ಡಿ.9 : ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶನೈಶ್ಚರ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ

ವಿಟ್ಲ: ಪುತ್ತಿಲ ಪರಿವಾರ ವಿಟ್ಲ ವಲಯ ಹಾಗೂ ಶನೈಶ್ಚರ ಪೂಜಾ ಸಮಿತಿ ವತಿಯಿಂದ ಡಿ.9 ರಂದು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯುವ ಶನೈಶ್ಚರ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಬಳಿಕ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತಾ, ಪೂಜಾ ಸಮಿತಿಯ ಅಧ್ಯಕ್ಷ, ನ್ಯಾಯವಾದಿ ಶ್ರೀಕೃಷ್ಣ […]

ಡಿ.9 : ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶನೈಶ್ಚರ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಬೈಕ್- ಇಕೊಮೆಟ್ ಡಿಕ್ಕಿ : ಬೈಕ್ ಸವಾರ ಮೃತ್ಯು

ನೆಲ್ಯಾಡಿ: ಬೈಕ್ ಹಾಗೂ ಇಕೊಮೆಟ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬುಧವಾರ ರಾತ್ರಿ ನಡೆದಿದೆ. ರಾಷ್ಟ್ರೀಯ ಹೆದ್ದಾಠರಿ 75 ರ ನೆಲ್ಯಾಡಿ ಸಮೀಪ ಅಪಘಾತ ನಡೆದಿದ್ದು, ಕೌಕ್ರಾಡಿ ಗ್ರಾಮದ ಶಾಂತಿಬೆಟ್ಟಿನ  ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ಸುರೇಂದ್ರ ಮಹತೋ(೩೫)ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸೆಂಟ್ರಿಗ್ ಕೆಲಸ ಮಾಡಿಕೊಂಡಿದ್ದ ಸುರೇಂದ್ರ ರಾತ್ರಿ ಹೊಸಮಜಲು ಕಡೆಯಿಂದ ನೆಲ್ಯಾಡಿಗೆ ಬರುತ್ತಿದ್ದ ವೇಳೆ ಮಂಗಳೂರಿನಿಂದ ಹಾಸನ ಕಡೆಗೆ ಹೋಗುತ್ತಿದ್ದ ಇಕೊಮೆಟ್ ಕೌಕ್ರಾಡಿ ಗ್ರಾ.ಪಂ.ನ ಮುಂಭಾಗ ಡಿಕ್ಕಿಯಾಗಿದೆ. ಘಟನೆಯಿಂದ ಗಂಭೀರ ಗಾಯಗೊಂಡಿದ್ದ

ಬೈಕ್- ಇಕೊಮೆಟ್ ಡಿಕ್ಕಿ : ಬೈಕ್ ಸವಾರ ಮೃತ್ಯು Read More »

ಬೆಳಂದೂರು ಸರಕಾರಿ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ

ಬೆಳಂದೂರು: ಬೆಳಂದೂರು :ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಬುಧವಾರ ಆಚರಿಸಲಾಯಿತು. ಕಾಲೇಜು ಪ್ರಾಂಶುಪಾಲ ಡಾ|ಶಂಕರ್ ಭಟ್ ಶುಭ ಹಾರೈಸಿದರು. ಬಳಿಕ ವಿದ್ಯಾರ್ಥಿಗಳಿಂದ ಗೀತ ಗಾಯನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಬೆಳಂದೂರು ಸರಕಾರಿ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ Read More »

