ಅನ್ಯ ಮತೀಯ ಯುವಕನಿಂದ ಯುವತಿಗೆ ಕಿರುಕುಳ | ಆರೋಪಿ ಬಂಧನ

ಸುಳ್ಯ: ಅನ್ಯಮತೀಯ ಯುವಕನೊಬ್ಬ ಯುವತಿಗೆ ಕಿರುಕುಳ ನೀಡಿದ ಘಟನೆ ನಿಂತಿಕಲ್ಲಿನಲ್ಲಿ ಇಂದು ರಾತ್ರಿ ನಡೆದಿದೆ. ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಯುವತಿಯ ಮೈಗೆ ಕೈ ಹಾಕಿರುವುದಾಗಿ ಯುವತಿ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದು, ಯುವಕನನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಹಿಂದೂ ಕಾರ್ಯಕರ್ತರು ಠಾಣೆ ಎದುರು ಜಮಾಯಿಸಿರುವುದಾಗಿ ತಿಳಿದು ಬಂದಿದೆ.

ಅನ್ಯ ಮತೀಯ ಯುವಕನಿಂದ ಯುವತಿಗೆ ಕಿರುಕುಳ | ಆರೋಪಿ ಬಂಧನ Read More »

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ | ಪ್ರಕರಣದಲ್ಲಿ ಭಾಗಿಯಾದ ಕಾಂಗ್ರೆಸ್ ಎಸ್.ಸಿ. ಘಟಕದ ಅಧ್ಯಕ್ಷ ಕೇಶವ ಪಡೀಲ್ ಪಕ್ಷದಿಂದ ಉಚ್ಛಾಟನೆ !

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್‌ ಬಂಧನಕ್ಕೊಳಗಾಗಿರುವ ಪುತ್ತೂರು ಕಾಂಗ್ರೆಸ್ ಎಸ್.ಸಿ. ಘಟಕದ ಅಧ್ಯಕ್ಷ ಕೇಶವ ಪಡೀಲ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗುವುದು ಎಂದು ಬ್ಲಾಕ್ ಕಾಂಗ್ರೆಸ್ ವಲಯದಿಂದ ಕೇಳಿ ಬಂದಿದೆ. ಕೊಲೆ ಆರೋಪ ಎದುರಿಸುತ್ತಿರುವ ಕೇಶವ ಪಡೀಲ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ಹುದ್ದೆಯಿಂದ ಉಚ್ಚಾಟನೆ ಮಾಡಲಾಗುವುದು. ಕೇಶವ ಪಡೀಲ್ ಅವರು ಕೊಲೆ ಪ್ರಕರಣದ ಆರೋಪದ ಮೇಲೆ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅವರ ಮೇಲೆ ಕೊಲೆ

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ | ಪ್ರಕರಣದಲ್ಲಿ ಭಾಗಿಯಾದ ಕಾಂಗ್ರೆಸ್ ಎಸ್.ಸಿ. ಘಟಕದ ಅಧ್ಯಕ್ಷ ಕೇಶವ ಪಡೀಲ್ ಪಕ್ಷದಿಂದ ಉಚ್ಛಾಟನೆ ! Read More »

ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಬೈಕ್ ಡಿಕ್ಕಿ

ಕುಂಬ್ರ: ವಿದ್ಯಾರ್ಥಿನಿಯೋರ್ವಳು ರಸ್ತೆ ದಾಟುತ್ತಿದ್ದ ವೇಳೆ ಬೈಕೊಂದು ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಬುಧವಾರ ಕುಂಬ್ರದಲ್ಲಿ ನಡೆದಿದೆ. ಕುಂಬ್ರ ಮಗಿರೆ ನಿವಾಸಿ ಸಲೀಂ ಎಂಬವರ ಪುತ್ರಿ, ಕುಂಬ್ರ ಕೆಪಿಎಸ್ ಸ್ಕೂಲ್ ನ 9ನೇ ತರಗತಿ ವಿದ್ಯಾರ್ಥಿನಿ ಅನ್ನತ್ ಬೀಬಿ ಗಾಯಗೊಂಡ ವಿದ್ಯಾರ್ಥಿನಿ. ಬೆಳಿಗ್ಗೆ ಶಾಲೆಗೆ ಹೋಗಲು ರಸ್ತೆ ದಾಟುತ್ತಿದ್ದ ವೇಳೆ ಕುಂಬ್ರ ಕಡೆಯಿಂದ ಕೃಷ್ಣ ಎಂಬವರು ಚಲಾಯಿಸಿಕೊಂಡು ಬಂದ ಬೈಕ್ ಡಿಕ್ಕಿಯಾಗಿದೆ. ಅಪಘಾತದಿಂದ ವಿದ್ಯಾರ್ಥಿನಿ ನೆಲಕ್ಕೆ ಬಿದ್ದು ಕೈ ಹಾಗೂ ಕಾಲಿಗೆ ಗಾಯಗಳಾಗಿವೆ. ತಕ್ಷಣ ಸ್ಥಳೀಯ ರಿಕ್ಷಾ

ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಬೈಕ್ ಡಿಕ್ಕಿ Read More »

ವಿದ್ಯಾರಶ್ಮಿಯಲ್ಲಿ ಎಸ್.ಆರ್.ಕೆ.ಯ ಕೇಶವರೊಂದಿಗೆ ಸಂವಾದ

ಸವಣೂರು: ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಎಸ್.ಆರ್.ಕೆ. ಲ್ಯಾಡರ್ಸ್‌ನ ಮ್ಹಾಲಕರಾದ ಕೇಶವ ಅಮೈ ಅವರೊಂದಿಗೆ ಸಂವಾದ ಕಾರ್ಯಕ್ರಮವನ್ನು ನ.8 ರಂದು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿದ್ಯಾಲಯದ ಸಂಚಾಲಕ ಸವಣೂರು ಸೀತಾರಾಮ ರೈಯವರು ಕೇಶವ ಅವರಿಗೆ ’ವಿದ್ಯಾರಶ್ಮಿ ಸನ್ಮಾನ’ ನೀಡಿ ಮಾತನಾಡಿ, ನಾವು ನಮ್ಮ ದೋಷಗಳನ್ನು ಮೀರಿ ಬೆಳೆಯಬೇಕಾಗಿದೆ. ಒಂದಷ್ಟು ನ್ಯೂನತೆಗಳಿದ್ದ ತಕ್ಷಣ ಧೈರ್ಯಗುಂದದೆ ಹೊಸ ಅವಕಾಶಗಳನ್ನು ಹುಡುಕಿಕೊಂಡು ಬೆಳೆಯಬೇಕು. ದೃಷ್ಟಿ ದೋಷವಿದ್ದರೂ ಛಲ ಬಿಡದೆ ಅದ್ಭುತವಾಗಿ ಸಾಧಿಸಿ ಎಸ್.ಆರ್.ಕೆ. ಲ್ಯಾಡರ್ಸ್ ಎಂಬ ಸಂಸ್ಥೆಯನ್ನು ಕಟ್ಟಿ ಸುಮಾರು 75 ಕುಟುಂಬಗಳಿಗೆ

ವಿದ್ಯಾರಶ್ಮಿಯಲ್ಲಿ ಎಸ್.ಆರ್.ಕೆ.ಯ ಕೇಶವರೊಂದಿಗೆ ಸಂವಾದ Read More »

