ಪ್ರಾಣ ಉಳಿಸಿಕೊಳ್ಳಲು ಕಟ್ಟಡದಿಂದ ಜಿಗಿದ!

ಸಿಲಿಂಡರ್ ಸ್ಫೋಟಗೊಂಡು ಕೆಫೆಯೊಂದಕ್ಕೆ ಬೆಂಕಿ ಹತ್ತಿಕೊಂಡಿದ್ದು, ವ್ಯಕ್ತಿಯೋರ್ವರು ನಾಲ್ಕನೇ ಮಹಡಿಯಿಂದ ಕೆಳಗೆ ಹಾರಿದ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ. ನಾಲ್ಕನೇ ಮಹಡಿಯಿಂದ ಹಾರಿದ ವ್ಯಕ್ತಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದು, ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಕೋರಮಂಗಲ ನೆಕ್ಸಾ ಶೋ ರೂಂ ಕಟ್ಟಡದ ಮೇಲ್ಭಾಗದ ಕೆಫೆಯೊಂದರಲ್ಲಿ ಬುಧವಾರ ಸಿಲಿಂಡರ್ ಸ್ಫೋಟಗೊಂಡಿದೆ. ಇದರಿಂದ ಬೆಂಕಿ ಕೆನ್ನಾಲಿಗೆ ಕಟ್ಟಡವನ್ನು ವ್ಯಾಪಿಸಿದ್ದು, ಇದರಿಂದ ತಪ್ಪಿಸಿಕೊಳ್ಳಲು ವ್ಯಕ್ತಿ ಕಟ್ಟಡದಿಂದ ಕೆಳಗೆ ಧುಮುಕಿದ್ದಾನೆ.

ಪ್ರಾಣ ಉಳಿಸಿಕೊಳ್ಳಲು ಕಟ್ಟಡದಿಂದ ಜಿಗಿದ! Read More »

ಪಾಟ್ರಕೋಡಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಅಶೋಕ್ ರೈ | ಶಾಸಕರಿಗೆ ಇಷ್ಟು ಗಟ್ಸ್ ಇದೆ ಎಂದು ಗೊತ್ತೇ ಇರಲಿಲ್ಲ: ಹೇಮನಾಥ ಶೆಟ್ಟಿ

ಪುತ್ತೂರು: ಮುಂದಿನ ದಿನಗಳಲ್ಲಿ ಪುತ್ತೂರಿನಲ್ಲಿ 2ರಿಂದ 3 ಸಾವಿರ ಉದ್ಯೋಗ ಸೃಷ್ಟಿ ಮಾಡುವ ಗುರಿಯನ್ನು ಹೊಂದಿದ್ದು, ಇದಕ್ಕಾಗಿ ಹಲವು ಯೋಜನೆಗಳನ್ನು ಇಲ್ಲಿ ಜಾರಿ ಮಾಡುವ ಆಲೋಚನೆಯಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಪಾಟ್ರಕೋಡಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಸಾರ್ವಜನಿಕ ಅಹವಾಲು ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದರು. ಬಹುಗ್ರಾಮ ಕುಡಿಯುವ ನೀರಿನ ಯೋಜನಯಡಿ ಕೆದಿಲ ಗ್ರಾಮದಲ್ಲಿ 3 ಕೋಟಿ ಲೀಟರ್ ಸಾಮರ್ಥ್ಯದ ಬೃಹತ್ ನೀರಿನ ಟ್ಯಾಂಕ್ ನಿರ್ಮಾಣವಾಗಲಿದೆ. ಈ ಯೋಜನೆಯಡಿ ಸುಮಾರು 500ಕ್ಕೂ ಮಿಕ್ಕಿ

ಪಾಟ್ರಕೋಡಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಅಶೋಕ್ ರೈ | ಶಾಸಕರಿಗೆ ಇಷ್ಟು ಗಟ್ಸ್ ಇದೆ ಎಂದು ಗೊತ್ತೇ ಇರಲಿಲ್ಲ: ಹೇಮನಾಥ ಶೆಟ್ಟಿ Read More »

