ಮರಳು ಪೂರೈಕೆ ಕೊರತೆ ನೀಗಿಸದಿದ್ದಲ್ಲಿ ಪ್ರತಿಭಟನೆ | ದಕ್ಷಿಣ ಕನ್ನಡ ಜಿಲ್ಲಾ ಸಿವಿಲ್ ಕಾಂಟ್ರಾಕ್ಟರ್ಸ್ ಅಸೋಸಿಯೇಷನ್ ಎಚ್ಚರಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎದುರಾಗಿರುವ ಮರಳು ಪೂರೈಕೆ ಕೊರತೆಯನ್ನು 10 ದಿನಗಳಲ್ಲಿ ನಿವಾರಿಸದಿದ್ದರೆ ನಿರ್ಮಾಣ ಚಟುವಟಿಕೆ ಸ್ಥಗಿತಗೊಳಿಸಿ ಕಾರ್ಮಿಕರನ್ನೂ ಸೇರಿಸಿಕೊಂಡು ಪ್ರತಿಭಟನೆ ನಡೆಸಲಿದ್ದೇವೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸಿವಿಲ್ ಕಾಂಟ್ರಾಕ್ಟರ್ಸ್ ಅಸೋಸಿಯೇಷನ್ ಎಚ್ಚರಿಕೆ ನೀಡಿದೆ. ಎಸೋಸಿಯೇಷನ್‌ ಅಧ್ಯಕ್ಷ ಮಹಾಬಲ ಕೊಟ್ಟಾರಿಯವರು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ನೈಸರ್ಗಿಕ ಮರಳು ಯಥೇಚ್ಚವಾಗಿದೆ. ಆದರೆ ಅದರ ಪೂರೈಕೆ ಸಮರ್ಪಕವಾಗಿ ಆಗದ ಕಾರಣ ಗುತ್ತಿಗೆದಾರರು ಮತ್ತು ಸಾರ್ವಜನಿಕರು ಕಾಳಸಂತೆಯಲ್ಲಿ ದುಬಾರಿ ದರಕ್ಕೆ ಮರಳನ್ನು ಖರೀದಿಸುವ ಸ್ಥಿತಿ ನಿರ್ಮಾಣವಾಗಿದೆ. ಈ […]

ಮರಳು ಪೂರೈಕೆ ಕೊರತೆ ನೀಗಿಸದಿದ್ದಲ್ಲಿ ಪ್ರತಿಭಟನೆ | ದಕ್ಷಿಣ ಕನ್ನಡ ಜಿಲ್ಲಾ ಸಿವಿಲ್ ಕಾಂಟ್ರಾಕ್ಟರ್ಸ್ ಅಸೋಸಿಯೇಷನ್ ಎಚ್ಚರಿಕೆ Read More »

ಕಾರ್ಖಾನೆಯೊಂದರ ಮಾಲಕಿಯ ಕತ್ತು ಹಿಸುಕಿ ಕೊಲೆ

ಬೆಂಗಳೂರು: ಕಾರ್ಖಾನೆಯೊಂದರ ಮಾಲಕಿಯ ಕತ್ತು ಬಿಗಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಹೆಬ್ಬಾಳದ ಬೆಂಗಳೂರು ಮೈಸೂರು ಹೆದ್ದಾರಿ ಪಕ್ಕದಲ್ಲೇ ಇರುವ ಜಿಕೆಎನ್ ಚಿಕೋರಿ ಇಂಡಸ್ಟ್ರೀಸ್ ನಲ್ಲಿ ನಡೆದಿದೆ. ಮಂಡ್ಯದ ವಿದ್ಯಾನಗರ ನಿವಾಸಿ ನಳಿನಿ (62) ಕೊಲೆಯಾದ ದುರ್ದೈವಿ. ಕೊಲೆಯಾಗಿರೊ ನಳಿನಿ ಸ್ಥಿತಿವಂತರಾಗಿದ್ದರು. ಗಂಡ ರಮೇಶ್‌, ಮಂಡ್ಯದಲ್ಲಿ ಕಾಫಿಪುಡಿ ಅಂಗಡಿ ಹಾಗೂ ಹೆಬ್ಬಾಳ ಬಳಿ ಚಿಕೋರಿ ಕಾರ್ಖಾನೆಯನ್ನ ನಡೆಸುತ್ತಿದ್ದರು. ಆದರೆ ಬರುಬರುತ್ತ ಸಾಕಷ್ಟು ನಷ್ಟ ಅನುಭವಿಸಿದ ಹಿನ್ನೆಲೆಯಲ್ಲಿ ಮನೆಯನ್ನು ಬ್ಯಾಂಕ್ ನಲ್ಲಿ ಅಡ ಇಟ್ಟಿದ್ದರು. ಕಾರ್ಖಾನೆ ಬಂದ್ ಆಗಿದ್ದು,

