ಆಟೋ ರಿಕ್ಷಾ-ಓಮ್ನಿ ಡಿಕ್ಕಿ : ರಿಕ್ಷಾ ಚಾಲಕ ಮೃತ್ಯು

ಸುಳ್ಯ: ಓಮ್ನಿ ಹಾಗೂ ಅಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟ ಘಟನೆ ಹಳೆಗೇಟಿನಲ್ಲಿ ಭಾನುವಾರ ರಾತ್ರಿ ನಡೆದಿದೆ. ಜಾಲ್ಸೂರು ಗ್ರಾಮದ ಅರಿಯಡ್ಕ ನಿವಾಸಿ ಬಾಬು ಪಾಟಾಳಿ ಅಪಘಾತದಿಂದ ಮೃತಪಟ್ಟವರು. ಜಾಲ್ಲೂರಿನಿಂದ ಸುಳ್ಯಕ್ಕೆ ಪ್ರಯಾಣಿಕರೋರ್ವರನ್ನು ಬಿಟ್ಟು ಹಿಂತಿರುಗುತ್ತಿದ್ದ ಬಾಬು ಪಾಟಾಳಿಯವರು ಚಲಾಯಿಸುತ್ತಿದ್ದ ಅಟೋರಿಕ್ಷಾ ಹಳೆಗೇಟು ಪೆಟ್ರೋಲ್ ಪಂಪ್ ಬಳಿ ಮುಂಭಾಗದಿಂದ ಬರುತ್ತಿದ್ದ ಓಮ್ಮಿಗೆ ಢಿಕ್ಕಿ ಹೊಡೆದಿದ್ದು, ಚಾಲಕ ಬಾಬು ಪಾಟಾಳಿ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ […]

ಆಟೋ ರಿಕ್ಷಾ-ಓಮ್ನಿ ಡಿಕ್ಕಿ : ರಿಕ್ಷಾ ಚಾಲಕ ಮೃತ್ಯು Read More »

ಪಂಜದ ಯುವಕ ಪಾಂಡಿಚೇರಿಯಲ್ಲಿ ಸಮುದ್ರಪಾಲು

ಸುಳ್ಯ, ನ.5: ಬೆಂಗಳೂರಿನಲ್ಲಿ ಉದ್ಯೋಗಿಯಾಗಿರುವ ಸುಳ್ಯ ತಾಲೂಕಿನ ಪಂಜದ ಯುವಕನೊಬ್ಬ ಪಾಂಡಿಚೇರಿಯಲ್ಲಿ ಸಮುದ್ರ ಪಾಲಾದ ಘಟನೆ ಸಂಭವಿಸಿದೆ. ಪಂಜದ ಕೂತ್ಕುಂಜ ಗ್ರಾಮದ ಚಿದ್ಗಲ್ಲು ಗೋಪಾಲ್ ಎಂಬವರ ಪುತ್ರ ಬಿಪಿನ್ ನೀರುಪಾಲಾದ ಯುವಕ. ಬಿಪಿನ್ ಬೆಂಗಳೂರಿನ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ಶನಿವಾರ ಗೆಳೆಯರೊಂದಿಗೆ ಪಾಂಡಿಚೇರಿಗೆ ಹೋಗಿದ್ದು ಬಳಿಕ ಅಲ್ಲಿನ ಬೀಚ್‌ಗೆ ತೆರಳಿದ್ದ ವೇಳೆ ಸಮುದ್ರಪಾಲಾಗಿದ್ದಾರೆ. ರವಿವಾರ ಯುವಕನ ಮೃತದೇಹ ಪತ್ತೆಯಾಗಿದೆ. ಮೃತರು ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ.

