ಅತ್ತಾವರ ಫ್ಲ್ಯಾಟ್’ನಲ್ಲಿ ಬೆಂಕಿ: ಮಹಿಳೆ ಗಂಭೀರ!

ಮಂಗಳೂರು: ನಗರದ ಅತ್ತಾವರದಲ್ಲಿ ವಸತಿ ಸಮುಚ್ಚಯದ 12ನೇ ಮಹಡಿಯಲ್ಲಿ ಮಂಗಳವಾರ ಮುಂಜಾನೆ ಬೆಂಕಿ ಅವಘಡ ಸಂಭವಿಸಿದ್ದು, ಮಹಿಳೆಯೋರ್ವರು ಗಂಭೀರ ಗಾಯಗೊಂಡಿದ್ದಾರೆ. ಒಂದು ಫ್ಲ್ಯಾಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಲ್ಲಿ ಒಂಭತ್ತು ಮಂದಿ ಇದ್ದರೆಂದು ತಿಳಿದು ಬಂದಿದೆ. ಗಂಭೀರ ಸ್ಥಿತಿಯಲ್ಲಿರುವ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಪಾಂಡೇಶ್ವರ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿದೆ.

ಅತ್ತಾವರ ಫ್ಲ್ಯಾಟ್’ನಲ್ಲಿ ಬೆಂಕಿ: ಮಹಿಳೆ ಗಂಭೀರ! Read More »

‘ಕಾಂತಾರ ಚಾಪ್ಟರ್ 1’ ಈಗಷ್ಟೇ ಶುರು: ರಿಷಬ್ ಮಾತಿನ ಮರ್ಮವೇನು?

“ಕಾಂತಾರ ಚಾಪ್ಟರ್‌ -1” ಶುರು ಮಾಡಿದ್ದೇವೆ. ಅಧ್ಯಾಯ ಎರಡನ್ನು ನೋಡಿ ನೀವು ದೊಡ್ಡ ಹಿಟ್‌ ಮಾಡಿದ್ದೀರಿ. ಇದರ ಸಂಪೂರ್ಣ ಸಕ್ಸಸ್‌ ನ್ನು ಕನ್ನಡಿಗರಿಗೆ ಅರ್ಪಿಸಲು ಇಷ್ಟಪಡ್ತೇನೆ. ಇದು ಕುಂದಾಪುರದ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ಸನ್ನಿಧಿಯಲ್ಲಿ  ನೆರವೇರಿದ ʼಕಾಂತಾರʼ ಪ್ರೀಕ್ವೆಲ್‌ ಮುಹೂರ್ತ ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿ ಮಾತು ಕಾಂತಾರದ ಮುಂದುವರೆದ ಪಯಣದಲ್ಲಿ ಮುನ್ನುಡಿ ಅಂದರೆ ಹಿಂದೆ ಏನು ನಡೆಯಿತು ಎನ್ನುವುದನ್ನು ಹೇಳಲು ಹೊರಟಿದ್ದೇನೆ. ಹಿಂದಿನಂತೆ ಈ ಸಿನಿಮಾಕ್ಕೂ ನಿಮ್ಮೆಲ್ಲರ ಹಾರೈಕೆ ಇರಲಿ. ಯಶಸ್ಸನ್ನು ಜವಾಬ್ದಾರಿಯಾಗಿ ತೆಗೆದುಕೊಂಡು ಅದ್ಭುತವಾಗಿ

‘ಕಾಂತಾರ ಚಾಪ್ಟರ್ 1’ ಈಗಷ್ಟೇ ಶುರು: ರಿಷಬ್ ಮಾತಿನ ಮರ್ಮವೇನು? Read More »

ಮಹಿಳೆಯನ್ನು ಕೊಂದಿದ್ದ ಹೆಬ್ಬುಲಿ ಸೆರೆ!