ಕಾರ್ಖಾನೆಯೊಂದರ ಮಾಲಕಿಯ ಕತ್ತು ಹಿಸುಕಿ ಕೊಲೆ Read More »

ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಸುಳ್ಯದ ಯುವಕ ಆತ್ಮಹತ್ಯೆ

ಸುಳ್ಯ : ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ಶುಕ್ರವಾರ ನಡೆದಿದೆ. ಸುಳ್ಯ ಗುತ್ತಿಗಾರಿನ ಆಚಳ್ಳಿಯ ಸಿರಿಯಾಕ್ ಮ್ಯಾಥ್ಯೂ ಎಂಬವರ ಮಗ ಸೈಬಿನ್ ಈ ಕೃತ್ಯ ಎಸಗಿದವರು. ನಿನ್ನೆ ಗುತ್ತಿಗಾರು ಪೇಟೆಗೆ ಸೈಬಿನ್  ಆಗಮಿಸಿದ್ದು, ಎಲ್ಲರ ಜೊತೆ ಸಂತೋಷದಿಂದ ಮಾತನಾಡಿದ್ದ ಎನ್ನಲಾಗಿದೆ. ಸೈಬಿನ್ ಆತ್ಮಹತ್ಯೆ ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯರು ಅವರ ಹಳೆ ಮನೆಯ ಪಕ್ಕ ಜಮಾಯಿಸಿದ್ದರು. ಈ ಸಂದರ್ಭ  ಪೊಲೀಸರು ಆಗಮಿಸಿ ಜನರನ್ನು ಚದುರಿಸಿದರು ಎಂದು ತಿಳಿದು ಬಂದಿದೆ.

ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಸುಳ್ಯದ ಯುವಕ ಆತ್ಮಹತ್ಯೆ Read More »

ಬೈಕ್ ಡಿಕ್ಕಿ ಹೊಡೆದು ವಿದ್ಯಾರ್ಥಿನಿ ಅಂಕಿತಾ ಮೃತ್ಯು

ಉಜಿರೆ: ಬೈಕ್ ಡಿಕ್ಕಿ ಹೊಡೆದ ಪರಿಣಾಮ 3ನೇ ತರಗತಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಶುಕ್ರವಾರ ಉಜಿರೆಯಲ್ಲಿ ನಡೆದಿದೆ. ದಿ.ಅಶೋಕ್ ಹಾಗೂ ಜಯಶ್ರೀ ದಂಪತಿ ಪುತ್ರಿ ಅಂಕಿತಾ ಮೃತಪಟ್ಟ ವಿದ್ಯಾರ್ಥಿನಿ ಬದನಾಜೆ ಹಿ.ಪ್ರಾ. ಶಾಲೆಯ ಎದುರು ರಸ್ತೆ ದಾಟುತ್ತಿರುವ ಸಂದರ್ಭ ಬೈಕ್‍ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ಅಂಕಿತಾ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಬೈಕ್ ಡಿಕ್ಕಿ ಹೊಡೆದು ವಿದ್ಯಾರ್ಥಿನಿ ಅಂಕಿತಾ ಮೃತ್ಯು Read More »

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಆರೋಪಿ ನೌಷದ್ ಸುಳಿವಿಗೆ ಎರಡು ಲಕ್ಷ ಘೋಷಣೆ

