ತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ

ತೆಲಂಗಾಣ: ತೆಲಂಗಾಣ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಟಿಪಿಸಿಸಿ ಅಧ್ಯಕ್ಷ, ಕೊಡಂಗಲ್ ಶಾಸಕ ರೇವಂತ್ ರೆಡ್ಡಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಹೈದರಾಬಾದ್‌ನ ಲಾಲ್‌ ಬಹದ್ದೂರ್ ಶಾಸ್ತ್ರಿ ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಪ್ರಮಾಣ ವಚನ ಬೋಧಿಸಿದರು. ರೇವಂತ್ ರೆಡ್ಡಿ ಜೊತೆ ಉಪಮುಖ್ಯಮಂತ್ರಿಯಾಗಿ ಮಧಿರ ಶಾಸಕ ಹಾಗೂ ದಲಿತ ನಾಯಕ ಭಟ್ಟಿ ವಿಕ್ರಮಾರ್ಕ ಮಲ್ಲು ಪದಗ್ರಹಣ ಮಾಡಿದರು. ಟಿಪಿಸಿಸಿ ಮಾಜಿ ಅಧ್ಯಕ್ಷ, ಎನ್. ಉತ್ತಮ್ ಕುಮಾರ್ ರೆಡ್ಡಿ, ಶಾಸಕರಾದ ಶ್ರೀಧರ್ ಬಾಬು, ಪೊನ್ನಂ ಪ್ರಭಾಕರ್, ಕೋಮಟಿರೆಡ್ಡಿ […]

ತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ Read More »

ಅಕ್ರಮ ಕೃಷಿ ಪಂಪ್‍ಸೆಟ್‍ ಸಕ್ರಮಕ್ಕೆ ಮುಂದಾದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿರುವ 4 ಲಕ್ಷ ಅಕ್ರಮ ಕೃಷಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಲು ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇಂಧನ ಸಚಿವ ಕೆ.ಜೆ.ಜಾರ್ಜ್‍ ಈ ಬಗ್ಗೆ ಮಾಹಿತಿ ನೀಡಿ, ರಾಜ್ಯದಲ್ಲಿರುವ 4 ಲಕ್ಷ ಅಕ್ರಮ ಕೃಷಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಈ ನಡುವೆ ಶ್ರವಣ, ದೃಷ್ಟಿ ದೋಷ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿರುವ ಮಕ್ಕಳ ವಸತಿ ಶಾಲೆಗಳಿಗೆ ನಿಯಮದಂತೆ ತಮ್ಮ ಕ್ಷೇತ್ರಾಭಿವೃದ್ಧಿ ನಿಧಿಯ ಶೇ 15ರಷ್ಟು ವಿನಿಯೋಗಿಸಲು ವಿಧಾನ ಪರಿಷತ್‌ನ ಎಲ್ಲ ಸದಸ್ಯರು ಸಮ್ಮತಿಸಿದ್ದಾರೆ ಎಂದು ತಿಳಿಸಿದ್ದಾರೆ. ಈ

ಅಕ್ರಮ ಕೃಷಿ ಪಂಪ್‍ಸೆಟ್‍ ಸಕ್ರಮಕ್ಕೆ ಮುಂದಾದ ರಾಜ್ಯ ಸರಕಾರ Read More »