ಕೆಲ ದಿನಗಳ ಹಿಂದೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ವ್ಯಾಪ್ತಿಯಲ್ಲಿ 50 ವರ್ಷದ ಮಹಿಳೆಯನ್ನು ಕೊಂದಿದ್ದ ಹುಲಿ ಮಂಗಳವಾರ ನಸುಕಿನ ಜಾವ 1.40ರ ಸುಮಾರಿಗೆ ಸೆರೆ ಸಿಕ್ಕಿದೆ. ಸೆರೆಸಿಕ್ಕ ಹತ್ತು ವರ್ಷದ ಗಂಡು ಹುಲಿ ಆರೋಗ್ಯವಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. ಇದನ್ನು ಮೈಸೂರು ಸಮೀಪದ ಕೂರ್ಗಳ್ಳಿ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ನವೆಂಬರ್ 24ರಂದು ಮಹಿಳೆಯನ್ನು ಕೊಂದಿದ್ದ ಹುಲಿ ಎರಡು ಜಾನುವಾರುಗಳನ್ನು ಕೊಂದಿತ್ತು. ಬೋನಿನೊಳಗೆ ಕಾದು ಕುಳಿತಿದ್ದ ಅರಣ್ಯ ಸಿಬ್ಬಂದಿ ಸಮಾಧಾನಪಡಿಸಿ ಹಸುವನ್ನು ತಿನ್ನಲು ಬಂದಾಗ ಸೆರೆ

ಮಹಿಳೆಯನ್ನು ಕೊಂದಿದ್ದ ಹೆಬ್ಬುಲಿ ಸೆರೆ! Read More »

ಬೈಕ್‍ನಲ್ಲಿ ತೆರಳುತ್ತಿದ್ದ ಭಿನ್ನ ಕೋಮಿನ ಜೋಡಿ | ಹಲ್ಲೆಗೆ ಯತ್ನಿಸಿದ ಇಬ್ಬರ ಬಂಧನ

ಭಿನ್ನಕೋಮಿನ ಯುವಕ ಹಾಗೂ ಯುವತಿ ಬೈಕ್’ನಲ್ಲಿ ಹೋಗುತ್ತಿದ್ದ ವೇಳೆ, ಹಿಂಬಾಲಿಸಿಕೊಂಡು ಹೋದ ತಂಡ ಹಲ್ಲೆಗೆ ಮುಂದಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಅಕ್ಷಯ್ ರಾವ್ ಮತ್ತು ಶಿಬಿನ್ ಪಡಿಕ್ಕಲ್ ಬಂಧಿತರು. ಸೋಮವಾರ ರಾತ್ರಿ 8 ಗಂಟೆಯ ವೇಳೆಗೆ ಮಂಗಳೂರಿನ ಮುಳಿಹಿತ್ಲು ಎಂಬಲ್ಲಿನ ಸ್ಪೋರ್ಟ್ಸ್ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಭಿನ್ನಕೋಮಿನ ಜೋಡಿ ಬೈಕ್’ನಲ್ಲಿ ಜೊತೆಯಾಗಿ ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ. ಮೊಬೈಲ್ ರಿಪೇರ್ ಮಾಡಿಸಿಕೊಂಡು ನಗರದ ಮಿಲಾಗ್ರಿಸ್ ಚರ್ಚ್ ಕಡೆಯಿಂದ ಭಗಿನಿ ಸಮಾಜದ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದರು.

ಬೈಕ್‍ನಲ್ಲಿ ತೆರಳುತ್ತಿದ್ದ ಭಿನ್ನ ಕೋಮಿನ ಜೋಡಿ | ಹಲ್ಲೆಗೆ ಯತ್ನಿಸಿದ ಇಬ್ಬರ ಬಂಧನ Read More »

ನಿವೃತ್ತ ಆರೋಗ್ಯ ಸಹಾಯಕಿ ಗಾಯತ್ರಿ ನಿಧನ

ಪುತ್ತೂರು: ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ  ನಿವೃತ್ತ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಗಾಯತ್ರಿ (63) ಮಂಗಳವಾರ ನಿಧನರಾದರು. ಸುಮಾರು 30 ವರ್ಷಗಳ ಕಾಲ ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿರುವ ಗಾಯತ್ರಿ ಸೇವಾ ಅವಧಿಯಲ್ಲಿ ಉತ್ತಮ ಸೇವೆ ನೀಡುವ ಮೂಲಕ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು. ಮೃತರು ಇಬ್ಬರು ಪುತ್ರಿಯರು, ಅಳಿಯ, ಬಂಧು ಬಳಗವನ್ನು ಅಗಲಿದ್ದಾರೆ.