ಬೆಂಗಳೂರು: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸುಳಿವು ನೀಡಿದವರಿಗೆ ಎರಡು ಲಕ್ಷ ರೂಪಾಯಿ ಘೋಷಣೆ ಮಾಡಿ ಬೆಂಗಳೂರು ಎನ್.ಐ.ಎ ಅಧಿಕಾರಿಗಳು ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದಾರೆ. 2022 ಜುಲೈ 26ರಂದು ಹತ್ಯೆಯಾದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಕೆಗುಡ್ಡೆ ನಿವಾಸಿ ನೌಷದ್ (32) ಎಂಬಾತ ಕೊಲೆ ಮಾಡಿದ ಆರೋಪಿಗಳು ಪರಾರಿಯಾಗಲು ಸಹಕರಿಸಿದ ಹಿನ್ನೆಲೆಯಲ್ಲಿ ಎನ್.ಐ.ಎ ಅಧಿಕಾರಿಗಳು ಈ ಮೊದಲೇ ಪಡಂಗಡಿಯಲ್ಲಿರುವ ಮನೆಗೆ ದಾಳಿ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಆರೋಪಿ ನೌಷದ್ ಸುಳಿವಿಗೆ ಎರಡು ಲಕ್ಷ ಘೋಷಣೆ Read More »

ನ.1: ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಅರ್ಥಪೂರ್ಣ ಆಚರಣೆ | ವಿವಿಧ ಸಂಘ ಸಂಸ್ಥೆಗಳ ಸಮಾಲೋಚನಾ ಸಭೆಯಲ್ಲಿ ನಿರ್ಧಾರ

ಪುತ್ತೂರು: ನ.1 ರಂದು ನಡೆಯಲಿರುವ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಕನ್ನಡ ಭುವನೇಶ್ವರಿಯ ಮೆರವಣಿಗೆ ನಡೆಸುವ ಬಗ್ಗೆ ಕುರಿತು ವಿವಿಧ ಸಂಘ ಸಂಸ್ಥೆಗಳ ಸಮಾಲೋಚನಾ ಸಭೆ ಶುಕ್ರವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು. ತಹಶೀಲ್ದಾರ್ ಜೆ.ಶಿವಶಂಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಮಾತನಾಡಿ,  ಕರ್ನಾಟಕ ರಾಜ್ಯ ಎಂದು ಮರು ನಾಮಕರಣಗೊಂಡು ಐವತ್ತು ವರ್ಷ ಪೂರ್ಣಗೊಂಡಿದ್ದು ಈ ಹಿನ್ನೆಲೆಯಲ್ಲಿ ನ.1 ರಂದು

ನ.1: ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಅರ್ಥಪೂರ್ಣ ಆಚರಣೆ | ವಿವಿಧ ಸಂಘ ಸಂಸ್ಥೆಗಳ ಸಮಾಲೋಚನಾ ಸಭೆಯಲ್ಲಿ ನಿರ್ಧಾರ Read More »

ಏಳ್ಮುಡಿ ಸೇತುವೆ ದಾಟಲು ಏಳು ಮುಡಿ ಹೊತ್ತ ಅನುಭವ!! | ಪಾದಚಾರಿಗಳಿಗೆ ಸಮಸ್ಯೆ ತಂದೊಡ್ಡುತ್ತಿವೆ ಬೆಳೆದು ನಿಂತ ಗಿಡಗಂಟಿ!!