ಕಾಲೇಜಿಗೆ ತೆರಳಿದ ವಿದ್ಯಾರ್ಥಿನಿ ದೀಪಾ ಕಾಣೆ | ಪ್ರಕರಣ ದಾಖಲು

ಕಾರ್ಕಳ : ಕಾಲೇಜಿಗೆ ತೆರಳಿದ ವಿದ್ಯಾರ್ಥಿನಿಯೋರ್ವಳು ಕಾಣೆಯಾದ ಘಟನೆ ಕಾರ್ಕಳ ನಂದಳಿಕೆಯಲ್ಲಿ ನಡೆದಿದೆ. ನಂದಳಿಕೆ ಗ್ರಾಮದ ಮಾವಿನಕಟ್ಟೆಯ ದೀಪಾ (21) ಕಾಣೆಯಾದ ವಿದ್ಯಾರ್ಥಿನಿ. ದೀಪಾ ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ತೃತೀಯ ವರ್ಷದ ಬಿ.ಎ. ವಿದ್ಯಾಭ್ಯಾಸ ಮಾಡುತ್ತಿದ್ದು, ನ. 6 ರಂದು ಬೆಳಿಗ್ಗೆ ಕಾಲೇಜಿಗೆ ಹೋಗಿ ಬರುವುದಾಗಿ ಮನೆಯಿಂದ ಹೋಗಿರುತ್ತಾಳೆ. ಆದರೆ ಕಾಲೇಜಿಗೂ ಹೋಗದೆ ಅತ್ತ ವಾಪಾಸು ಮನೆಗೂ ಬಾರದೇ ಜೊತೆಗೆ ಸಂಬಂಧಿಕರ ಮನೆಗೂ ಹೋಗದೆ ಕಾಣೆಯಾಗಿದ್ದಾರೆ. ಈ ಬಗ್ಗೆ ದೀಪಾಳ ಅಣ್ಣ ದಿಲೀಪ್ ಪೂಜಾರಿ ನೀಡಿದ ದೂರಿನಂತೆ

ಕಾಲೇಜಿಗೆ ತೆರಳಿದ ವಿದ್ಯಾರ್ಥಿನಿ ದೀಪಾ ಕಾಣೆ | ಪ್ರಕರಣ ದಾಖಲು Read More »

ಹತ್ಯೆಯಾದ ಅಕ್ಷಯ್ ಕಲ್ಲೇಗ ಮನೆಗೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಭೇಟಿ

ಪುತ್ತೂರು: ಸೋಮವಾರ ತಡರಾತ್ರಿ ಹತ್ಯೆಯಾದ  ಕಲ್ಲೇಗ ಟೈಗರ್ಸ್ ಸ್ಥಾಪಕ ಅಕ್ಷಯ್ ಕಲ್ಲೇಗ  ಮನೆಗೆ ಅರುಣ್  ಪುತ್ತಿಲ ಭೇಟಿ  ನೀಡಿದರು. ಖಾಸಗಿ ಕಾರ್ಯಕ್ರಮದ ನಿಮಿತ್ತ ಬೆಂಗಳೂರಿಗೆ ತೆರಳಿದ್ದ ಅರುಣ್ ಕುಮಾರ್ ಪುತ್ತಿಲ ಇಂದು ಅಕ್ಷಯ್ ಮನೆಗೆ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು.  ಘಟನೆ ನಡೆದ ದಿನವೇ ಪೊಲೀಸ್ ವರಿಷ್ಠಾಧಿಕಾರಿ ಜೊತೆ ಮಾತನಾಡಿದ್ದೇನೆ, ಅಕ್ಷಯ್ ಕಲ್ಲೇಗ ಕೊಲೆ ಆರೋಪಿಗಳಿಗೆ ಕಾನೂನು ಪ್ರಕಾರ ಸೂಕ್ತ ಶಿಕ್ಷೆ ಆಗಬೇಕು ಎಂದ ಅವರು, ಮಾಧ್ಯಮಗಳಲ್ಲಿ ವರದಿಯಾದಂತೆ,  ಪುತ್ತೂರಿನಲ್ಲಿ ಠಾಣೆಯ ಹಿಡಿತದಲ್ಲಿರುವ ಸಿಸಿಟಿವಿಗಳು ಕಾರ್ಯ

ಹತ್ಯೆಯಾದ ಅಕ್ಷಯ್ ಕಲ್ಲೇಗ ಮನೆಗೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಭೇಟಿ Read More »

ಹೃದಯಾಘಾತದಿಂದ ನವವಿವಾಹಿತೆ ಪುಷ್ಪಾ ಮೃತ್ಯು

ಪುತ್ತೂರು: ನವವಿವಾಹಿತೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಪಡುವನ್ನೂರು ಗ್ರಾಮದ ಪದಡ್ಕದಲ್ಲಿ ನಡೆದಿದೆ. ಪುಷ್ಪಾ (22) ಹೃದಯಾಘಾತದಿಂದ ಮೃತಪಟ್ಟವರು. ಅವರಿಗೆ ಬೆಳಗ್ಗೆ 4 ಗಂಟೆಯ ಸುಮಾರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಆಸ್ಪತ್ರೆ ತಲುಪುವ ಮೊದಲೇ ಪುಷ್ಪಾ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಪುಷ್ಪಾ ಅವರು ಕೇವಲ 6 ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು ಎನ್ನಲಾಗಿದೆ.

