ಅಸುನೀಗಿದ ಅಂಬಾರಿ ಹೊತ್ತಿದ್ದ ‘ಅರ್ಜುನ’!

ಸಕಲೇಶಪುರ: ಈ ಬಾರಿ ನಾಡಹಬ್ಬ ದಸರಾದಲ್ಲಿ ಅಂಬಾರಿ ಹೊತ್ತಿದ್ದ ಸಾಕಾನೆ ಅರ್ಜುನ ಅಸುನೀಗಿದೆ. ಸಕಲೇಶಪುರದಲ್ಲಿ ನಡೆದ ಕಾಡಾನೆ ಸೆರೆ ವೇಳೆ ಘಟನೆ ಸಂಭವಿಸಿದೆ. ಕಾಡಾನೆಗೆ ಅರಿವಳಿಕೆ ಚುಚ್ಚುಮದ್ದು ನೀಡುವ ವೇಳೆ, ಕಾಡಾನೆ ದಾಳಿ ನಡೆಸಿದೆ ಎನ್ನಲಾಗಿದೆ. ಈ ಸಂದರ್ಭ ಗಂಭೀರ ಗಾಯಗೊಂಡ ಅರ್ಜುನ ಅಸುನೀಗಿದೆ ಎಂದು ಹೇಳಲಾಗಿದೆ. ಸಕಲೇಶಪುರದ ಯಸಲೂರಿನಲ್ಲಿ ಘಟನೆ ನಡೆದಿದೆ. ದಾಳಿ ಸಂದರ್ಭ ಮಾವುತರು ಓಡಿ ಹೋಗಿದ್ದಾರೆ. ಈ ಸಂದರ್ಭ ಹಲವರ ಪ್ರಾಣ ಉಳಿಸಲು, ಅರ್ಜುನ ತನ್ನ ಪ್ರಾಣ ಪಣವಾಗಿ ಇಟ್ಟಿದ್ದ. ಇದರಿಂದ ಅರ್ಜುನ […]

ಅಸುನೀಗಿದ ಅಂಬಾರಿ ಹೊತ್ತಿದ್ದ ‘ಅರ್ಜುನ’! Read More »

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಮಂಗಳೂರು ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ಮಂಗಳೂರು ರಾಮಕೃಷ್ಣ ಆಂಗ್ಲ ಮಾಧ್ಯಮ ಶಾಲೆ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ರಾಮಕೃಷ್ಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿ ಪಡೆದುಕೊಂಡಿದ್ದಾರೆ. ಪ್ರೌಢ ಶಾಲಾ ವಿಭಾಗದಲ್ಲಿ 8ನೇ ತರಗತಿಯ ಕುಮಾರಿ ಸುಪ್ರಜಾ ರಾವ್ ಜನಪದ ಗೀತೆಯಲ್ಲಿ ದ್ವಿತೀಯ,

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ Read More »

ಸಿ.ಪಿ. ಯೋಗೇಶ್ವರ್ ಭಾವ ಹತ್ಯೆಯಾದ ಸ್ಥಿತಿಯಲ್ಲಿ ಪತ್ತೆ!!

