ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ವತಿಯಿಂದ ಸಹಾಯಧನ ಚೆಕ್ ವಿತರಣೆ

ನೆಲ್ಯಾಡಿ: ಕೊಣಾಲು ಗ್ರಾಮದ ಶ್ರೀ ವರಲಕ್ಷ್ಮಿ ಸಂಘದ ಸದಸ್ಯೆ ಲೀಲಾವತಿಯವರು ಇತ್ತೀಚೆಗೆ ಅಕಾಲಿಕ ಮರಣವಾಗಿದ್ದು, ಅವರ ಪತಿ ಪ್ರಭಾನಂದರವರಿಗೆ ಒಕ್ಕಲಿಗ ಸ್ವಸಹಾಯ ಟ್ರಸ್ಟ್ ವತಿಯಿಂದ ಸಹಾಯಧನ ಚೆಕ್ ಹಸ್ತಾಂತರಿಸಲಾಯಿತು. ವಲಯ ಟ್ರಸ್ಟ್ ನಿರ್ದೇಶಕ ರವಿಚಂದ್ರ ಗೌಡ ಹೊಸವಕ್ಲು ಚೆಕ್‍ ಹಸ್ತಾಂತರಿಸಿದರು.   ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಲಕ್ಷ್ಮಣ ಗೌಡ ಗೌರ್ಲೆ, ಗ್ರಾಮಸಮಿತಿ ಅಧ್ಯಕ್ಷ ನೋಣಯ್ಯ ಗೌಡ ಡೆಬ್ಬೇಲಿ, ವಲಯ ಪ್ರೇರಕ ಪರಮೇಶ್ವರ ಗೌಡ, ಸಂಘದ ಸದಸ್ಯರು ಉಪಸ್ಥಿತರಿದ್ದರು.

ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ವತಿಯಿಂದ ಸಹಾಯಧನ ಚೆಕ್ ವಿತರಣೆ Read More »

ಚೈತ್ರಾ ಕುಂದಾಪುರ ಬಂಧನದ ಬೆನ್ನಿಗೆ ಆಶ್ರಯ ನೀಡಿದ್ದ ಕಾಂಗ್ರೆಸ್ ವಕ್ತಾರೆಗೂ ಸಿಸಿಬಿ ನೊಟೀಸ್ | ಕಾಶ್ಮೀರದಲ್ಲಿದ್ದಾನೆಂದು ನಂಬಿಸಿ ಸುರೆಯ್ಯ ಅಂಜುಮ್ ಜಸೀಮ್ ಮನೆಯಲ್ಲಿ 7 ದಿನಗಳಿಂದ ಆಶ್ರಯ ಪಡೆದಿದ್ದ ಚೈತ್ರಾ!

ಉಡುಪಿ: ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಟಿಕೆಟ್ ಗೆ ಕೊಡಿಸುವುದಾಗಿ 7 ಕೋಟಿ ರೂ. ಡೀಲ್ ಪ್ರಕರಣದಲ್ಲಿ ಹಿಂದೂ ಮುಖಂಡೆ ಚೈತ್ರಾ ಕುಂದಾಪುರ ಅವರನ್ನು ವಶಕ್ಕೆ ಪಡೆದ ಬೆನ್ನಿಗೇ ಆಶ್ರಯ ನೀಡಿದ್ದ ಕಾಂಗ್ರೆಸ್‌ ನ ಮಾಧ್ಯಮ ವಕ್ತಾರೆ ಸುರೆಯ್ಯ ಅಂಜುಮ್ ಜಸೀಮ್ ಅವರಿಗೂ ಸಿಸಿಬಿ ನೊಟೀಸ್ ನೀಡಿದೆ. ಕಾಂಗ್ರೆಸ್ ಮಹಿಳಾ ನಾಯಕಿ ಸುರೆಯ್ಯ ಅಂಜುಂಗೆ ಸಿಸಿಬಿ ನೋಟೀಸ್ ನೀಡಿದ್ದು, ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ಕಳೆದ ಏಳು ದಿನಗಳಿಂದ ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಕಾಂಗ್ರೆಸ್ ಮಾಧ್ಯಮ

ಚೈತ್ರಾ ಕುಂದಾಪುರ ಬಂಧನದ ಬೆನ್ನಿಗೆ ಆಶ್ರಯ ನೀಡಿದ್ದ ಕಾಂಗ್ರೆಸ್ ವಕ್ತಾರೆಗೂ ಸಿಸಿಬಿ ನೊಟೀಸ್ | ಕಾಶ್ಮೀರದಲ್ಲಿದ್ದಾನೆಂದು ನಂಬಿಸಿ ಸುರೆಯ್ಯ ಅಂಜುಮ್ ಜಸೀಮ್ ಮನೆಯಲ್ಲಿ 7 ದಿನಗಳಿಂದ ಆಶ್ರಯ ಪಡೆದಿದ್ದ ಚೈತ್ರಾ! Read More »

