ಪ್ರಫುಲ್ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಕಬಡ್ಡಿ ತಂಡಕ್ಕೆ ಆಯ್ಕೆ

ಪುತ್ತೂರು: ಇಲ್ಲಿಯ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿ ಪ್ರಫುಲ್ ಯು. ಎಸ್. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಕಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕಾಲೇಜಿನ ತೃತೀಯ ವರ್ಷದ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್ ವಿಭಾಗದ ವಿದ್ಯಾರ್ಥಿಯಾಗಿರುವ ಪ್ರಫುಲ್ ಎಸ್‌ಐಟಿ ತುಮಕೂರಿನಲ್ಲಿ ನಡೆದ ಆಯ್ಕೆ ಶಿಬಿರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿ ವಿಶ್ವವಿದ್ಯಾನಿಲಯ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ನ.9 ರಿಂದ 12ರ ವರೆಗೆ  ಆಂದ್ರಪ್ರದೇಶ ಕಾಕಿನಾಡದ ಜವಾಹರ್‌ಲಾಲ್ ನೆಹರೂ ತಾಂತ್ರಿಕ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಸುರಂಪಲೆಮ್ ಆದಿತ್ಯ […]

ಪ್ರಫುಲ್ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಕಬಡ್ಡಿ ತಂಡಕ್ಕೆ ಆಯ್ಕೆ Read More »

ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿ ಅಂಗಡಿಗಳಲ್ಲಿ ಸರಣಿ ಕಳ್ಳತನ | ನಗದು ದೋಚಿದ ಕಳ್ಳರು

ಉಪ್ಪಿನಂಗಡಿ: 34 ನೆಕ್ಕಿಲಾಡಿ ಹಾಗೂ ಉಪ್ಪಿನಂಗಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಅಂಗಡಿ, ಪೆಟ್ರೋಲ್ ಪಂಪ್‌ಗಳಲ್ಲಿ ಸರಣಿ ಕಳ್ಳತನ ನಡೆದ ಘಟನೆ ಶನಿವಾರ ಮುಂಜಾನೆ ಬೆಳಕಿಗೆ ಬಂದಿದೆ. ಗಾಂಧಿಪಾರ್ಕ್ ಬಳಿ ಜಗದೀಶ್ ನಾಯಕ್ ಎಂಬವರಿಗೆ ಸೇರಿದ ಟೈಲ್ಸ್ ಅಂಗಡಿಯ ಶಟರ್‌ನ ಬೀಗ ಮುರಿದು ಒಳನುಗ್ಗಿದ ಕಳ್ಳ ಕ್ಯಾಶ್ ಡ್ರಾವರ್‌ನಲ್ಲಿದ್ದ ಸುಮಾರು 20 ಸಾವಿರದಷ್ಟು ನಗದನ್ನು ಕಳ್ಳರು ಕದ್ದೊಯ್ದಿದ್ದಾರೆ. ಅಲ್ಲೇ ಪಕ್ಕದ ಗುಜಿರಿ ಅಂಗಡಿಗೂ ನುಗ್ಗಿದ ಕಳ್ಳ ಅಲ್ಲಿ ಇದ್ದ ತಾಮ್ರದ ಬೆಲೆ ಬಾಳುವ ಸೊತ್ತುಗಳನ್ನು ಕಳವು ಮಾಡಿ, ಪಕ್ಕದ

ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿ ಅಂಗಡಿಗಳಲ್ಲಿ ಸರಣಿ ಕಳ್ಳತನ | ನಗದು ದೋಚಿದ ಕಳ್ಳರು Read More »

ಕುಮಾರಧಾರದಲ್ಲಿ ಅಪರಿಚಿತ ಮೃತದೇಹ ಪತ್ತೆ

ಸವಣೂರು:  ಸವಣೂರು ಸಮೀಪ ಕುಮಾರಧಾರ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆಯಾದ ಘಟನೆ ಶನಿವಾರ ನಡೆದಿದೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಬೆಳ್ಳಾರೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಕುಮಾರಧಾರದಲ್ಲಿ ಅಪರಿಚಿತ ಮೃತದೇಹ ಪತ್ತೆ Read More »