ಹೃದಯಾಘಾತದಿಂದ ನವವಿವಾಹಿತೆ ಪುಷ್ಪಾ ಮೃತ್ಯು Read More »

ಒತ್ತಡದಲ್ಲಿ ಕೆಲಸ ನಿರ್ವಹಿಸುತ್ತಿರುವ ಪೌರಸೇವಾ ನೌಕರರು ಆರೋಗ್ಯದತ್ತ ಗಮನಹರಿಸಿ | ವೈದ್ಯಕೀಯ ಶಿಬಿರದಲ್ಲಿ ನಗರಸಭೆ ಪೌರಾಯುಕ್ತ ಮಧು ಎನ್‍. ಮನೋಹರ್ | ನಗರಸಭೆ, ಸಮರ್ಪಣಾ ಚಾರಿಟೇಬಲ್ ಟ್ರಸ್ಟ್, ಪೌರಸೇವಾ ನೌಕರರ ಸಂಘ, ಸುಳ್ಯ ಕೆವಿಜಿ ಮೆಡಿಕಲ್, ಆಸ್ಪತ್ರೆ ಸಹಯೋಗದಲ್ಲಿ ವೈದ್ಯಕೀಯ ತಪಾಸಣಾ ಶಿಬಿರ

ಪುತ್ತೂರು: ಪುತ್ತೂರು ನಗರಸಭೆ, ಸಮರ್ಪಣಾ ಚಾರಿಟೇಬಲ್ ಟ್ರಸ್ಟ್, ನಗರಸಭೆ ಪೌರಸೇವಾ ನೌಕರರ ಸಂಘ ಹಾಗೂ ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಸಹಯೋಗದೊಂದಿಗೆ ಪೌರ ಕಾರ್ಮಿಕರು ಹಾಗೂ ಪೌರ ಸೇವಾ ನೌಕರರಿಗೆ ವೈದ್ಯಕೀಯ ತಪಾಸಣಾ ಶಿಬಿರ ನ.8 ರಂದು ಪುತ್ತೂರು ನಗರಸಭೆ ಸಭಾಂಗಣದಲ್ಲಿ ನಡೆಯಿತು. ನಗರಸಭೆ ಪೌರಾಯುಕ್ತ ಮಧು ಎಸ್‍.ಮನೋಹರ್ ಗಿಡಕ್ಕೆ ನೀರು ಎರೆಯುವ ಮೂಲಕ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ನಗರಸಭೆ ಸಿಬ್ಬಂದಿಗಳು ಅದರಲ್ಲೂ ತ್ಯಾಜ್ಯ ವಿಲೇವಾರಿ, ನೀರು ಸರಬರಾಜು, ಬೀದಿ ದೀಪ ನಿರ್ವಹಣೆ ಸಿಬ್ಬಂದಿಗಳು

ಒತ್ತಡದಲ್ಲಿ ಕೆಲಸ ನಿರ್ವಹಿಸುತ್ತಿರುವ ಪೌರಸೇವಾ ನೌಕರರು ಆರೋಗ್ಯದತ್ತ ಗಮನಹರಿಸಿ | ವೈದ್ಯಕೀಯ ಶಿಬಿರದಲ್ಲಿ ನಗರಸಭೆ ಪೌರಾಯುಕ್ತ ಮಧು ಎನ್‍. ಮನೋಹರ್ | ನಗರಸಭೆ, ಸಮರ್ಪಣಾ ಚಾರಿಟೇಬಲ್ ಟ್ರಸ್ಟ್, ಪೌರಸೇವಾ ನೌಕರರ ಸಂಘ, ಸುಳ್ಯ ಕೆವಿಜಿ ಮೆಡಿಕಲ್, ಆಸ್ಪತ್ರೆ ಸಹಯೋಗದಲ್ಲಿ ವೈದ್ಯಕೀಯ ತಪಾಸಣಾ ಶಿಬಿರ Read More »

