ಹಿಂಗಾರು ಹಂಗಾಮಿನ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಶೇ. 50ರಷ್ಟು ಹೆಚ್ಚಿಸಿದ ಕೇಂದ್ರ: ಪ್ರಹ್ಲಾದ್ ಜೋಶಿ

ಬೆಂಗಳೂರು: ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನ ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದ್ದು, ಇದರಿಂದ ರೈತರು ತಾವು ಬೆಳೆದ ಬೆಳೆಗಳನ್ನು ಅತ್ಯುತ್ತಮ ಬೆಲೆಗೆ ಮಾರಾಟ ಮಾಡಲು ಅವಕಾಶ ಕಲ್ಪಿಸಿದಂತಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ. ಗೋಧಿ ಸೇರಿದಂತೆ ಪ್ರಮುಖ ಆರು ಹಿಂಗಾರು ಬೆಳೆಗಳಿಗೆ ಕೇಂದ್ರ ಸರಕಾರ ಬೆಂಬಲ ಬೆಲೆ ಹೆಚ್ಚಳ ಮಾಡಿದೆ. ರೈತರ ಆದಾಯ ವೃದ್ಧಿಸುವ ಜತೆಗೆ ಉತ್ಪಾದನೆ ಹೆಚ್ಚಳಕ್ಕೆ ಪ್ರೋತ್ಸಾಹ ನೀಡಲು […]

ಹಿಂಗಾರು ಹಂಗಾಮಿನ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಶೇ. 50ರಷ್ಟು ಹೆಚ್ಚಿಸಿದ ಕೇಂದ್ರ: ಪ್ರಹ್ಲಾದ್ ಜೋಶಿ Read More »

ಟ್ಯಾಂಕರ್ ಪಲ್ಟಿ : ಚಾಲಕನಿಗೆ ಗಾಯ

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿಯಾದ ಘಟನೆ ಇಲ್ಲಿನ ಬೈಪಾಸ್ ರಸ್ತೆಯ ಉರ್ಲಾಂಡಿ ಸಮೀಪ ನಡೆದಿದೆ. ಅಪಘಾತದಲ್ಲಿ ಟ್ಯಾಂಕರ್ ಚಾಲಕನಿಗೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಹಲವಾರು ಮಂದಿ ಸ್ಥಳದಲ್ಲಿ ಜಮಾಯಿಸಿದ್ದಾರೆ. ಅಪಘಾತದಿಂದಾಗಿ ಟ್ಯಾಂಕರ್ ನಲ್ಲಿದ್ದ ಆಯಿಲ್ ರಸ್ತೆಯಲ್ಲೆಲ್ಲಾ ಚೆಲ್ಲಿದೆ.

ಟ್ಯಾಂಕರ್ ಪಲ್ಟಿ : ಚಾಲಕನಿಗೆ ಗಾಯ Read More »

ಫುಟ್ ಪಾತ್ ಮೇಲೆರಗಿದ ಕಾರು: ಯುವತಿ ಸಾವು!

ಮಂಗಳೂರು: ಕುದ್ರೋಳಿ ದೇವಸ್ಥಾನಕ್ಕೆ ಬಂದು ನಡೆದುಕೊಂಡು ತೆರಳುತ್ತಿದ್ದ ಹುಡುಗಿಯರ ಮೇಲೆ ಕಾರು ಡಿಕ್ಕಿಯಾಗಿದ್ದು ಯುವತಿಯೊಬ್ಬಳು ಮೃತಪಟ್ಟ ಘಟನೆ ಮಂಗಳೂರಿನ ಮಣ್ಣಗುಡ್ಡದಲ್ಲಿ ನಡೆದಿದೆ. ಬುಧವಾರ ಸಂಜೆ 5.30ರ ವೇಳೆಗೆ ಘಟನೆ ನಡೆದಿದ್ದು ಸುರತ್ಕಲ್ ಕಾನ ಬಾಳ ನಿವಾಸಿ ರೂಪಶ್ರೀ (23) ಮೃತಪಟ್ಟವರು. ಸ್ವಾತಿ(26), ಹಿತ್ನವಿ (16), ಕೃತಿಕಾ (16), ಯತಿಕಾ(12) ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ರೂಪಶ್ರೀ ಇತರ ನಾಲ್ಕು ಹುಡುಗಿಯರ ಜೊತೆಗೆ ಕುದ್ರೋಳಿ ದೇವಸ್ಥಾನಕ್ಕೆ ಬಂದಿದ್ದರು. ಸಂಜೆ ದೇವಸ್ಥಾನ ಕಡೆಯಿಂದ ಲೇಡಿಹಿಲ್ ಕಡೆಗೆ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ

ಫುಟ್ ಪಾತ್ ಮೇಲೆರಗಿದ ಕಾರು: ಯುವತಿ ಸಾವು! Read More »

ಪಿಕಪ್ ವಾಹನ ಡಿಕ್ಕಿ : ಬಾಲಕ ಮಹಮ್ಮದ್ ರಂಝೀನ್ ಮೃತ್ಯು

ಬೆಳ್ತಂಗಡಿ: ಪಿಕಪ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ಬುಧವಾರ ಬೆಳ್ತಂಗಡಿ ಲಾಯಿಲ ವೃತ್ತದ ಬಳಿ ಸಂಭವಿಸಿದೆ. ಪಾರಂಕಿ ಗ್ರಾಮದ ಅರ್ತಿಲ ನಿವಾಸಿ ಮಹಮ್ಮದ್ ರಫೀಕ್ ಎಂಬವರ ಪುತ್ರ ಮಹಮ್ಮದ್ ರಂಝೀನ್ (10) ಮೃತಪಟ್ಟ ಬಾಲಕ. ಶಾಲೆಗೆ ರಜೆಯಿದ್ದರಿಂದ ಲಾಯಿಲದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದ ಬಾಲಕ ಅಂಗಡಿಗೆ ಹೋಗಿ ಲಾಯಿಲ ವೃತ್ತದ ಬಳಿ ರಸ್ತೆ ದಾಟುತ್ತಿದ್ದ ವೇಳೆ ಉಜಿರೆಯಿಂದ ಬಂದ ಪಿಕಪ್ ಢಿಕ್ಕಿ ಹೊಡೆದಿದೆ. ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ಬಾಲಕನನ್ನು ಸ್ಥಳೀಯರ ಸಹಕಾರದಿಂದ

ಪಿಕಪ್ ವಾಹನ ಡಿಕ್ಕಿ : ಬಾಲಕ ಮಹಮ್ಮದ್ ರಂಝೀನ್ ಮೃತ್ಯು Read More »

ಲಂಚ ಸ್ವೀಕಾರ : ಇಂಜಿನಿಯರ್ ಲೋಕಾಯುಕ್ತ ಬಲೆಗೆ

ಮಂಗಳೂರು : ಕಾಮಗಾರಿ ನಡೆದ ಬಳಿಕ ಸ್ಥಳದಲ್ಲಿರುವ ಮೆಟೀರಿಯಲ್ ಪರಿಶೀಲನೆ ನಡೆಸಿ ವರದಿ ನೀಡಲು ಗುತ್ತಿಗೆದಾರರೊಬ್ಬರಿಂದ ಲಂಚ ಬೇಡಿಕೆ ಇಟ್ಟಿದ್ದ ಮಂಗಳೂರು ಲೋಕೋಪಯೋಗಿ ಸಹಾಯಕ ಕಾರ್ಯಪಾಲ ಇಂಜಿನಿಯರ್ ಕಚೇರಿಯ ಗುಣ ಭರವಸೆ ಉಪವಿಭಾಗದ ಕಿರಿಯ ಇಂಜಿನಿಯರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಿರಿಯ ಇಂಜಿನಿಯರ್ -2 ಅಗಿರುವ ರೋನಾಲ್ಡ್ ಲೋಬೋ ಲೋಕಾಯುಕ್ತ ಬಲೆಗೆ ಬಿದ್ದವರು. ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದಲ್ಲಿ ಕಾಮಗಾರಿ ನಡೆಸಿದ ಬಳಿಕ ಸ್ಥಳದಲ್ಲಿದ್ದ ಮೆಟೀರಿಯಲ್ ಪರಿಶೀಲನೆಗೆ ಬೆಳ್ತಂಗಡಿಯ ಗುತ್ತಿಗೆದಾರರೊಬ್ಬರಿಂದ 20 ಸಾವಿರ ರೂ. ಲಂಚದ ಬೇಡಿಕೆ