ಪಂಜದ ಯುವಕ ಪಾಂಡಿಚೇರಿಯಲ್ಲಿ ಸಮುದ್ರಪಾಲು Read More »

ನಾಪತ್ತೆಯಾದವರ ಮೃತದೇಹ ಬಾವಿಯಲ್ಲಿ ಪತ್ತೆ

ಪುತ್ತೂರು: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಕಬಕದಲ್ಲಿ ನಡೆದಿದೆ. ಕಡಬಕ ಗ್ರಾಮದ ತೋಟಗಾರಿಕೆ ಇಲಾಖೆ ಬಳಿಯ ಜನತಾ ಕಾಲನಿ ನಿವಾಸಿ ವಿ.ಪಿ.ವೇಣು (44) ಮನೆ ಸಮೀಪದ ಬಾವಿಗೆ ಬಿದ್ದು ಮೃತಪಟ್ಟವರು. ಪಿ.ಕೆ.ವಿಜಯ ಎಂಬವರ ಪುತ್ರರಾಗಿರುವ ವೇಣು ಅವರು ಹಲವು ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರು. ನ.4 ರಂದು ಕಾಣೆಯಾಗಿದ್ದ ಅವರನ್ನು ಹುಡುಕಾಡಿದಾಗ ಮನೆ ಸಮೀಪದ ಸರಕಾರಿ ಬಾವಿ ಬಳಿ ಚಪ್ಪಲಿ ಇರುವ ಮಾಹಿತಿ ತಿಳಿದು ಅಗ್ನಿಶಾಮಕ ದಳದವರನ್ನು ಕರೆಸಲಾಗಿತ್ತು. ಅಗ್ನಿಶಾಮಕ ದಳದವರು

ನಾಪತ್ತೆಯಾದವರ ಮೃತದೇಹ ಬಾವಿಯಲ್ಲಿ ಪತ್ತೆ Read More »

ಸುಬ್ರಹ್ಮಣ್ಯದಲ್ಲಿ ಸ್ವಚ್ಛತಾ ಕಾರ್ಯಕ್ರಮ    

ಸುಬ್ರಹ್ಮಣ್ಯ: ಡಾlರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನ್ ವತಿಯಿಂದ ಭಾನುವಾರ ಸುಬ್ರಹ್ಮಣ್ಯದ ಸ್ಥಾನಘಟ್ಟ, ಪರ್ವತಮಕಿ, ಪಾರ್ಕಿಂಗ್ ಸ್ಥಳ ,ಹಾಗೂ ಕುಲುಕುಂದ ರಸ್ತೆ ಭಾಗಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ಏರ್ಪಡಿಸಲಾಯಿತು. ಪ್ರತಿ ವಾರದ ಭಾನುವಾರ ಹಾಗೂ ವಿಶೇಷ ದಿನಗಳಲ್ಲಿ ಈ ಸ್ಥಾನಘಟ್ಟ ಹಾಗೂ ಆಸುಪಾಸಿನಲ್ಲಿ ಭಕ್ತಾದಿಗಳು ಪ್ಲಾಸ್ಟಿಕ್, ಕಸಕಡ್ಡಿಗಳು, ಬ್ಯಾಗ್, ಕಾಗದ, ನೀರಿನ ಬಾಟಲಿಗಳು ಹಾಗೂ ಇನ್ನಿತರ ಕಚ್ಚಾ ವಸ್ತುಗಳನ್ನ ಎಲ್ಲೆಂದರಲ್ಲಿ ಬಿಸಾಡಿ ಇಡೀ ಪರಿಸರ ಮಾಲಿನ್ಯವಾಗಿದ್ದು,

ಸುಬ್ರಹ್ಮಣ್ಯದಲ್ಲಿ ಸ್ವಚ್ಛತಾ ಕಾರ್ಯಕ್ರಮ     Read More »

ಪಡ್ನೂರು ಶ್ರೀ ಜನಾರ್ಧನ ಯುವಕ ಮಂಡಲದ ಸುವರ್ಣ ಮಹೋತ್ಸವ “ ಪಡ್ನೂರು ಉತ್ಸವ” | 58 ಕೆ.ಜಿ. ವಿಭಾಗದ ಕಬಡ್ಡಿ ಪಂದ್ಯಾಟ

