ವಿಜ್ಞಾನದ ಜತೆ ಭಾಷೆ ಬೆಳೆಯಬೇಕು | ಹಿಂದಿ ದಿನಾಚರಣೆಯಲ್ಲಿ ಪ್ರೊ. ಶ್ರೀಪತಿ ಕಲ್ಲೂರಾಯ

ಪುತ್ತೂರು: ಭಾವನೆಗಳನ್ನು ಅಭಿವ್ಯಕ್ತಗೊಳಿಸಲು ಭಾಷೆ ಮುಖ್ಯ. ಭಾಷೆ ಎಂಬುವುದು ಒಂದು ವಿಜ್ಞಾನ. ಅದರಲ್ಲಿರುವ ಅನೇಕ ವಿಸ್ಮಯಗಳನ್ನು ನಾವು ಕಲಿಯಬೇಕು. ಭಾರತ ಅನೇಕ ಭಾಷೆಗಳಿಂದ ಕೂಡಿರುವುದು ಮಾತ್ರವಲ್ಲದೆ ಅದರ ಹಿನ್ನಲೆಯಿಂದ ಹೆಚ್ಚು ಪ್ರಖ್ಯಾತವಾಗಿದೆ. ವಿಜ್ಞಾನದ ಜೊತೆಗೆ ಭಾಷೆ ಕೂಡಾ ಬೆಳೆಯಬೇಕು ಎಂದು ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ)ಹಿಂದಿ ಸಂಘ ಹಾಗೂ ಐಕ್ಯೂಏಸಿ ಜಂಟಿ ಸಹಯೋಗದಲ್ಲಿ   ಆಯೋಜಿಸಿದ  ಹಿಂದಿ ದಿನಾಚರಣೆ ಕಾರ್ಯಕ್ರಮದ […]

ವಿಜ್ಞಾನದ ಜತೆ ಭಾಷೆ ಬೆಳೆಯಬೇಕು | ಹಿಂದಿ ದಿನಾಚರಣೆಯಲ್ಲಿ ಪ್ರೊ. ಶ್ರೀಪತಿ ಕಲ್ಲೂರಾಯ Read More »

ದೂರದರ್ಶಿತ್ವವುಳ್ಳ ಯೋಚನೆಗಳು, ಯೋಜನೆಗಳು ಸರ್ ಎಂ.ವಿ.ಯವರ ಬುದ್ಧಿವಂತಿಕೆಗೆ ಸಾಕ್ಷಿಯಾಗಿವೆ | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರ್ಸ್ ಡೇ ಕಾರ್ಯಕ್ರಮದಲ್ಲಿ ಪೌರಾಯುಕ್ತ ಮಧು ಎಸ್‍.ಮನೋಹರ್

ಪುತ್ತೂರು: ನಮ್ಮ ನಾಡಿನ ಹೆಮ್ಮೆಯ ಪುತ್ರ, ದೇಶ ಕಂಡ ಅಪ್ರತಿಮ ವಿಜ್ಞಾನಿ ಸರ್ ಎಂ.ವಿಶ್ವೇಶ್ವರಯ್ಯನವರು ಕಲಿಸಿಕೊಟ್ಟ ಶ್ರಮ ಮತ್ತು ಪ್ರಾಮಾಣಿಕತೆಯ ಪಾಠವನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ತನ್ಮೂಲಕ ದೇಶದ ಅಭಿವೃದ್ಧಿಯಲ್ಲಿ ತಮ್ಮ ಕೊಡುಗೆ ನೀಡಬೇಕು ಎಂದು ಪುತ್ತೂರು ನಗರಸಭೆಯ ಆಯುಕ್ತ ಮಧು.ಎಸ್.ಮನೋಹರ್ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿಂಗ್  ವಿಭಾಗ, ಐಎಸ್‌ಟಿಇ ಘಟಕ ಮತ್ತು ಕಾಲೇಜಿನ ಇನ್ಟಿಟ್ಯೂಶನ್ ಇನ್ನೋವೇಶನ್ ಕೌನ್ಸಿಲ್ ನ ಸಂಯುಕ್ತ ಆಶ್ರಯದಲ್ಲಿ ನಡೆದ ಇಂಜಿನಿಯರ್ಸ್ ಡೇ

ದೂರದರ್ಶಿತ್ವವುಳ್ಳ ಯೋಚನೆಗಳು, ಯೋಜನೆಗಳು ಸರ್ ಎಂ.ವಿ.ಯವರ ಬುದ್ಧಿವಂತಿಕೆಗೆ ಸಾಕ್ಷಿಯಾಗಿವೆ | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರ್ಸ್ ಡೇ ಕಾರ್ಯಕ್ರಮದಲ್ಲಿ ಪೌರಾಯುಕ್ತ ಮಧು ಎಸ್‍.ಮನೋಹರ್ Read More »

ಚಾರ್ಮಾಡಿ ಘಾಟ್ ಪ್ರಪಾತಕ್ಕೆ ಉರುಳಿದ ಲಾರಿ!