ಲಂಚ ಸ್ವೀಕಾರ : ಇಂಜಿನಿಯರ್ ಲೋಕಾಯುಕ್ತ ಬಲೆಗೆ Read More »

ಕೆರೆಗೆ ಬಿದ್ದು ಮಹಿಳೆ ಮೃತ್ಯು

ಪುತ್ತೂರು: ಮಹಿಳೆಯೋರ್ವರು ಕೆರೆಗೆ ಬಿದ್ದು ಮೃತಪಟ್ಟ ಘಟನೆ ಎಡಮಂಗಲ ಗ್ರಾಮದ ಕೇರ್ಪಡ ಎಂಬಲ್ಲಿ ಬುಧವಾರ ನಡೆದಿದೆ. ಕೇರ್ಪಡ ದಿ.ಹುಕ್ರ ಎಂಬವರ ಪತ್ನಿ ಗಿರಿಜಾ (50) ಮೃತಪಟ್ಟವರು. ಮೃತ ಗಿರಿಜಾ ಅವರ ಮನೆಯವರು ಅಡಿಕೆ ಹೆಕ್ಕಲು ಹೋದಾಗ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಗಿರಿಜಾ ಅವರು ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮೃತರು ಪುತ್ರ ಲೋಕೇಶ್ ಅವರನ್ನು ಅಗಲಿದ್ದಾರೆ.

ಕೆರೆಗೆ ಬಿದ್ದು ಮಹಿಳೆ ಮೃತ್ಯು Read More »

ರಾಜ್ಯದಲ್ಲಿ ಬ್ಯಾನ್ ಆಗುತ್ತಾ ಪಟಾಕಿ?? | ಅತ್ತಿಬೆಲೆ ಪಟಾಕಿ ದುರಂತದ ಕಾರಣ, ಪರಿಣಾಮ ವಿವರಿಸಿದ ಗೃಹ ಸಚಿವ

ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ನಮಗೆ ಪಾಠ ಕಲಿಸಿದೆ. ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ ಮಾಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು ದೆಹಲಿ ಮಾದರಿಯಲ್ಲಿ ರಾಜ್ಯದಲ್ಲೂ ಪಟಾಕಿ ಬ್ಯಾನ್​ಗೆ ಚಿಂತನೆ ಮಾಡಲಾಗುವುದು. ಅತ್ತಿಬೆಲೆ ಪಟಾಕಿ ದುರಂತದಲ್ಲಿ 17 ಮಂದಿ ಸಾವು ವಿಷಾದನೀಯ. ಪಟಾಕಿ ಮಳಿಗೆಗೆ 2017ರಿಂದ 2022ರವರೆಗೆ ನೂತನ ಪರವಾನಗಿ ನವೀಕರಣ ನಡುವೆ ಫೇಕ್ ಲೈಸೆನ್ಸ್ ಸೃಷ್ಟಿ ಮಾಡಲಾಗಿದೆ. ಕೇವಲ 1 ಸಾವಿರ ಕೆಜಿ ಪಟಾಕಿ ಮಾರಾಟಕ್ಕೆ ಪರವಾನಗಿ ನೀಡಲಾಗಿದೆ.