ಬೆಂಗಳೂರು: ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಅವರ ಭಾವನ ಮೃತದೇಹ ಪತ್ತೆಯಾಗಿದೆ. ರಾಮಾಪುರದ ನಿರ್ಜನ ಪ್ರದೇಶದಲ್ಲಿ ಶವ ಪತ್ತೆಯಾಗಿದ್ದು, ಕೊಲೆಯಾದ ಸ್ಥಿತಿಯಲ್ಲಿದೆ ಎಂದು ಹೇಳಲಾಗಿದೆ. ಮೇಲ್ಮನೆ ಸದಸ್ಯ ಹಾಗೂ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರ ಭಾವ ಮಹದೇವಯ್ಯ ಅವರು ಚಕ್ಕೆರೆ ಗ್ರಾಮದಲ್ಲಿರುವ ತಮ್ಮ ಮನೆಯಿಂದ ಶನಿವಾರ ನಾಪತ್ತೆಯಾಗಿದ್ದರು. ಅಪಹರಣದ ಶಂಕೆಯೂ ವ್ಯಕ್ತವಾಗಿತ್ತು. 62ರ ಹರೆಯದ ಮಹದೇವಯ್ಯ ಅವರು ಯೋಗೇಶ್ವರ ಸಹೋದರಿಯ ಪತಿ. ಮಹದೇವಯ್ಯ ಅವರ ಪತ್ನಿ ಬೆಂಗಳೂರಿಗೆ ಹೋಗಿದ್ದರಿಂದ ಮನೆಯಲ್ಲಿ ಅವರೊಬ್ಬರೇ ಇದ್ದರು. ಶನಿವಾರ ಬೆಳಗ್ಗೆ ಮಹದೇಶ್ವರ

ಸಿ.ಪಿ. ಯೋಗೇಶ್ವರ್ ಭಾವ ಹತ್ಯೆಯಾದ ಸ್ಥಿತಿಯಲ್ಲಿ ಪತ್ತೆ!! Read More »

ಡಿ. 5ರಿಂದ ಕೆಂಪು ಕಲ್ಲು ಸಾಗಾಟ ಅನಿರ್ಧಿಷ್ಟಾವಧಿ ಬಂದ್

ಪುತ್ತೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಂಪು ಕಲ್ಲು ಸಾಗಾಟವನ್ನು ಡಿ. 5ರಿಂದ ಅನಿರ್ದಿಷ್ಟಾವಧಿಗಳ ಕಾಲ ಬಂದ್’ಗೆ ಕರೆ ನೀಡಲಾಗಿದೆ. ಕಡಬ ಹಾಗೂ ಪುತ್ತೂರು ತಾಲೂಕಿನಲ್ಲಿ ಡಿ. 5ರಿಂದ 12ರವರೆಗೆ ಅನಿರ್ಧಿಷ್ಟಾವಧಿ ಬಂದ್ ನಡೆಯಲಿದೆ. ಲಾರಿ ಬಿಡಿ ಭಾಗಗಳಿಗೆ ಮತ್ತು ಡಿಸೇಲ್ ಬೆಲೆ ಏರಿಕೆ ಆಗುತ್ತಿರುವುದನ್ನು ವಿರೋಧಿಸಿ, ಕೆಂಪು ಕಲ್ಲು ಸಾಗಾಟದಲ್ಲಿ ಬ್ರೋಕರ್’ಗಳ ಹಾವಳಿಯನ್ನು ವಿರೋಧಿಸಿ ಬಂದ್’ಗೆ ಕರೆ ನೀಡಲಾಗಿದೆ. ಕೆಂಪು ಕಲ್ಲು ಸಾಗಾಟ ಮಾಡಿ, ತೀರಾ ಕಡಿಮೆ ದರಕ್ಕೆ ಇಳಿಸುವುದು ಕಂಡುಬಂದಿದೆ. ಇದರಿಂದಾಗಿ ಎಲ್ಲಾ ಕೆಂಪು

ಡಿ. 5ರಿಂದ ಕೆಂಪು ಕಲ್ಲು ಸಾಗಾಟ ಅನಿರ್ಧಿಷ್ಟಾವಧಿ ಬಂದ್ Read More »

ಮಿಝೋರಾಂ: ಸೋಲು ಕಂಡ ಮುಖ್ಯಮಂತ್ರಿ, ಬಹುಮತ ಗೆದ್ದ ಝಡ್.ಪಿ.ಎಂ.