ಬಂಡೀಪುರ ರಾಂಪುರ ಆನೆ ಶಿಬಿರದ ವಿನಾಯಕ ಕುಸಿದು ಬಿದ್ದು ಸಾವು

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ರಾಂಪುರ ಆನೆ ಶಿಬಿರದಲ್ಲಿದ್ದ ವಿನಾಯಕ ಎಂಬ ಆನೆ ಮಂಗಳವಾರ ಸಾವನ್ನಪ್ಪಿದೆ. ಆನೆಗಳಿಗೆ ತರಬೇತಿ ನೀಡುತ್ತಿದ್ದ ಸಂದರ್ಭದಲ್ಲಿ ದಿಢೀರ್‌ ಆಗಿ ಅಸ್ವಸ್ಥಗೊಂಡು ಕುಸಿದು ಬಿದ್ದು ಮೃತಪಟ್ಟಿದೆ. ಮರಣೋತ್ತರ ಪರೀಕ್ಷೆಯ ಬಳಿಕ ನಿಖರ ಕಾರಣಗೊತ್ತಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಆನೆಗೆ ಅಕ್ಕಿರಾಜ, ವಿನಾಯಗನ್‌ ಎಂಬ ಹೆಸರು ಇದೆ. ಕೊಯಮತ್ತೂರಿನಲ್ಲಿ 2021ರಲ್ಲಿ ಈ ಆನೆಯನ್ನು ಸೆರೆ ಹಿಡಿದು ಮಧುಮಲೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬಿಡಲಾಗಿತ್ತು. ಆನೆಯು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದುಕೆರೆ

ಬಂಡೀಪುರ ರಾಂಪುರ ಆನೆ ಶಿಬಿರದ ವಿನಾಯಕ ಕುಸಿದು ಬಿದ್ದು ಸಾವು Read More »

ಅಪ್ರಾಪ್ತ ಬಾಲಕಿಯ ಅತ್ಯಾಚಾರ | ಆಟೋ ಚಾಲಕನ ಬಂಧನ !

ಸುಬ್ರಹ್ಮಣ್ಯ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆಟೋ ಚಾಲಕನೊಬ್ಬನ ಮೇಲೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯ ತಾಲೂಕಿನ ಬೆಳ್ಳಾರೆಯ ಆಟೋ ಚಾಲಕ ಮಹೇಶ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿರುವುದು. ಈತ ಪಂಜದ ಪಿಯುಸಿ ವಿದ್ಯಾರ್ಥಿನಿಯೋರ್ವಳನ್ನು ಪ್ರೀತಿಸುವ ನಾಟಕವಾಡಿ ಪುಸಲಾಯಿಸಿ ಲಾಡ್ಜ್‍ ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿ ಬಳಿಕ ವಂಚಿಸಿದ್ದಾನೆ ಎಂದು ಪೋಷಕರು ಆರೋಪಿಸಿದ್ದರು. ಈ ಕುರಿತು ಠಾಣೆಗೆ ದೂರು ನೀಡಿದ್ದರು. ಇದೀಗ ಆರೋಪಿಯನ್ನು ವಶಕ್ಕೆ ಪಡೆದುಕೊಂಡು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು

ಅಪ್ರಾಪ್ತ ಬಾಲಕಿಯ ಅತ್ಯಾಚಾರ | ಆಟೋ ಚಾಲಕನ ಬಂಧನ ! Read More »

ನ.13: ರೈ ಚಾರಿಟೇಬಲ್ ಟ್ರಸ್ಟ್  ವಾರ್ಷಿಕ ಮಹಾಸಭೆ, ಸಮಾವೇಶ | 50 ಸಾವಿರಕ್ಕೂ ಮಿಕ್ಕಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ: ಅಶೋಕ್ ರೈ

ಪುತ್ತೂರು: ನ.13 ರಂದು ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆಯಲಿರುವ ಟ್ರಸ್ಟಿನ ಮಹಾಸಭೆ ಹಾಗೂ ಟ್ರಸ್ಟ್ ಫಲಾನುಭವಿಗಳಿಗೆ ವಸ್ತ್ರ ವಿತರಣಾ ಕಾರ್ಯಕ್ರಮ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ‌ನಡೆಯಲಿದ್ದು, ಕಾರ್ಯಕ್ರಮದಲ್ಲಿ ಸುಮಾರು‌ 50 ಸಾವಿರಕ್ಕೂ‌ಮಿಕ್ಕಿ ಫಲಾನುಭವಿಗಳು ಭಾಗವಹಿಸುವ ನಿರೀಕ್ಷೆ ಇದೆ. ಇದಕ್ಕಾಗಿ ಎಲ್ಲಾ ಸಿದ್ದತೆಗಳು ನಡೆಯುತ್ತಿದೆ ಎಂದು ಟ್ರಸ್ಟ್ ಅಧ್ಯಕ್ಣ, ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಶಾಸಕರ ಸಭಾಭವನದಲ್ಲಿ ಬುಧವಾರ ‌ನಡೆದ ಟ್ರಸ್ಟಿನ ಪ್ರಮುಖರ ಸಭೆಯಲ್ಲಿ ಅವರು  ಮಾಹಿತಿ ನೀಡಿದರು. ‌ಸಭೆಯಲ್ಲಿ ಭಾಗವಹಿಸುವ ಎಲ್ಲರಿಗೂ ವಸ್ತ್ರ