ಬೆಳಗಾವಿ ಸುವರ್ಣ ಸೌಧದ ಎದುರು ಗಿಡ ನೆಟ್ಟ ಶಾಸಕ ಅಶೋಕ್ ರೈ

ಪುತ್ತೂರು: ವಿಧಾನ ಸಭಾ ಅಧಿವೇಶನ ನಡೆಯುತ್ತಿರುವ ಬೆಳಗಾವಿ ಸುವರ್ಣ ಸೌಧದ ಮುಂಭಾಗದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಗಿಡ ನೆಡುವ ಮೂಲಕ ಬೆಳಗಾವಿಯ ಅಧಿವೇಶನದ ಸವಿನೆನಪಿನ ಗುರುತು ಮಾಡಿದರು. ಹಲಸಿನ ಗಿಡವನ್ನು ಶಾಸಕರು ನೆಡುವ ಮೂಲಕ ತನ್ನ ಪರಿಸರ  ಪ್ರೇಮ ಮೆರೆದರು. ಪುತ್ತೂರಿನ ರಸ್ತೆ ಬದಿಗಳಲ್ಲಿ ಕಾಟು ಮಾವಿನ ಗಿಡ ನೆಡುವ ಮೂಲಕ ಸುದ್ದಿಯಾಗಿದ್ದ ಶಾಸಕರು ಬೆಳಗಾವಿಯಲ್ಲಿ ಹಲಸಿನ ಗಿಡ ನೆಡುವ ಮೂಲಕ ಎರಡನೇ ಬಾರಿಗೆ ಸುದ್ದಿಯಾದರು.

ಬೆಳಗಾವಿ ಸುವರ್ಣ ಸೌಧದ ಎದುರು ಗಿಡ ನೆಟ್ಟ ಶಾಸಕ ಅಶೋಕ್ ರೈ Read More »

ಖಾಸಗಿ ಬಸ್ ಡಿಕ್ಕಿ : ಸ್ಕೂಟರ್ ಸವಾರ ಮೃತ್ಯು

ಬಂಟ್ವಾಳ: ಸ್ಕೂಟರ್ ಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಪಲ್ಲಮಜಲು ಕ್ರಾಸ್ ನಲ್ಲಿ ನಡೆದಿದೆ. ಸ್ಕೂಟರ್ ಸವಾರ ನಾರಾಯಣ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಪಲ್ಲಮಜಲು ಕ್ರಾಸ್ ಈ ಅಪಘಾತ ಸಂಭವಿಸಿದ್ದು. ಸ್ಕೂಟರ್ ಸವಾರ ನಾರಾಯಣ ಅವರು ರಸ್ತೆಗೆ ಎಸೆಯಲ್ಪಟು ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ವೈದ್ಯರು ಪರೀಕ್ಷಿಸಿ

ಖಾಸಗಿ ಬಸ್ ಡಿಕ್ಕಿ : ಸ್ಕೂಟರ್ ಸವಾರ ಮೃತ್ಯು Read More »

ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು

ನೆಲ್ಯಾಡಿ: ಇನ್ನೋವಾ ಕಾರೊಂದು ರಸ್ತೆ ಮಧ್ಯ ಭಾಗದ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ  ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಉದನೆಯಲ್ಲಿ ಗುರುವಾರ ಮುಂಜಾನೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಇನ್ನೋವಾ ಕಾರು ಚಾಲಕನ ನಿದ್ರೆಯ ಮಂಪರಿನಿಂದ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ಕಾರಿನಲ್ಲಿದ್ದ ಮೂವರು ಪ್ರಯಾಣಿಕ ಪೈಕಿ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಶಿರಾಡಿ 108 ಅಂಬುಲೆನ್ಸ್ ನಲ್ಲಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು Read More »

ನೇಣು ಬಿಗಿದು ವೃದ್ಧ ಆತ್ಮಹತ್ಯೆ !

