ಆರ್ಗ್ಯಾನಿಕ್ ಚೀಲದ ಹೆಸರಿನಲ್ಲಿ ಕೋಟಿ ವಂಚನೆ | ಎನ್ವಿ ಗ್ರೀನ್ ಬಯೋಟೆಕ್ ಮಾಲೀಕ ಅಶ್ವತ್ಥ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಆರ್ಗ್ಯಾನಿಕ್ ಚೀಲದ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ ಮಾಡಿದ ಆರೋಪದ ಮೇಲೆ ಎನ್ವಿ ಗ್ರೀನ್ ಬಯೋಟೆಕ್ ಮಾಲೀಕ ಅಶ್ವತ್ಥ ಹೆಗ್ಡೆ ಎಂಬವರ ವಿರುದ್ಧ ಉದ್ಯಮಿ ನೀಲಿಮಾ ಎಂಬವರು ನೀಡಿದ ದೂರಿನಂತೆ ಬೆಂಗಳೂರಿನ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಪ್ಲಾಸ್ಟಿಕ್ ಬದಲು ಆರ್ಗ್ಯಾನಿಕ್ ಬ್ಯಾಗ್ ಕಂಡು ಹಿಡಿದಿದ್ದಾಗಿ ನಂಬಿಸಿದ್ದ ಅಶ್ವತ್ಥ ಹೆಗ್ಡೆ ಬಿಸಿ ನೀರಿನಲ್ಲಿ ಕರಗುವ ಕೈಚೀಲ ಮಾಡುವುದಾಗಿ ಭರವಸೆ ನೀಡಿದ್ದರು. ಯಂತ್ರ ಹಾಗೂ ಕಾರ್ಮಿಕರನ್ನು ಕೊಡುವುದಾಗಿ ಹೇಳಿದ್ದರು. 1.26 ಕೋಟಿ ರೂಪಾಯಿ ಮೌಲ್ಯದ ಯಂತ್ರ […]

ಆರ್ಗ್ಯಾನಿಕ್ ಚೀಲದ ಹೆಸರಿನಲ್ಲಿ ಕೋಟಿ ವಂಚನೆ | ಎನ್ವಿ ಗ್ರೀನ್ ಬಯೋಟೆಕ್ ಮಾಲೀಕ ಅಶ್ವತ್ಥ ಹೆಗ್ಡೆ ವಿರುದ್ಧ ಪ್ರಕರಣ ದಾಖಲು Read More »

ರಾಜ್ಯಪಾಲರಿಗೆ ಕಂಬಳದ ಆಮಂತ್ರಣ ನೀಡಿ ಕಂಬಳಕ್ಕೆ ಆಹ್ವಾನ

ಪುತ್ತೂರು: ನ.24,25,26 ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳಕ್ಕೆ ರಾಜ್ಯದ ರಾಜ್ಯಪಾಲರಾದ ತಾವರ್‌ಚಂದ್ ಗೆಹ್ಲೊಟ್ ರವರಿಗೆ ಕಂಬಳ ಸಮಿತಿ ಅಧ್ಯಕ್ಷ ,ಪುತ್ತೂರು ಶಾಸಕ ಅಶೋಕ್ ರೈ ಅವರು ಆಮಂತ್ರಣ ಪತ್ರ ನೀಡಿ ಕಂಬಳಕ್ಕೆ ಆಹ್ವಾನ ಮಾಡಿದರು. ‌ರಾಜಭವನದಲ್ಲಿ ಇಂದು ರಾಜ್ಯಪಾಲರನ್ನು ಭೇಟಿಯಾದ ಶಾಸಕರ ನೇತೃತ್ವದ ನಿಯೋಗ ಕಂಬಳದ ಬಗ್ಗೆ ಪೂರ್ಣ ವಿವರಣೆ ಮಾಹಿತಿ ನೀಡಿದರು. ನಿಯೋಗದಲ್ಲಿ ತುಳು ಕೂಟದ ಅಧ್ಯಕ್ಷರಾದ ಸುಂದರ್ ರಾಜ್ ರೈ, ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಉಮೇಶ್ ಶೆಟ್ಟಿ ಸೇರಿದಂತೆ ತುಳು

