ಮರಳು ಕಳವುಗೈದು ಅಕ್ರಮ ಶೇಖರಣೆ: ಪ್ರಕರಣ ದಾಖಲು

ವಿಟ್ಲ: ಮರಳು ಕಳ್ಳತನ ಮಾಡಿ, ಅಕ್ರಮವಾಗಿ ಶೇಖರಣೆ ಮಾಡಿದ ಪ್ರಕರಣ ಸಾಲೆತ್ತೂರು ಗ್ರಾಮದ ಬೊಳ್ಮಾರು ಎಂಬಲ್ಲಿ ಬೆಳಕಿಗೆ ಬಂದಿದೆ. ಸುದೇಶ್ ಭಂಡಾರಿ ಎಂಬವರ ಜಾಗದಲ್ಲಿ ಮರಳು ಅಕ್ರಮ ಶೇಖರಣೆ ಪತ್ತೆಯಾಗಿದ್ದು, ಸುಮಾರು 20ರಿಂದ 25 ಲೋಡ್ ಮರಳು ರಾಶಿ ಹಾಕಲಾಗಿತ್ತು. ಇದರ ಮೌಲ್ಯ ಸುಮಾರು 1.25 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ವಿಟ್ಲ ಪೊಲೀಸ್ ಉಪ ನಿರೀಕ್ಷಕ ಹಾಗೂ ಸಿಬ್ಬಂದಿಗಳ ತಂಡ ಕಾರ್ಯಾಚರಣೆ ನಡೆಸಿದೆ. ಆರೋಪಿಗಳಾದ ಸುದೇಶ್ ಭಂಡಾರಿ, ಷರೀಪ್, ನಾರಾಯಣ ಪೂಜಾರಿ ಅವರ ವಿರುದ್ಧ ವಿಟ್ಲ […]

ಮರಳು ಕಳವುಗೈದು ಅಕ್ರಮ ಶೇಖರಣೆ: ಪ್ರಕರಣ ದಾಖಲು Read More »

ಮಹಾಲಿಂಗೇಶ್ವರ ದೇವಸ್ಥಾನದ ದಂಡ್ ಶಿಲಾಲ್ ಪರಿಚಾರಕ ನಿಧನ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ಸಂದರ್ಭ ದಂಡ್ ಶಿಲಾಲ್ ಪರಿಚಾರಕರಾಗಿ ಕಾರ್ಯನಿರ್ವಹಿಸುತ್ತಿದ್ದ ಕೆರೆಮೂಲೆ ನಿವಾಸಿ ಸಂಪತ್ ಪೂಜಾರಿ (31) ಬುಧವಾರ ಮುಂಜಾನೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಪುತ್ತೂರು ಆಸ್ಪತ್ರೆಗೆ ದಾಖಲಾಗಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು. ಮೃತರು ತಂದೆ, ತಾಯಿ, ಸಹೋದರನ್ನು ಅಗಲಿದ್ದಾರೆ.

ಮಹಾಲಿಂಗೇಶ್ವರ ದೇವಸ್ಥಾನದ ದಂಡ್ ಶಿಲಾಲ್ ಪರಿಚಾರಕ ನಿಧನ Read More »

ಲೀಗ್ ಮಾದರಿಯ ವಾಲಿಬಾಲ್ ಪಂದ್ಯ| ಸುಬ್ರಹ್ಮಣ್ಯ ಶ್ರೀ ರಕ್ಷಾ ತಂಡ ಪ್ರಥಮ, ಪ್ರಶಾಂತ್ ಸ್ಪೋರ್ಟ್ಸ್ ಕ್ಲಬ್‍ ದ್ವಿತೀಯ

