ವೈಭವದ ಶೋಭಾಯಾತ್ರೆಯೊಂದಿಗೆ ಪುತ್ತೂರು ಶಾರದೋತ್ಸವ ಸಮಾಪನ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಶ್ರೀ ಶಾರದಾ ಭಜನಾ ಮಂದಿರದಲ್ಲಿ ಒಂಭತ್ತು ದಿನಗಳ ಕಾಲ ನಡೆದ ಪುತ್ತೂರು ಶಾರದೋತ್ಸವ ವೈಭವದ ಶೋಭಾಯಾತ್ರೆಯೊಂದಿಗೆ ಸಮಾಪನಗೊಂಡಿತು. ಸಂಜೆ ಶ್ರೀ ದೇವಸ್ಥಾನದಲ್ಲಿ ಶ್ರೀ ಶಾರದಾ ಮಾತೆಗೆ ಮಹಾಪೂಜೆ ಬಳಿಕ ಶೋಭಾಯಾತ್ರೆ ಹೊರಟು ಬೊಳುವಾರಿಗೆ ತೆರಳಿತು. ಅಲ್ಲಿ ಮೆರವಣಿಗೆಗೆ ಚಾಲನೆ ನೀಡಿ ಭಜನಾ ತಂಡಗಳ ಸಹಸ್ರಾರು ಭಜಕರು ಕುಣಿತ ಭಜನೆಯೊಂದಿಗೆ, ಆಕರ್ಷಕ ಸ್ತಬ್ಧಚಿತ್ರ, ಡೊಳ್ಳು ಕುಣಿತ, ಮುಂತಾದ ಹತ್ತು ಹಲವಾರು ಆಕರ್ಷಣೆಯೊಂದಿಗೆ ಬೊಳುವಾರಿನಿಂದ ಮುಖ್ಯರಸ್ತೆಯಲ್ಲಿ ಆಗಮಿಸಿ, ಬಸ್ ನಿಲ್ದಾಣ, ಕಲ್ಲಾರೆ, […]

ವೈಭವದ ಶೋಭಾಯಾತ್ರೆಯೊಂದಿಗೆ ಪುತ್ತೂರು ಶಾರದೋತ್ಸವ ಸಮಾಪನ Read More »

ದ.ಕ.ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯಿಂದ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿ ಆಹ್ವಾನ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯಿಂದ ಸೋಶಿಯಲ್ ಮೀಡಿಯಾ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಒಟ್ಟು 250 ಹುದ್ದೆಗಳು ಖಾಲಿಯಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನ್ನಡ, ಇಂಗ್ಲೀಷ್ ಅಥವಾ ಹಿಂದಿ ಈ ಮೂರು ಭಾಷೆಗಳಲ್ಲಿ ಯಾವುದಾದರು ಒಂದರಲ್ಲಿ ಭಾಷಾ ಪರಿಣತಿ ಹೊಂದಿರಬೇಕು. 15 ರಿಂದ 20 ಸಾವಿರ ವೇತನ ನೀಡಲಾಗುವುದು. ವರ್ಕ್ ಫ್ರಮ್ ಹೋಮ್. ಅಭ್ಯರ್ಥಿಗಳು ಪದವೀಧರರಾಗಿರಬೇಕು ಮತ್ತು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರಬೇಕು. ಈ ಕೆಳಗಿನ

ದ.ಕ.ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯಿಂದ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿ ಆಹ್ವಾನ Read More »

ನಿವೃತ್ತ ಬ್ಯಾಂಕ್ ಉದ್ಯೋಗಿ ಶವ ಬಾವಿಯಲ್ಲಿ ಪತ್ತೆ

ಉಡುಪಿ: ನಿವೃತ್ತ ಬ್ಯಾಂಕ್ ಉದ್ಯೋಗಿಯೊಬ್ಬರ ಶವ ಅವರ ಮನೆ ಆವರಣದಲ್ಲಿರುವ ಬಾವಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಉಡುಪಿ ಒಳಕಾಡು ನಾರಾಯಣ ರಾವ್ ಕಂಪೌಂಡ್ ನ ನಿವೃತ್ತ ಬ್ಯಾಂಕ್ ಉದ್ಯೋಗಿ ಸದಾನಂದ ಕುಂದರ್ (65) ಎಂಬವರ ಶವ ಪತ್ತೆಯಾಗಿರುವುದು. ಘಟನಾ ಸ್ಥಳಕ್ಕೆ ನಗರ ಪೊಲೀಸ್ ಠಾಣೆಯ ಎಎಸ್‍ಐ ಅರುಣ್ ಹಂಗಾರಕಟ್ಟೆ, ಹೆಡ್ ಕಾನ್‍ ಸ್ಟೇಬಲ್ ಗಳಾದ ಹರೀಶ್ ನಾಯ್ಕ್‍, ಶಂಕರ್ ಭೇಟಿ ನೀಡಿದ್ದು, ಘಟನೆಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.