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಬಸ್ | ಮಹಿಳೆ ಮೃತ್ಯು

ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪ್ರಪಾತಕ್ಕೆ ಉರುಳಿಬಿದ್ದು ಮಹಿಳೆಯೋರ್ವರು ಮೃತಪಟ್ಟು, ಐವರು ಗಂಭೀರ ಗಾಯಗೊಂಡ ಘಟನೆ ಶನಿವಾರ ಮುಂಜಾನೆ ನಡೆದಿದೆ. ಬೆಂಗಳೂರಿನ ಯಲಹಂಕ ನಿವಾಸಿ ಸುರೇಖಾ(45) ಮೃತ ದುರ್ದೈವಿಯಾಗಿದ್ದಾರೆ. ಗಂಭೀರ ಗಾಯಗೊಂಡವರನ್ನು ಮೂಡಿಗೆರೆ, ಬೇಲೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚೀಕನಹಳ್ಳಿ – ಕಸ್ಕೆಬೈಲು ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಬೆಂಗಳೂರು- ಹಾಸನ-ಮೂಡಿಗೆರೆ ಮಾರ್ಗವಾಗಿ ಹೊರನಾಡಿಗೆ ಪ್ರವಾಸ ಹೊರಟಿದ್ದ ಈ ಬಸ್ಸಿನಲ್ಲಿ 48ಕ್ಕೂ

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಬಸ್ | ಮಹಿಳೆ ಮೃತ್ಯು Read More »

ನೇಪಾಳದಲ್ಲಿ ಪ್ರಬಲ ಭೂಕಂಪ | 128 ಮಂದಿ ಮೃತ್ಯು, 140 ಮಂದಿಗೆ ಗಾಯ

ನೇಪಾಳ: ನೇಪಾಳದ ಕಂಡು, ಪಶ್ಚಿಮ ರುಕುಂ, ಜಾಜರಕೋಟ್ ಸೇರಿದಂತೆ ಹಲವೆಡೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆ ದಾಖಲಾಗಿದೆ. ಘಟನೆಯಲ್ಲಿ 128 ಮಂದಿ ಸಾವನ್ನಪ್ಪಿದ್ದು, 140 ಮಂದಿ ಗಾಯಗೊಂಡಿದ್ದಾರೆ. ಇದೇ ವೇಳೆ ದೆಹಲಿ-ಎನ್‌ಸಿಆರ್ ಪ್ರದೇಶ, ಬಿಹಾರ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ಸೇರಿದಂತೆ ಉತ್ತರ ಭಾರತದಲ್ಲಿ ಪ್ರಬಲ ಕಂಪನಗಳು ಸಂಭವಿಸಿವೆ. ಭೂಕಂಪವು ನ.3ರ ರಾತ್ರಿ 11:32 ಕ್ಕೆ ಸಂಭವಿಸಿದೆ. ಪರ್ವತ ಶ್ರೇಣಿಗಳಿಂದ ಕೂಡಿದ ಈ ಪ್ರದೇಶದಲ್ಲಿ ಪರಿಹಾರ ಕಾರ್ಯಾಚರಣೆ ಮುಂದುವರಿದಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ

ನೇಪಾಳದಲ್ಲಿ ಪ್ರಬಲ ಭೂಕಂಪ | 128 ಮಂದಿ ಮೃತ್ಯು, 140 ಮಂದಿಗೆ ಗಾಯ Read More »

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ | ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಪಡುಬಿದ್ರೆ : ನಿಂತಿದ್ದ ಬಸ್ಸಿಗೆ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನ ಮೇಲೆ ಟ್ಯಾಂಕರ್ ಹರಿದು ಸ್ಥಳದಲ್ಲೇ ಮೃತಪಟ್ಟ ಘಟನೆ ಪಡುಬಿದ್ರಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಕಂಚಿನಡ್ಕ ನಿವಾಸಿ ಪ್ರಜ್ವಲ್ ಮೃತಪಟ್ಟು ಯುವಕ ಎಂದು ಗುರುತಿಸಲಾಗಿದೆ. ಪ್ರಯಾಣಿಕರನ್ನು ಇಳಿಸಲು ನಿಂತಿದ್ದ ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದು ರಸ್ತೆಗೆ ಎಸೆಲ್ಪಟ್ಟು ಬೈಕ್‌ ಸವಾರನ ಮೇಲೆ ಟ್ಯಾಂಕರ್ ಲಾರಿ ಹರಿದಿದೆ. ಪಡುಬಿದ್ರೆ ಪೊಲೀಸರು ಸ್ಥಳಕ್ಕೆ ಧಾವಿಸಿ ಸ್ಥಳ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ | ಬೈಕ್ ಸವಾರ ಸ್ಥಳದಲ್ಲೇ ಮೃತ್ಯು Read More »