ಪುತ್ತೂರು : ನೆಟ್ಟಣಿಗೆ ಮುಡ್ನೂರು ಗ್ರಾಮದ ಪುಳಿಮಾರಡ್ಕದಲ್ಲಿ 80 ವರ್ಷದ ವೃದ್ಧರೊಬ್ಬರು ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನೆಟ್ಟಣಿಗೆ ಮುಡ್ನೂರು ಗ್ರಾಮದ ಪುಳಿಮಾರಡ್ಕ ನಿವಾಸಿ ಮಾಲಿಂಗ ನಾಯ್ಕ(80) ಆತ್ಮಹತ್ಯೆ ಮಾಡಿಕೊಂಡವರು. ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಡಿ.5 ರಂದು ಅವರು ಮನೆಯ ಸಮೀಪದ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯ ಕುರಿತು ಮೃತರ ಪುತ್ರಿ ಭಾಗಿ ಅವರು ನೀಡಿದ ದೂರಿನಂತೆ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನೇಣು ಬಿಗಿದು ವೃದ್ಧ ಆತ್ಮಹತ್ಯೆ ! Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾಷಷ್ಠಿ ಜಾತ್ರೋತ್ಸವಕ್ಕೆ ಭರದ ಸಿದ್ಧತೆ | ಲಕ್ಷ ದೀಪೋತ್ಸವದಂದು ಲಕ್ಷ ಹಣತೆಗಳ ಸಾಲು. 

ಸುಬ್ರಹ್ಮಣ್ಯ,: ಕುಕ್ಕೆಶ್ರೀ ಸುಬ್ರಹ್ಮಣ್ಯದಲ್ಲಿ ವಾರ್ಷಿಕ ಚಂಪಾ ಷಷ್ಟಿ ಮಹೋತ್ಸವದ ಅಂಗವಾಗಿ ಡಿ.9 ಶನಿವಾರ ಮೂಲಮೃತಿಕ ಪ್ರಸಾದ ತೆಗೆದು ವಿತರಣೆ ಆಗುವುದರೊಂದಿಗೆ  ಆರಂಭಗೊಳ್ಳಲಿದ್ದು, ಡಿ.24 ರಂದು ಕೊಪ್ಪರಿಗೆ ಇಳಿಯುವ ಮೂಲಕ ರಾತ್ರಿ ನೀರು ಬಂಡಿ ಉತ್ಸವ ಹಾಗೂ ದೈವಗಳ ನಡಾವಳಿ ನಡೆದು ಜಾತ್ರೆ ಸಂಪನ್ನಗೊಳ್ಳಲಿದೆ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ ತಿಳಿಸಿದ್ದಾರೆ. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿ ಜಾತ್ರೋತ್ಸವಕ್ಕೆ ಹೊರೆ ಕಾಣಿಕೆಸಲ್ಲಿಸುವ ಬಗ್ಗೆ ಸುಳ್ಯ, ಪುತ್ತೂರು ಹಾಗೂ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾಷಷ್ಠಿ ಜಾತ್ರೋತ್ಸವಕ್ಕೆ ಭರದ ಸಿದ್ಧತೆ | ಲಕ್ಷ ದೀಪೋತ್ಸವದಂದು ಲಕ್ಷ ಹಣತೆಗಳ ಸಾಲು.  Read More »

ಖಾಸಗಿ ಬಸ್ ಸೇವಾ ವ್ಯವಸ್ಥೆಯು ನಷ್ಟದ ಅಂಚಿನಲ್ಲಿದೆ | ದ.ಕ. ಜಿಲ್ಲಾ ಸಿಟಿ ಬಸ್ಸು ಮಾಲಕರ ಸಂಘದ ಜತೆಗಿನ ಸಂವಾದ ಕಾರ್ಯಕ್ರಮದಲ್ಲಿ ಪದಾಧಿಕಾರಿಗಳ ಅಳಲು

