ಸೌತಡ್ಕ: ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಮೆಲ್ಕಾರು ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಎರಡನೇ ವಾರ್ಷಿಕೋತ್ಸವ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಶ್ರೀ ಗಣೇಶ ಸಭಾ ಭವನದಲ್ಲಿ ಡಿ. 17ರಂದು ನಡೆಯಲಿದ್ದು, ಆಮಂತ್ರಣ ಪತ್ರವನ್ನು ಬಿಡುಗಡೆ ಮಾಡಲಾಯಿತು. ಆಮಂತ್ರಣ ಪತ್ರಿಕೆಯನ್ನು ಸೌತಡ್ಕ ಶ್ರೀ ಗಣಪತಿ ಸನ್ನಿಧಿಯಲ್ಲಿ ಅರ್ಚಕ ಸತ್ಯಪ್ರಿಯ ಕಲ್ಲೂರಾಯ, ಕ್ಷೇತ್ರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ರಾವ್ ಎಂ. ಬಿಡುಗಡೆಗೊಳಿಸಿದರು. ವ್ಯವಸ್ಥಾಪನ ಸಮಿತಿ ಸದಸ್ಯರಾದ ಪುರಂದರ ಕಡೀರ, ಪ್ರಶಾಂತ ಪೂವಾಜೆ, ವಿಠಲ ಕುರ್ತಿ, ಅರ್ಚಕರಾದ ಸುಬ್ರಹ್ಮಣ್ಯ ತೊಡ್ತಿಲ್ಲಾಯ, ಕಾರ್ಯನಿರ್ವಹಣಾಧಿಕಾರಿ ಕೆ.ವಿ. […]

ಸೌತಡ್ಕ: ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಯಸಳೂರಿನ ನೆಡುತೋಪಿನಲ್ಲಿ ಅರ್ಜುನನ ಅಂತ್ಯಸಂಸ್ಕಾರ!

8 ಬಾರಿ ಅಂಬಾರಿ ಹೊತ್ತು ನಾಡಿನ ಪ್ರೀತಿ ಗಳಿಸಿದ್ದ ಅರ್ಜುನನ ಅಂತ್ಯಸಂಸ್ಕಾರ ಸಕಲೇಶಪುರ ಹಾಸನದ ಯಸಲೂರಿನ ನೆಡುತೋಪಿನಲ್ಲಿ ನಡೆಯಿತು. ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರದ ವಿಧಿವಿಧಾನ ನೆರವೇರಿಸಲಾಯಿತು. ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ, ಅರ್ಜುನನಿಗೆ ಗೌರವ ಸಲ್ಲಿಸಲಾಯಿತು. ಬಳಿಕ ಜೆಸಿಬಿ ಸಹಾಯದಿಂದ ಅಂತ್ಯಸಂಸ್ಕಾರ ಮಾಡಲಾಯಿತು. ಅಂತ್ಯಸಂಸ್ಕಾರದ ವೇಳೆ ಮಾವುತನ ರೋಧನ ಮುಗಿಲುಮುಟ್ಟಿತ್ತು. ಎಂತಾ ರಾಜನನ್ನು ಮಿಸ್ ಮಾಡಿಕೊಂಡೆ. ನನ್ನ ಆನೆಯನ್ನು ಬದುಕಿಸಿ ಕೊಡಿ ಎಂಬ ರೋಧನ ಕಣ್ಣೀರು ಬರಿಸುವಂತಿತ್ತು.

ಯಸಳೂರಿನ ನೆಡುತೋಪಿನಲ್ಲಿ ಅರ್ಜುನನ ಅಂತ್ಯಸಂಸ್ಕಾರ! Read More »

ಶಾಂತಿವನ ಟ್ರಸ್ಟ್ ಪುಸ್ತಕಾಧಾರಿತ ಸ್ಪರ್ಧೆಯಲ್ಲಿ ಪ್ರಶಸ್ತಿ

ಪುತ್ತೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ  ಯೋಜನೆ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಪುಸ್ತಕಾಧಾರಿತ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಮಂಗಳದುರ್ಗಾ ಟಿ.ಆರ್ ಶ್ಲೋಕ ಕಂಠಪಾಠ (ಜ್ಞಾನವಾರಿಧಿ)ದಲ್ಲಿ ದ್ವಿತೀಯ ಸ್ಥಾನ ಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜ್ಞಾನ ಶರಧಿ ಪುಸ್ತಕಾಧಾರಿತ ಭಾಷಣ ಸ್ಪರ್ಧೆಯಲ್ಲಿ 5ನೇ ತರಗತಿಯ ಶ್ರೀಕೃಷ್ಣ.ಬಿ ತೃತೀಯ ಸ್ಥಾನ ಗಳಿಸಿದ್ದಾನೆ. ಪ್ರಶಸ್ತಿ ಪಡೆದ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಶಿಕ್ಷಕೇತರ