ಬೆಳ್ತಂಗಡಿ : ದಟ್ಟ ಮಂಜು ಆವರಿಸಿದ ಪರಿಣಾಮ ಚಾರ್ಮಾಡಿ ಘಾಟಿಯಯಲ್ಲಿ ಲಾರಿಯೊಂದು ತಡೆಗೋಡೆಗೆ ಡಿಕ್ಕಿ ಹೊಡೆದು ನೂರು ಅಡಿ ಆಳದ ಪ್ರಪಾತಕ್ಕೆ ಉರುಳಿದ ಘಟನೆ ನಡೆದಿದೆ. ಸೋಮನಕಾಡು ನೀರಿನ ಫಾಲ್ಸ್ ಸಮೀಪ ಈ ಅಪಘಾತ ಸಂಭವಿಸಿದ್ದು, ಚಾಲಕ ಹಾಗೂ ನಿರ್ವಾಹಕ ಅಲ್ಪ ಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ. ಅದೃಷ್ಟವಶಾತ್ ಲಾರಿ ಉರುಳಿ ಪ್ರಪಾತದಲ್ಲಿರುವ ಮರಕ್ಕೆ ಡಿಕ್ಕಿ ಹೊಡೆದು ಅಲ್ಲೇ ಮರದಲ್ಲೇ ಸಿಲುಕಿಕೊಂಡಿರುವುದರಿಂದ ಚಾಲಕ, ನಿರ್ವಾಹಕ ಪ್ರಾಣಾಪಾಯದಿಂದ ಪಾರಾದಂತಾಗಿದೆ.

ಚಾರ್ಮಾಡಿ ಘಾಟ್ ಪ್ರಪಾತಕ್ಕೆ ಉರುಳಿದ ಲಾರಿ! Read More »

ತಾಯಿ-ಮಗಳ ಮೃತದೇಹ ಬಾವಿಯಲ್ಲಿ ಪತ್ತೆ: ಶಂಕೆ ಮೂಡಿಸಿದ ಸಾವು!!

ಕಾಸರಗೋಡು: ತಾಯಿ ಮತ್ತು ಮಗಳ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡಿನ ಉದುಮ ಸಮೀಪದ ಕಳ್ನಾಡ್ ನಲ್ಲಿ ನಡೆದಿದೆ. ಕಳ್ನಾಡ್ ಅರಮಂಗಾನದ ತಾಜುದ್ದೀನ್ ರವರ ಪತ್ನಿ ರುಬೀನಾ (33) ಮತ್ತು ಪುತ್ರಿ ಹನಾನ್ ಮರಿಯಾ (5) ಮೃತ ಪಟ್ಟವರು. ಶುಕ್ರವಾರ ಮಧ್ಯಾಹ್ನ 12 ಗಂಟೆ ಯಿಂದ ಇಬ್ಬರು ನಾಪತ್ತೆಯಾಗಿದ್ದು, ಇದರಿಂದ ಶೋಧ ನಡೆಸಿದಾಗ ಮನೆ ಸಮೀಪದ ಬಾವಿಯಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ಮೇಲ್ಪರಂಬ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದು, ಪೊಲೀಸರು ಹಾಗೂ ಅಗ್ನಿ

ತಾಯಿ-ಮಗಳ ಮೃತದೇಹ ಬಾವಿಯಲ್ಲಿ ಪತ್ತೆ: ಶಂಕೆ ಮೂಡಿಸಿದ ಸಾವು!! Read More »

ಪಿ.ಎಂ. ವಿಶ್ವಕರ್ಮ ಯೋಜನೆಗೆ ಮಂಗಳೂರಿನಲ್ಲಿ ಚಾಲನೆ ನೀಡಲಿದ್ದಾರೆಯೇ ಮೋದಿ? | ಪಿಎಂ, ಕೇಂದ್ರ ಸಚಿವರು ಆಗಮಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಸಂಸದ, ಶಾಸಕರು, ಅಧಿಕಾರಿಗಳ ಸಿದ್ಧತೆ!

