ಸಮಾಜಕ್ಕೆ ನೀಡಿದ ಕೊಡುಗೆಗಳಿಂದ ಕಾರಂತರು ವಿಶ್ವಮಾನ್ಯ | ಡಾ. ಶಿವರಾಮ ಕಾರಂತರ 122ನೇ ಜನ್ಮದಿನಾಚರಣೆ, ಬಾಲವನ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಶಾಸಕ ಅಶೋಕ್ ರೈ
ಪುತ್ತೂರು: ಯಾವುದೇ ವಿಚಾರದಲ್ಲಿ ಆಸಕ್ತಿ ಬಂದಾಗ ಮಾತ್ರ ಅದರ ಮೌಲ್ಯ ತಿಳಿದುಕೊಳ್ಳಲು ಸಾಧ್ಯ. ಈ ನಿಟ್ಟಿನಲ್ಲಿ ಡಾ. ಶಿವರಾಮ ಕಾರಂತರ ವಿಚಾರಧಾರೆಗಳು ಮೌಲ್ಯಯುತವಾಗಿದ್ದು, ಸಮಾಜಕ್ಕೆ ಹಲವಾರು ಕೊಡುಗೆಗಳನ್ನು ನೀಡುವ ಮೂಲಕ ವಿಶ್ವಮಾನ್ಯರಾಗಿದ್ದಾರೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪರ್ಲಡ್ಕ ಡಾ.ಶಿವರಾಮ ಕಾರಂತರ ಬಾಲವನ ಹಾಗೂ ಪುತ್ತೂರು ಸಹಾಯಕ ಆಯುಕ್ತರ ಕಚೇರಿ ಸಂಯುಕ್ತ ಆಶ್ರಯದಲ್ಲಿ ಪರ್ಲಡ್ಕ ಡಾ.ಶಿವರಾಮ ಕಾರಂತ ಬಾಲವನದಲ್ಲಿ ಮಂಗಳವಾರ ನಡೆದ ಡಾ.ಶಿವರಾಮ ಕಾರಂತರ 122ನೇ ಜನ್ಮದಿನೋತ್ಸವ, ಬಾಲವನ […]