ಶಾಂತಿವನ ಟ್ರಸ್ಟ್ ಪುಸ್ತಕಾಧಾರಿತ ಸ್ಪರ್ಧೆಯಲ್ಲಿ ಪ್ರಶಸ್ತಿ Read More »

ರಿಕ್ಷಾ ಚಾಲಕ ವಿನೋದ್ ನಿಧನ

ಪುತ್ತೂರು: ಭಕ್ತಕೋಡಿ ಪಾಲೆತ್ತಗುರಿ ನಿವಾಸಿ ಆಟೋ ರಿಕ್ಷಾ ಚಾಲಕ ವಿನೋದ್ (23) ಸೋಮವಾರ ನಿಧನರಾದರು. ಭಕ್ತಕೋಡಿಯಲ್ಲಿ ರಿಕ್ಷಾ ಚಾಲನೆ ಮಾಡುತ್ತಿದ್ದ ವಿನೋದ್ ಅವರಿಗೆ ಎರಡು ತಿಂಗಳ ಜ್ವರ ಕಾಣಿಸಿದ್ದು, ಔಷಧಿ ತೆಗೆದುಕೊಳ್ಳುತ್ತಿದ್ದರು.  ಭಾನುವಾರ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನಲೆಯಲ್ಲಿ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಿದರೂ ಆದಾಗಲೇ ಅವರು ಕೊನೆಯುಸಿರೆಳೆದಿದ್ದರು. ಮೃತರು ತಂದೆ, ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.

ರಿಕ್ಷಾ ಚಾಲಕ ವಿನೋದ್ ನಿಧನ Read More »

ಬೆಂಗಡ್ಕ ನಿವಾಸಿ ಅಭಿಷೇಕ್ ನಾಪತ್ತೆ | ಹುಡುಕಿಕೊಡುವಂತೆ ಹೆತ್ತವರಿಂದ ಮನವಿ

ಕಾಣಿಯೂರು: ಬೆಂಗಡ್ಕ ನಿವಾಸಿ ಅಭಿಷೇಕ್ ಕಾಣೆಯಾಗಿದ್ದು, ಈ ಕುರಿತು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕು ಕಾಣಿಯೂರು ಗ್ರಾಮದ ಬೆಂಗಡ್ಕ ಎಂಬಲ್ಲಿನ ನಿವಾಸಿ ಜತ್ತಪ್ಪ ಗೌಡ ಎಂಬವರ ಮಗ ಅಭಿಷೇಕ್ ಎಂಬವರು ನಿಂತಿಕಲ್ಲು ಪರಿವಾರ ಪಂಚಲಿಂಗೇಶ್ವರ ಐಟಿಐ ಕಾಲೇಜಿನಲ್ಲಿ ಐಟಿಐ ವಿದ್ಯಾಭ್ಯಾಸ ಮುಗಿಸಿ ಕಳೆದ ಒಂದು ವರ್ಷದಿಂದ ಬೆಂಗಳೂರಿನ Altgreen ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಸ್ನೇಹಿತರೊಂದಿಗೆ ಬೆಂಗಳೂರಿನಲ್ಲಿಯೇ ವಾಸವಿದ್ದರು. ಎರಡು ತಿಂಗಳಿಗೊಮ್ಮೆ ಮನೆಗೆ ಬಂದು ಹೋಗುತ್ತಿದ್ದ ಅಭಿಷೇಕ್‍ ಇತ್ತೀಚಿಗೆ  ಬೆಂಗಳೂರಿಂದ ಮನೆಗೆ ಬಂದು ನ.20ರಂದು

ಬೆಂಗಡ್ಕ ನಿವಾಸಿ ಅಭಿಷೇಕ್ ನಾಪತ್ತೆ | ಹುಡುಕಿಕೊಡುವಂತೆ ಹೆತ್ತವರಿಂದ ಮನವಿ Read More »