ಮಂಗಳೂರು : ಪಿಎಂ ವಿಶ್ವಕರ್ಮ ಯೋಜನೆಗೆ ಮಂಗಳೂರಿನಲ್ಲಿ ಚಾಲನೆ ನೀಡಲಿದ್ದು, ಈ ಕುರಿತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಮಾಲೋಚನಾ ಸಭೆ ನಡೆಸಿದರು. ಸಭೆಯಲ್ಲಿ ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಚರ್ಚಿಸಲಾಯಿತು. ಪಿಎಂ ವಿಶ್ವಕರ್ಮ ಯೋಜನೆಗೆ ಮಂಗಳೂರಿನ ಟಿ.ಎಂ.ಎ. ಪೈ.ಇಂಟರ್ ನ್ಯಾಷನಲ್ ಹಾಲ್ ನಲ್ಲಿ  ಚಾಲನೆ ದೊರೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಆನ್‍ ಲೈನ್‍ ನಲ್ಲಿ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ಮೀನುಗಾರಿಕೆ, ಪಶು ಸಂಗೋಪನಾ ಹಾಗೂ ಹೈನುಗಾರಿಕಾ ಸಚಿವ

ಪಿ.ಎಂ. ವಿಶ್ವಕರ್ಮ ಯೋಜನೆಗೆ ಮಂಗಳೂರಿನಲ್ಲಿ ಚಾಲನೆ ನೀಡಲಿದ್ದಾರೆಯೇ ಮೋದಿ? | ಪಿಎಂ, ಕೇಂದ್ರ ಸಚಿವರು ಆಗಮಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಸಂಸದ, ಶಾಸಕರು, ಅಧಿಕಾರಿಗಳ ಸಿದ್ಧತೆ! Read More »

ಹುತಾತ್ಮ ತಂದೆಗೆ ಸೇನಾ ಬಟ್ಟೆ ತೊಟ್ಟು, ಅಂತಿಮ ಸೆಲ್ಯೂಟ್‌ ಹೊಡೆದ 6 ವರ್ಷದ ಮಗ!! | ಕಣ್ಣೀರು ಬರಿಸುವ ಕರ್ನಲ್‌ ಮನ್‌ಪ್ರೀತ್ ಸಿಂಗ್‌ ಅಂತ್ಯಸಂಸ್ಕಾರದ ವೀಡಿಯೋ!!

ಚಂಡೀಗಢ: ಜಮ್ಮು-ಕಾಶ್ಮೀರದ ಅನಂತನಾಗ್‌ನಲ್ಲಿ ನಡೆದ ಎನ್‌ಕೌಂಟರ್‌ ವೇಳೆ ಭಾರತೀಯ ಸೇನೆಯ ಕರ್ನಲ್ ಮನ್‌ಪ್ರೀತ್ ಸಿಂಗ್, ಮೇಜರ್ ಆಶಿಶ್ ಧೋನೌಕ್ ಹಾಗೂ ಜಮ್ಮು-ಕಾಶ್ಮೀರ ಪೊಲೀಸ್ ಇಲಾಖೆಯ ಡಿವೈಎಸ್‌ಪಿ ಹುಮಾಯೂನ್ ಭಟ್ ಅವರು ಹುತಾತ್ಮರಾಗಿದ್ದಾರೆ. ಅವರ ಹುಟ್ಟೂರುಗಳಲ್ಲಿ ಸರ್ಕಾರಿ ಗೌರವ ಹಾಗೂ ಸಾವಿರಾರು ಜನರ ಕಣ್ಣೀರಿನ ಮಧ್ಯೆ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. ಅದರಲ್ಲೂ, ಪಂಜಾಬ್‌ನ ಮಲ್ಲನ್‌ಪುರ ಗರೀಬ್‌ದಾಸ್‌ನಲ್ಲಿ ಕರ್ನಲ್‌ ಮನ್‌ಪ್ರೀತ್ ಸಿಂಗ್‌ ಅಂತ್ಯಸಂಸ್ಕಾರದ ವೇಳೆ ಅವರ 6 ವರ್ಷದ ಮಗನು ತಂದೆಗೆ ಕೊನೆಯ ಬಾರಿ ಸೆಲ್ಯೂಟ್‌ ಮಾಡಿರುವ ಭಾವನಾತ್ಮಕ ಕ್ಷಣಗಳ ವಿಡಿಯೊ

