ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಕೆದಿಲ ‘ಬಿ’ ಕಾರ್ಯಕ್ಷೇತ್ರದ ಒಕ್ಕೂಟೋತ್ಸವ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ, ಪೆರ್ನೆ ವಲಯದ ಕೆದಿಲ ‘ಬಿ’ ಕಾರ್ಯಕ್ಷೇತ್ರದ ಒಕ್ಕೂಟೋತ್ಸವ ಕಾರ್ಯಕ್ರಮವನ್ನು ಕೆದಿಲ ಶ್ರೀ ದೇವಿ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೀನಾಕ್ಷಿ ಕೊಳಚಪ್ಪು (ಒಕ್ಕೂಟದ ಅಧ್ಯಕ್ಷರು) ವಹಿಸಿದ್ದರು. ಜೆ. ಕೃಷ್ಣ ಭಟ್ ಮೀರಾವನ (ಶ್ರೀ ಉಳ್ಳಾಕ್ಲು ಧೂಮಾವತಿ ಮಲರಾಯ ದೈವಸ್ಥಾನದ ಆಡಳಿತ ಮೊಕ್ತೇಸರರು) ಅವರು ಉದ್ಘಾಟನೆ ನೆರವೇರಿಸಿ ಮಾತನಾಡಿ, ಶ್ರೀ ಕ್ಷೇತ್ರವು ಲಕ್ಷಾಂತರ ಬಡಕುಟುಂಬಗಳಿಗೆ ಬೆಳಕಾಗಿದ್ದು ಸಂಘಗಳ ಸದಸ್ಯರು ಯೋಜನೆಯ […]

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಕೆದಿಲ ‘ಬಿ’ ಕಾರ್ಯಕ್ಷೇತ್ರದ ಒಕ್ಕೂಟೋತ್ಸವ Read More »

ಏಳನೇ ದಿನವೂ ಮುಂದುವರಿದ ಇಂಡಿಗೋ ಬಿಕ್ಕಟ್ಟು : ನೂರಾರು ವಿಮಾನಗಳು ರದ್ದು

ಕಾದಿರಿಸಿದ ಟಿಕೆಟ್‌ಗಳ ಹಣ ಮರು ಪಾವತಿ ಬೆಂಗಳೂರು: ಇಂಡಿಗೋ ವಿಮಾನಗಳ ಬಿಕ್ಕಟ್ಟು ಸೋಮವಾರ ಸತತ ಏಳನೇ ದಿನಕ್ಕೆ ಕಾಲಿಟಿದ್ದು, ವಿಮಾನಯಾನ ಸಂಸ್ಥೆ ರಾಜಧಾನಿ ಬೆಂಗಳೂರಿನಲ್ಲಿ 127 ವಿಮಾನಗಳ ಹಾರಾಟ ರದ್ದುಗೊಳಿಸಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಬೇಕಿದ್ದ 65 ವಿಮಾನಗಳು ಮತ್ತು ನಿರ್ಗಮಿಸಬೇಕಿದ್ದ 62 ವಿಮಾನಗಳ ಹಾರಾಟವನ್ನು ರದ್ದುಗೊಳಿಸಿದೆ. ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇದುವರೆಗೆ 77 ಇಂಡಿಗೋ ವಿಮಾನಗಳ ಮೇಲೆ ಪರಿಣಾಮ ಬೀರಿದೆ ಎಂದು ವರದಿಯಾಗಿದೆ. 38 ಆಗಮನ ಮತ್ತು 39 ನಿರ್ಗಮನ

ಏಳನೇ ದಿನವೂ ಮುಂದುವರಿದ ಇಂಡಿಗೋ ಬಿಕ್ಕಟ್ಟು : ನೂರಾರು ವಿಮಾನಗಳು ರದ್ದು Read More »

ಜೈಲಿನಲ್ಲಿ ಸಹಕೈದಿಗಳೊಂದಿಗೆ ದರ್ಶನ್‌ ಜಗಳ?

ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಹಕೈದಿಗಳಿಗೆ ಟಾರ್ಚರ್‌ ನೀಡುತ್ತಿರುವ ಆರೋಪ ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಬಂಧನಕ್ಕೆ ಒಳಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ನಟ ದರ್ಶನ್‌ ಸಹ ಕೈದಿಗಳ ಜಗಳವಾಡಿ ಸಮಸ್ಯೆ ಸೃಷ್ಟಿಸುತ್ತಿದ್ದಾನೆ ಎಂಬ ದೂರು ಕೇಳಿಬಂದಿದೆ. ದರ್ಶನ್ ಈ ಬಾರಿ ಜೈಲು ಸೇರಿದಾಗಿನಿಂದಲೂ ಕಠಿಣ ನಿಯಮ ಜಾರಿಯಲ್ಲಿದೆ. ಅಲ್ಲದೆ, ಇತ್ತೀಚೆಗೆ ಜೈಲಿನ ಪಾರ್ಟಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಲ್ಲವೂ ಬದಲಾಗಿದೆ. ಐಪಿಎಸ್ ಅಧಿಕಾರಿ ಅಂಶು ಕುಮಾರ್ ಜೈಲಿನ ಮುಖ್ಯ ಸೂಪರಿಂಟೆಂಡೆಂಟ್ ಆಗಿ ನೇಮಕಗೊಂಡಿದ್ದು, ಜೈಲಿನಲ್ಲಿ

ಜೈಲಿನಲ್ಲಿ ಸಹಕೈದಿಗಳೊಂದಿಗೆ ದರ್ಶನ್‌ ಜಗಳ? Read More »

ಇಂದಿನಿಂದ ಚಳಿಗಾಲದ ಅಧಿವೇಶನ : ಇಡೀ ಸರ್ಕಾರ ಬೆಳಗಾವಿಗೆ ಶಿಫ್ಟ್‌

20 ಸಾವಿರ ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಸಿದ್ಧತೆ ಬೆಳಗಾವಿ : ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಇಂದು ಆರಂಭವಾಗುತ್ತಿದೆ. ರೈತರ ಸಮಸ್ಯೆಗಳು, ಉತ್ತರ ಕರ್ನಾಟಕ ಅಭಿವೃದ್ಧಿ ನಿರ್ಲಕ್ಷ್ಯದ ಆರೋಪಗಳೊಂದಿಗೆ ವಿಪಕ್ಷಗಳು ಸರ್ಕಾರವನ್ನು ಕಟ್ಟಿಹಾಕಲು ಸಜ್ಜಾಗಿವೆ. ಸರಣಿ ಸಮಸ್ಯೆಗಳನ್ನು ಮುಂದಿಟ್ಟು ಸರ್ಕಾರವನ್ನ ಕಟ್ಟಿಹಾಕಲು ವಿಪಕ್ಷಗಳು ಸಜ್ಜುಗೊಂಡಿವೆ. ಪ್ರತಿಪಕ್ಷಗಳಿಗೆ ಕೌಂಟರ್ ಕೊಡಲು ಕಾಂಗ್ರೆಸ್‌ ನಾಯಕರು ಸಿದ್ಧತೆ ಮಾಡಿಕೊಂಡಿದ್ದಾರೆ. ಇಡೀ ಸರ್ಕಾರ ಬೆಳಗಾವಿಗೆ ಶಿಫ್ಟ್‌ ಆಗಿದ್ದು, ಇನ್ನು ಹತ್ತು ದಿನ ರಣರೋಚಕ ಸನ್ನಿವೇಶಗಳಿಗೆ ಸದನ ಸಾಕ್ಷಿಯಾಗಲಿದೆ. ಮೊದಲ

ಇಂದಿನಿಂದ ಚಳಿಗಾಲದ ಅಧಿವೇಶನ : ಇಡೀ ಸರ್ಕಾರ ಬೆಳಗಾವಿಗೆ ಶಿಫ್ಟ್‌ Read More »