ಪುತ್ತೂರು: ಪಡ್ನೂರು ಶ್ರೀ ಜನಾರ್ದನ ಯುವಕ ಮಂಡಲದ ಸುವರ್ಣ ಮಹೋತ್ಸವ ‘ಪಡ್ನೂರು ಉತ್ಸವ’ದ ಅಂಗವಾಗಿ 58 ಕೆ.ಜಿ. ವಿಭಾಗದ ಮ್ಯಾಟ್ ಅಂಕಣ ಕಬಡ್ಡಿ ಪಂದ್ಯಾಟದ ಉದ್ಘಾಟನಾ ಸಮಾರಂಭ ಭಾನುವಾರ ಪಡ್ನೂರು ಶಾಲಾ ವಠಾರದ ಶ್ರೀ ಜನಾರ್ದನ ವೇದಿಕೆಯಲ್ಲಿ ನಡೆಯಿತು. ನಿವೃತ್ತ ಕ್ರೀಡಾಧಿಕಾರಿ ಮಾಧವ ಬಿ.ಕೆ. ದೀಪ ಬೆಳಗಿಸಿ ಉದ್ಘಾಟಿಸಿ, ಪ್ರಸ್ತುತ ಸಂಸ್ಕೃತಿ, ಸಂಸ್ಕಾರ ಉಳಿಸುವ ಕಾರ್ಯ ಯುವಜನ ಮೇಳಗಳಿಂದ ನಡೆಯುತ್ತಿದ್ದು, ತಾಲೂಕು ಮಟ್ಟದ ಯುವಜನ ಮೇಳವನ್ನು ರದ್ದುಗೊಳಿಸಿದ ಪರಿಣಾಮ ಯುವಕರಿಗೆ ಅವಕಾಶ ಕಡಿಮೆಯಾಗಿದೆ. ಅನೇಕ ಜನೋಪಯೋಗಿ ಕಾರ್ಯಕ್ರಮಗಳನ್ನು

ಪಡ್ನೂರು ಶ್ರೀ ಜನಾರ್ಧನ ಯುವಕ ಮಂಡಲದ ಸುವರ್ಣ ಮಹೋತ್ಸವ “ ಪಡ್ನೂರು ಉತ್ಸವ” | 58 ಕೆ.ಜಿ. ವಿಭಾಗದ ಕಬಡ್ಡಿ ಪಂದ್ಯಾಟ Read More »

ಕೌಡಿಚ್ಚಾರಿನಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ : ಮೆಸ್ಕಾಂ ಬಳಕೆದಾರರ ತುರ್ತು ಸಭೆ

ಪುತ್ತೂರು: ಮೆಸ್ಕಾಂ ಬಳಕೆದಾರರ ತುರ್ತು ಸಭೆ ಕೌಡಿಚ್ಚಾರಿನಲ್ಲಿ ನಡೆಯಿತು. ಬಳಕೆದಾರರ ಅಧ್ಯಕ್ಷ ಎಸ್‍.ಅಬೂಬಕ್ಕರ್ ಕೌಡಿಚ್ಚಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಕೌಡಿಚ್ಚಾರಿನಲ್ಲಿ ನಾಲ್ಕೈದು ದಿನಗಳಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದ್ದು, ಗ್ರಾಪಂನ ಕುಡಿಯುವ ನೀರನ್ನು ನಂಬಿದವರಿಗೆ ಸಮಸ್ಯೆ ಉಂಟಾಗಿದೆ. ಅಂಗಡಿ ವ್ಯಾಪಾರ ನಡೆಸುವವರಿಗೂ ವಿದ್ಯುತ್ ವ್ಯತ್ಯಯದಿಂದ ಸಮಸ್ಯೆ ಉಂಟಾಗಿದೆ. ಕೌಡಿಚ್ಚಾರು ಪ್ರದೇಶದವರು ಕತ್ತಲಲ್ಲಿ ಕಾಲಕಳೆಯುವಂತಾಗಬಾರದು ಎಂದು ಸಭೆಯಲ್ಲಿ ವಿದ್ಯುತ್ ಬಳಕೆದಾರರು ಆಗ್ರಹಿಸಿದರು. ಕೌಡಿಚ್ಚಾರ್ ಪ್ರದೇಶಕ್ಕೆ ಒಂದು ಟಿಸಿ ಅಳವಡಿಸುವಂತೆ ಹಾಗೂ ಸರಿಯಾಗಿ ವಿದ್ಯುತ್ ಪೂರೈಕೆ ಮಾಡುವಂತೆ ಮೆಸ್ಕಾಂ ಸಹಾಯಕ