ದೈವದ ಮಂಚದಲ್ಲಿ ವಿರಾಜಮಾನರಾಗಿ ಪೂಜಿಸಲ್ಪಡುವ ಏಕೈಕ ಸ್ವಾಮೀಜಿ | ಮಂಗಳೂರಿನ ಜೋಗಿ ಮಠದ ವಿಶೇಷತೆ

ಮಂಗಳೂರು: ದೈವದ ಮಂಚದಲ್ಲಿ ವಿರಾಜಮಾನರಾಗಿ ಪೂಜಿಸಲ್ಪಡುವ ಏಕೈಕ ಸ್ವಾಮೀಜಿ ಎಂಬುವುದಕ್ಕೆ ಇಲ್ಲಿದೆ ಒಂದು ವಿಶೇಷತೆ. ಇಂತಹ ಒಂದು ವಿಶಿಷ್ಟ ಸಂಪ್ರದಾಯವಿರುವುದು ಮಂಗಳೂರಿನ ಕದ್ರಿಯಲ್ಲಿರುವ ಜೋಗಿ ಮಠದಲ್ಲಿ. ಮರಳು ಧೂಮಾವತಿ ಎಂಬ ದೈವ, ಜೋಗಿ ಮಠ ಕ್ಷೇತ್ರದ ದೈವವಾಗಿದ್ದು,ವರ್ಷಂಪ್ರತಿ ನವರಾತ್ರಿಯ ಕೊನೆಯ ದಿನ ಅಂದರೆ ಮಹಾನವಮಿಯಂದು ನಾಥ ಪಂಥದ ಸ್ವಾಮೀಜಿಯವರು ದೈವದ ಮಂಚದಲ್ಲಿ ವಿರಾಜಮಾನರಾಗುವರು. ಅಲ್ಲದೇ ಆ ಸಂಧರ್ಭದಲ್ಲಿ ಸ್ವಾಮೀಜಿಯವರಿಗೆ ವಿಶೇಷ ಪೂಜೆ ಸಲ್ಲಿಸಲಾಗುವುದು. ಅದರಂತೆ ಈ ಬಾರಿಯೂ ಮಹಾನವಮಿಯಂದು ಜೋಗಿ ಮಠ ನಾಥ ಪಂಥದ ಸ್ವಾಮೀಜಿಗಳಾದ ರಾಜಾ

ದೈವದ ಮಂಚದಲ್ಲಿ ವಿರಾಜಮಾನರಾಗಿ ಪೂಜಿಸಲ್ಪಡುವ ಏಕೈಕ ಸ್ವಾಮೀಜಿ | ಮಂಗಳೂರಿನ ಜೋಗಿ ಮಠದ ವಿಶೇಷತೆ Read More »

ತುಲಾಭಾರ ವೇಳೆ ತಕ್ಕಡಿ ಹಗ್ಗ ಕಳಚಿ ಕೆಳಗೆ ಬಿದ್ದ ಪೇಜಾವರ ಶ್ರೀಗಳು

ದೆಹಲಿ: ದೆಹಲಿ ಪ್ರವಾಸದಲ್ಲಿರುವ ಪೇಜಾವರ ಮಠದ ಶ್ರೀ ವಿಶ್ವತೀರ್ಥ ಪ್ರಸನ್ನ ಸ್ವಾಮೀಜಿಗಳು ತುಲಾಭಾರದ ವೇಳೆ ತಕ್ಕಡಿಯ ಹಗ್ಗ ಕಳಚಿ ಕೆಳಗೆ ಬಿದ್ದ ಘಟನೆ ನಡೆದಿದೆ. ದೆಹಲಿಯ ಪೇಜಾವರ ಮಠಕ್ಕೆ ಭೇಟಿ ನೀಡಿದ ಸಂದರ್ಭ ತುಲಾಭಾರ ಸೇವೆ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ತಕ್ಕಡಿಯ ಹಗ್ಗ ಕಳಚಿ ಬಿದ್ದಿದ್ದು, ತಲೆಗೆ ತರಚಿದ ಗಾಯವಾಗಿರುವುದಾಗಿ ತಿಳಿದು ಬಂದಿದೆ. ಈ ಕುರಿತು ಹೆಚ್ಚಿನ ಗಾಯಗಳಾಗಿಲ್ಲ ಎಂದು ಸ್ವಾಮೀಜಿಯವರು ತಿಳಿಸಿದ್ದಾರೆ.