ಅಭಿವೃದ್ಧಿ ವಿಚಾರದಲ್ಲಿ ರಾಜಕೀಯವಿಲ್ಲ: ಶಾಸಕ ಅಶೋಕ್ ರೈ

ಉಪ್ಪಿನಂಗಡಿ: ಓರ್ವ ಶಾಸಕನಾಗಿ ಎಲ್ಲರಿಗೂ ಸಮಾನ ಹಕ್ಕುಗಳನ್ನು ಕಲ್ಪಿಸುವ ಜವಾಬ್ದಾರಿ ನನ್ನದಾಗಿದ್ದು, ಅಭಿವೃದ್ಧಿಯ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡುವವ ನಾನಲ್ಲ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಹಿರೇಬಂಡಾಡಿಯ ಸರಕಾರಿ ಪ್ರೌಢಶಾಲೆಯಲ್ಲಿ ಅ. 26 ಮತ್ತು 27ರಂದು 2023-24ನೇ ಸಾಲಿನ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕಿಯರ ಹಾಗೂ ಬಾಲಕಿಯರ ಕ್ರೀಡಾಕೂಟ `ಕ್ರೀಡಾಮೃತ’ದ ಪೂರ್ವಭಾವಿ ಸಭೆಯಲ್ಲಿ, ಆಮಂತ್ರಣ ಬಿಡುಗಡೆಗೊಳಿಸಿ ಮಾತನಾಡಿದರು. ಅನುದಾನಗಳನ್ನು ತಡೆಯುವುದು, ಗ್ರಾಮಗಳ ಅಭಿವೃದ್ಧಿಯನ್ನು ಕಡೆಗಣಿಸುವಂತಹ ದ್ವೇಷ ಪೂರಿತ ರಾಜಕೀಯವನ್ನು ನಾನು ಯಾವತ್ತೂ

ಅಭಿವೃದ್ಧಿ ವಿಚಾರದಲ್ಲಿ ರಾಜಕೀಯವಿಲ್ಲ: ಶಾಸಕ ಅಶೋಕ್ ರೈ Read More »

ರಕ್ಷಿತಾರಣ್ಯದಲ್ಲಿ ಅಕ್ರಮ ಜಾನುವಾರು ಮಾಂಸ: ಆರೋಪಿಗಳು ಪರಾರಿ

ನೆಲ್ಯಾಡಿ: ಜಾನುವಾರು ಕಡಿದು ಮಾಂಸ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿರುವ ಘಟನೆ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ನಡೆದಿದೆ. ದಾಳಿ ವೇಳೆ ನಾಲ್ವರು ಪರಾರಿಯಾಗಿರುವುದಾಗಿ ವರದಿಯಾಗಿದೆ. ಶಿರಾಡಿ-ಶಿಶಿಲ ರಕ್ಷಿತಾರಣ್ಯದ ನದಿ ಕಿನಾರೆಯಲ್ಲಿ ನದಿ ಕಿನಾರೆಯ ರಕ್ಷಿತಾರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಜಾನುವಾರನ್ನು ಕಡಿದು ಮಾಂಸ ಮಾಡಲಾಗಿತ್ತು. ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ನೆಲ್ಯಾಡಿ ಹೊರಠಾಣೆ ಪೊಲೀಸರು ದಾಳಿ ನಡೆಸಿದ್ದರು. ಪೊಲೀಸರು ದಾಳಿ ನಡೆಸುತ್ತಿದ್ದಂತೆ ಸ್ಥಳದಲ್ಲಿದ್ದ ನಾಲ್ವರು ಅಲ್ಲಿಂದ ಓಡಿ ಪರಾರಿಯಾಗಿದ್ದಾರೆ. ಪ್ಲಾಸ್ಟಿಕ್ ಚೀಲ, ಪ್ಲಾಸ್ಟಿಕ್ ಟರ್ಪಾಲು,

ರಕ್ಷಿತಾರಣ್ಯದಲ್ಲಿ ಅಕ್ರಮ ಜಾನುವಾರು ಮಾಂಸ: ಆರೋಪಿಗಳು ಪರಾರಿ Read More »