ರಾಜ್ಯದಲ್ಲಿ ಬ್ಯಾನ್ ಆಗುತ್ತಾ ಪಟಾಕಿ?? | ಅತ್ತಿಬೆಲೆ ಪಟಾಕಿ ದುರಂತದ ಕಾರಣ, ಪರಿಣಾಮ ವಿವರಿಸಿದ ಗೃಹ ಸಚಿವ Read More »

ತಾಲೂಕಿನ ಏಕೈಕ ಬೀಕೊನ್ ಡಿಜಿಟಲ್ ಗ್ರಂಥಾಲಯ ಉದ್ಘಾಟಿಸಿದ ಶಾಸಕ ಅಶೋಕ್ ರೈ | ಜಿಲ್ಲೆಯಲ್ಲೇ ಪ್ರಥಮ ಬಾರಿಗೆ ಅನುಷ್ಠಾನಗೊಳಿಸಿದ ಗ್ರಾಪಂ

ಪುತ್ತೂರು: ಕಾನೂನಿನ ಹಿಂದೆ ನಾವು ಹೋಗುವುದಲ್ಲ. ಕಾನೂನು ತೊಡಕು ಪರಿಹರಿಸಿಕೊಂಡು ಜನರ ಕೆಲಸ ಮಾಡಿಕೊಡಬೇಕು. ಸರಿಯಾದ ಮತ್ತು ಪ್ರಾಮಾಣಿಕ ಸೇವೆ ನೀಡುವುದು ಜನಪ್ರತಿನಿಧಿಗಳು ಮತ್ತು ಪಂಚಾಯಿತಿ ಸಿಬ್ಬಂದಿಗಳ ಕರ್ತವ್ಯ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಆರ್ಯಾಪು ಗ್ರಾ.ಪಂ. ಅಮೃತ ಉದ್ಯಾನವನ ಹಾಗೂ ತಾಲೂಕಿನ ಏಕೈಕ ಬೀಕೊನ್ ಡಿಜಿಟಲ್ ಗ್ರಂಥಾಲಯ ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿ ಹಳ್ಳಿಯ ಜನರೂ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು ಮತ್ತು ವಿದ್ಯುತ್‌ನಿಂದ ವಂಚಿತರಾಗಬಾರದು. ಇದಕ್ಕಾಗಿ ನಾನು ಹೋರಾಟ ಮಾಡಲೂ ಸಿದ್ಧನಿದ್ದೇನೆ.

ತಾಲೂಕಿನ ಏಕೈಕ ಬೀಕೊನ್ ಡಿಜಿಟಲ್ ಗ್ರಂಥಾಲಯ ಉದ್ಘಾಟಿಸಿದ ಶಾಸಕ ಅಶೋಕ್ ರೈ | ಜಿಲ್ಲೆಯಲ್ಲೇ ಪ್ರಥಮ ಬಾರಿಗೆ ಅನುಷ್ಠಾನಗೊಳಿಸಿದ ಗ್ರಾಪಂ Read More »

ಕೊಳ್ತಿಗೆ ಗ್ರಾಮದ ದುಗ್ಗಳದ 2 ಮನೆಗಳಿಗೆ ಇನ್ನೂ ರಸ್ತೆ ಭಾಗ್ಯವಿಲ್ಲ!! | ಅನಾರೋಗ್ಯಕ್ಕೆ ಒಳಗಾದ ವೃದ್ಧರೋರ್ವರನ್ನು ಕುರ್ಚಿಯಲ್ಲಿ ಕುಳ್ಳಿರಿಸಿ, ಹೊತ್ತು ಸಾಗಿದ್ದರು