ಸುಬ್ರಹ್ಮಣ್ಯ: ಸುಬ್ರಹ್ಮಣ್ಯದಲ್ಲಿ ನಡೆದ ಲೀಗ್ ಮಾದರಿಯ ಹೊನಲು ಬೆಳಕಿನ ಪುರುಷರ ವಾಲಿಬಾಲ್ ಪಂದ್ಯಾಟದಲ್ಲಿ ಉದಯಶಂಕರ ಭಟ್ ಮಾಲಕತ್ವದ ಶ್ರೀ ರಕ್ಷಾ ಸುಬ್ರಹ್ಮಣ್ಯ ತಂಡ ಪ್ರಥಮ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದೆ. ಉಮೇಶ ಕೆ.ಎನ್. ಮಾಲಕತ್ವದ ಪ್ರಶಾಂತ್ ಸ್ಪೋರ್ಟ್ಸ್ ಕ್ಲಬ್ ದ್ವಿತೀಯ ಸ್ಥಾನ ಹಾಗೂ ಜೀವನ್ ಮಾಲಕತ್ವದ ತಸ್ವಿಕ ಫ್ರೆಂಡ್ಸ್ ಸುಬ್ರಹ್ಮಣ್ಯ ತೃತೀಯ ಸ್ಥಾನವನ್ನು ತನ್ನದಾಗಿಸಿದೆ. ಹೊನಲು ಬೆಳಕಿನ ಲೀಗ್ ಮಾದರಿಯ ಪಂದ್ಯಾಟದಲ್ಲಿ ಒಟ್ಟು ಆರು ತಂಡಗಳು ಭಾಗವಹಿಸಿದ್ದವು. ಸಮಾರೋಪ ಸಮಾರಂಭದಲ್ಲಿ ಸುಬ್ರಹ್ಮಣ್ಯ ಕುಕ್ಕೆಶ್ರೀ ಫ್ರೆಂಡ್ಸ್ ಅಧ್ಯಕ್ಷ ಭವಿಷ್, ಉದ್ಯಮಿ

ಲೀಗ್ ಮಾದರಿಯ ವಾಲಿಬಾಲ್ ಪಂದ್ಯ| ಸುಬ್ರಹ್ಮಣ್ಯ ಶ್ರೀ ರಕ್ಷಾ ತಂಡ ಪ್ರಥಮ, ಪ್ರಶಾಂತ್ ಸ್ಪೋರ್ಟ್ಸ್ ಕ್ಲಬ್‍ ದ್ವಿತೀಯ Read More »

ಶಾಲಾ ಬಸ್ – ಕಾರು ಢಿಕ್ಕಿ!

ಪುತ್ತೂರು: ಶಾಲಾ ಬಸ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದೆ ಘಟನೆ ಸವಣೂರು ಸಮೀಪದ ಚಾಪಲದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಖಾಸಾಗಿ ವಿದ್ಯಾಸಂಸ್ಥೆಯೊಂದರ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಶಾಲಾ ಬಸ್’ಗೆ ಸಣ್ಣ ಪುಟ್ಟ ಹಾನಿಯಾಗಿದ್ದು, ಕಾರಿನ ಮುಂಭಾಗ ಜಖಂಗೊಂಡಿದೆ. ಅಪಘಾತದಿಂದ ಎರಡೂ ಬದಿಯೂ ಟ್ರಾಫಿಕ್ ಜಾಮ್ ಉಂಟಾಯಿತು. ಬೆಳಿಗ್ಗಿನ ಹೊತ್ತಾಗಿದ್ದರಿಂದ ವಾಹನಗಳ ಸರತಿ ಸಾಲು ದೊಡ್ಡದಾಗಿಯೇ ಬೆಳೆದಿತ್ತು.