ಹುತಾತ್ಮ ತಂದೆಗೆ ಸೇನಾ ಬಟ್ಟೆ ತೊಟ್ಟು, ಅಂತಿಮ ಸೆಲ್ಯೂಟ್‌ ಹೊಡೆದ 6 ವರ್ಷದ ಮಗ!! | ಕಣ್ಣೀರು ಬರಿಸುವ ಕರ್ನಲ್‌ ಮನ್‌ಪ್ರೀತ್ ಸಿಂಗ್‌ ಅಂತ್ಯಸಂಸ್ಕಾರದ ವೀಡಿಯೋ!! Read More »

ಪುತ್ತೂರು ಶಾಸಕ ಕಚೇರಿಗೆ ನಗರಸಭೆ ನಿಧಿಯ ದುರುಪಯೋಗ!! | ನಗರಸಭೆ ಬಿಜೆಪಿ ಸದಸ್ಯರಿಂದ ಆಕ್ಷೇಪಿಸಿ ಡಿ.ಸಿ.ಗೆ ಮನವಿ

ಪುತ್ತೂರು: ಶಾಸಕರ ನೂತನ ಕಚೇರಿಗೆ ಪುತ್ತೂರು ನಗರಸಭಾ ನಿಧಿಯ ದುರುಪಯೋಗವಾಗಿದೆ ಮತ್ತು ನಗರಸಭೆಯ ನಗರೋತ್ಥಾನದ ವಿವಿಧ ಕಾಮಗಾರಿ ವಿಳಂಬ ಸಹಿತ ನಗರಸಭೆ 2ನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ಇನ್ನೂ ಆಗಿಲ್ಲ ಎಂದು ನಗರಸಭೆ ಬಿಜೆಪಿ ಸದಸ್ಯರು ನಗರಸಭೆ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಮುಲೈಮುಗಿಲನ್ ಅವರಿಗೆ ಪುತ್ತೂರಿನಲ್ಲಿ ದೂರು ನೀಡಿದರು. ಪುತ್ತೂರು ತಾಲೂಕು ಆಡಳಿತಕ್ಕೆ ಜಿಲ್ಲಾಧಿಕಾರಿಯವರು ಸೆ.15 ರಂದು ಆಗಮಿಸಿದ ವೇಳೆ ಸದಸ್ಯರು ಮನವಿ ಮಾಡಿದ್ದಾರೆ.ಪುತ್ತೂರು ಶಾಸಕರು ನಮ್ಮ ನಗರ ಸಭೆಯ ಕಟ್ಟಡದಲ್ಲಿ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ

ಪುತ್ತೂರು ಶಾಸಕ ಕಚೇರಿಗೆ ನಗರಸಭೆ ನಿಧಿಯ ದುರುಪಯೋಗ!! | ನಗರಸಭೆ ಬಿಜೆಪಿ ಸದಸ್ಯರಿಂದ ಆಕ್ಷೇಪಿಸಿ ಡಿ.ಸಿ.ಗೆ ಮನವಿ Read More »

ಮಡಿಕೇರಿಯಲ್ಲಿ ಅಪ್ರಾಪ್ತೆ ಹಿಂದೂ ಹುಡುಗಿಯರ ಕಿಡ್ನ್ಯಾಪ್! | ನಿಜಾಮಿಲ್, ಸಮದ್, ತಪ್ಸಿರ್ ಹಾಗೂ ಇರ್ಫಾನ್ ಬಂಧನ

ಮಡಿಕೇರಿ: ಕೊಡಗಿನಲ್ಲಿ ಪಿಯುಸಿ ಓದುತ್ತಿದ್ದ ಅಪ್ರಾಪ್ತೆ ಹಿಂದೂ ಹುಡುಗಿಯರನ್ನು ಕಿಡ್ನ್ಯಾಪ್ ಮಾಡುತ್ತಿದ್ದ ನಾಲ್ವರು ಮುಸ್ಲಿಂ ಯುವಕರನ್ನು ಅರೆಸ್ಟ್ ಮಾಡಲಾಗಿದೆ. ಪಿಯುಸಿ ಓದುತ್ತಿದ್ದ ಅಪ್ರಾಪ್ತ ಹುಡುಗಿಯರನ್ನು ಕೊಡಗಿನಿಂದ ಮೈಸೂರಿಗೆ ಯುವಕರು ಅಪಹರಿಸಿ ಕರೆದೊಯ್ಯುತ್ತಿದ್ದರು ಎನ್ನಲಾಗಿದೆ. ಈ ವೇಳೆ ಇದನ್ನು ಗಮನಿಸಿದ್ದ ಸ್ಥಳೀಯರು ಕೂಡಲೇ ಫೋನ್ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧ ಪಟ್ಟ ಹಾಗೆ ನಾಲ್ವರು ಯುವಕರನ್ನು ಅರೆಸ್ಟ್ ಮಾಡಲಾಗಿದೆ. ನಿಜಾಮಿಲ್, ಸಮದ್, ತಪ್ಸಿರ್ ಹಾಗೂ ಇರ್ಫಾನ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.