ನಿವೃತ್ತ ಬ್ಯಾಂಕ್ ಉದ್ಯೋಗಿ ಶವ ಬಾವಿಯಲ್ಲಿ ಪತ್ತೆ Read More »

ಸರಸ್ವತಿ ಗೀತ ಗಾಯನ ಸ್ಪರ್ಧೆಯ ಫಲಿತಾಂಶ

ಪುತ್ತೂರು: ನವರಾತ್ರಿ ಹಿನ್ನೆಲೆಯಲ್ಲಿ ನ್ಯೂಸ್ ಪುತ್ತೂರು ಏರ್ಪಡಿಸಿದ್ದ ಸರಸ್ವತಿ ಗೀತ ಗಾಯನ ಸ್ಪರ್ಧೆಯ ಫಲಿತಾಂಶವನ್ನು ಇಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕ ವಿಭಾಗದಲ್ಲಿ ಸುಮಾ ಕೋಟೆ ಪ್ರಥಮ, ಸಾನ್ವಿ ಕಜೆ ದ್ವಿತೀಯ, ಶಿವಪ್ರಿಯಾ ಪಿ. ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಶಾಲಾ ವಿಭಾಗದಲ್ಲಿ ನಡೆದ ಸ್ಪರ್ಧೆಯಲ್ಲಿ ಸುಪ್ರಜಾ ರಾವ್ ಪ್ರಥಮ, ಜನನಿ ದ್ವಿತೀಯ ಸ್ಥಾನ ಹಾಗೂ ಆರಾಧ್ಯ ಸಿ.ಯು. ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ತೀರ್ಪುಗಾರರಾಗಿ ಸಂಗೀತಾ ಶಿಕ್ಷಕಿಯರಾದ ಪವಿತ್ರಾ ರೂಪೇಶ್, ಪೂರ್ಣಿಮಾ ದಿನೇಶ್ ಅಂಬೆಕಲ್ಲು ಸಹಕರಿಸಿದರು.

ಸರಸ್ವತಿ ಗೀತ ಗಾಯನ ಸ್ಪರ್ಧೆಯ ಫಲಿತಾಂಶ Read More »

ಮಾಲಕರ ವಿಶ್ವಾಸ ಗಿಟ್ಟಿಸಿದ್ದ ಕೆಲಸದವನಿಂದಲೇ ಭಾರೀ ಕಳ್ಳತನ!

ಬಂಟ್ವಾಳ: ಬಿಲ್ಡರ್ ಓರ್ವರ ಮನೆಯ ಕೆಲಸಕ್ಕಿದ್ದಾತ ಲಕ್ಷಾಂತರ ರೂ ಮೌಲ್ಯದ ನಗ ಹಾಗೂ ನಗದನ್ನು ಕಳುವು ಮಾಡಿ ಪರಾರಿಯಾಗಿರುವ ಘಟನೆ ಫರಂಗಿಪೇಟೆ ಎಂಬಲ್ಲಿ ನಡೆದಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪುದು ಗ್ರಾಮದ ಕೋಡಿಮಜಲು ನಿವಾಸಿಯಾಗಿರುವ ಇಮಾದ್ ಬಿಲ್ಡರ್ ಮಾಲಕ ಮೊಹಮ್ಮದ್ ಝಫರುಲ್ಲಾ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಕಪಾಟಿನೊಳಗೆ ಇರಿಸಲಾಗಿದ್ದ ಲಕ್ಷಾಂತರ ಬೆಲೆ ಬಾಳುವ ಚಿನ್ನಾಭರಣ ಸಹಿತ ಲಕ್ಷಾಂತರ ರೂ ಹಣವನ್ನು ಮನೆಯ ಕೆಲಸದಾತನೇ ಕದ್ದುಕೊಂಡು ಹೋಗಿರುವುದಾಗಿ ಪೋಲೀಸರಿಗೆ ದೂರು ನೀಡಲಾಗಿದೆ. ಸುಮಾರು 2,75,0000

ಮಾಲಕರ ವಿಶ್ವಾಸ ಗಿಟ್ಟಿಸಿದ್ದ ಕೆಲಸದವನಿಂದಲೇ ಭಾರೀ ಕಳ್ಳತನ! Read More »