ನ.18: ಭಗವದ್ಗೀತಾ ಸ್ಪರ್ಧೆ | ಒಟ್ಟು ಆರು ವಿಭಾಗಗಳಲ್ಲಿ ಸ್ಪರ್ಧೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಭಗವದ್ಗೀತಾ ಅಭಿಯಾನ ಸಮಿತಿ, ಶ್ರೀ ಸೊಂದಾ ಸ್ವರ್ಣವಲ್ಲಿ ಮಹಾ ಸಂಸ್ಥಾನ ಹಾಗೂ ನರಿಮೊಗರು ಸರಸ್ವತಿ ವಿದ್ಯಾ ಮಂದಿರ ಪ್ರಾಥಮಿಕ ಹಾಗೂ ಪ್ರೌಢಶಾಲೆ ಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಭಗವದ್ಗೀತಾ ಸ್ಪರ್ಧೆ ನ.18 ಶನಿವಾರ ನರಿಮೊಗರು ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆಯಲಿದೆ. ಅಪರಾಹ್ನ 1.30 ರಿಂದ ಭಗವದ್ಗೀತೆಯ 10ನೇ ಅಧ್ಯಾಯದ ಕುರಿತು ಸ್ಪರ್ಧೆಗಳು ನಡೆಯಲಿದೆ. LKG-UKG, 1 ಮತ್ತು 2ನೇ ತರಗತಿ, 3 ಮತ್ತು 4ನೇ ತರಗತಿ, 5 ರಿಂದ 7ನೇ

ನ.18: ಭಗವದ್ಗೀತಾ ಸ್ಪರ್ಧೆ | ಒಟ್ಟು ಆರು ವಿಭಾಗಗಳಲ್ಲಿ ಸ್ಪರ್ಧೆ Read More »

ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ | ನಾಲ್ವರು ಆರೋಪಿಗಳಿಗೆ ನ.22 ರ ತನಕ ನ್ಯಾಯಾಂಗ ಕಸ್ಟಡಿ

ಪುತ್ತೂರು: ನೆಹರುನಗರದಲ್ಲಿ ಕಲ್ಲೇಗ ಟೈಗರ್‍ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಚೇತನ್, ಮನೀಶ್, ಕೇಶವ, ಮಂಜುನಾಥ್ ಎಂಬವರನ್ನು ಬುಧವಾರ ನ್ಯಯಾಲಯಕ್ಕೆ ಹಾಜರುಪಡಿಸಲಾಯಿತು. ಮಂಗಳವಾರ ರಾತ್ರಿ ಆರೋಪಿಗಳನ್ನು ನ್ಯಾಯಾಧೀಶರ ಮನೆಗೆ ಹಾಜರು ಪಡಿಸಲಾಗಿತ್ತು. ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ನ.22ರ ತನಕ ನ್ಯಾಯಾಂಗ ಕಸ್ಟಡಿಗೊಳಪಡಿಸಿ ಆದೇಶ ನೀಡಿದ್ದಾರೆ. ಸೋಮವಾರ ತಡರಾತ್ರಿ ಅಕ್ಷಯ್ ಕಲ್ಲೇಗ ಅವರನ್ನು ನಾಲ್ವರ ತಂಡ ತಲವಾರಿನಿಂದ ಹತ್ಯೆ ಮಾಡಿತ್ತು. ಅದಾದ ಬಳಿಕ ಆರೋಪಿಗಳು ಪೊಲೀಸರಿಗೆ ಶರಣಾಗಿದ್ದರು.

ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ | ನಾಲ್ವರು ಆರೋಪಿಗಳಿಗೆ ನ.22 ರ ತನಕ ನ್ಯಾಯಾಂಗ ಕಸ್ಟಡಿ Read More »

error: Content is protected !!
Scroll to Top