ನಾಳೆ (ಡಿ.6): ಬಿಜಿಎಸ್ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ

ಮಂಗಳೂರು: ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನಡಿ ಮಂಗಳೂರಿನ ಕಾವೂರಿನಲ್ಲಿ ಕಾರ್ಯಾಚರಿಸುತ್ತಿರುವ ಬಿಜಿಎಸ್ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಡಿ.6 ಬುಧವಾರ ನಡೆಯಲಿದೆ. ಬೆಳಿಗ್ಗೆ 9 ಗಂಟೆಯಿಂದ ಬಿಜಿಎಸ್‍ ಪಿಯು ಕಾಲೇಜು ಕ್ರೀಡಾಂಗಣದಲ್ಲಿ ಕ್ರೀಡಾಕೂಟ ನಡೆಯಲಿದೆ. ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಡಾ.ಶ್ರೀ ಧರ್ಮಪಾಲನಾಥ ಸ್ವಾಮೀಜಿ ದಿವ್ಯ ಉಪಸ್ಥಿತರಿರುವರು. ಮುಖ್ಯ ಅತಿಥಿಯಾಗಿ ಸಂಸ್ಥೆಯ ಮ್ಯಾನೇಜರ್ ಸುಬ್ಬ ಕಾರಡ್ಕ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ನಾಳೆ (ಡಿ.6): ಬಿಜಿಎಸ್ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ Read More »

ನಿವೃತ್ತರಿಗೆ ಬೀಳ್ಕೊಡುಗೆ ಸಮಾರಂಭ

ಪುತ್ತೂರು: ಅಧ್ಯಾಪನ  ವೃತ್ತಿಯಲ್ಲಿ ಸರಳ ಸಜ್ಜನಿಕೆಯಿಂದ ಕೂಡಿದಾಗ ವಿದ್ಯಾರ್ಥಿಗಳನ್ನು ಅರಿತುಕೊಳ್ಳಲು ಸುಲಭ ಸಾಧ್ಯ.  ಇದಕ್ಕೆ ಉತ್ತಮ ಉದಾಹರಣೆಯಾಗಿ ನಿವೃತ್ತಿಯಾಗುತ್ತಿರುವ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಎನ್ ನರಸಿಂಹ ಭಟ್ ಹಾಗೂ ಕಛೇರಿ ನಿರ್ವಾಹಕ ಜಗನ್ನಾಥ್ ನಾಯಕ್ ಸಾಕ್ಷಿಯಾಗಿದ್ದಾರೆ ಎಂದು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಹೇಳಿದರು. ಪುತ್ತೂರು ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ)ಮಹಾವಿದ್ಯಾಲಯದ ಅಧ್ಯಾಪಕ ಹಾಗೂ ಅಧ್ಯಾಪಕೇತರ ನೌಕರರ ಸಂಘದಿಂದ ಆಯೋಜಿಸಿದ ನಿವೃತ್ತರಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು. ಕಾಲೇಜಿನ ಆಡಳಿತ ಮಂಡಳಿ

ನಿವೃತ್ತರಿಗೆ ಬೀಳ್ಕೊಡುಗೆ ಸಮಾರಂಭ Read More »

ಡಿ.27: ನಗರಸಭೆಯ ತೆರವಾದ ಎರಡು ವಾರ್ಡ್‍ಗಳಿಗೆ ಉಪಚುನಾವಣೆ

ಪುತ್ತೂರು : ನಗರಸಭಾ ಸದಸ್ಯರ ಅಕಾಲಿಕ ಮರಣದಿಂದಾಗಿ ಸ್ಥಳೀಯ ಸಂಸ್ಥೆಗಳ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಿಗದಿಯಾಗಿದ್ದು, ಎರಡು ಸ್ಥಾನಗಳಿಗೆ ಡಿ.27 ರಂದು ಮತದಾನ ನಿಗದಿಗೊಳಿಸಿ ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ. ನಗರ ಸಭೆಯ ವಾರ್ಡ್ 1 ರಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಿವರಾಮ ಸಪಲ್ಯ ಹಾಗೂ ವಾರ್ಡ್ 11ರಲ್ಲಿ ಕಾಂಗ್ರೆಸ್‌ ಬೆಂಬಲಿತ ಸದಸ್ಯ ಶಕ್ತಿ ಸಿನ್ಹಾರವರ ನಿಧನದಿಂದ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಡಿ.8 ರಂದು ಜಿಲ್ಲಾಧಿಕಾರಿಗಳು ಅಧಿಸೂಚನೆ ಪ್ರಕಟಗೊಳಿಸಲಿದ್ದು, , ಅದೇ ದಿನ