ಮಿಝೋರಾಂ: ಮಿಝೋರಾಂನಲ್ಲಿ ZPM ಪಕ್ಷ ನೂತನ ಸರ್ಕಾರವನ್ನು ರಚಿಸಲು ಸಿದ್ಧವಾಗಿದೆ. ZPM ಪಕ್ಷವು 40 ಸ್ಥಾನಗಳಲ್ಲಿ 22 ಸ್ಥಾನಗಳನ್ನು ಗೆದ್ದಿದೆ ಎಂದು ಭಾರತೀಯ ಚುನಾವಣಾ ಆಯೋಗವು ತಿಳಿಸಿದೆ. ಇನ್ನೂ ಐದು ಸ್ಥಾನಗಳಲ್ಲಿ ZPM ಮುನ್ನಡೆಯನ್ನು ಸಾಧಿಸಿದೆ. ಅಲ್ಲದೆ, ಪೂರ್ವ ಐಜ್ವಾಲ್ ನಲ್ಲಿ ಪ್ರತಿಸ್ಪರ್ಧಿ ZPM ಅಭ್ಯರ್ಥಿ ಎದುರು ಮಿಝೋರಾಂ ಮುಖ್ಯಮಂತ್ರಿ ಸೋತಿದ್ದು, ZPM ಗೆ ಭಾರೀ ಮೈಲಿಗಲ್ಲನ್ನು ಸೃಷ್ಟಿಸಿದೆ. ಮುಖ್ಯಮಂತ್ರಿ ಝೊರಾಂಥಾಂಗ ವಿರುದ್ಧ ZPM ಅಭ್ಯರ್ಥಿ ಲಾಲತನಸಂಗ 2,101 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ZPMನ ಮುಖ್ಯಮಂತ್ರಿ

ಮಿಝೋರಾಂ: ಸೋಲು ಕಂಡ ಮುಖ್ಯಮಂತ್ರಿ, ಬಹುಮತ ಗೆದ್ದ ಝಡ್.ಪಿ.ಎಂ. Read More »

ಡಿ.23, 24, 25: ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ನಿಂದ ‘ರೋಟರಿ ಬಿಸಿನೆಸ್ ಎಕ್ಸ್ಪೋ’

ಪುತ್ತೂರು: ಸಮಾಜ ಸೇವೆಯ ಜತೆಗೆ ವ್ಯವಹಾರಕ್ಕೆ ಪ್ರಾಮುಖ್ಯತೆಯನ್ನು ನೀಡುವ ನಿಟ್ಟಿನಲ್ಲಿ ಪುತ್ತೂರಿನ ಬೈಪಾಸ್ ರಸ್ತೆಯಲ್ಲಿರುವ ಸಮೃದ್ದಿ ಸಂಕೀರ್ಣದಲ್ಲಿ ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ವತಿಯಿಂದ ಡಿ.23, 24 ಹಾಗೂ 25 ರಂದು ರೋಟರಿ ಬಿಸಿನೆಸ್ ಎಕ್ಸ್ಪೋ ನಡೆಯಲಿದೆ ಎಂದು ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಅಧ್ಯಕ್ಷ ಡಾ. ರಾಜೇಶ್ ಬೆಜ್ಜಂಗಳ ಹೇಳಿದರು. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮದಲ್ಲಿ ಒಂದು ವಸ್ತುವಿನ ಒಂದು ಸ್ಟಾಲ್ ನಂತೆ 100 ಸ್ಟಾಲ್ ಗಳು, ಆಹಾರ, ವಾಹನ, ಉದ್ಯಮ ಮೇಳಗಳು, ವಿಶೇಷ

ಡಿ.23, 24, 25: ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ನಿಂದ ‘ರೋಟರಿ ಬಿಸಿನೆಸ್ ಎಕ್ಸ್ಪೋ’ Read More »