ರಾಜ್ಯಪಾಲರಿಗೆ ಕಂಬಳದ ಆಮಂತ್ರಣ ನೀಡಿ ಕಂಬಳಕ್ಕೆ ಆಹ್ವಾನ Read More »

ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಹಲ್ಲೆ | ಪ್ರಕರಣ ದಾಖಲು

ಉಪ್ಪಿನಂಗಡಿ: ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಹಲ್ಲೆ ನಡೆಸಿದ ಆರೋಪದ ಮೇಲೆ ನಾಲ್ಕು ಮಂದಿ ಮೇಲೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಜತ್ತೂರು ಮಣಿಕ್ಕಲ ಎಂಬಲ್ಲಿ ಮಹಿಳೆಯೊಬ್ಬರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಸುರೇಶ, ಉಮೇಶ, ಗಿರೀಶ ಹಾಗೂ ಇನ್ನೋರ್ವ ಬಂದು ಮಹಿಳೆಗೆ ಅವಾಚ್ಯ ಶಬ್ದಗಳಿಂದ ಬೈದು, ಮರದ ಕೋಲಿನಿಂದ ಹಲ್ಲೆ ನಡೆಸಿ ಅಸಭ್ಯವಾಗಿ ವರ್ತಿಸಿದ್ದಾರೆ ತಡೆಯಲು ಬಂದ ಮಹಿಳೆಯ ಪತಿಗೂ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ

ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಹಲ್ಲೆ | ಪ್ರಕರಣ ದಾಖಲು Read More »

ನ.4: ನರಿಮೊಗರು ಶಾಲಾ ಮೈದಾನದಲ್ಲಿ ಮ್ಯಾಟ್ ಅಂಕಣ 55 ಕೆ.ಜಿ. ವಿಭಾಗದ ಪುರುಷರ ಕಬಡ್ಡಿ ಪಂದ್ಯಾಟ ‘ದೀಪಾವಳಿ ಟ್ರೋಫಿ-2023’

ಪುತ್ತೂರು: ನರಿಮೊಗರು ಹನುಮಾನ್ ಫ್ರೆಂಡ್ಸ್ ಆಶ್ರಯದಲ್ಲಿ ಪುತ್ತೂರು ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಸಹಯೋಗದಲ್ಲಿ 3ನೇ ವರ್ಷದ ಮ್ಯಾಟ್ ಅಂಕಣದ ಪುರುಷರ 55 ಕೆ.ಜಿ. ವಿಭಾಗದ ಕಬಡ್ಡಿ ಪಂದ್ಯಾಟ ‘ದೀಪಾವಳಿ ಟ್ರೋಫಿ-2023’ ನ.4 ಶನಿವಾರ  ರಾತ್ರಿ 8 ಗಂಟೆಗೆ ನರಿಮೊಗರು ಶಾಲಾ ಮೈದಾನದಲ್ಲಿ ನಡೆಯಲಿದೆ. ರಾತ್ರಿ ನಡೆಯುವ ಉದ್ಘಾಟನಾ ಸಮಾರಂಭವನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸುವರು. ಹಿಂದೂ ಮುಖಂಡ ಕಿಶೋರ್ ಕುಮಾರ್ ಬೊಟ್ಯಾಡಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ನರಿಮೊಗರು ಹನುಮಾನ್ ಫ್ರೆಂಡ್ಸ್ ಗೌರವಾಧ್ಯಕ್ಷ

ನ.4: ನರಿಮೊಗರು ಶಾಲಾ ಮೈದಾನದಲ್ಲಿ ಮ್ಯಾಟ್ ಅಂಕಣ 55 ಕೆ.ಜಿ. ವಿಭಾಗದ ಪುರುಷರ ಕಬಡ್ಡಿ ಪಂದ್ಯಾಟ ‘ದೀಪಾವಳಿ ಟ್ರೋಫಿ-2023’ Read More »

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಿಂದ ಕೋಟ್ಯಾಂತರ ನಗದು ಕಳವು | 10 ಮಂದಿ ಆರೋಪಿಗಳ ಬಂಧನ