ಶಾಲಾ ಬಸ್ – ಕಾರು ಢಿಕ್ಕಿ! Read More »

ಚಿಣ್ಣರ ಕ್ರೀಡೋತ್ಸವ-2023-24

ಪುತ್ತೂರು: ಬಾಲ್ಯದಿಂದಲೇ ಕ್ರೀಡಾ ಮನೋಭಾವ ಮೂಡಿಸಿಕೊಂಡು ಸದೃಢ ಶರೀರ ಬೆಳೆಸಿಕೊಳ್ಳುವುದು ಮಗುವಿನ ಶಾರೀರಿಕ ಹಾಗೂ ಮಾನಸಿಕ ಬೆಳವಣಿಗೆಗೆ ಪೂರಕ ಎಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಹರಿಣಾಕ್ಷಿ. ಜೆ. ಶೆಟ್ಟಿ ಹೇಳಿದರು. ಅವರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿಣ್ಣರ ಕ್ರೀಡೋತ್ಸವ-2023-24 ಉದ್ಘಾಟಿಸಿ ಮಾತನಾಡಿ, ಇಂತಹ ಚಟುವಟಿಕೆಗಳಿಂದ ಮಗುವಿನ ನೈಜ ಪ್ರತಿಭೆ ಬೆಳಕಿಗೆ ಬರುತ್ತದೆ ಎಂದು ಹೇಳಿದರು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶಿವಪ್ರಕಾಶ್ ಎಂ. ಅಧ್ಯಕ್ಷತೆ ವಹಿಸಿದ್ದರು. ಸದಸ್ಯೆ ಮಾಲಾ

ಚಿಣ್ಣರ ಕ್ರೀಡೋತ್ಸವ-2023-24 Read More »

ಕಾರು-ಲಾರಿ ಡಿಕ್ಕಿಯಾಗಿ ಇಬ್ಬರು ಗಂಭೀರ

ಪುತ್ತೂರು: ಕಾರು ಮತ್ತು ಈಚರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಕಬಕ ಅಡ್ಯಲಾಯ ದೈವಸ್ಥಾನದ ಎದುರಿನಲ್ಲಿ ನಡೆದಿದೆ. ಕಾರಿನಲ್ಲಿದ್ದವರು ಮಣಿಪಾಲ ಮೂಲದವರು ಎನ್ನಲಾಗಿದೆ. ಈಚರ್ ಲಾರಿ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕಾರು-ಲಾರಿ ಡಿಕ್ಕಿಯಾಗಿ ಇಬ್ಬರು ಗಂಭೀರ Read More »

ಸಮಯಕ್ಕೆ ಸರಿಯಾಗಿ ಸದನಕ್ಕೆ ಹಾಜರಾದ ಪುತ್ತೂರು ಶಾಸಕರು | ಬಹುಮಾನ ನೀಡಿ ಗೌರವಿಸಿದ ಸ್ಪೀಕರ್ ಯು.ಟಿ. ಖಾದರ್

ಪುತ್ತೂರು: ಕಳೆದ ಬಾರಿ ನಡೆದ ವಿಧಾನಸಬಾ ಅಧಿವೇಶನಕ್ಕೆ ಸಮಯಕ್ಕೆ ಸರಿಯಾಗಿ ಹಾಜರಾಗಿದ್ದು ಮಾತ್ರವಲ್ಲದೆ ಸದನ ಮುಗಿಯುವ ತನಕ ಸದನದಲ್ಲೇ ಇದ್ದು ಸದನಕ್ಕೆ ಗೌರವ ಸಲ್ಲಿಸಿದ್ದ ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸ್ಪೀಕರ್ ಯು. ಟಿ. ಖಾದರ್ ಬಹುಮಾನ ನೀಡಿ ಗೌರವಿಸಿದ್ದಾರೆ. ಶಾಸಕ ಅಶೋಕ್ ರೈಯವರು ಕಳೆದ ಬಾರಿ ಚೊಚ್ಚಲ ಅದಿವೇಶನದಲ್ಲಿ ಭಾಗವಹಿಸಿದ್ದರು. ಸದನಕ್ಕೆ ಸಮಯಕ್ಕೆ ಸರಿಯಗಿ ಹಾಜರಾಗುವ ಸದಸ್ಯರಿಗೆ ಬಹುಮಾ ನೀಡಿ ಗೌರವಿಸಲಾಗುವುದು ಎಂದು ಸ್ಪೀಕರ್ ಆಗಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಯು.ಟಿ. ಖಾದರ್ ಅವರು ಘೋಷಣೆ

