬಕ್ಕರ್ ಸಿದ್ದಿಕ್ ರಾಷ್ಟ್ರೀಯ ತನಿಖಾ ತಂಡದ ವಾಂಟೆಡ್ ಲಿಸ್ಟ್ ಪಟ್ಟಿಯಲ್ಲಿದ್ದಾರೆ. ಆರೋಪಿಗಳು ಕಂಡು ಬಂದಲ್ಲಿ, ಇರುವಿಕೆ ಕುರಿತು ಮಾಹಿತಿ ಇದ್ದಲ್ಲಿ ವಾಟ್ಸಾಪ್ ಸಂಖ್ಯೆ 9497715294 ಸಂಪರ್ಕಿಸುವಂತೆ ಸಾರ್ವಜನಿಕರನ್ನು ಎನ್ಐಎ ವಿನಂತಿಸಿದೆ. ಮಾಹಿತಿ ನೀಡಿದವರಿಗೆ ಸೂಕ್ತ

ತಲೆಮರೆಸಿಕೊಂಡಿದ್ದ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳಿಗೆ ಶೋಧ | ಮಾಹಿತಿ ಇದ್ದಲ್ಲಿ ತಿಳಿಸುವಂತೆ ಎನ್‍ಐಎ ಮನವಿ Read More »

error: Content is protected !!
Scroll to Top