ರೈ ಚಿಕನ್ ಸೆಂಟರ್‌ ಮಾಲಕ ಗಂಗಾಧರ್ ನಾಯ್ಕ್ ನಿಧನ

ಪುತ್ತೂರು: ಪಂಜಳ ನಿವಾಸಿ, ರೈ ಚಿಕನ್ ಸೆಂಟರ್‌ ಮಾಲಕ ಗಂಗಾಧರ್ ನಾಯ್ಕ್ (64 ವ.) ಅಸೌಖ್ಯದಿಂದ ಪಂಜಳದ ಸ್ವಗೃಹದಲ್ಲಿ ಅ. 22ರಂದು ನಿಧನರಾದರು. ಗಂಗಾಧರ್ ನಾಯ್ಕ್ ಅವರು ಪುತ್ತೂರು ಎಪಿಎಂಸಿ ರಸ್ತೆಯ ಕಾಂಗ್ರೆಸ್ ಕಚೇರಿ ಸಮೀಪ ರೈ ಚಿಕನ್ ಸೆಂಟರ್ ನಡೆಸುತ್ತಿದ್ದರು‌. ಮೃತರು ತಾಯಿ ಗಿರಿಜಾ, ಸಹೋದರ ಮೋಹನ್ ನಾಯ್ಕ್ , ಹಾಗೂ ಸಹೋದರಿಯರನ್ನು ಅಗಲಿದ್ದಾರೆ.

ರೈ ಚಿಕನ್ ಸೆಂಟರ್‌ ಮಾಲಕ ಗಂಗಾಧರ್ ನಾಯ್ಕ್ ನಿಧನ Read More »

ಹೆಣ್ಣುಮರಿಗೆ ಜನ್ಮ ನೀಡಿದ ಜಂಬೂ ಸವಾರಿಗೆ ಬಂದಿದ್ದ ನೇತ್ರಾವತಿ ಆನೆ!

ಶಿವಮೊಗ್ಗ: ದಸರಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ತಾಲೀಮು ನಡೆಸಿದ್ದ 28 ವರ್ಷದ ನೇತ್ರಾವತಿ ಆನೆಯು ಹೆಣ್ಣು ಮರಿಗೆ ಜನ್ಮ ನೀಡಿದೆ. ಕೆಲವು ವರ್ಷಗಳಿಂದ ಶಿವಮೊಗ್ಗ ದಸರಾದಲ್ಲಿ ಬೆಳ್ಳಿ ಅಂಬಾರಿ ಹೊರಲು ಮೂರು ಆನೆಗಳನ್ನು ಬಳಸಿಕೊಳ್ಳಲಾಗುತ್ತಿದೆ. ಈ ಬಾರಿಯು ಅಂಬಾರಿ ಹೊರುವ ಸಾಗರನ ಜತೆ ಯಾವ ಅನೆಗಳನ್ನು ಕಳುಹಿಸಬೇಕು ಎಂದು ಗೊಂದಲ ಮೂಡಿತ್ತು. ಕುಂತಿ ಈಚೆಗೆ ಮರಿ ಹಾಕಿತ್ತು. ಭಾನುಮತಿ ತುಂಬು ಗರ್ಭಿಣಿಯಾಗಿತ್ತು. ಹಾಗಾಗಿ ಸಾಗರ ಆನೆ ಜತೆ ನೇತ್ರಾವತಿ, ಹೇಮಾವತಿ ಆನೆಗಳನ್ನು ಕಳುಹಿಸಲಾಗಿತ್ತು. ಪ್ರತಿ ವರ್ಷದಂತೆ ಈ ವರ್ಷವು

ಹೆಣ್ಣುಮರಿಗೆ ಜನ್ಮ ನೀಡಿದ ಜಂಬೂ ಸವಾರಿಗೆ ಬಂದಿದ್ದ ನೇತ್ರಾವತಿ ಆನೆ! Read More »

4 ಗ್ರಾಮಗಳಲ್ಲಿ ಲಘು ಭೂಕಂಪ!

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ನಾಲ್ಕು ಗ್ರಾಮಗಳಲ್ಲಿ ಲಘು ಭೂಕಂಪನದ ಅನುಭವವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಸುಕಿನ ಜಾವ 2.50ಕ್ಕೆ ಭೂಮಿ ಕಂಪಿಸಿದ ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆ ದಾಖಲಾಗಿದೆ. ಈ ಘಟನೆ ವಿಜಯದಶಮಿ ಹಬ್ಬದ ಸಂಭ್ರಮದಲ್ಲಿದ್ದ ಜನರಲ್ಲಿ ಆತಂಕ ಮೂಡಿಸಿದೆ. ನಿಲೋಗಲ್, ಹಟ್ಟಿ, ವೀರಾಪುರ ಹಾಗೂ ಗೆಜ್ಜಲಗಟ್ಟ ಗ್ರಾಮಗಳಲ್ಲಿ ಮಧ್ಯರಾತ್ರಿ ವೇಳೆಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಸದ್ಯ, ಯಾವುದೇ ಪ್ರಾಣ ಹಾನಿ ಅಥವಾ ಆಸ್ತಿ ಹಾನಿ ಸಂಭವಿಸಿಲ್ಲ. ಈ ರೀತಿಯ ಲಘು ಭೂಕಂಪನದಿಂದ ಜನರು ಆತಂಕಪಡುವ

