ಆನೆ ಜತೆ ಇರುವೆಯ ಜಗಳ: ಕೆನಡಾಗೆ ಚುಚ್ಚಿದ ವಿಶ್ವದ ದೊಡ್ಡಣ್ಣ!! | ಭಾರತದೊಂದಿಗೆ ಕಾಲ್ಕಿರಿದು ಜಗಳಕ್ಕೆ ನಿಂತಿರುವ ಕೆನಡಾಕ್ಕೆ ಹೀಗೆನ್ನೆಲು ಕಾರಣವೇನು?

ವಾಷಿಂಗ್ಟನ್: ಭಾರತ ಹಾಗೂ ಕೆನಡಾ ನಡುವಿನ ಬಿಕ್ಕಟ್ಟಿನ ಬೆನ್ನಲ್ಲೇ, ಅಮೆರಿಕದ ಮಾಜಿ ರಕ್ಷಣಾ ಅಧಿಕಾರಿ ಮೈಕಲ್ ರುಬಿನ್ ಅವರು ಭಾರತದ ಪರ ಬ್ಯಾಟಿಂಗ್ ಮಾಡಿದ್ದಾರೆ. ಹಾಗೆಯೇ, “ಕೆನಡಾ ಭಾರತದ ಜತೆ ಸಂಘರ್ಷಕ್ಕೆ ಇಳಿದಿದೆ ಎಂದರೆ, ಅದು ಇರುವೆಯೊಂದು ಆನೆಯ ಜತೆ ಕಾಳಗಕ್ಕೆ ಇಳಿದಂತೆ” ಎಂದು ಗೇಲಿ ಮಾಡಿದ್ದಾರೆ. ““ಯಾವುದೇ ಎರಡು ದೇಶಗಳು ಸಂಘರ್ಷಕ್ಕೆ ಇಳಿದಾಗ, ರಾಜತಾಂತ್ರಿಕ ಬಿಕ್ಕಟ್ಟು ಆರಂಭವಾದಾಗ ಮೂರನೇ ದೇಶವು ಮಧ್ಯಸ್ಥಿಕೆ ವಹಿಸುವುದು ಸುಲಭ. ಆದರೆ, ಯಾವುದೇ ಒಂದು ದೇಶದ ಪರ ನಿಲ್ಲುವುದು ಕಷ್ಟ. ಈಗ […]

ಆನೆ ಜತೆ ಇರುವೆಯ ಜಗಳ: ಕೆನಡಾಗೆ ಚುಚ್ಚಿದ ವಿಶ್ವದ ದೊಡ್ಡಣ್ಣ!! | ಭಾರತದೊಂದಿಗೆ ಕಾಲ್ಕಿರಿದು ಜಗಳಕ್ಕೆ ನಿಂತಿರುವ ಕೆನಡಾಕ್ಕೆ ಹೀಗೆನ್ನೆಲು ಕಾರಣವೇನು? Read More »

ಸಬ್ ರಿಜಿಸ್ಟ್ರಾರ್ ಕಚೇರಿ ಸಮಯದಲ್ಲಿ ಬದಲಾವಣೆ!! | ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರದಲ್ಲೂ ಪರಿಷ್ಕರಣೆ!! | ತಕ್ಷಣದಿಂದಲೇ ಜಾರಿಯಾಗುವ ಬದಲಾದ ಹೊಸ ಸಮಯ ಹೀಗಿದೆ

ಬೆಂಗಳೂರು: ಸಬ್ ರಿಜಿಸ್ಟ್ರಾರ್ ಕಚೇರಿಯ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, ಹೆಚ್ಚುವರಿ ಸಮಯ ಕೆಲಸ ಮಾಡುವಂತೆ ಹೊಸ ಆದೇಶವನ್ನು ಹೊರಡಿಸಲಾಗಿದೆ. ಅಕ್ಟೋಬರ್ 1ರಿಂದ ರಾಜ್ಯದ ಎಲ್ಲಾ ಸಬ್ ರಿಜಿಸ್ಟ್ರಾರ್ ಕಚೇರಿಗಳು ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೂ ಕಾರ್ಯ ನಿರ್ವಹಿಸಲಿವೆ. ಆದರೆ ಈ ಆದೇಶ ನಾಳೆಯಿಂದಲೇ ಅಂದರೆ ಸೆಪ್ಟೆಂಬರ್ 23ರಿಂದಲೇ ಜಾರಿಗೆ ಬರಲಿದ್ದು, ನಾಲ್ಕನೇ ಶನಿವಾರವಾದ ನಾಳೆಯೂ ಸಬ್ ರಿಜಿಸ್ಟ್ರಾರ್ ಕಚೇರಿ ಕಾರ್ಯನಿರ್ವಹಿಸಲಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ 2023-24ನೇ ಸಾಲಿನಲ್ಲಿ