ವಿವಿಧ ಬೇಡಿಕೆಗಳ ಈಡೇರಿಕೆಗೆ ಕರ್ನಾಟಕ ಕಟ್ಟಡ ಕಾರ್ಮಿಕ ಸಂಘದಿಂದ ಮನವಿ

ಪುತ್ತೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪುತ್ತೂರು ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಸಹಾಯಕ ಆಯುಕ್ತರ ಮೂಲಕ ಸರಕಾರಕ್ಕೆ ಸೋಮವಾರ ಮನವಿ ಸಲ್ಲಿಸಲಾಯಿತು. ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳು ಕಳೆದ ಎರಡು ವರ್ಷಗಳಿಂದ ಸಿಗದೇ ಇರುವ ಹಿನ್ನಲೆಯಲ್ಲಿ ಅವಲಂಬಿತರಿಗೆ ತುಂಬಾ ತೊಂದರೆ ಉಂಟಾಗಿದೆ. ತಕ್ಷಣ ಸಂಬಂಧಿಸಿದ ಇಲಾಖೆಗೆ ಸೂಕ್ತ ನಿರ್ದೇಶನ ನೀಡಿ ತಕ್ಷಣ ಸೌಲಭ್ಯ ಸಿಗವಂತಾಗಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನವಕರ್ನಾಟಕ ಕಟ್ಟಡ ಕಾರ್ಮಿಕರ

ವಿವಿಧ ಬೇಡಿಕೆಗಳ ಈಡೇರಿಕೆಗೆ ಕರ್ನಾಟಕ ಕಟ್ಟಡ ಕಾರ್ಮಿಕ ಸಂಘದಿಂದ ಮನವಿ Read More »

ಪೊಲೀಸರಿಂದ ವಕೀಲರೊಬ್ಬರ ಮೇಲೆ ಹಲ್ಲೆ | ವಕೀಲರಿಂದ ಖಂಡನಾ ಸಭೆ, ಸಾಂಕೇತಿಕ ಪ್ರತಿಭಟನೆ

ಪುತ್ತೂರು: ಚಿಕ್ಕಮಗಳೂರಿನಲ್ಲಿ ವಕೀಲರೊಬ್ಬರ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯವನ್ನು ಖಂಡಿಸಿ ಪುತ್ತೂರು ಬಾರ್ ಎಸೋಸಿಯೇಶನ್ ವತಿಯಿಂದ ಖಂಡನಾ ಸಭೆ ನಡೆದು, ನ್ಯಾಯಾಲಯದ ಆವರಣದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು. ಖಂಡನಾ ಸಭೆಯಲ್ಲಿ ನ್ಯಾಯವಾದಿ ಮಹೇಶ್ ಕಜೆ ಮಾತನಾಡಿ, ಹೆಲ್ಮೆಟ್ ಧರಿಸದೇ ಇದ್ದ ವಕೀಲರೊಬ್ಬರ ಮೇಲೆ ಪೊಲೀಸರು ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಮಾತ್ರವಲ್ಲ, ಪ್ರತಿಭಟಿಸಿದ ಇತರ ವಕೀಲರ ಮೇಲೆ ಸುಳ್ಳು ಕೇಸ್ ದಾಖಲು ಮಾಡಿರುವುದು ಖಂಡನೀಯ. ಇದಲ್ಲದೇ, ವಕೀಲರಿಗೆ ಸವಾಲು ಹಾಕಿದ್ದು ಸರಿಯಲ್ಲ. ಪೊಲೀಸರು ವಕೀಲರ ಮೇಲೆ ನಡೆಸಿರುವುದು ಮಾನವ

ಪೊಲೀಸರಿಂದ ವಕೀಲರೊಬ್ಬರ ಮೇಲೆ ಹಲ್ಲೆ | ವಕೀಲರಿಂದ ಖಂಡನಾ ಸಭೆ, ಸಾಂಕೇತಿಕ ಪ್ರತಿಭಟನೆ Read More »

ಮಧ್ಯಪ್ರದೇಶ: ಸಂದೇಶ ರವಾನಿಸಿರುವ ಬಿಜೆಪಿ!