ಮಡಿಕೇರಿಯಲ್ಲಿ ಅಪ್ರಾಪ್ತೆ ಹಿಂದೂ ಹುಡುಗಿಯರ ಕಿಡ್ನ್ಯಾಪ್! | ನಿಜಾಮಿಲ್, ಸಮದ್, ತಪ್ಸಿರ್ ಹಾಗೂ ಇರ್ಫಾನ್ ಬಂಧನ Read More »

ಪಿಒಪಿ ಗಣೇಶ ಮೂರ್ತಿ ಉತ್ಪಾದನೆ, ಮಾರಾಟ ನಿಷೇಧಿಸಿದ ಸರ್ಕಾರ! | ನಿಯಮ ಉಲ್ಲಂಘಿಸಿದರೆ ಭಾರಿ ದಂಡದೊಂದಿಗೆ ಜೈಲು ಶಿಕ್ಷೆ

ಬೆಂಗಳೂರು: ರಾಜ್ಯಾದ್ಯಂತ ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ (ಪಿಒಪಿ) ಹಾಗೂ ರಾಸಾಯನಿಕ ಗುಣಗಳುಳ್ಳ ವಸ್ತುಗಳನ್ನು ಬಳಸಿ ತಯಾರಿಸಲಾದ ಗಣೇಶ ಮೂರ್ತಿಗಳ ಉತ್ಪಾದನೆ, ಮಾರಾಟ ಹಾಗೂ ವಿಸರ್ಜನೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದೇಶವನ್ನು ಅನುಷ್ಠಾನಗೊಳಿಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳಿಗೆ ರಾಜ್ಯದ ಎಲ್ಲಾ ಜಿಲ್ಲಾಡಳಿತ, ಸ್ಥಳೀಯ ಸಂಸ್ಥೆಗಳು, ಪೊಲೀಸ್ ಇಲಾಖೆ ಎಲ್ಲಾ ರೀತಿಯ ಸಹಕಾರ ನೀಡಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಬಿ.ಎನ್‌.ಪ್ರವೀಣ್‌ ಸೂಚಿಸಿದ್ದಾರೆ. ರಾಷ್ಟ್ರೀಯ ಹಸಿರು ನ್ಯಾಯ

ಪಿಒಪಿ ಗಣೇಶ ಮೂರ್ತಿ ಉತ್ಪಾದನೆ, ಮಾರಾಟ ನಿಷೇಧಿಸಿದ ಸರ್ಕಾರ! | ನಿಯಮ ಉಲ್ಲಂಘಿಸಿದರೆ ಭಾರಿ ದಂಡದೊಂದಿಗೆ ಜೈಲು ಶಿಕ್ಷೆ Read More »

ನರಿಮೊಗರು: ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ಏಕಾದಶ ಕೋಟಿ ಮಹಾಲಿಂಗೇಶ್ವರ ಜಪಯಜ್ಞ

ಪುತ್ತೂರು: ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಹಮ್ಮಿಕೊಂಡ ಏಕಾದಶ ಕೋಟಿ ಮಹಾಲಿಂಗೇಶ್ವರ ದೇವರ ಜಪಯಜ್ಞ  ನಡೆಯಿತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಇವರು ಜಪದ ವಿಧಿಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಜಯರಾಮ ಕೆದಿಲಾಯ ಶಿಬರ, ಸಂಚಾಲಕ ಭಾಸ್ಕರ್ ಆಚಾರ್ ಹಿಂದಾರ್, ಕಾರ್ಯದರ್ಶಿ ಕೃಷ್ಣಪ್ರಸಾದ್ ಕೆದಿಲಾಯ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಐತ್ತಪ್ಪ ನಾಯ್ಕ್ ಮತ್ತು ರವೀಂದ್ರನಾಥ್ ರೈ

ನರಿಮೊಗರು: ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ಏಕಾದಶ ಕೋಟಿ ಮಹಾಲಿಂಗೇಶ್ವರ ಜಪಯಜ್ಞ Read More »

error: Content is protected !!
Scroll to Top