ಕೌಡಿಚ್ಚಾರಿನಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ : ಮೆಸ್ಕಾಂ ಬಳಕೆದಾರರ ತುರ್ತು ಸಭೆ Read More »

ಫೆ.17 ರಿಂದ 24 : ನಳಿಲು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ | ಭಕ್ತಾದಿಗಳ ಸಭೆ

ಪುತ್ತೂರು: ಕೊಳ್ತಿಗೆ ಗ್ರಾಮದ ಪಾಲ್ತಾಡು ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ ಜಾತ್ರೋತ್ಸವ 2024 ಫೆ.17 ರಿಂದ 24 ರತನಕ ನಡೆಯಲಿದ್ದು ಭಕ್ತಾದಿಗಳ ಸಭೆ ದೇವಸ್ಥಾನದ ವಠಾರದಲ್ಲಿ ಭಾನುವಾರ ನಡೆಯಿತು. ಸಮಿತಿ ಗೌರವಾಧ್ಯಕ್ಷರಾಗಿ ಶಾಸಕ ಅಶೋಕ್ ರೈ ಅವರನ್ನು ಭಕ್ತರ ಸಮ್ಮುಖದಲ್ಲಿ ನೇಮಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಗೌರವಾಧ್ಯಕ್ಷರಾಗಿ ಆಯ್ಕೆಯಾದದ್ದು ನನ್ನ ಯೋಗ. ಕೇವಲ ದುಡ್ಡಿನಿಂದ ಬ್ರಹ್ಮಕಲಶೋತ್ಸವ ನಡೆಯಲು ಸಾಧ್ಯವಿಲ್ಲ. ಭಕ್ತಿ, ಶ್ರದ್ಧೆ, ನಂಬಿಕೆಯಿಂದ ಎಲ್ಲರೂ ಒಟ್ಟಾಗಿ ತೊಡಗಿಸಿಕೊಂಡರೆ ಯಶಸ್ವಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ. ಊರಿನ

ಫೆ.17 ರಿಂದ 24 : ನಳಿಲು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ | ಭಕ್ತಾದಿಗಳ ಸಭೆ Read More »