ಸಬ್ ರಿಜಿಸ್ಟ್ರಾರ್ ಕಚೇರಿ ಸಮಯದಲ್ಲಿ ಬದಲಾವಣೆ!! | ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರದಲ್ಲೂ ಪರಿಷ್ಕರಣೆ!! | ತಕ್ಷಣದಿಂದಲೇ ಜಾರಿಯಾಗುವ ಬದಲಾದ ಹೊಸ ಸಮಯ ಹೀಗಿದೆ Read More »

ಧನಾತ್ಮಕವಾಗಿ ಚಿಂತಿಸಿದಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ | ಪಿನ್ಯಾಕಲ್‌ ಐಟಿ ಕ್ಲಬ್‌ನ ಕಾರ್ಯಕ್ರಮಗಳನ್ನು ಉದ್ಘಾಟಿಸಿ ವಂ.ಡಾ.ಆಂಟೋನಿ ಪ್ರಕಾಶ್

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಗಣಕವಿಜ್ಞಾನ ವಿಭಾಗವು ನಡೆಸುತ್ತಿರುವ ಪಿನ್ಯಾಕಲ್‌ ಐಟಿ ಕ್ಲಬ್‌ನ ವತಿಯಿಂದ 2023-24ನೇ ಶೈಕ್ಷಣಿಕ ವರ್ಷದಲ್ಲಿ ಆಯೋಜಿಸಲ್ಪಡುವ ಕಾರ್ಯಕ್ರಮಗಳಿಗೆ ಕಾಲೇಜಿನ ಬೆಳ್ಳಿಹಬ್ಬ ಸಭಾಭವನದಲ್ಲಿ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಚಾರ್ಯ ವಂ. ಡಾ. ಆಂಟೊನಿ ಪ್ರಕಾಶ್‌ ಮೊಂತೆರೋ ದೀಪ ಬೆಳಗಿಸಿ ಉದ್ಘಾಟಿಸಿ, ಇಂದಿನ ಡಿಜಿಟಲ್‌ ಯುಗದಲ್ಲಿ ಯುವಜನರು ಬೇಗನೆ ಭಾವೋದ್ವೇಗಕ್ಕೆ ಒಳಗಾಗುತ್ತಾರೆ. ಇದರಿಂದಾಗುವ ಅನಾಹುತಗಳನ್ನು ತಡೆಗಟ್ಟುವ ಸಲುವಾಗಿ ಮಾನಸಿಕ ಪ್ರಥಮ ಚಿಕಿತ್ಸೆ ನೀಡಲಾಗುತ್ತದೆ. ಮನಸ್ಸಿನಲ್ಲಿ ಋಣಾತ್ಮಕ ಭಾವನೆಗಳನ್ನು ಬೆಳೆಸದೆ ಧನಾತ್ಮಕವಾಗಿ ಚಿಂತಿಸಿದಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಪಿನ್ಯಾಕಲ್‌

ಧನಾತ್ಮಕವಾಗಿ ಚಿಂತಿಸಿದಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ | ಪಿನ್ಯಾಕಲ್‌ ಐಟಿ ಕ್ಲಬ್‌ನ ಕಾರ್ಯಕ್ರಮಗಳನ್ನು ಉದ್ಘಾಟಿಸಿ ವಂ.ಡಾ.ಆಂಟೋನಿ ಪ್ರಕಾಶ್ Read More »

ಶ್ರೀ ಶಂಕರಾಚಾರ್ಯರ ಪ್ರತಿಮೆ ಅನಾವರಣ: ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಭೇಟಿ

ಮಧ್ಯಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಶ್ರೀ ಶಂಕರಾಚಾರ್ಯರ 108 ಅಡಿ ಎತ್ತರದ ಪ್ರತಿಮೆ ಅನಾವರಣ ಸಂದರ್ಭ ಆದಿಚುಂಚನಗಿರಿ ಮಹಾಸಂಸ್ಥಾನದ ಮಹಾಸ್ವಾಮೀಜಿ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಭೇಟಿ ನೀಡಿದರು. ನರ್ಮದಾ ನದಿ ತೀರಕ್ಕೆ ಆಗಮಿಸಿ, ಬಳಿಕ ಪ್ರತಿಮೆ ಅನಾವರಣ ಸ್ಥಳಕ್ಕೆ ಭೇಟಿ ನೀಡಿದರು. ಈ ಸಂರ್ಭದಲ್ಲಿ ಬೆಂಗಳೂರು ಶಾಖಾ ಮಠದ ಶ್ರೀ ಸೌಮ್ಯನಾಥ ಸ್ವಾಮೀಜಿ, ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ, ಮೈಸೂರು ಸೋಮೇಶ್ವರನಾಥ ಸ್ವಾಮೀಜಿ, ಶೃಂಗೇರಿ ಶಾಖಾ ಮಠದ ಗುಣನಾಥ ಸ್ವಾಮೀಜಿ, ದಿಲ್ಲಿ ಶಾಖಾ ಮಠದ

ಶ್ರೀ ಶಂಕರಾಚಾರ್ಯರ ಪ್ರತಿಮೆ ಅನಾವರಣ: ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಭೇಟಿ Read More »

ರಾಜ್ಯ ಹಿರಿಯರ ಅಥ್ಲೆಟಿಕ್ಸ್ ಟ್ರಿಪಲ್ ಜಂಪ್ ನಲ್ಲಿ ಪವಿತ್ರ ಜಿ. ಗೆ ಚಿನ್ನದ ಪದಕ | ರಾಷ್ಟ್ರೀಯ ಹಿರಿಯರ ಅಥ್ಲೆಟಿಕ್ಸ್’ಗೆ ಆಯ್ಕೆ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಎಂಬಿಎ ವಿಭಾಗದ ವಿದ್ಯಾರ್ಥಿನಿ ಪವಿತ್ರ ಜಿ. ರಾಜ್ಯ ಮಟ್ಟದ ಹಿರಿಯರ ಅಥ್ಲೆಟಿಕ್ ಸ್ಪರ್ಧೆ-2023ರ ಟ್ರಿಪಲ್ಜಂಪ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಕರ್ನಾಟಕ ರಾಜ್ಯ ಅಥ್ಲೆಟಿಕ್ ಅಸೋಸಿಯೇಶನ್ ಆಶ್ರಯದಲ್ಲಿ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಪ್ರವಿತ್ರ ಜಿ. ಅವರು 12.85 ಮೀಟರ್ ದೂರ ಜಿಗಿದು ಪ್ರಥಮ ಸ್ಥಾನ ಗಳಿಸಿಕೊಂಡಿದ್ದಾರೆ. ಈ ಸಾಧನೆಯೊಂದಿಗೆ ರಾಷ್ಟ್ರೀಯ ಹಿರಿಯರ ಅಥ್ಲೆಟಿಕ್ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸುವ ಅರ್ಹತೆಯನ್ನು

ರಾಜ್ಯ ಹಿರಿಯರ ಅಥ್ಲೆಟಿಕ್ಸ್ ಟ್ರಿಪಲ್ ಜಂಪ್ ನಲ್ಲಿ ಪವಿತ್ರ ಜಿ. ಗೆ ಚಿನ್ನದ ಪದಕ | ರಾಷ್ಟ್ರೀಯ ಹಿರಿಯರ ಅಥ್ಲೆಟಿಕ್ಸ್’ಗೆ ಆಯ್ಕೆ Read More »

ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಸೇರಿದ ಜೆಡಿಎಸ್ | ಸೀಟು ಹಂಚಿಕೆಯ ಗೊಂದಲದ ಬಗ್ಗೆಯೂ ಮಾತನಾಡಿದ ಎಚ್.ಡಿ.ಕೆ.