ಭೋಪಾಲ್: ಮಧ್ಯಪ್ರದೇಶದ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಆಡಳಿತ ಪಕ್ಷ ಬಿಜೆಪಿ ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್, ಫಗ್ಗನ್ ಸಿಂಗ್ ಕುಲಸ್ತೆ ಮತ್ತು ಪ್ರಹ್ಲಾದ್ ಪಟೇಲ್ ಮತ್ತು ಮಧ್ಯಪ್ರದೇಶದಿಂದ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ ವರ್ಗಿಯಾ ಸೇರಿದಂತೆ ಏಳು ಲೋಕಸಭಾ ಸದಸ್ಯರನ್ನು ಕಣಕ್ಕಿಳಿಸಿತ್ತು. ಇದರಿಂದಾಗಿ ಸಿಎಂ ಹುದ್ದೆಗೆ ಆಯ್ಕೆಗಳನ್ನು ತೆರೆದಿಟ್ಟಿದ್ದು, ಅಧಿಕಾರವನ್ನು ಮತ್ತೆ ಉಳಿಸಿಕೊಂಡರೆ ಚೌಹಾಣ್ ಸ್ವಯಂಚಾಲಿತ ಆಯ್ಕೆಯಾಗದಿರಬಹುದು ಎಂಬ ಸಂದೇಶವನ್ನು ಬಿಜೆಪಿ ಕಳುಹಿಸಿದೆ. ಮಧ್ಯಪ್ರದೇಶದ ಒಟ್ಟು 230 ಸ್ಥಾನಗಳ ಪೈಕಿ ಬಿಜೆಪಿ 163 ಸ್ಥಾನಗಳನ್ನು ಗೆದ್ದುಕೊಂಡಿದೆ.

ಮಧ್ಯಪ್ರದೇಶ: ಸಂದೇಶ ರವಾನಿಸಿರುವ ಬಿಜೆಪಿ! Read More »

ಭಾರತೀಯ ವಾಯುಪಡೆಯ ತರಬೇತಿ ವಿಮಾನ ಪತನ, ಪೈಲಟ್ ಗಳ ದುರಂತ ಸಾವು!

ಭಾರತೀಯ ವಾಯುಪಡೆಯ (ಐಎಎಫ್) ತರಬೇತಿ ವಿಮಾನವು ತೆಲಂಗಾಣದಲ್ಲಿ ಪತನವಾಗಿದ್ದು ವಿಮಾನದಲ್ಲಿದ್ದ ಪೈಲಟ್’ಗಳು ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ. ತೆಲಂಗಾಣದ ತೂಪ್ರಾನ್‌ನ ರಾವೆಲ್ಲಿ ಗ್ರಾಮದ ಹೊರವಲಯದಲ್ಲಿ ಸೋಮವಾರ ಬೆಳಗ್ಗೆ ಪಿಲಾಟಸ್ ವಿಮಾನ ಪತನಗೊಂಡಿದೆ. ದುರಂತದ ವೇಳೆ ವಿಮಾನದಲ್ಲಿ ಎಷ್ಟು ಮಂದಿ ಇದ್ದರು ಎಂಬುದು ತಕ್ಷಣಕ್ಕೆ ಖಚಿತವಾಗಿಲ್ಲ. ಅಪಘಾತದ ನಂತರ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ವಿಮಾನವು ಸುಟ್ಟು ಬೂದಿಯಾಗಿದೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಐಎಎಫ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಪೈಲಟ್ ಗಳು ಸಾವನ್ನಪ್ಪಿದ್ದಾರೆ. ಪೈಲಟ್‌ಗಳಲ್ಲಿ ಒಬ್ಬ ಬೋಧಕ

ಭಾರತೀಯ ವಾಯುಪಡೆಯ ತರಬೇತಿ ವಿಮಾನ ಪತನ, ಪೈಲಟ್ ಗಳ ದುರಂತ ಸಾವು! Read More »

error: Content is protected !!
Scroll to Top