ಜಿಂಕೆ ಮಾಂಸ ಸಾಗಾಟ | ಇಬ್ಬರು ಆರೋಪಿಗಳ ಬಂಧನ

ವಿರಾಜಪೇಟೆ: ರಕ್ಷಿತಾರಣ್ಯದಿಂದ ಬೇಟೆಯಾಡಿ ಎರಡು ಜಿಂಕೆಗಳನ್ನು ಕೊಂದು ಮಾಂಸ ಮಾಡಿ ಕಾರಿನಲ್ಲಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ವಿರಾಜಪೇಟೆ ಪೊಲೀಸ್ ಅರಣ್ಯ ಸಂಚಾರಿ ದಳದವರು ಯಶಸ್ವಿಯಾಗಿದ್ದು, ಬಂಧಿತರಿಂದ ಮಾಂಶ ವಶಪಡಿಸಿಕೊಂಡಿದ್ದಾರೆ. ಬೇಟೋಳಿ ಗ್ರಾಮದ ನಿವಾಸಿ ವಿರಾಜಪೇಟೆ ಬೇಕರಿಯೊಂದರ ಮಾಲೀಕ ಎಂ.ಎಂ ಅಜೀಜ್ (45), ನೆಹರು ನಗರ ನಿವಾಸಿ ಆಟೋ ಚಾಲಕ ಹುಸೈನ್ ಸಿ.ಎ.ಅಲಿಯಾಸ್ ಜಂಶೀರ್ (32) ಬಂಧಿತ ಆರೋಪಿಗಳು. ಪೊಲೀಸ್ ಅರಣ್ಯ ಸಂಚಾರಿ ದಳದ ಉಪನಿರೀಕ್ಷಕ ಎಂ.ಸಿ.ಮುತ್ತಣ್ಣ ಅವರಿಗೆ ದೊರೆತ ಖಚಿತ ಮಾಹಿತಿ ಮೇಲೆ ಪೆರುಂಬಾಡಿ ಕಡೆಯಿಂದ

ಜಿಂಕೆ ಮಾಂಸ ಸಾಗಾಟ | ಇಬ್ಬರು ಆರೋಪಿಗಳ ಬಂಧನ Read More »

ಗಣಿ-ಭೂ ವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ದುಷ್ಕರ್ಮಿಗಳಿಂದ ಹತ್ಯೆ

ಬೆಂಗಳೂರು: ಗಣಿ-ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಯೋರ್ವರನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಇಂದು ಬೆಂಗಳೂರಿನ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗಣಿ-ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಪ್ರತಿಮಾ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಅಧಿಕಾರಿ. ಪ್ರತಿಮಾ ಅವರು ದೊಡ್ಡಕಲ್ಲಸಂದ್ರದ ಅಪಾರ್ಟೆಂಟ್‌ವೊಂದರಲ್ಲಿ ಒಬ್ಬರೇ ವಾಸಿಸುತ್ತಿದ್ದರು. ವಿವಾಹಿತರಾಗಿದ್ದು, ಪ್ರತಿಮಾ ಪತಿ ಮತ್ತು ಮಗ ತೀರ್ಥಹಳ್ಳಿಯಲ್ಲಿ ವಾಸವಿದ್ದರು. ರಾತ್ರಿ ಪ್ರತಿಮಾ ಅವರಿಗೆ ಸಹೋದರ ಕರೆ ಮಾಡಿದ್ದ ಆದರೆ ಕರೆ ಸ್ವೀಕರಿಸಿರಲಿಲ್ಲ. ಬೆಳಿಗ್ಗೆ ಮನೆ ಬಳಿ ಬಂದು ನೋಡಿದಾಗ

ಗಣಿ-ಭೂ ವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ದುಷ್ಕರ್ಮಿಗಳಿಂದ ಹತ್ಯೆ Read More »

ಚಾರ್ವಕದ ಯುವಕ ತಾರನಾಥ ಬೆಂಗಳೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆ

ಬೆಂಗಳೂರು: ಕಡಬ ತಾಲೂಕಿನ ಚಾರ್ವಕ ನಿವಾಸಿಯೊಬ್ಬರು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಚಾರ್ವಕ ನಿವಾಸಿ ತಾರಾನಾಥ (39) ಎಂಬವರೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು. ಕಡಬ ತಾಲೂಕಿನ ಬೊಮ್ಮಳಿಕೆ ಪದ್ಮನಾಭ ಗೌಡ ಎಂಬವರ ಪುತ್ರರಾಗಿರುವ ತಾರನಾಥ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದು, ತನ್ನ ರೂಮ್ ನಲ್ಲೇ ನ.3ರಂದು ರಾತ್ರಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ. ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಚಾರ್ವಕದ ಯುವಕ ತಾರನಾಥ ಬೆಂಗಳೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆ Read More »

error: Content is protected !!
Scroll to Top