ತ್ರೋಬಾಲ್ ಪಂದ್ಯಾಟ: ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

ಪುತ್ತೂರು: ವಿದ್ಯಾಭಾರತಿ ಕರ್ನಾಟಕ ಮತ್ತು ಎಲಿಮಲೆ ಜ್ಞಾನದೀಪ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ  ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಬೆಂಗಳೂರಿನಲ್ಲಿ ನಡೆಯಲಿರುವ  ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದೆ. ಬಾಲಕರ ವಿಭಾಗವನ್ನು ಕಾಲೇಜಿನ ವಿದ್ಯಾರ್ಥಿಗಳಾದ ಶರತ್ ಶೆಟ್ಟಿ, ಮೋಕ್ಷಿತ್ ಪಿ ಶೆಟ್ಟಿ, ಕೌಶಿಕ್, ಪ್ರಜ್ವಲ್, ಗಗನ್, ಪ್ರಜ್ವಲ್, ಶಮಿತ್ ಪ್ರಸಾದ್ ಪಿ, ಸುಜಿತ್, ರೋಶಿತ್ ಆರ್, ಲಕ್ಷ್ಮೀದಾಸ್ ಎನ್,

ತ್ರೋಬಾಲ್ ಪಂದ್ಯಾಟ: ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಹಿಂದೂ ವಿರೋಧಿ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ | ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ 170 ರೈತರ ಆತ್ಮಹತ್ಯೆ: ಸಂಜೀವ ಮಠಂದೂರು

ಪುತ್ತೂರು: ರಾಷ್ಟ್ರೀಯ ವಿಚಾರಧಾರೆಗಳಲ್ಲಿ ಬಿಜೆಪಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಹಿಂದುಗಳನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಿರ್ಲಕ್ಷಿಸುವ ಕಾರ್ಯವನ್ನು ಮಾಡಬೇಕಾಗಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಡಾ. ನವೀನ್ ಹೇಳಿದರು. ಪುತ್ತೂರು ಅಮರ ಜವಾನ್ ಸ್ಮಾರಕದ ಬಳಿ ಬುಧವಾರ ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದರು. ಕೃಷಿ ಹಾಗೂ ಕೃಷಿ ಕ್ಷೇತ್ರಕ್ಕೆ 1.50 ಲಕ್ಷ ಕೋಟಿ ರೂಪಾಯಿಯನ್ನು ಬಿಜೆಪಿ ಸರ್ಕಾರ

ಹಿಂದೂ ವಿರೋಧಿ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ | ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ 170 ರೈತರ ಆತ್ಮಹತ್ಯೆ: ಸಂಜೀವ ಮಠಂದೂರು Read More »

ಪಂಚತಾರಾ ಹೊಟೇಲ್ನಲ್ಲಿ ಚೀನಾ ಬ್ಯಾಗ್! | ನಿಗೂಢವಾಗಿಯೇ ಉಳಿದ ಬ್ಯಾಗ್ ರಹಸ್ಯ!

ಹೊಸದಿಲ್ಲಿ: ಜಿ20 ಶೃಂಗಸಭೆಯ ಸಂದರ್ಭದಲ್ಲಿ ಕಳೆದ ಗುರುವಾರ ಪ್ರಮುಖ ವಿಷಯಗಳ ಬಗ್ಗೆ ಒಮ್ಮತ ಸಾಧಿಸಲು ಭಾರತ ಶಕ್ತವಾಗುತ್ತದೆಯೇ ಎಂಬ ಕುತೂಹಲ ಎಲ್ಲೆಡೆ ಮೂಡಿದ್ದರೆ, ಪಂಚತಾರಾ ಹೋಟೆಲ್ ಒಂದರಲ್ಲಿ ಕಂಡುಬಂದ ನಿಗೂಢ ಬ್ಯಾಗ್ ಭದ್ರತಾ ಪಡೆಗಳ ನಿದ್ದೆಗೆಡಿಸಿ ಹನ್ನೆರಡು ಗಂಟೆಗಳ ಕಾಲ ಭೀತಿಯ ವಾತಾವರಣ ನಿರ್ಮಾಣಕ್ಕೆ ಕಾರಣವಾಯಿತು. ಚೀನಾ ನಿಯೋಗ ಉಳಿದುಕೊಂಡಿದ್ದ ತಾಜ್ ಪ್ಯಾಲೇಸ್ ಹೋಟೆಲ್ ನಲ್ಲಿ ಅಸಹಜ ರೂಪದ ಬ್ಯಾಗ್ ಭದ್ರತಾ ಸಿಬ್ಬಂದಿಯ ಗಮನ ಸೆಳೆಯಿತು. ಆಗ ಒಂದು ರೀತಿಯ ಆತಂಕದ ವಾತಾವರಣ ಸೃಷ್ಟಿಯಾಯಿತು. ರಾಜತಾಂತ್ರಿಕ ಸಿಬ್ಬಂದಿ