ನ.13: ರೈ ಚಾರಿಟೇಬಲ್ ಟ್ರಸ್ಟ್  ವಾರ್ಷಿಕ ಮಹಾಸಭೆ, ಸಮಾವೇಶ | 50 ಸಾವಿರಕ್ಕೂ ಮಿಕ್ಕಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ: ಅಶೋಕ್ ರೈ Read More »

ವೈವಾಹಿಕ ಜೀವನಕ್ಕೆ ಕಾಲಿರಿಸಿದ ‘ನ್ಯೂಸ್ ಪುತ್ತೂರು”ನ ಮುಖ್ಯ ವರದಿಗಾರ ಗಣೇಶ್ ಎನ್. ಕಲ್ಲರ್ಪೆ

ಪುತ್ತೂರು: ‘ನ್ಯೂಸ್ ಪುತ್ತೂರು’ ನ ಮುಖ್ಯ ವರದಿಗಾರ ಗಣೇಶ್ ಎನ್. ಕಲ್ಲರ್ಪೆಅವರು ಬುಧವಾರ ವೈವಾಹಿಕ ಜೀವನಕ್ಕೆ ಕಾಲಿರಿಸಿದರು. ಸಕಲೇಶಪುರದ ಲೇಖಖಿ (ಸುಶ್ಮಿತಾ) ಅವರೊಂದಿಗೆ ಸಕಲೇಶಪುರದ ಶ್ರೀ ಉಮಾಶಂಕರ ಸಮುದಾಯ ಭವನದಲ್ಲಿ ಬುಧವಾರ ನೆರವೇರಿತು. ವಿವಾಹ ಸಮಾರಂಭಕ್ಕೆ ಹಲವಾರು ಗಣ್ಯರು ಆಗಮಿಸಿ ಶುಭ ಹಾರೈಸಿದರು.

ವೈವಾಹಿಕ ಜೀವನಕ್ಕೆ ಕಾಲಿರಿಸಿದ ‘ನ್ಯೂಸ್ ಪುತ್ತೂರು”ನ ಮುಖ್ಯ ವರದಿಗಾರ ಗಣೇಶ್ ಎನ್. ಕಲ್ಲರ್ಪೆ Read More »

ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಿಗೆ ವಿದ್ಯುತ್, ಕುಡಿಯುವ ನೀರು ಉಚಿತ | 68ನೇ ಕನ್ನಡ ರಾಜ್ಯೋತ್ಸವದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೊಷಣೆ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಇಂದಿನಿಂದ ವಿದ್ಯುತ್ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಉಚಿತ. ಹೀಗೆಂದು ಘೋಷಿಸಿದ್ದಾರೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿಂದು ಶಿಕ್ಷಣ ಇಲಾಖೆ ಆಯೋಜಿಸಿದ್ದ 68ನೇ ಕನ್ನಡ ರಾಜ್ಯೋತ್ಸವದಲ್ಲಿ ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಿ ಈ ಘೋಷಣೆ ಮಾಡಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಉಚಿತ ವಿದ್ಯುತ್, ಕುಡಿಯುವ ನೀರು ಸೌಲಭ್ಯಕ್ಕೆ ಶಿಕ್ಷಕರು ಮನವಿ ಮಾಡಿದ್ದಾರೆ. ಅದನ್ನು ಪರಿಗಣಿಸಿ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಉಚಿತವಾಗಿ ವಿದ್ಯುತ್ ಮತ್ತು ಕುಡಿಯುವ ನೀರನ್ನು ಕೊಡುತ್ತೇವೆ ಎಂದು ಭರವಸೆ

ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಿಗೆ ವಿದ್ಯುತ್, ಕುಡಿಯುವ ನೀರು ಉಚಿತ | 68ನೇ ಕನ್ನಡ ರಾಜ್ಯೋತ್ಸವದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೊಷಣೆ Read More »

ನರಿಮೊಗರು ಸರಸ್ವತಿ ವಿದ್ಯಾ ಮಂದಿರದಲ್ಲಿ ಕನ್ನಡ ರಾಜ್ಯೋತ್ಸವ

ಪುತ್ತೂರು: ನರಿಮೊಗರು ಸರಸ್ವತಿ ವಿದ್ಯಾ ಮಂದಿರದಲ್ಲಿ ಕನ್ನಡ ರಾಜ್ಯೋತ್ಸವವನ್ನು ಬುಧವಾರ ಆಚರಿಸಲಾಯಿತು. ಶಾಲಾ ಸಂಚಾಲಕ ಅವಿನಾಶ್ ಕೊಡಂಕಿರಿ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಶಾಲಾ ಆಡಳಿತಾಧಿಕಾರಿ ಶುಭಾ ಅವಿನಾಶ್ ಕನ್ನಡ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಷಾರ್ಚನೆಗೈದರು. ಬಳಿಕ ವಿದ್ಯಾರ್ಥಿಗಳಿಂದ ಗೀತ ಗಾಯನ ಕಾರ್ಯಕ್ರಮ ನಡೆಯಿತು. ಶಾಲಾ ಮುಖ್ಯ ಶಿಕ್ಷಕರು,  ಶಿಕ್ಷಕರು, ಶಿಕ್ಷಕೇತರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ನರಿಮೊಗರು ಸರಸ್ವತಿ ವಿದ್ಯಾ ಮಂದಿರದಲ್ಲಿ ಕನ್ನಡ ರಾಜ್ಯೋತ್ಸವ Read More »

ಉಜಿರೆ ಎಸ್‍ಡಿಎಂ ಪಾಲಿಟೆಕ್ನಿಕ್‍ನಲ್ಲಿ ‘ಗೃಹ ಟೆಕ್ನಿಕಲ್ ಎಕ್ಸ್ಪೋ’

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗವು ‘ಗೃಹ ‘ಟೆಕ್ನಿಕಲ್ ಎಕ್ಸ್ಪೋ’ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಆಯೋಜಿಸಿತ್ತು. ಮುಖ್ಯ ಅತಿಥಿಯಾಗಿ ಇಂಜಿನಿಯರ್ ವಿಜಯ ವಿಷ್ಣು ಮಯ್ಯ ಮಾತನಾಡಿ, ಭವಿಷ್ಯದ ಸಿವಿಲ್ ಇಂಜಿನಿಯರಿಂಗ್ ಕ್ಷೇತ್ರದ ಅವಶ್ಯಕತೆಯನ್ನು ಹಾಗೂ ಯುವ ಎಂಜಿನೀಯರುಗಳಿಗೆ    ಶಿಸ್ತು ಮತ್ತು ಕೌಶಲ್ಯಗಳ ಅಗತ್ಯತೆಯನ್ನು ವಿವರಿಸಿದರು . ಇನ್ನೋರ್ವ ಅತಿಥಿಯಾಗಿ ಕಾಂತಾರ ಖ್ಯಾತಿಯ ನಟ ದೀಪಕ್ ರೈ  ಪಾಣಾಜೆ, ಇಂಜಿನಿಯರ್ ಜಗದೀಶ್ ಪ್ರಸಾದ್ ಯುವ ಇಂಜಿನಿಯರ್ ಗಳಿಗೆ ಶುಭಹಾರೈಸಿದರು. ಎಸ್ ಡಿ ಎಂ ಶಿಕ್ಷಣ

ಉಜಿರೆ ಎಸ್‍ಡಿಎಂ ಪಾಲಿಟೆಕ್ನಿಕ್‍ನಲ್ಲಿ ‘ಗೃಹ ಟೆಕ್ನಿಕಲ್ ಎಕ್ಸ್ಪೋ’ Read More »

error: Content is protected !!
Scroll to Top