ನವದೆಹಲಿ: ಜೆಡಿಎಸ್ ಅಧಿಕೃತವಾಗಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ ಸೇರಿದೆ. ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ ಬಳಿಕ ಮಾತನಾಡಿದ ಕುಮಾರಸ್ವಾಮಿ, ಅಧಿಕೃತವಾಗಿ ಮೈತ್ರಿ ಬಗ್ಗೆ ಕೆಲ ವಿಚಾರ ಚರ್ಚೆ ನಡೆಸಿದ್ದೇವೆ. ಮೈತ್ರಿ ಬಗ್ಗೆ ಎಲ್ಲಾ ರೀತಿಯಲ್ಲೂ ಸುಗಮವಾಗಿ ಚರ್ಚೆ ನಡೆಯುತ್ತಿದೆ. ಎಷ್ಟು ಸೀಟ್‌ ನಮಗೆ ಕೊಡುತ್ತಾರೆಂಬುದು ಮುಖ್ಯವಲ್ಲ ಎಂದಿದ್ದಾರೆ. ರಾಜ್ಯದ 28 ಕ್ಷೇತ್ರಗಳಲ್ಲೂ ಬಿಜೆಪಿ, ಜೆಡಿಎಸ್ ಗೆಲ್ಲುವುದೇ ನಮ್ಮ ಗುರಿ.

ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಸೇರಿದ ಜೆಡಿಎಸ್ | ಸೀಟು ಹಂಚಿಕೆಯ ಗೊಂದಲದ ಬಗ್ಗೆಯೂ ಮಾತನಾಡಿದ ಎಚ್.ಡಿ.ಕೆ. Read More »

ಕಾವು ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಶ್ರೀ ಗಣೇಶೋತ್ಸವ | ಶೋಭಾಯಾತ್ರೆಗೆ ಮೆರುಗು ನೀಡಿದ ನೃತ್ಯ ಭಜನೆ, ಹುಲಿ ವೇಷ, ಗೊಂಬೆ ಕುಣಿತ

ಕಾವು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಗಣೇಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಅರ್ಚಕ ವೇ. ಮೂ. ಶಿವಪ್ರಸಾದ್ ಕಡಮಣ್ಣಾ ಅವರ ಪೌರೋಹಿತ್ಯದಲ್ಲಿ ಶ್ರೀ ಗಣೇಶ ವಿಗ್ರಹ ಪ್ರತಿಷ್ಠಾಪನೆ, ಧಾರ್ಮಿಕ ಕಾರ್ಯಕ್ರಮ, ವಿಗ್ರಹ ಜಲಸ್ತಂಭನ ನಡೆಯಿತು. ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಯೋಗ ಶಿಕ್ಷಣ ಸಂಯೋಜಕ ಚಂದ್ರಶೇಖರ ದೇಲಂಪಾಡಿ, ಗಣೇಶೋತ್ಸವವು ಧಾರ್ಮಿಕ ಪ್ರಜ್ಞೆ ಮೂಡಿಸುವ

ಕಾವು ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಶ್ರೀ ಗಣೇಶೋತ್ಸವ | ಶೋಭಾಯಾತ್ರೆಗೆ ಮೆರುಗು ನೀಡಿದ ನೃತ್ಯ ಭಜನೆ, ಹುಲಿ ವೇಷ, ಗೊಂಬೆ ಕುಣಿತ Read More »

ಇತಿಹಾಸದಲ್ಲೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆಯಲಿರುವ ರಾಜಧಾನಿಯ ಕಂಬಳದ ಕರೆ ವೀಕ್ಷಣೆ | ಶಾಸಕರ ನೇತೃತ್ವದಲ್ಲಿ ವಿವಿಧ ಸಂಘಟನೆ ಪ್ರಮುಖರ ಸಭೆ

ಪುತ್ತೂರು: ನವೆಂಬರ್ ತಿಂಗಳಿನಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ವಿಚಾರಕ್ಕೆ ಸಂಬಂಧಿಸಿದಂತೆ ವಿವಿಧ ಸಂಘಟನೆಗಳ ಪ್ರಮುಖರ ಜೊತೆ ಶಾಸಕ ಅಶೋಕ್ ರೈ ಅವರು ಬೆಂಗಳೂರಿನ ಸ್ವಾತಿ ಹೊಟೇಲ್ ಸಭಾಂಗಣದಲ್ಲಿ ಸಭೆ ನಡೆಸಿದರು. ಇದಕ್ಕೆ ಮೊದಲು ಅರಮನೆ ಮೈದಾನದಲ್ಲಿ ಕರೆ ನಿರ್ಮಾಣ ಮಾಡಬೇಕಾದ ಸ್ಥಳವನ್ನು ವೀಕ್ಷಣೆ ಮಾಡಲಾಯಿತು. ಸಭೆಯಲ್ಲಿ ಪ್ರಮುಖವಾಗಿ ಕೆಲವೊಂದು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಯಿತು. ಕರ್ನಾಟಕದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ರಾಜಧಾನಿಯಲ್ಲಿ ಕಂಬಳ ಏರ್ಪಡಿಸಲಾಗಿದೆ. ಕಂಬಳ ವೀಕ್ಷಣೆಗೆ ರಾಜ್ಯದ ನಾನಾ ಕಡೆಗಳಿಂದ ಕಂಬಳಾಭಿಮಾನಿಗಳು ಆಗಮಿಸುವ ನಿರೀಕ್ಷೆ