ಪುತ್ತೂರು: ನಗರದ ಮಧ್ಯಭಾಗದಲ್ಲಿ ಅದೂ ಮುಖ್ಯರಸ್ತೆಯಲ್ಲಿರುವ ಸೇತುವೆಯೊಂದರ ಎರಡೂ ಬದಿಯಲ್ಲಿ ಗಿಡಗಂಟಿಗಳು ಬೆಳೆದ ಪರಿಣಾಮ ಸಾರ್ವಜನಿಕರಿಗೆ ನಡೆದಾಡಲೂ ಕಷ್ಟ ಪಡುವಂತಾಗಿದೆ. ಬಸ್ ನಿಲ್ದಾಣ – ದರ್ಬೆ ಸಂಪರ್ಕ ರಸ್ತೆಯ ಮಧ್ಯ ಭಾಗದ ಏಳ್ಮುಡಿ ಸೇತುವೆಯ ಎರಡೂ ಬದಿಯಲ್ಲಿ ಗಿಡಗಂಟಿಗಳು ಬೆಳೆದಿದ್ದು, ಪಾದಚಾರಿಗಳು ನಡೆದಾಡಲು ಹರಸಾಹಸ ಪಡುತ್ತಿದ್ದಾರೆ. ಹೇಳಿಕೇಳಿ ಈ ಸೇತುವೆ ಮೊದಲೇ ಇಕ್ಕಟಾದ ಸೇತುವೆ. ವಾಹನಗಳು ಅತ್ತಿಂದಿತ್ತ ಚಲಿಸುವ ಸಂದರ್ಭ ಪಾದಚಾರಿಗಳು ಸೇತುವೆಯ ಬದಿಗಳಲ್ಲಿ ನಡೆದುಕೊಂಡು ಹೋಗಬೇಕಾಗುತ್ತದೆ. ಗಿಡಗಂಟಿಗಳು ಬೆಳೆದ ಪರಿಣಾಮ ಸಮಸ್ಯೆ ಉಂಟಾಗಿದೆ. ತಕ್ಷಣ ನಗರಸಭೆ

ಏಳ್ಮುಡಿ ಸೇತುವೆ ದಾಟಲು ಏಳು ಮುಡಿ ಹೊತ್ತ ಅನುಭವ!! | ಪಾದಚಾರಿಗಳಿಗೆ ಸಮಸ್ಯೆ ತಂದೊಡ್ಡುತ್ತಿವೆ ಬೆಳೆದು ನಿಂತ ಗಿಡಗಂಟಿ!! Read More »

ಅಡ್ಯನಡ್ಕದಲ್ಲಿ ಮನಸೂರೆಗೊಂಡ ಸ್ವರ ಸಿಂಚನ ಸಂಗೀತದ ಝೇಂಕಾರ

ಅಡ್ಯನಡ್ಕ : ಶ್ರೀ ದುರ್ಗಾಪರಮೇಶ್ವರಿ ಮತ್ತು ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಶ್ರೀ ಶಾರದೋತ್ಸವದ 34ನೇ ವರ್ಷದ ಉತ್ಸವದಂದು ವಿಟ್ಲ ಸ್ವರ ಸಿಂಚನ ಸಂಗೀತ ಶಾಲೆ ವತಿಯಿಂದ ಭಕ್ತಿಗಾನ ರಸಮಂಜರಿ ನಡೆಯಿತು. ಸಂಸ್ಥೆಯ ಸವಿತಾ ಕೋಡಂದೂರ್ ಮತ್ತು ವಿದ್ಯಾರ್ಥಿಗಳಿಂದ ನಡೆದ ಭಕ್ತಿ ಗಾನ ರಸಮಂಜರಿ ಕಾರ್ಯಕ್ರಮವನ್ನು ವೇ.ಮು ರಾಮಕೃಷ್ಣ ಭಟ್ ನೀರಮೂಲೆ ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಭಕ್ತಿಗೀತೆ, ಭಾವಗೀತೆ, ಜನಪದ ಗೀತೆ, ದಾಸರ ಪದಗಳನ್ನು ಹಾಡಿ ಮನಸೂರೆಗೊಂಡ ಕಾರ್ಯಕ್ರಮವಾಗಿ ಸಂಗೀತದ ಝೇಂಕಾರ ಮೂಡಿಬಂತು. ತಾನು ಬೆಳೆಯುವುದಲ್ಲದೆ

ಅಡ್ಯನಡ್ಕದಲ್ಲಿ ಮನಸೂರೆಗೊಂಡ ಸ್ವರ ಸಿಂಚನ ಸಂಗೀತದ ಝೇಂಕಾರ Read More »

ರಾಜಕಾಲುವೆ, ಚರಂಡಿ ಹೂಳೆತ್ತುವ ಕಾಮಗಾರಿಯಲ್ಲಿ ಭಾರೀ ಅವ್ಯವಹಾರ | ತನಿಖೆಗೆ ಲೋಕಾಯುಕ್ತರಿಂದ ಆದೇಶ