4 ಗ್ರಾಮಗಳಲ್ಲಿ ಲಘು ಭೂಕಂಪ! Read More »

ಪುತ್ತೂರಿನಲ್ಲಿ ಅಭಿವೃದ್ದಿ ಪರ್ವ ಆರಂಭ : ವಿವಿಧ ಗ್ರಾಮೀಣ ರಸ್ತೆಗಳಿಗೆ 1.70 ಕೋಟಿ ರೂ. ಬಿಡುಗಡೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳ ರಸ್ತೆ ಅಭಿವೃದ್ದಿಗೆ ಅನುದಾನ ಬಿಡುಗಡೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಅನುದಾನವನ್ನು ಕ್ಷೇತ್ರಕ್ಕೆ ತರಲಾಗುವುದು ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ. ಬಿಡುಗಡೆಯಾದ ಅನುದಾನಗಳ ವಿವರ ಇಂತಿದೆ : ಪುತ್ತೂರು ತಾಲೂಕು ಪಾಣಾಜೆ ಗ್ರಾಮದ ಕಡಂದೇಲು ಪ.ಜಾತಿ ಕಾಲನಿ ರಸ್ತೆ ಅಭಿವೃದ್ಧಿಗೆ ರೂ 24 ಲಕ್ಷ ರೂ., ಕೆದಿಲ ಗ್ರಾಮದ ಭಗವಂತಕೋಡಿ ಮುರುರ ಪಾಟ್ರುಕೋಡಿ 17 ಲಕ್ಷ ರೂ., ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ ಕಣಿಯಾರು ಪ.ಜಾತಿ

ಪುತ್ತೂರಿನಲ್ಲಿ ಅಭಿವೃದ್ದಿ ಪರ್ವ ಆರಂಭ : ವಿವಿಧ ಗ್ರಾಮೀಣ ರಸ್ತೆಗಳಿಗೆ 1.70 ಕೋಟಿ ರೂ. ಬಿಡುಗಡೆ Read More »

24-10-2023ರ ಕೃಷಿ ಮಾರುಕಟ್ಟೆ ಧಾರಣೆ | ಏರಿಳಿಕೆ ಹಾದಿಯಲ್ಲಿ ರಬ್ಬರ್ ಧಾರಣೆ!

ಪುತ್ತೂರು: ರಬ್ಬರ್ ಧಾರಣೆ ಏರಿಳಿಕೆ ಹಾದಿಯಲ್ಲಿದೆ. ಅಂದರೆ ಸ್ಕ್ರಾಪ್ ಗ್ರೇಡ್ ಧಾರಣೆ ಏರಿಕೆ ಹಾದಿಯಲ್ಲಿದ್ದರೆ, ಉಳಿದ ಧಾರಣೆಗಳು ಇಳಿಕೆ ಹಾದಿಯಲ್ಲಿದೆ. ಮಂಗಳವಾರ ಹೊಸ ಅಡಿಕೆ 325- 365 ರೂ., ಹಳೆ ಅಡಿಕೆ 380 -422 ರೂ. ಹಾಗೂ 423-425 ರೂ.ನಲ್ಲಿದೆ (ಗುಣಮಟ್ಟ). ಡಬ್ಬಲ್ ಚೋಲ್ 390 – 460 ರೂ. ಹಾಗೂ 460- 485 ರೂ. (ಗುಣಮಟ್ಟ)ನಲ್ಲಿದೆ. ಕಾಳು ಮೆಣಸು ಕೆ.ಜಿ.ಗೆ 315 – 585 ರೂ., ಒಣ ಕೊಕ್ಕೊ 215- 235 ರೂ., ಹಸಿ ಕೊಕ್ಕೊ

24-10-2023ರ ಕೃಷಿ ಮಾರುಕಟ್ಟೆ ಧಾರಣೆ | ಏರಿಳಿಕೆ ಹಾದಿಯಲ್ಲಿ ರಬ್ಬರ್ ಧಾರಣೆ! Read More »

error: Content is protected !!
Scroll to Top