ಧಾರವಾಡ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಯೋಜನಾ ಕಚೇರಿಯಲ್ಲಿ ಕೋಟ್ಯಾಂತರ ನಗದು ಕಳ್ಳತನ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹತ್ತು ಮಂದಿಯನ್ನು ಬಂಧಿಸಿದ್ದಾರೆ. ಎಸ್‌ಕೆಡಿಆರ್‌ಡಿಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಹುಬ್ಬಳ್ಳಿಯ ಕುಶಾಲಕುಮಾರ ಕೃಷ್ಣಾ ಸವಣೂರು (23), ನವಲಗುಂದದ ಕಳ್ಳಿಮಠ ಓಣಿಯ ಬಸವರಾಜ ಶೇಖಪ್ಪ ಬಾಬಜಿ (34), ಮಹಾಂತೇಶ ಲಕ್ಷ್ಮಣ ಹಿರಗಣ್ಣವರ (27) ಹಾಗೂ ನವಲಗುಂದದ ಜಿಲಾನಿ ಬವರಸಾಬ ಜಮಾದಾರ (25), ಪರಶುರಾಮ ಹನುಮಂತಪ್ಪ ನೀಲಪ್ಪಗೌಡ್ರ (34), ಭೋವಿ ಓಣಿಯ ರಂಗಪ್ಪ ನಾಗಪ್ಪ ಗುಡಾರದ (31),

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಿಂದ ಕೋಟ್ಯಾಂತರ ನಗದು ಕಳವು | 10 ಮಂದಿ ಆರೋಪಿಗಳ ಬಂಧನ Read More »

ಚಿಕ್ಕಬಳ್ಳಾಪುರದಲ್ಲಿ ಝೀಕಾ ವೈರಸ್ ಪತ್ತೆ : ಜನರಲ್ಲಿ ಆತಂಕ

ಮಂಗಳೂರು: ಸೊಳ್ಳೆಗಳಿಂದ ಹರಡುವ ಮಾರಕ ಝೀಕಾ ವೈರಸ್ ಇದೀಗ ಚಿಕ್ಕಬಳ್ಳಾಪುರದಲ್ಲಿ ಪತ್ತೆಯಾಗಿದ್ದು, ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬೂರಹಳ್ಳಿ ಹೋಬಳಿಯ ತಲಕಾಯಲಬೆಟ್ಟ ವ್ಯಾಪ್ತಿಯಲಲ್ಲೂ ಝೀಕಾ ವೈರಸ್ ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಸೊಳ್ಳೆಗಳನ್ನು ಹಿಡಿದು ಪರೀಕ್ಷೆಗೆ ಒಳಪಡಿಸಿದಾಗ ಝೀಕಾ ವೈರಸ್ ದೃಢಪಟ್ಟಿದೆ. ಆದರೆ ಜನರಿಗೆ ಹರಡಿಲ್ಲ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಝೀಕಾ ವೈರಸ್ ಕಂಡುಬಂದಿರುವ ತಲಕಾಯಲಬೆಟ್ಟ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆರೋಗ್ಯ ಇಲಾಖೆ ತಂಡ ಬೀಡು ಬಿಟ್ಟು ಮನೆ ಮನೆ ಸಮೀಕ್ಷೆ ರಕ್ತ ಸಂಗ್ರಹಕ್ಕೆ

ಚಿಕ್ಕಬಳ್ಳಾಪುರದಲ್ಲಿ ಝೀಕಾ ವೈರಸ್ ಪತ್ತೆ : ಜನರಲ್ಲಿ ಆತಂಕ Read More »

ನ.13 : ರೈ ಎಸ್ಟೇಟ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಸ್ತ್ರ ವಿತರಣೆ, ಸಹಭೋಜನ | ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಆಮಂತ್ರಣ : ಟ್ರಸ್ಟ್ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ

ಪುತ್ತೂರು: ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ನ.13ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ವಸ್ತ್ರ ವಿತರಣೆ ಹಾಗೂ ಸಹಭೋಜನಾ ಕಾರ್ಯಕ್ರಮಕ್ಕೆ ಗ್ರಾಮ ಗ್ರಾಮಕ್ಕೆ ತೆರಳಿ ಗ್ರಾಮದ ಕಟ್ಟಕಡೇಯ ವ್ಯಕ್ತಿಗೂ ಆಮಂತ್ರಣವನ್ನು ನೀಡಲಾಗುವುದು ಮತ್ತು ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸುವಂತೆ ವಿನಂತಿಸಲಾಗುತ್ತಿದೆ ಎಂದು ಟ್ರಸ್ಟ್‌ನ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ ಹೇಳಿದ್ದಾರೆ. ಅಳಿಕೆ,ಕೇಪು, ಮಾನಿಲ, ಹಿರೆಬಂಡಾಡಿ, ಉಪ್ಪಿನಂಗಡಿ ರಾಮನಗರ ಮತ್ತು ಬಜತ್ತೂರು ಗ್ರಾಮಗಳಲ್ಲಿ ಈಗಾಗಲೇ ಟ್ರಸ್ಟ್ ಸಮಿತಿ ಸದಸ್ಯರ

ನ.13 : ರೈ ಎಸ್ಟೇಟ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಸ್ತ್ರ ವಿತರಣೆ, ಸಹಭೋಜನ | ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಆಮಂತ್ರಣ : ಟ್ರಸ್ಟ್ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ Read More »

ನ.4-5: ಪಡ್ನೂರು ಶ್ರೀ ಜನಾರ್ದನ ಯುವಕ ಮಂಡಲದ ಸುವರ್ಣ ಮಹೋತ್ಸವ ‘ಪಡ್ನೂರು ಉತ್ಸವ’ | ಉಚಿತ ವೈದ್ಯಕೀಯ ಶಿಬಿರ, 58 ಕೆ.ಜಿ. ವಿಭಾಗದ ಮ್ಯಾಟ್‍ ಅಂಕಣ ಕಬಡ್ಡಿ ಪಂದ್ಯಾಟ

ಪುತ್ತೂರು: ಪಡ್ನೂರು ಶ್ರೀ ಜನಾರ್ದನ ಯುವಕ ಮಂಡಲ ಹಾಗೂ ಶ್ರೀ ಸರಸ್ವತಿ ಯುವತಿ ಮಂಡಲದ ಜಂಟಿ ಆಶ್ರಯದಲ್ಲಿ ಯುವಕ ಮಂಡಲದ ಸುವರ್ಣ ಮಹೋತ್ಸವ ಸಂಭ್ರಮ ‘ಪಡ್ನೂರು ಉತ್ಸವ’ ನ.4 ಶನಿವಾರ ಹಾಗೂ ನ.5 ಭಾನುವಾರ ಪಡ್ನೂರು ಶಾಲಾ ವಠಾರದ ಶ್ರೀ ಜನಾರ್ದನ ರಂಗಮಂದಿರದಲ್ಲಿ ನಡೆಯಲಿದೆ ಎಂದು ಸುವರ್ಣ ಮಹೋತ್ಸವ ಸಮಿತಿ ಕಾರ್ಯದರ್ಶಿ ಶ್ರೀಧರ ಕುಂಜಾರು ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸುವರ್ಣ ಮಹೋತ್ಸವದ ಅಂಗವಾಗಿ ನ.4 ರಂದು ಬೆಳಿಗ್ಗೆ 7ಕ್ಕೆ ಜನಾರ್ದನ ಸದನದಲ್ಲಿ ಗಣಪತಿ ಹೋಮ

ನ.4-5: ಪಡ್ನೂರು ಶ್ರೀ ಜನಾರ್ದನ ಯುವಕ ಮಂಡಲದ ಸುವರ್ಣ ಮಹೋತ್ಸವ ‘ಪಡ್ನೂರು ಉತ್ಸವ’ | ಉಚಿತ ವೈದ್ಯಕೀಯ ಶಿಬಿರ, 58 ಕೆ.ಜಿ. ವಿಭಾಗದ ಮ್ಯಾಟ್‍ ಅಂಕಣ ಕಬಡ್ಡಿ ಪಂದ್ಯಾಟ Read More »

ಕೆರೆಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆ | ಪ್ರಕರಣ ದಾಖಲು

ಸೂಂಟಿಕೊಪ್ಪ: ಕಾಣೆಯಾಗಿದ್ದ ವ್ಯಕ್ತಿಯೊಬ್ಬರು ಕೆರೆಯೊಂದರಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಸಮೀಪದ ಸೆವೆಂತ್ ಮೈಲ್‌ನಲ್ಲಿ ನಡೆದಿದೆ. ಸೆವೆಂತ್ ಮೈಲ್ ನಿವಾಸಿ ಪೌಲ್ ಡಿಸೋಜ ಎಂಬವರ ಮೃತದೇಹ ಇಂದು ಬೆಳಗ್ಗೆ ಸೌಭಾಗ್ಯ ತೋಟದ ಕೆರೆಯಲ್ಲಿ ಪತ್ತೆಯಾಗಿದೆ. ಕಳೆದ ಭಾನುವಾರ ಮನೆಯಿಂದ ಕಾಣೆಯಾಗಿದ್ದು, ಎಲ್ಲಿಯೂ ಕಂಡುಬಾರದ ಹಿನ್ನೆಲೆ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆ ಕಳೆದ ನಾಲ್ಕು ದಿನಗಳಿಂದ ಮನೆಯವರು, ಪೊಲೀಸರು ಸೇರಿದಂತೆ ಗ್ರಾಮಸ್ಥರು ಹುಡುಕಾಟ ನಡೆಸುತ್ತಿದ್ದರು. ಆದರೆ ಇಂದು ಕೆರೆಯಲ್ಲಿ ಪೌಲ್‌

ಕೆರೆಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆ | ಪ್ರಕರಣ ದಾಖಲು Read More »

ಗದ್ದೆಗಳ ಉಳಿವಿಗೆ ಕೆಸರು ಗದ್ದೆ ಕ್ರೀಡಾಕೂಟ ಪೂರಕವಾಗಲಿ | ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ ಸಮಾರೋಪದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ

ಕಡಬ: ಗದ್ದೆಗಳನ್ನು ಕಾಣಲು ಅಪರೂಪವಾಗಿರುವ ಇಂದಿನ ಕಾಲಘಟ್ಟದಲ್ಲಿ ಸಂಘ-ಸಂಸ್ಥೆಗಳು ಗದ್ದೆಯಲ್ಲಿ ಕೆಸರು ಗದ್ದೆ ಕ್ರೀಡಾಕೂಟಗಳನ್ನು ಆಯೋಜಿಸಿ ಜನರನ್ನು ಮನರಂಜಿಸುವ ಕಾರ್ಯ ಮಾಡುತ್ತಿದ್ದಾರೆ. ಇಂತಹ ಕೆಸರು ಗದ್ದೆ ಕ್ರೀಡಾಕೂಟಗಳು ಗದ್ದೆಗಳ ಉಳಿವಿಗೆ ಪೂರಕವಾಗಲಿ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ನೂಜಿಬೈಲ್ ತುಳುನಾಡ ತುಡರ್ ಯುವಕ ಮಂಡಲ ಆಶ್ರಯದಲ್ಲಿ ನೂಜಿಬಾಳ್ತಿಲ ಹಾಗೂ ರೆಂಜಿಲಾಡಿ ಗ್ರಾಮಸ್ಥರ ಸಂಪೂರ್ಣ ಸಹಕಾರದೊಂದಿಗೆ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಸಾಕೋಟೆಜಾಲು ದಿ.ಆರ್.ಸಾಂತಪ್ಪ ಗೌಡ ಅವರ ಗದ್ದೆಯಲ್ಲಿ ನಡೆದ ಎರಡನೇ ವರ್ಷದ ಕೆಸರ್‌ಡೊಂಜಿ ದಿನ

ಗದ್ದೆಗಳ ಉಳಿವಿಗೆ ಕೆಸರು ಗದ್ದೆ ಕ್ರೀಡಾಕೂಟ ಪೂರಕವಾಗಲಿ | ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ ಸಮಾರೋಪದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ Read More »

error: Content is protected !!
Scroll to Top