ಇತಿಹಾಸದಲ್ಲೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆಯಲಿರುವ ರಾಜಧಾನಿಯ ಕಂಬಳದ ಕರೆ ವೀಕ್ಷಣೆ | ಶಾಸಕರ ನೇತೃತ್ವದಲ್ಲಿ ವಿವಿಧ ಸಂಘಟನೆ ಪ್ರಮುಖರ ಸಭೆ Read More »

ಸೆ. 24: ಕಡಬ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಸವಣೂರು: ಕಡಬ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ 2023-24 ಸೆ. 24ರಂದು ಸವಣೂರು ಸರಕಾರಿ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ. ಶಾಸಕಿ ಭಾಗೀರಥಿ ಮುರುಳ್ಯ ಕ್ರೀಡಾಕೂಟವನ್ನು ಉದ್ಘಾಟಿಸುವರು. ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಂದರಿ ಬಿ.ಎಸ್. ಅಧ್ಯಕ್ಷತೆ ವಹಿಸುವರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕಡಬ ತಾಲೂಕು ಪಂಚಾಯತ್, ಸವಣೂರು ಗ್ರಾಮ ಪಂಚಾಯತ್, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸವಣೂರು ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗ, ಕಡಬ ತಾಲೂಕು ಯುವಜನ

ಸೆ. 24: ಕಡಬ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ Read More »

ಕೊಳ್ತಿಗೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಕ್ಕೆ 53.28 ಲಕ್ಷ ರೂ. ನಿವ್ವಳ ಲಾಭ | ವಾರ್ಷಿಕ ಮಹಾಸಭೆಯಲ್ಲಿ ಘೋಷಿಸಿದ ಅಧ್ಯಕ್ಷ ಕೆ.ಎಸ್.ವೆಂಕಟ್ರಮಣ

ಪುತ್ತೂರು: ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2022-23ನೇ ಸಾಲಿನ ವಾರ್ಷಿಕ ಮಹಾಸಭೆ ಸೆ. 22ರ ಶುಕ್ರವಾರ ಪೆರ್ಲಂಪಾಡಿ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಕೆ.ಎಸ್. ವೆಂಕಟ್ರಮಣ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘವು ವರದಿ ವರ್ಷದಲ್ಲಿ 53.28 ಲಕ್ಷ ರೂ. ನಿವ್ವಳ ಲಾಭ ಗಳಿಸಿದ್ದು, ಲಾಭಾಂಶವನ್ನು ಬೈಲಾ ರೀತಿಯಲ್ಲಿ ವಿಲೇವಾರಿ ಮಾಡಲು ಮಹಾಸಭೆಗೆ ಶಿಫಾರಸ್ಸು ಮಾಡಲಾಗಿದೆ. ಸಂಘದಲ್ಲಿ 3282 ಎ ತರಗತಿ ಸದಸ್ಯರಿದ್ದಾರೆ ಎಂದರು. ವರದಿ ವರ್ಷದ ಅಂತ್ಯಕ್ಕೆ 2.1 ಕೋಟಿ ರೂ. ಪಾಲು

ಕೊಳ್ತಿಗೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಕ್ಕೆ 53.28 ಲಕ್ಷ ರೂ. ನಿವ್ವಳ ಲಾಭ | ವಾರ್ಷಿಕ ಮಹಾಸಭೆಯಲ್ಲಿ ಘೋಷಿಸಿದ ಅಧ್ಯಕ್ಷ ಕೆ.ಎಸ್.ವೆಂಕಟ್ರಮಣ Read More »

error: Content is protected !!
Scroll to Top