18-10-2023ರ ಕೃಷಿ ಮಾರುಕಟ್ಟೆ ಧಾರಣೆ

ಪುತ್ತೂರು: ಕಳೆದ ಕೆಲ ದಿನಗಳಿಂದ ರಬ್ಬರ್‍ ಧಾರಣ ಏರಿಕೆ ಹಾದಿಯಲ್ಲಿದೆ. ಬುಧವಾರದ ರಬ್ಬರ್ ಧಾರಣೆಯನ್ನು ಗಮನಿಸಿದರೆ ರೈತರು ಖುಷಿಯಾಗುವುದು ಖಂಡಿತಾ. ಬುಧವಾರ ಹೊಸ ಅಡಿಕೆ 325- 365 ರೂ., ಹಳೆ ಅಡಿಕೆ 380 -422 ರೂ. ಹಾಗೂ 423-425 ರೂ.ನಲ್ಲಿದೆ (ಗುಣಮಟ್ಟ). ಡಬ್ಬಲ್ ಚೋಲ್ 390 – 460 ರೂ. ಹಾಗೂ 460- 485 ರೂ. (ಗುಣಮಟ್ಟ)ನಲ್ಲಿದೆ. ಮಂಗಳವಾರ ಹಳೆ ಅಡಿಕೆ 380 -420 ರೂ. ಹಾಗೂ 420-425 ರೂ. (ಗುಣಮಟ್ಟ), ಡಬ್ಬಲ್ ಚೋಲ್ 390 –

18-10-2023ರ ಕೃಷಿ ಮಾರುಕಟ್ಟೆ ಧಾರಣೆ Read More »

ಕಳವಾದ ದೇವಸ್ಥಾನದ ಆಭರಣದೊಂದಿಗೆ ಶರಣಾದ ಮಾಜಿ ಅಧ್ಯಕ್ಷ!

ಉಪ್ಪಿನಂಗಡಿ: ಡಿಸೆಂಬರ್ ತಿಂಗಳಲ್ಲಿ ನಡೆದ ಬ್ರಹ್ಮಕಲಶೋತ್ಸವ ವೇಳೆ ಪೆರ್ನೆಯ ಕಳೆಂಜ- ದೇಂತಡ್ಕದ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಸಮರ್ಪಿಸಲಾದ ಆಭರಣ ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ ಬೆನ್ನಲ್ಲೇ ಆರೋಪಿ ಆಭರಣದೊಂದಿಗೆ ಪೊಲೀಸರಿಗೆ ಶರಣಾಗಿರುವ ಘಟನೆ ನಡೆದಿದೆ. ದೇವಳದ ಆಡಳಿತ ಮಂಡಳಿ ಮಾಜಿ ಅಧ್ಯಕ್ಷ ರೋಹಿತಾಕ್ಷ ಬಾಣಬೆಟ್ಟು ನಾಪತ್ತೆಯಾದ ಚಿನ್ನಾಭರಣದೊಂದಿಗೆ ಪೊಲೀಸರಿಗೆ ಶರಣಾದ ವ್ಯಕ್ತಿ. ಕಳೆದ ಡಿಸೆಂಬರ್’ನಲ್ಲಿ ದೇವಾಲಯದ ಬ್ರಹ್ಮಕಲಶಾಭಿಷೇಕ ನಡೆದಿದ್ದು, ಈ ಸಂದರ್ಭ ಭಕ್ತರೋರ್ವರು ಸುಮಾರು ಮೂರು ಮುಕ್ಕಾಲು ಪವನಿನ ಐದು ಎಳೆಗಳಿಂದ ಕೂಡಿದ ಚಿನ್ನದ ಜೋ

ಕಳವಾದ ದೇವಸ್ಥಾನದ ಆಭರಣದೊಂದಿಗೆ ಶರಣಾದ ಮಾಜಿ ಅಧ್ಯಕ್ಷ! Read More »

ನಾಳ ಕ್ಷೇತ್ರದಲ್ಲಿ ನವರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

ನಾಳ: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆಯ ಪ್ರಯುಕ್ತ ಪಕ್ಷ ಭಜನೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ ನಡೆಯಿತು. ದೇವಳದ ಪ್ರಧಾನ ಅರ್ಚಕ ರಾಘವೇಂದ್ರ ಆಸ್ರಣ್ಣ ದೀಪ ಬೆಳಗಿಸಿ ಉದ್ಘಾಟಿಸಿ, ದೇವಳದ ಒಳ ಭಾಗದಲ್ಲಿ ನವರಾತ್ರಿ ಪೂಜೆಯು ವಿದ್ಯುಕ್ತವಾಗಿ ನಡೆದಂತೆ ದೇವಿಯ ಪ್ರೀತ್ಯರ್ಥವಾಗಿ ಸಂಗೀತ, ಭಜನೆ, ಯಕ್ಷಗಾನ, ಪಾರಾಯಣ ಕಾರ್ಯಕ್ರಮಗಳು ನಡೆಯಲಿರುವುದು ಸಂಪ್ರದಾಯವಾಗಿದೆ ಎಂದು ತಿಳಿಸಿದರು. ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಭುವನೇಶ. ಜಿ, ಭಜನಾ ಮಂಡಳಿಯ ಅಧ್ಯಕ್ಷ ಉಮೇಶ ಶೆಟ್ಟಿ ಸಂಬೊಳ್ಯ, ಕಲಾವಿದ

ನಾಳ ಕ್ಷೇತ್ರದಲ್ಲಿ ನವರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ Read More »

ಸಿಡಿಲು ಬಡಿದು ಮನೆಗೆ ಹಾನಿ!