ಪಂಚತಾರಾ ಹೊಟೇಲ್ನಲ್ಲಿ ಚೀನಾ ಬ್ಯಾಗ್! | ನಿಗೂಢವಾಗಿಯೇ ಉಳಿದ ಬ್ಯಾಗ್ ರಹಸ್ಯ! Read More »

ಮಕ್ಕಳ ಕಲಿಕೆಯಲ್ಲಿ ಶಿಕ್ಷಕರಷ್ಟೇ ಜವಾಬ್ದಾರಿ ಪೋಷಕರಿಗಿದೆ | ಮೇನಾಲ ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ವಿವೇಕ ಕೊಠಡಿ ಉದ್ಘಾಟಿಸಿ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಶಾಲೆಗೆ ಮಕ್ಕಳನ್ನು ಕಳುಹಿಸಿದ ಮಾತ್ರಕ್ಕೆ ಪೋಷಕರ ಜವಾಬ್ದಾರಿ ಕೊನೆಗೊಳ್ಳುವುದಿಲ್ಲ. ಮಕ್ಕಳ ಕಲಿಕೆಯಲ್ಲಿ ಶಿಕ್ಷಕರಷ್ಟೇ ಜವಾಬ್ದಾರಿ ಪೋಷಕರಿಗೂ ಇದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ನೆಟ್ಟಣಿಗೆ ಮುಡ್ನೂರು ಗ್ರಾಮದ ಮೇನಾಲ ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ವಿವೇಕ ಕೊಠಡಿ ಉದ್ಘಾಟಿಸಿ ಅವರು ಮಾತನಾಡಿದರು. ನಾವು ಮಕ್ಕಳಿಗಾಗಿ ಎಲ್ಲವನ್ನೂ ತ್ಯಾಗ ಮಾಡುತ್ತೇವೆ, ಸಹಿಸಿಕೊಳ್ಳುತ್ತೇವೆ. ಆದರೆ ಅವರ ವಿದ್ಯಾಭ್ಯಾಸದ ಕಡೆ ಗಮನಕೊಡುವುದರಲ್ಲಿ ಸ್ವಲ್ಪ ಹಿಂದೆ ಇದ್ದೇವೆ. ಶಾಲೆಗೆ ಹೋದ ಮಗು ಕಲಿಯುತ್ತಿದೆಯೇ ಎಂಬುದನ್ನು ನಾವು ತಿಳಿದುಕೊಳ್ಳಬೇಕು. ಶಾಲೆಗೆ ಭೇಟಿ ಮಾಡಿ

ಮಕ್ಕಳ ಕಲಿಕೆಯಲ್ಲಿ ಶಿಕ್ಷಕರಷ್ಟೇ ಜವಾಬ್ದಾರಿ ಪೋಷಕರಿಗಿದೆ | ಮೇನಾಲ ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ವಿವೇಕ ಕೊಠಡಿ ಉದ್ಘಾಟಿಸಿ ಶಾಸಕ ಅಶೋಕ್ ಕುಮಾರ್ ರೈ Read More »

ಪರಿಸ್ಥಿತಿಯನ್ನು ಅರ್ಥೈಸಿಕೊಂಡರೆ ಜೀವನದಲ್ಲಿ ಯಶಸ್ಸು | ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟಿಸಿ ಶೇಖರ್ ರೈ ಕೆ.

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿದ ರಾಮಚಂದ್ರ ಪಿಯು ಕಾಲೇಜಿನ ಪ್ರಾಂಶುಪಾಲ ಶೇಖರ್ ರೈ ಕೆ., ಹುಟ್ಟುತ್ತಾ ಯಾರೂ ನಾಯಕನಾಗುವುದಿಲ್ಲ. ಪರಿಸ್ಥಿತಿ ಅವನನ್ನು ನಾಯಕನನ್ನಾಗಿ ಮಾಡುತ್ತದೆ. ಪರಿಸ್ಥಿತಿಯನ್ನು ಅರ್ಥೈಸಿಕೊಂಡು ನಡೆದರೆ ಜೀವನದಲ್ಲಿ ಯಶಸ್ಸು ಗಳಿಸಬಹುದು ಎಂದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಸಂಚಾಲಕ ಜಯಂತ ನಡುಬೈಲು ಮಾತನಾಡಿ, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ಶೈಕ್ಷಣಿಕ