ಮಂಗಳೂರು: 110 ವರ್ಷಗಳ ಇತಿಹಾಸವನ್ನು ಹೊಂದಿರುವ ದ.ಕ. ಜಿಲ್ಲೆಯಲ್ಲಿ ಖಾಸಗಿ ಬಸ್ಸು ಸೇವಾ ವ್ಯವಸ್ಥೆಯು ಪ್ರಸ್ತುತ ನಷ್ಟದ ಅಂಚಿನಲ್ಲಿದ್ದು, ತೆರಿಗೆಯಲ್ಲಿ ರಿಯಾಯಿತಿ, ಸಬ್ಸಿಡಿಯ ಮೂಲಕ ಸರಕಾರ ಪೂರಕವಾಗಿ ಸ್ಪಂದಿಸದಿದ್ದರೆ ಈ ವ್ಯವಸ್ಥೆ ಪತನಗೊಳ್ಳಲಿದೆ ಎಂಬ ಆತಂಕವನ್ನು ದ.ಕ. ಜಿಲ್ಲಾ ಖಾಸಗಿ ಬಸ್ ಮಾಲಕರ ಸಂಘ ವ್ಯಕ್ತಪಡಿಸಿದೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರೆಸ್‌ಕ್ಲಬ್‌ನಲ್ಲಿ ದ.ಕ. ಜಿಲ್ಲಾ ಸಿಟಿ ಬಸ್ಸು ಮಾಲಕರ ಸಂಘದ ಜತೆಗಿನ ಸಂವಾದ ಕಾರ್ಯಕ್ರಮದಲ್ಲಿ ಪದಾಧಿಕಾರಿಗಳು ಈ ಅಭಿಪ್ರಾಯ ವ್ಯಕ್ತಪಡಿಸಿದರು. ಸಂಘದ ಅಧ್ಯಕ್ಷ

ಖಾಸಗಿ ಬಸ್ ಸೇವಾ ವ್ಯವಸ್ಥೆಯು ನಷ್ಟದ ಅಂಚಿನಲ್ಲಿದೆ | ದ.ಕ. ಜಿಲ್ಲಾ ಸಿಟಿ ಬಸ್ಸು ಮಾಲಕರ ಸಂಘದ ಜತೆಗಿನ ಸಂವಾದ ಕಾರ್ಯಕ್ರಮದಲ್ಲಿ ಪದಾಧಿಕಾರಿಗಳ ಅಳಲು Read More »

ರಮಾನಾಥ ಬೈಲಾಡಿ ನಿಧನ

ಪುತ್ತೂರು: ಬ್ಯಾಂಕ್ ಆಫ್ ಬರೋಡಾದ ನಿವೃತ್ತ ಸಿಬ್ಬಂದಿ, ಸಂಪ್ಯದ ಬೈಲಾಡಿ ನಿವಾಸಿ ರಮಾನಾಥ ಬೈಲಾಡಿ (61) ಬುಧವಾರ ವಿಷ ಪದಾರ್ಥ ಸೇವಿಸಿ ಸಾವನ್ನಪ್ಪಿದ್ದಾರೆ. ಬೆಳಿಗ್ಗೆ ಮನೆಯಲ್ಲಿ ಯಾವುದೋ ವಿಷ ಪದಾರ್ಥ ಸೇವಿಸಿ ಅಸ್ವಸ್ಥರಾದವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರರು ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ರಮಾನಾಥ ಬೈಲಾಡಿ ನಿಧನ Read More »

ಅಡಿಕೆ ಮರ ಬಿದ್ದು ಮಹಿಳೆ ಮೃತ್ಯು !

ವಿಟ್ಲ: ಅಡಿಕೆ ಮರ ಮುರಿದು ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸಾಲೆತ್ತೂರಿನಲ್ಲಿ ಬುಧವಾರ ನಡೆದಿದೆ. ಗುಲಾಬಿ (48) ಮೃತಪಟ್ಟವರು. ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಮರ ಮುರಿದು ಗುಲಾಬಿ ಅವರ ಮೇಲೆ ಬಿದ್ದಿದೆ. ಪರಿಣಾಮ ತಲೆಗೆ ತೀವ್ರ ಗಾಯವಾಗಿದ್ದು, ತಕ್ಷಣ ಅವರನ್ನು ವಿಟ್ಲ ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುವ ವೇಳೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಅಡಿಕೆ ಮರ ಬಿದ್ದು ಮಹಿಳೆ ಮೃತ್ಯು ! Read More »

error: Content is protected !!
Scroll to Top