ಪುತ್ತೂರು: ಸಿಡಿಲು ಬಡಿದು ಮನೆಗೆ ಹಾನಿಯಾದ ಘಟನೆ ಸಾಲ್ಮರ ಸಮೀಪ ಮಂಗಳವಾರ ಸಂಭವಿಸಿದೆ. ಸಾಲ್ಮರ ಜಿಡೆಕಲ್ಲು ನಿವಾಸಿ ಜೆ.ಕೆ ಅಶ್ರಫ್ ಎಂಬವರ ಮನೆಗೆ ಸಿಡಿಲು ಬಡಿದಿದ್ದು, ಅಪಾರ ಹಾನಿ ಸಂಭವಿಸಿದೆ. ಪಕ್ಕದ ತೆಂಗಿನಮರಕ್ಕೂ ಹಾನಿಯುಂಟಾಗಿದೆ. ಮಂಗಳವಾರ ಸಂಜೆ ಸುರಿದ ಮಳೆಯೊಂದಿಗೆ ಸಿಡಿಲಿನ ಆರ್ಭಟವೂ ಇತ್ತು. ಇದರಿಂದ ಹಲವೆಡೆ ಹಾನಿ ಸಂಭವಿಸಿದೆ.

ಸಿಡಿಲು ಬಡಿದು ಮನೆಗೆ ಹಾನಿ! Read More »

ಕರ್ನಾಟಕ ಸಂಭ್ರಮ-50: ಲಾಂಛನ ಬಿಡುಗಡೆ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್’ನಲ್ಲಿ ಆಯೋಜಿಸಲಾಗಿರುವ ಕರ್ನಾಟಕ ಸಂಭ್ರಮ-50ರ ಲಾಂಛನವನ್ನು ಅನಾವರಣ ಮಾಡಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಾಂಛನ ಬಿಡುಗಡೆ ಮಾಡಿ, ಶುಭಹಾರೈಸಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ.ಪಾಟೀಲ್, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್, ಕನ್ನಡ ಮತ್ತು ಸಂಸ್ಕೃತಿ

ಕರ್ನಾಟಕ ಸಂಭ್ರಮ-50: ಲಾಂಛನ ಬಿಡುಗಡೆ Read More »

ಪಡಿತರ ಚೀಟಿ ತಿದ್ದುಪಡಿ ಅವಧಿ ವಿಸ್ತರಣೆ

ಮಂಗಳೂರು: ಪಡಿತರ ಚೀಟಿ ತಿದ್ದುಪಡಿಗೆ ನೀಡಿದ್ದ ಗಡುವನ್ನು ವಿಸ್ತರಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಅವಧಿಯನ್ನು ಅ. 19ರಿಂದ ಅ. 21ರವರೆಗೆ ನಿಗದಿ ಮಾಡಲಾಗಿದೆ ಎಂದು ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸರ್ವರ್ ಸಮಸ್ಯೆ ಉಂಟಾಗಿದ್ದ ಕೆಲವು ಜಿಲ್ಲೆಗಳಲ್ಲಿ ಈ ತಿದ್ದುಪಡಿ ವಿಸ್ತರಣೆಗೆ ಅವಕಾಶ ನೀಡಲಾಗಿದೆ. ತಿದ್ದುಪಡಿ ವೇಳೆ ಮೃತರ ಹೆಸರನ್ನು ತೆಗೆದು ಹಾಕುವುದು ಹಾಗೂ ವಿವಾಹವಾಗಿ ಬಂದವರ ಹೆಸರನ್ನು ಪಡಿತರ ಚೀಟಿಗೆ ಸೇರ್ಪಡೆಗೊಳಿಸಲು ಅವಕಾಶ ಇರುತ್ತದೆ. ಸೂಕ್ತ ದಾಖಲೆಗಳೊಂದಿಗೆ

ಪಡಿತರ ಚೀಟಿ ತಿದ್ದುಪಡಿ ಅವಧಿ ವಿಸ್ತರಣೆ Read More »

error: Content is protected !!
Scroll to Top