ನಿವೃತ್ತ ಆರೋಗ್ಯ ಸಹಾಯಕಿ ಗಾಯತ್ರಿ ನಿಧನ Read More »

ಅನುವಾದ ಮಾಡುವ ಸಂದರ್ಭ ಎಚ್ಚರಿಕೆ ವಹಿಸಬೇಕು | ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ದತ್ತಿ ನಿಧಿ-2015 ಕಾರ್ಯಕ್ರಮದಲ್ಲಿ ಸಾಹಿತಿ ಜಯಪ್ರಕಾಶ್

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಯುವ, ಅದ್ವಯ ಕನ್ನಡ ಸಂಘ, ರೋಟರಾಕ್ಟ್  ಕ್ಲಬ್,  ಅಕ್ಷಯ ಕಾಲೇಜ್ ಸಹಯೋಗದೊಂದಿಗೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ದತ್ತಿ ನಿಧಿ-2015 ಕಾರ್ಯಕ್ರಮ ನಡೆಯಿತು. ಹಿರಿಯ ಸಾಹಿತಿ  ಜಯಪ್ರಕಾಶ್ ಪುತ್ತೂರು ಉಪನ್ಯಾಸ ನೀಡಿ, ಭಾರತದ ಮಾಜಿ ರಾಷ್ಟ್ರಪತಿ ಡಾ ಅಬ್ದುಲ್ ಕಲಾಮ್ ಅವರು ರಚಿಸಿದ “ವಿಂಗ್ಸ್ ಒಫ್ ಫೈರ್” ಕೃತಿಯನ್ನು “ಅಗ್ನಿಯ ರೆಕ್ಕೆಗಳು” ಎಂಬ  ಹೆಸರಿನಿಂದ ಕನ್ನಡಕ್ಕೆ ಅನುವಾದ ಮಾಡಿದ  ರೋಚಕ ಅನುಭವಗಳನ್ನು ಹಾಗೂ ಅನುವಾದ ಮಾಡುವ ಸಂದರ್ಭದಲ್ಲಿ ಅನೇಕ ವಿಚಾರಗಳಲ್ಲಿ ಎಚ್ಚರಿಕೆಯನ್ನು ವಹಿಸ ಬೇಕಾಗುತ್ತದೆ

ಅನುವಾದ ಮಾಡುವ ಸಂದರ್ಭ ಎಚ್ಚರಿಕೆ ವಹಿಸಬೇಕು | ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ದತ್ತಿ ನಿಧಿ-2015 ಕಾರ್ಯಕ್ರಮದಲ್ಲಿ ಸಾಹಿತಿ ಜಯಪ್ರಕಾಶ್ Read More »

ನೆರಿಯದಲ್ಲಿ ಕಾಡಾನೆ ದಾಳಿ !

ನೆರಿಯ: ನೆರಿಯ ಪೋಸ್ಟ್ ಆಫೀಸ್ ಬಳಿ ಕಾಡಾನೆ ಕಾರೊಂದರ ಮೇಲೆರಗಿದ ಘಟನೆ ನಡೆದಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಆರು ಜನರು ಪ್ರಯಾಣಿಸುತ್ತಿದ್ದ ಆಲ್ಟೋ ಕಾರಿನ ಮೇಲೆ ಆನೆ ದಾಳಿ ನಡೆಸಿದೆ ಎನ್ನಲಾಗಿದ್ದು, ಪುತ್ತೂರು ಮೂಲದ ಅಬ್ದುಲ್ ರೆಹಮಾನ್ (40) ಹಾಗೂ ನಾಸಿಯಾ (30) ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಕಾರು ಸಂಪೂರ್ಣ ಜಖಂಗೊಂಡಿದ್ದು, ಸ್ಥಳೀಯರು ಆತಂಕದಲ್ಲಿದ್ದಾರೆ.

ನೆರಿಯದಲ್ಲಿ ಕಾಡಾನೆ ದಾಳಿ ! Read More »

ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ಟಿ. ಶ್ಯಾಮ್ ಭಟ್ ನೇಮಕ

ಬೆಂಗಳೂರು : ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ನಿವೃತ್ತ ಐಎಎಸ್ ಅಧಿಕಾರಿ ಟಿ. ಶ್ಯಾಮ್ ಭಟ್ ಅವರು ನೇಮಕಗೊಂಡಿದ್ದಾರೆ. ಕರ್ನಾಟಕದ ರಾಜ್ಯಪಾಲರು ಈ ಆದೇಶ ಮಾಡಿದ್ದಾರೆ. ಟಿ. ಶ್ಯಾಮ್ ಭಟ್ ಅವರು ಜಿಲ್ಲಾಧಿಕಾರಿಗಳಾಗಿ, ಲೋಕಸೇವಾ ಆಯೋಗದಲ್ಲಿ, ಅದೇ ರೀತಿ ಬಿಬಿಎಂಪಿ ಆಯುಕ್ತರಾಗಿಯೂ ಕರ್ತವ್ಯ ನಿರ್ವಹಿಸಿದ್ದರು. ಇದೀಗ ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ಟಿ. ಶ್ಯಾಮ್ ಭಟ್ ಅವರನ್ನು ನೇಮಕ ಮಾಡಲಾಗಿದೆ.

ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ಟಿ. ಶ್ಯಾಮ್ ಭಟ್ ನೇಮಕ Read More »

ಹಳಿ ದಾಟುತ್ತಿದ್ದ ಆನೆಗಳಿಗೆ ಗೂಡ್ಸ್ ರೈಲು ಡಿಕ್ಕಿ: ಮರಿ ಸೇರಿ 3 ಆನೆಗಳ ಸಾವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಕ್ಸಾ ಹುಲಿ ಸಂರಕ್ಷಿತ ಅರಣ್ಯದಲ್ಲಿ ಗೂಡ್ಸ್ ರೈಲು ಡಿಕ್ಕಿ ಹೊಡೆದ ಪರಿಣಾಮ 3 ಆನೆಗಳು ಸಾವನ್ನಪ್ಪಿವೆ. ರಾಜಭಟ್ಖಾವಾ ಮತ್ತು ಕಲ್ಚಿನಿ ರೈಲು ನಿಲ್ದಾಣಗಳ ನಡುವಿನ ಶಿಖಾರಿ ಗೇಟ್ ಬಳಿ ಬೆಳಗ್ಗೆ 7 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ. ಒಂದು ಮರಿ ಮತ್ತು ಎರಡು ವಯಸ್ಕ ಆನೆಗಳು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿವೆ. ಅಲಿಪುರ್ದೌರ್ ಜಿಲ್ಲೆಯ ಹುಲಿ ಸಂರಕ್ಷಿತ ಪ್ರದೇಶದ ಪಶ್ಚಿಮ ರಾಜಭಟ್ಖಾವಾ ಶ್ರೇಣಿಯಲ್ಲಿ ಸಂಭವಿಸಿದ ಈ ಘಟನೆಯು ಭಾರತದಲ್ಲಿ ರೈಲು

ಹಳಿ ದಾಟುತ್ತಿದ್ದ ಆನೆಗಳಿಗೆ ಗೂಡ್ಸ್ ರೈಲು ಡಿಕ್ಕಿ: ಮರಿ ಸೇರಿ 3 ಆನೆಗಳ ಸಾವು Read More »

ಸಿಎಂ ಅಪರ ಮುಖ್ಯ ಕಾರ್ಯದರ್ಶಿಯಾಗಿ ಎಲ್.ಕೆ. ಅತೀಕ್

ಬೆಂಗಳೂರು: ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಎಲ್.ಕೆ. ಅತೀಕ್ ಅವರನ್ನು ನೇಮಕ ಮಾಡಲಾಗಿದೆ. ಈವರೆಗೂ ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅತೀಕ್ ಅವರು ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಜತೆಗೆ ಹಣಕಾಸು ಇಲಾಖೆಯ ಹುದ್ದೆಯಲ್ಲೂ ಮುಂದುವರಿಯಲಿದ್ದಾರೆ. ಅವರು ತುಮಕೂರು ಜಿಲ್ಲೆ ಪಾವಗಡದವರು. 1991ನೇ ಬ್ಯಾಚ್ನ ಐಎಎಸ್ ಅಧಿಕಾರಿ. ಮಂಗಳೂರು ಎಸಿಯಾಗಿ ನಂತರ ಮಂಡ್ಯ, ಹಾಸನ ಡಿಸಿಯಾಗಿದ್ದವರು. ಸರ್ವ ಶಿಕ್ಷಾ ಅಭಿಯಾನದ ಯೋಜನಾ ನಿರ್ದೇಶಕರೂ ಆಗಿದ್ದರು. ಕೇಂದ್ರ ಸರ್ಕಾರದ ಸೇವೆಯಲ್ಲಿ ಪ್ರಧಾನ ಮಂತ್ರಿಗಳ

ಸಿಎಂ ಅಪರ ಮುಖ್ಯ ಕಾರ್ಯದರ್ಶಿಯಾಗಿ ಎಲ್.ಕೆ. ಅತೀಕ್ Read More »

error: Content is protected !!
Scroll to Top