ಡಿ.27: ನಗರಸಭೆಯ ತೆರವಾದ ಎರಡು ವಾರ್ಡ್‍ಗಳಿಗೆ ಉಪಚುನಾವಣೆ Read More »

ಭಾಗ್ಯಜ್ಯೋತಿ ಜ್ಞಾನವಿಕಾಸ ಕೇಂದ್ರದ ಮಾಸಿಕ ಸಭೆ

ಪುತ್ತೂರು: ಭಾಗ್ಯಜ್ಯೋತಿ ಜ್ಞಾನವಿಕಾಸ ಕೇಂದ್ರದ ಮಾಸಿಕ ಸಭೆ ನಡೆಯಿತು. ವಕೀಲೆ ಸ್ವಾತಿ ಜೆ. ಶೆಟ್ಟಿ ಅವರು ಮಹಿಳಾ ಸಬಲಿಕರಣ ಮತ್ತು ಮಹಿಳೆಯರಿಗೆ ಲಭ್ಯವಿರುವ ಉಚಿತ ಕಾನೂನಿನ ಬಗ್ಗೆ ಮಾಹಿತಿ ನೀಡಿದರು. ಜ್ಞಾನವಿಕಾಸ ಸಮನ್ವಯ ಅಧಿಕಾರಿ ಕಾವ್ಯಶ್ರೀ ಅವರು ಜ್ಞಾನವಿಕಾಸ ಕೇಂದ್ರದ ಸಮಯಪಾಲನೆ, ಹಾಜರಾತಿ, ಮಾಹಿತಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿ ವಾರ್ಷಿಕೋತ್ಸವದ ಕುರಿತು ತಿಳಿಸಿದರು. ಮೀನಾಕ್ಷಿ ಅಧ್ಯಕ್ಷತೆ ವಹಿಸಿದ್ದರು. ಸೇವಾಪ್ರತಿನಿಧಿ ಆಶಾಲತಾ, ಸಂಯೋಜಕಿ ವಿದ್ಯಾಲಕ್ಷ್ಮಿ ಸಹಕರಿಸಿದರು. ಜನನಿ ಸಂಘದ ಸದಸ್ಯರು ಜವಾಬ್ದಾರಿ ನಿರ್ವಹಿಸಿದರು. ಬಳಿಕ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ

ಭಾಗ್ಯಜ್ಯೋತಿ ಜ್ಞಾನವಿಕಾಸ ಕೇಂದ್ರದ ಮಾಸಿಕ ಸಭೆ Read More »

ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟ

ಸುಬ್ರಹ್ಮಣ್ಯ: ಕುಕ್ಕೆ ಫ್ರೆಂಡ್ಸ್ ಹಾಗೂ ಕಡಬ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ಆಹ್ವಾನಿತ ಆರು ತಂಡಗಳ ಲೀಗ್ ಮಾದರಿಯ ಹೊನ್ನಲು ಬೆಳಕಿನ ಪುರುಷರ ವಾಲಿಬಾಲ್ ಪಂದ್ಯಾಟ ಕಾಶಿ ಕಟ್ಟೆ ಬಳಿಯ ಕ್ರೀಡಾಂಗಣದಲ್ಲಿ ನಡೆಯಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ಶ್ರೀವತ್ಸ ದೀಪ ಬೆಳಗಿ ಉದ್ಘಾಟಿಸಿ, ಗ್ರಾಮೀಣ ಪ್ರದೇಶವಾದ ಸುಬ್ರಹ್ಮಣ್ಯದಲ್ಲಿ ಯುವಕರು ಸಂಘಟಿಸಿ ನಡೆಸಿದ ಈ ವಾಲಿಬಾಲ್ ಪಂದ್ಯಾಟ ಯಶಸ್ವಿಯಾಗಿ ನೆರವೇರಲಿ ಎಂದು ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಕಡಬ ತಾಲೂಕು ವಾಲಿಬಾಲ್

ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟ Read More »

error: Content is protected !!
Scroll to Top