ಪೆರ್ಲಂಪಾಡಿ: ಆಧುನಿಕತೆ ಎಲ್ಲೆಡೆ ವ್ಯಾಪಿಸುತ್ತಿದ್ದಂತೆ, ಪುಟ್ಟ ಪುಟ್ಟ ಹಳ್ಳಿಗಳೂ ಪಟ್ಟಣಗಳಾಗುತ್ತಿವೆ. ಗುಡ್ಡ ಎಂದು ಮೂದಲಿಸುತ್ತಿದ್ದವರೂ ಮೂಗಿನ ಮೇಲೆ ಬೆರಳಿಡುವಷ್ಟು ಬದಲಾವಣೆಗೆ ಒಳಪಡುತ್ತಿವೆ. ಇಂತಹ ದಿನದಲ್ಲಿ, ಇನ್ನೂ ರಸ್ತೆಯಿರದ ಮನೆಗಳಿವೆ ಎಂದರೆ ನೀವು ಆಶ್ಚರ್ಯ ಪಡುತ್ತೀರಿ! ಕೊಳ್ತಿಗೆ ಗ್ರಾಮದ ದುಗ್ಗಳದ 2 ಮನೆಗಳಿಗೆ ಇನ್ನೂ ರಸ್ತೆ ಭಾಗ್ಯ ಒದಗಿ ಬಂದಿಲ್ಲ. ಇತ್ತೀಚೆಗೆ ಹಿರಿಯ ನಾಗರಿಕರೋರ್ವರು ಅಸ್ವಸ್ಥಗೊಂಡಾಗ ಕುರ್ಚಿಯಲ್ಲಿ ಕುಳ್ಳಿರಿಸಿ ಎತ್ತಿಕೊಂಡು ಹೋದ ನಿದರ್ಶನ ಕಣ್ಣ ಮುಂದಿದೆ. ಶಾಲಾ ವಿದ್ಯಾರ್ಥಿಗಳು ಇದೇ ಕಾಲುದಾರಿಯಿಂದ ಹೋಗಬೇಕಾದ ದುಸ್ಥಿತಿಯಿದೆ. ಕೃಷಿ ಕಾರ್ಯಗಳನ್ನು ನಡೆಸಬೇಕಾದರೆ,

ಕೊಳ್ತಿಗೆ ಗ್ರಾಮದ ದುಗ್ಗಳದ 2 ಮನೆಗಳಿಗೆ ಇನ್ನೂ ರಸ್ತೆ ಭಾಗ್ಯವಿಲ್ಲ!! | ಅನಾರೋಗ್ಯಕ್ಕೆ ಒಳಗಾದ ವೃದ್ಧರೋರ್ವರನ್ನು ಕುರ್ಚಿಯಲ್ಲಿ ಕುಳ್ಳಿರಿಸಿ, ಹೊತ್ತು ಸಾಗಿದ್ದರು Read More »

ಪ್ರಮೋದ್ ಮುತಾಲಿಕ್’ರನ್ನು ತಡೆದ ಪೊಲೀಸರು!

ರಾಗಿಗುಡ್ಡ: ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೆ ಶಿವಮೊಗ್ಗಕ್ಕೆ ಭೇಟಿ ನೀಡದಂತೆ ನಿರ್ಬಂಧ ವಿಧಿಸಲಾಗಿದೆ. ಮಂಗಳವಾರ ರಾತ್ರಿ ಶಿವಮೊಗ್ಗದ ಗಲಭೆ ಪೀಡಿತ ಪ್ರದೇಶ ರಾಗಿಗುಡ್ಡ ಪ್ರದೇಶಕ್ಕೆ ಭೇಟಿ ನೀಡಲು ತೆರಳುತ್ತಿದ್ದ ವೇಳೆ ಪೊಲೀಸರು ಪ್ರಮೋದ್ ಮುತಾಲಿಕ್ ಅವರನ್ನು ಹೊಸನಗರದ ತಾಲೂಕಿನ ಮಾಸ್ತಿಕಟ್ಟೆ ಬಳಿ ತಡೆದು, ಮುಂದಿನ 30 ದಿನಗಳ ಕಾಲ ಶಿವಮೊಗ್ಗ ತೆರಳದಂತೆ ನಿರ್ಬಂಧ ಹೇರಲಾಗಿರುವ ಪ್ರತಿಯನ್ನು ನೀಡಿದ್ದಾರೆ. ಗಲಭೆ ಪೀಡಿತ ಪ್ರದೇಶದಲ್ಲಿ ಪ್ರಮೋದ್ ಮುತಾಲಿಕ್ ಭೇಟಿ ನೀಡಿ ಪ್ರಚೋದನಕಾರಿ ಭಾಷಣ ಮಾಡುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ

ಪ್ರಮೋದ್ ಮುತಾಲಿಕ್’ರನ್ನು ತಡೆದ ಪೊಲೀಸರು! Read More »

error: Content is protected !!
Scroll to Top