ಬಾಲಕನಿಗೆ ಲೈಂಗಿಕ ಕಿರುಕುಳ : ಅಂಗಡಿ ಮಾಲಕನ ವಿರುದ್ಧ ಪೋಕ್ಸೊ ಕೇಸ್‌

ಚಾಕಲೇಟ್‌ ಖರೀದಿಸಲು ಬಂದಿದ್ದ ಬಾಲಕನ ಕೈಕಾಲು ಕಟ್ಟಿ ಹಾಕಿ ಕಿರುಕುಳ ಮಂಗಳೂರು : ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಅಂಗಡಿ ಮಾಲಕನೊಬ್ಬನನ್ನು ಪೋಕ್ಸೊ ಕಾಯ್ದೆಯಡಿ ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಚೊಕ್ಕಬೆಟ್ಟು ನಿವಾಸಿ ಅಬ್ದುಲ್ ಇಸ್ಮಾಯೀಲ್ ಬಂಧಿತ ಆರೋಪಿ. ಚೊಕ್ಕಬೆಟ್ಟು ಪೇಟೆಯಲ್ಲಿ ಹನಿ ಫ್ಯಾಶನ್ ಮತ್ತು ಜನರಲ್ ಸ್ಟೋರ್ ಎಂಬ ಅಂಗಡಿಯ ಮಾಲಕನಾಗಿರುವ ಆರೋಪಿ ಇಸ್ಮಾಯೀಲ್ ತನ್ನ ಅಂಗಡಿಗೆ ಚಾಕಲೇಟ್‌ ಖರೀದಿಸಲೆಂದು ಬಂದಿದ್ದ 11 ವರ್ಷದ ಬಾಲಕನ ಕೈ-ಕಾಲನ್ನು ಕಟ್ಟಿ ಅಂಗಡಿಯ ಒಂದು ಕೊಠಡಿಯಲ್ಲಿ ಕೂಡಿಹಾಕಿ ಲೈಂಗಿಕ

ಬಾಲಕನಿಗೆ ಲೈಂಗಿಕ ಕಿರುಕುಳ : ಅಂಗಡಿ ಮಾಲಕನ ವಿರುದ್ಧ ಪೋಕ್ಸೊ ಕೇಸ್‌ Read More »

ನ್ಯಾಷನಲ್‌ ಹೆರಾಲ್ಡ್‌ ಭ್ರಷ್ಟಾಚಾರ : ಇನಾಯತ್‌ ಅಲಿಗೆ ನೋಟಿಸ್‌

ಡಿಕೆಶಿ ಆಪ್ತರಾಗಿರುವ ಇನಾಯತ್‌ ಅಲಿಗೆ ತನಿಖೆಗೆ ಹಾಜರಾಗಲು ಸೂಚನೆ ಮಂಗಳೂರು: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಭ್ರಷ್ಟಾಚಾರ ಪ್ರಕರಣದಲ್ಲಿ ಮಂಗಳೂರು ಮೂಲದ ಉದ್ಯಮಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆಪ್ತರಾಗಿರುವ ಇನಾಯತ್‌ ಅಲಿ ಅವರಿಗೂ ನೋಟಿಸ್‌ ನೀಡಲಾಗಿದೆ ಎಂದು ತಿಳಿದುಬಂದಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಇನಾಯತ್‌ ಅಲಿ ಮಂಗಳೂರು ಉತ್ತರ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು. ಇ.ಡಿ ನೀಡಿರುವ ದೂರಿನ ಮೇರೆಗೆ ದಿಲ್ಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ ಅ.3ರಂದು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ

ನ್ಯಾಷನಲ್‌ ಹೆರಾಲ್ಡ್‌ ಭ್ರಷ್ಟಾಚಾರ : ಇನಾಯತ್‌ ಅಲಿಗೆ ನೋಟಿಸ್‌ Read More »