ಸಮಯಕ್ಕೆ ಸರಿಯಾಗಿ ಸದನಕ್ಕೆ ಹಾಜರಾದ ಪುತ್ತೂರು ಶಾಸಕರು | ಬಹುಮಾನ ನೀಡಿ ಗೌರವಿಸಿದ ಸ್ಪೀಕರ್ ಯು.ಟಿ. ಖಾದರ್ Read More »

INDIA ಮೈತ್ರಿಕೂಟ ಸಭೆ ಮುಂದೂಡಿದ ಕಾಂಗ್ರೆಸ್!

ಪ್ರಮುಖ ಪ್ರತಿ ಪಕ್ಷದ ನಾಯಕರ ಅಲಭ್ಯತೆ ಹಿನ್ನಲೆಯಲ್ಲಿ ನಾಳೆ ಅಂದರೆ ಬುಧವಾರ ನಡೆಯಬೇಕಿದ್ದ INDIA ಮಿತ್ರಕೂಟದ ಸಭೆಯನ್ನು ಮುಂದೂಡಲಾಗಿದೆ. ಪಂಚರಾಜ್ಯಗಳ ಚುನಾವಣೆ ಹಿನ್ನಲೆ INDIA ಒಕ್ಕೂಟದ ಸಭೆ ನಡೆಸಲು ಸಾಧ್ಯವಾಗಿರಲಿಲ್ಲ. ಫಲಿತಾಂಶ ಪ್ರಕಟವಾದ ಬಳಿಕ ಲೋಕಸಭೆ ಚುನಾವಣೆ ಬಗ್ಗೆ ಚರ್ಚಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಯಲ್ಲಿ ಸಭೆ ನಡೆಸಲು ನಿರ್ಧರಿಸಿದ್ದರು‌. ಹೀಗಾಗಿ ಬುಧವಾರ ದೆಹಲಿಯಲ್ಲಿ INDIA ಮೈತ್ರಿಕೂಟದ ಸಭೆ ಕರೆಯಲಾಗಿತ್ತು. ಆದರೆ ಮಿಚಾಂಗ್‌ ಚಂಡಮಾರುತದಿಂದ ತಮಿಳುನಾಡಿನಲ್ಲಿ ಭಾರಿ ಮಳೆ ಮತ್ತು ಮಳೆ ಸಂಬಂಧಿತ ಅವಘಡಗಳು ಸಂಭವಿಸಿರುವುದರಿಂದ

INDIA ಮೈತ್ರಿಕೂಟ ಸಭೆ ಮುಂದೂಡಿದ ಕಾಂಗ್ರೆಸ್! Read More »

ಬೆಳಗಾವಿ ಅಧಿವೇಶನದಲ್ಲಿ ಬೃಹತ್ ಪ್ರತಿಭಟನೆ, ಹಕ್ಕೊತ್ತಾಯ ಮಂಡನೆ

ಪುತ್ತೂರು: ವಿಕಲಚೇತನರಿಗೆ ಸರಕಾರದ ಹಲವು ಯೋಜನೆಗಳು ಸಹಿತ ವೇತನ, ಪ್ರಯಾಣ ಭತ್ಯೆ ಮುಂತಾದ ಸವಲತ್ತುಗಳು ನಮಗೆ ಸಿಗಬೇಕು ಎಂದು ಒತ್ತಾಯಿಸಿ ಡಿ. 7ರಂದು ನಡೆಯುವ ಬೆಳಗಾವಿ ಅಧಿವೇಶನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಿದ್ದು, ಹಕ್ಕೊತ್ತಾಯ ಮಂಡಿಸಲಿದ್ದೇವೆ ಎಂದು ಪುನರ್ ವಸತಿ ಕಾರ್ಯಕರ್ತರ ಜಿಲ್ಲಾ ಅಧ್ಯಕ್ಷ ಜೋನ್ ಬ್ಯಾಪ್ಟಿಸ್ಟ್ ಡಿ’ಸೋಜಾ ತಿಳಿಸಿದ್ದಾರೆ. ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ವಿಕಲಚೇತನ ವಿವಿಧೋದ್ದೇಶ ಸಂಘ, ನಗರ ಹಾಗೂ ಗ್ರಾಮೀಣ ಪುನರ್ ವಸತಿ ಕಾರ್ಯಕರ್ತರ ಜಿಲ್ಲಾ ಒಕ್ಕೂಟ ರಾಜ್ಯ ಕಮಿಟಿಯ ನಿರ್ದೇಶನದಂತೆ ಪ್ರತಿಭಟನೆ