ಪುತ್ತೂರು: ನಗರಸಭೆ ವ್ಯಾಪ್ತಿಯಲ್ಲಿ ರಾಜಕಾಲುವೆ ಹಾಗೂ ಚರಂಡಿಗಳ ಹೂಳೆತ್ತುವ ಕಾಮಗಾರಿಯಲ್ಲಿ ಭಾರೀ ಅವ್ಯವಹಾರ ನಡೆದಿದ್ದು, ಈ ಕುರಿತು ನಗರಸಭೆ ಹಿಂದಿನ ಪೌರಾಯುಕ್ತೆ ರೂಪಾ ಶೆಟ್ಟಿ, ಇಂಜಿನಿಯರ್ ದಿವಾಕರ್ ಹಾಗೂ ಅಕೌಂಟೆಂಟ್ ಚಂದ್ರರಾಮ ದೇವಾಡಿಗ ವಿರುದ್ಧ ತನಿಖೆ ನಡೆಸಲು ಲೋಕಾಯುಕ್ತಕ್ಕೆ ದೂರು ನೀಡಲಾಗಿದ್ದು, ತನಿಖೆಗೆ ಲೋಕಾಯುಕ್ತರಿಂದ ಆದೇಶಿಸಲಾಗಿದೆ ಎಂದು ನಗರಸಭೆ ಮಾಜಿ ವಿಪಕ್ಷ ನಾಯಕ ಮಹಮ್ಮದಾಲಿ ತಿಳಿಸಿದ್ದಾರೆ. ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 2018-19 ಹಾಗೂ 2020-21 ರಲ್ಲಿ ನಗರಸಭೆ ವ್ಯಾಪ್ತಿಯಲ್ಲಿನ ರಸ್ತೆ ಬದಿಗಳಲ್ಲಿರುವ ಚರಂಡಿ ಹಾಗೂ ರಾಜಕಾಲುವೆಗಳ

ರಾಜಕಾಲುವೆ, ಚರಂಡಿ ಹೂಳೆತ್ತುವ ಕಾಮಗಾರಿಯಲ್ಲಿ ಭಾರೀ ಅವ್ಯವಹಾರ | ತನಿಖೆಗೆ ಲೋಕಾಯುಕ್ತರಿಂದ ಆದೇಶ Read More »

ಅ.30 ರಿಂದ ಬಿಸಿಯೂಟ ಬಂದ್ | ಬಿಸಿಯೂಟ ನೌಕರರಿಂದ ವಿಧಾನಸೌಧ ಚಲೋ

ಪುತ್ತೂರು: ಅಕ್ಷರ ದಾಸೋಹ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅ.30 ರಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಹೋರಾಟ ನಡೆಯಲಿದ್ದು, ದ.ಕ.ಜಿಲ್ಲೆಯ ಅಕ್ಷರದಾಸೋಹ ನೌಕರರು ನ.7 ರಂದು ಅಡುಗೆ ಕೆಲಸ ಸ್ಥಗಿತಗೊಳಿಸಿ ಬೆಂಗಳೂರು ಹೋರಾಟದಲ್ಲಿ ಭಾಗವಹಿಸಲಿದ್ದಾರೆ ಎಂದು ಸಿಐಟಿಯು ರಾಜ್ಯ ಸಮಿತಿ ಸದಸ್ಯ ಬಿ.ಎಂ.ಭಟ್ ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೊಷ್ಠಿಯಲ್ಲಿ ಅವರು ಮಾತನಾಡಿ, ಬೇಡಿಕೆ ಈಡೇರುವ ತನಕ ನಮ್ಮ ಹೋರಾಟ ನಡೆಯಲಿದೆ. ಈಗಾಗಲೇ ಮುಖ್ಯ ಅಡುಗೆಯವರ ವೇತನ ಗರಿಷ್ಠ 3700 ಇದ್ದು, ಸಹಾಯಕಿಯರ ವೇತನ 3600 ಇದೆ. ಇದನ್ನು ಕನಿಷ್ಠ

ಅ.30 ರಿಂದ ಬಿಸಿಯೂಟ ಬಂದ್ | ಬಿಸಿಯೂಟ ನೌಕರರಿಂದ ವಿಧಾನಸೌಧ ಚಲೋ Read More »

error: Content is protected !!
Scroll to Top