ವಂಚನೆ ಕೇಸ್‌ : ಬಾಲಿವುಡ್‌ನ ಖ್ಯಾತ ನಿರ್ದೇಶಕ ವಿಕ್ರಂ ಭಟ್‌ ಸೆರೆ

ಸಿನಿಮಾ ನಿರ್ಮಿಸುವುದಾಗಿ ನಂಬಿಸಿ ವೈದ್ಯರಿಗೆ 30 ಕೋ. ರೂ. ವಂಚಿಸಿದ ಪ್ರಕರಣ ಮುಂಬೈ: ವ್ಯಕ್ತಿಯೊಬ್ಬರಿಒಗೆ ಸಿನಿಮಾ ನಿರ್ಮಿಸುವುದಾಗಿ ನಂಬಿಸಿ 30 ಕೋಟಿ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್‌ನ ಖ್ಯಾತ ನಿರ್ದೇಶಕ ವಿಕ್ರಂ ಭಟ್ ಹಾಗೂ ಅವರ ಪತ್ನಿ ಶ್ವೇತಾಂಬರಿ ಭಟ್‌ ಅವರನ್ನು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ. ಉದಯ್‌ಪುರ್‌ನ ಇಂದಿರಾ ಸಮೂಹ ಸಂಸ್ಥೆಗಳ ಮಾಲಕ ಡಾ.ಅಜಯ್ ಮುರ್ದಿಯಾ ಎಂಬವರಿಗೆ ಕೋಟಿಗಟ್ಟಲೆ ವಂಚಿಸಿದ ಆರೋಪ ಅವರ ಮೇಲಿದೆ. ನಿರ್ಮಾಪಕರೂ ಆಗಿರುವ ವಿಕ್ರಂ ಭಟ್ ಹಾಗೂ ಅವರ ಪತ್ನಿ ಶ್ವೇತಾಂಬರಿ

ವಂಚನೆ ಕೇಸ್‌ : ಬಾಲಿವುಡ್‌ನ ಖ್ಯಾತ ನಿರ್ದೇಶಕ ವಿಕ್ರಂ ಭಟ್‌ ಸೆರೆ Read More »

ಕೆಎಸ್‌ಸಿಎ ಅಧ್ಯಕ್ಷರಾಗಿ ವೆಂಕಟೇಶ್‌ ಪ್ರಸಾದ್‌ ಆಯ್ಕೆ

ಚುನಾವಣೆಯಲ್ಲಿ ಭರ್ಜರಿ ಗೆಲುವು ಕಂಡ ವೆಂಕಟೇಶ್‌ ಪ್ರಸಾದ್‌ ಬಣ ಬೆಂಗಳೂರು: ಕಳೆದೆರೆಡು ತಿಂಗಳಿನಿಂದ ಚರ್ಚೆಯಲ್ಲಿದ್ದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ವೆಂಕಟೇಶ್ ಪ್ರಸಾದ್ ಬಣ ಭರ್ಜರಿ ಜಯ ಸಾಧಿಸಿದೆ. ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ, ಕನ್ನಡಿಗ ವೆಂಕಟೇಶ್ ಪ್ರಸಾದ್‌ ಆಯ್ಕೆ ಆಗಿದ್ದಾರೆ. ಉಪಾಧ್ಯಕ್ಷರಾಗಿ ಸುಜಿತ್ ಸೋಮಸುಂದರ್, ಖಜಾಂಚಿ ಆಗಿ ಮಧುಕರ್, ಜನರಲ್ ಸೆಕ್ರೆಟರಿಯಾಗಿ ಸಂತೋಷ್ ಮೆನನ್ ಆಯ್ಕೆ ಆಗಿದ್ದಾರೆ. ಬ್ರಿಜೇಶ್ ಪಟೇಲ್ ಬಣದ ಬಿ.ಕೆ ರವಿ ಜಂಟಿ ಕಾರ್ಯದರ್ಶಿಯಾಗಿ ಆಯ್ಕೆ ಆಗಿದ್ದಾರೆ. ಚಿನ್ನಸ್ವಾಮಿ

ಕೆಎಸ್‌ಸಿಎ ಅಧ್ಯಕ್ಷರಾಗಿ ವೆಂಕಟೇಶ್‌ ಪ್ರಸಾದ್‌ ಆಯ್ಕೆ Read More »

ದ.ಕ.ಜಿ.ಪಂ. ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುದ್ಮಾರು: ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟ

ಕಡಬ: ದ.ಕ.ಜಿ.ಪಂ. ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುದ್ಮಾರು ಇಲ್ಲಿನ ವಾರ್ಷಿಕೋತ್ಸವ ಡಿ. 13 ರಂದು ನಡೆಯಲಿದ್ದು, ಆ ಹಿನ್ನೆಲೆ ಇಂದು ಹಿರಿಯ ವಿದ್ಯಾರ್ಥಿ ಸಂಘದ ಕ್ರೀಡಾಕೂಟ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮಚಂದ್ರ ಬರೆಪ್ಪಾಡಿ, ಕಾರ್ಯದರ್ಶಿ ನಾಗೇಶ್ ಕೆಡೆಂಜಿ, ಮುಖ್ಯ ಗುರು ಮಿನಿ ವರ್ಗೀಸ್, ಎಸ್.ಡಿ.ಎಂ.ಸಿ. ಅಧ್ಯಕ್ಷ ದೇವರಾಜ್ ನೂಜಿ, ಕೋಶಾಧಿಕಾರಿ ಯಶೋದರ ಕೆಡೆಂಜಿಕಟ್ಟ , ಯೋಗೀಶ್ ಬರೆಪ್ಪಾಡಿ ,ಉಮೇಶ್ ಕೆರೆನಾರು,ಚಿದಾನಂದ ಕೆರೆನಾರು,ನಿವೃತ್ತ ಮುಖ್ಯ ಗುರುಗಳಾದ ಕುಶಾಲಪ್ಪ ಗೌಡ ಬರಮೇಲು ಸೇರಿದಂತೆ

ದ.ಕ.ಜಿ.ಪಂ. ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುದ್ಮಾರು: ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟ Read More »

ಮಾನಹಾನಿಕರ ಪೋಸ್ಟ್: ಪೊಲೀಸರಿಗೆ ದೂರು ನೀಡಿದ ಬಿಜೆಪಿ ನಾಯಕಿ ಆಶಾ ತಿಮ್ಮಪ್ಪ

ಪುತ್ತೂರು: ಪ್ರಧಾನಿ ಮೋದಿ ಅವರು ಉಡುಪಿಗೆ ಬಂದು ಹೋದ ವಿಚಾರದಲ್ಲಿ ವಿರೋಧಿಗಳ ಅಪಪ್ರಚಾರ ಹೆಚ್ಚಾಗಿದ್ದು, ಇದು ಸಾರ್ವಜನಿಕ ವಲಯದಲ್ಲೂ ‌ಸಾಕಷ್ಟು ಪ್ರಶ್ನೆಗಳನ್ನು ಸೃಷ್ಟಿಸಿದೆ. ಕಳೆದ ಬಾರಿ ಬಿಜೆಪಿಯಿಂದ ವಿಧಾನಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಆಶಾ ತಿಮ್ಮಪ್ಪ ಅವರಿಗೆ ಸಂಬಂಧಿಸಿದ ಹಾಗೆಯೂ ‌ಮಾನಹಾನಿಕರ ಪೋಸ್ಟ್ ಒಂದು ಹರಿದಾಡುತ್ತಿದ್ದು, ಈ ಬಗ್ಗೆ ಅವರು ಕಡಬ ಪೊಲೀಸರಿಗೆ ದೂರು ನೀಡಿದ್ದಾರೆ. “ಪ್ರಧಾನಿ ಮೋದಿ ಅವರು ಉಡುಪಿಗೆ ಬಂದ ಸಂದರ್ಭದಲ್ಲಿ ವಿಮಾನ ನಿಲ್ದಾಣದಲ್ಲಿ ನನಗೂ ಅವರನ್ನು ನೋಡುವ ಭಾಗ್ಯ ಸಿಗಬಹುದು ಎಂದುಕೊಂಡಿದ್ದೆ. ಆದರೆ ಈಗ

ಮಾನಹಾನಿಕರ ಪೋಸ್ಟ್: ಪೊಲೀಸರಿಗೆ ದೂರು ನೀಡಿದ ಬಿಜೆಪಿ ನಾಯಕಿ ಆಶಾ ತಿಮ್ಮಪ್ಪ Read More »

error: Content is protected !!
Scroll to Top