ನಗರಸಭಾ ವ್ಯಾಪ್ತಿಯಲ್ಲಿ ಬಾಕಿ ಇರುವ ಉದ್ಯಮ ಪರವಾನಿಗೆ, ತೆರಿಗೆ, ನೀರಿನ ಶುಲ್ಕ ವಸೂಲಾತಿಗೆ ತಮಟೆ ಬಡಿದು ಚಾಲನೆ | ಸಿಬ್ಬಂದಿಗಳಿಂದ ಮನೆ ಮನೆ ಭೇಟಿ ನೀಡಿ ನೋಟೀಸ್ ಮೂಲಕ ಎಚ್ಚರಿಕೆ
ಪುತ್ತೂರು: ನಗರಸಭೆ ವ್ಯಾಪ್ತಿಯಲ್ಲಿ ಕಟ್ಟಡ ತೆರಿಗೆ, ಉದ್ಯಮ ಪರವಾನಿಗೆ, ನೀರಿನ ಶುಲ್ಕ ಇತ್ಯಾದಿ ತೆರಿಗೆಗಳು ಬಾಕಿ ಇರುವ ಹಿನ್ನೆಲೆಯಲ್ಲಿ ನಗರಸಭೆಯಿಂದ 31 ವಾರ್ಡ್‌ಗಳಲ್ಲಿ 15 ದಿನಗಳ ತೆರಿಗೆ ವಸೂಲಾತಿ ಆಂದೋಲನಕ್ಕೆ ಗುರುವಾರ ಚಾಲನೆ ನೀಡಲಾಯಿತು. ನಗರಸಭೆಯ ಪ್ರತಿ ವಾರ್ಡ್‌ಗಳಿಗೂ ನಗರಸಭೆ ಸಿಬ್ಬಂದಿಗಳು ಮನೆ ಮನೆಗೆ ತೆರಳಿ ಬಾಕಿದಾರರಿಗೆ ನೋಟೀಸ್ ನೀಡಿ ಎಚ್ಚರಿಕೆ ನೀಡಲಿದ್ದಾರೆ. ನಗರಸಭೆ ಕಚೇರಿ ವಠಾರದಲ್ಲಿ ಆಂದೋಲನಕ್ಕೆ ತಮಟೆ ಬಡಿದು ಚಾಲನೆ ನೀಡಿದ ನಗರಸಭೆ ಪೌರಾಯುಕ್ತ ಮಧು ಎಸ್. ಮನೋಹರ್ ಮಾತನಾಡಿ, ನಗರಸಭೆ ಪ್ರತಿ ವಾರ್ಡ್‌ಗಳಿಗೆ […]