ತುಲಾಭಾರ ವೇಳೆ ತಕ್ಕಡಿ ಹಗ್ಗ ಕಳಚಿ ಕೆಳಗೆ ಬಿದ್ದ ಪೇಜಾವರ ಶ್ರೀಗಳು Read More »

ಮಾಣಿ- ಸಂಪಾಜೆ ಚತುಷ್ಪಥ ರಸ್ತೆ ಕಾಮಗಾರಿಗೆ ಶೀಘ್ರವೇ ಕೇಂದ್ರದ ಅಸ್ತು | 2200 ಕೋಟಿ ರೂ ಪ್ರಸ್ತಾವನೆ ಸಲ್ಲಿಕೆ- ಶಾಸಕ ಅಶೋಕ್ ರೈ

ಪುತ್ತೂರು: ಮಾಣಿ-ಸಂಪಾಜೆ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ೨೨೦೦ ಕೋಟಿ ರೂ ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು ಮುಂದಿನ ನಾಲ್ಕು ವರ್ಷದೊಳಗೆ ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳಲಿದ್ದು ಈ ಭಾಗದ ಜನತೆಯ ಬಹುವರ್ಷಗಳ ಕನಸು ನನಸಾಗುವ ಕಾಲ ಬಂದಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಮಾಣಿಯಿಂದ ಸಂಪಾಜೆ ತನಕ 76 ಕಿ ಮೀ ರಸ್ತೆಯು ಮುಂದಿನ ದಿನಗಳಲ್ಲಿ ಚತುಷ್ಪಥ ರಸ್ತೆಯಾಗಿ ಮೇಲ್ದರ್ಜೆಗೇರಲಿದೆ. 76 ಕಿ ಮಿ ರಸ್ತೆ ಕಾಮಗಾರಿಗೆ ಮೊದಲ ಹಂತದಲ್ಲಿ 1100  ಕೋಟಿ ರೂ ಮತ್ತು ಎರಡನೇ

ಮಾಣಿ- ಸಂಪಾಜೆ ಚತುಷ್ಪಥ ರಸ್ತೆ ಕಾಮಗಾರಿಗೆ ಶೀಘ್ರವೇ ಕೇಂದ್ರದ ಅಸ್ತು | 2200 ಕೋಟಿ ರೂ ಪ್ರಸ್ತಾವನೆ ಸಲ್ಲಿಕೆ- ಶಾಸಕ ಅಶೋಕ್ ರೈ Read More »

ಉಜಿರೆಯಲ್ಲಿ ಮಹಿಳೆಯೊಬ್ಬರ ಶವ ಬಾವಿಯಲ್ಲಿ ಪತ್ತೆ

ಉಜಿರೆ: ವಿವಾಹಿತ ಮಹಿಳೆಯೊಬ್ಬರ ಶವ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಉಜಿರೆ ಗ್ರಾಮದ ಗಡಿ ಪ್ರದೇಶವಾದ ಮಾಚಾರು ಸಮೀಪದ ಕೆಂಪನೊಟ್ಟುವಿನಲ್ಲಿ ಶುಕ್ರವಾರ ನಡೆದಿದೆ. ಮಾಚಾರು ನಿವಾಸಿ ಶಶಿಕಲಾ ಎಂಬವರ ಶವವೇ ಬಾವಿಯಲ್ಲಿ ಅನುಮಾನಾಸ್ಪದವಾಗಿ  ಪತ್ತೆಯಾಗಿರುವುದು. ಹತ್ಯೆ ಮಾಡಿ ಬಾವಿಗೆ ಹಾಕಿರುವ ಕುರಿತು ಆರೋಪಗಳು ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ. ಇದು ಆಕಸ್ಮಿಕ ಘಟನೆಯೇ ಅಥವಾ ಕೊಲೆಯೇ ಎಂಬ ಬಗ್ಗೆ ಪೊಲೀಸ್ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ. ಧರ್ಮಸ್ಥಳ ಠಾಣಾ ಪೊಲೀಸರು, ಉನ್ನತಾಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಉಜಿರೆಯಲ್ಲಿ ಮಹಿಳೆಯೊಬ್ಬರ ಶವ ಬಾವಿಯಲ್ಲಿ ಪತ್ತೆ Read More »

error: Content is protected !!
Scroll to Top