ಬೆಳಗಾವಿ ಅಧಿವೇಶನದಲ್ಲಿ ಬೃಹತ್ ಪ್ರತಿಭಟನೆ, ಹಕ್ಕೊತ್ತಾಯ ಮಂಡನೆ Read More »

ಮಂಗಳೂರು ಗೋಡೆ ಬರಹಕ್ಕೆ ‘ಐಎಸ್’ ಉಗ್ರರ ಕೈವಾಡ!! | ಕುಕ್ಕರ್ ಸ್ಫೋಟಕ್ಕೂ ಗೋಡೆ ಬರಹಕ್ಕೂ ನಂಟು!! | ಎನ್.ಐ.ಎ. ತನಿಖೆಯಿಂದ ಮತ್ತಷ್ಟು ವಿವರ ಬಹಿರಂಗ

ಮಂಗಳೂರಿನ ಬಿಜೈ ಹಾಗೂ ನ್ಯಾಯಾಲಯ ರಸ್ತೆಯ ಗೋಡೆಗಳ ಮೇಲೆ ಬರೆದಿದ್ದ ಬರಹದಲ್ಲಿ ಇಸ್ಲಾಮಿಕ್ ಸ್ಟೇಟ್ (ಐಎಸ್) ಭಯೋತ್ಪಾದನಾ ಸಂಘಟನೆ ಉಗ್ರರ ಕೈವಾಡವಿರುವುದಾಗಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತಿಳಿಸಿದೆ ಎಂದು ಹೇಳಲಾಗಿದೆ. 2020ರ ನವೆಂಬರ್‌ 27ರಂದು ಲಷ್ಕರ್‌–ಎ–ತಯಬಾ ಹಾಗೂ ತಾಲಿಬಾನ್‌ ಪರವಾಗಿ ಗೋಡೆ ಬರಹ ಬರೆಯಲಾಗಿತ್ತು. ಕೃತ್ಯ ಎಸಗಿದ್ದ ಆರೋಪದಡಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಮೊಹಮ್ಮದ್ ಶಾರೀಕ್, ಮಾಝ್ ಮುನೀರ್ ಅಹ್ಮದ್ ಹಾಗೂ ಸಾದತ್‌ನನ್ನು ಮಂಗಳೂರು ಪೊಲೀಸರು ಬಂಧಿಸಿದ್ದರು. ‘ಪ್ರಚಾರಕ್ಕಾಗಿ ಆರೋಪಿಗಳು ಕೃತ್ಯ ಎಸಗಿದ್ದರು’ ಎಂಬುದಾಗಿ ಅಭಿಪ್ರಾಯಪಟ್ಟು

ಮಂಗಳೂರು ಗೋಡೆ ಬರಹಕ್ಕೆ ‘ಐಎಸ್’ ಉಗ್ರರ ಕೈವಾಡ!! | ಕುಕ್ಕರ್ ಸ್ಫೋಟಕ್ಕೂ ಗೋಡೆ ಬರಹಕ್ಕೂ ನಂಟು!! | ಎನ್.ಐ.ಎ. ತನಿಖೆಯಿಂದ ಮತ್ತಷ್ಟು ವಿವರ ಬಹಿರಂಗ Read More »

error: Content is protected !!
Scroll to Top