ಪರಿಸ್ಥಿತಿಯನ್ನು ಅರ್ಥೈಸಿಕೊಂಡರೆ ಜೀವನದಲ್ಲಿ ಯಶಸ್ಸು | ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟಿಸಿ ಶೇಖರ್ ರೈ ಕೆ. Read More »

ಡೆಂಗ್ಯೂ ಜ್ವರಕ್ಕೆ ಪೆರುವಾಯಿಯ ಯುವತಿ ಆಶಾ ಬಲಿ

ವಿಟ್ಲ: ಡೆಂಗ್ಯೂ ಜ್ವರದಿಂದ  ಯುವತಿ ಮೃತಪಟ್ಟ ಘಟನೆ  ವಿಟ್ಲದ ಪೆರುವಾಯಿಯಲ್ಲಿ ನಡೆದಿದೆ. ಪೆರುವಾಯಿ ನಿವಾಸಿ ಆಶಾ (25 ) ಮೃತಪಟ್ಟ ಯುವತಿ. ಕಳೆದ ಎರಡು ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಯುವತಿಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಯುವತಿ ಸೆ. 12 ರಂದು ಮೃತಪಟ್ಟಿದ್ದಾರೆ.

ಡೆಂಗ್ಯೂ ಜ್ವರಕ್ಕೆ ಪೆರುವಾಯಿಯ ಯುವತಿ ಆಶಾ ಬಲಿ Read More »

ಉದ್ಯಮಿಗೆ ಬಹುಕೋಟಿ ರೂಪಾಯಿ ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಪೊಲೀಸ್ ವಶಕ್ಕೆ

ಉಡುಪಿ : ಮುಂಬಯಿಯ ಉದ್ಯಮಿಯೊಬ್ಬರಿಗೆ ಎಂಎಲ್‌ಎ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ರೂಪಾಯಿ ವಂಚನೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಕೆಲ ಸಮಯದಿಂದ ತಲೆಮರೆಸಿಕೊಂಡಿದ್ದ ಚೈತ್ರ ಕುಂದಾಪುರ ಕೊನೆಗೂ ಪೋಲಿಸರ ಕೈಗೆ ಸಿಕ್ಕಿಬಿದ್ದಿದ್ದಾರೆ . ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿದ ಬೆಂಗಳೂರು ಸಿಸಿಬಿ ಪೊಲೀಸರು ಸಿನಿಮಿಯ ಶೈಲಿಯಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಉಡುಪಿ ಜಿಲ್ಲೆ ಬೈಂದೂರಿನ ಉದ್ಯಮಿ ಗೋವಿಂದ

ಉದ್ಯಮಿಗೆ ಬಹುಕೋಟಿ ರೂಪಾಯಿ ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಪೊಲೀಸ್ ವಶಕ್ಕೆ Read More »

ಅಮೆರಿಕದ ಅವಳಿ ಕಟ್ಟಡ ದುರಂತಕ್ಕೆ 22 ವರ್ಷ | ಪುತ್ತೂರಿನಲ್ಲಿ ಹೇಮಂತ್ ಕುಮಾರ್ ಸಂಸ್ಮರಣೆ

ಪುತ್ತೂರು: 2001 ಸೆ. 11ರಂದು ನಡೆದ ನ್ಯೂಯಾರ್ಕ್ ಜಾಗತಿಕ ಕಟ್ಟಡ ದುರಂತದಲ್ಲಿ ಹುತಾತ್ಮರಾದ ಹೇಮಂತ ಕುಮಾರ್ ಸಂಸ್ಮರಣಾ ಕಾರ್ಯಕ್ರಮ ಬಿಲ್ಲವ ಸಂಘದ ಹೇಮಂತ ಕುಮಾರ್ ಸಭಾಭವನದಲ್ಲಿ ಜರಗಿತು. ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಫ ಮತ್ತು ದಿ| ಹೇಮಂತ ಕುಮಾರ್ ಸ್ಮಾರಕ ಸಮಿತಿ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಮಂದಿರದಲ್ಲಿ ಪೂಜೆ ನೇರವೇರಿಸಿ, ದೀಪ ಬೆಳಗಿಸಿ ಹೇಮಂತ ಕುಮಾರ್ ತೈಲಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಈ ಸಂದರ್ಭ ಹೇಮಂತ ಕುಮಾರ್ ಅವರ ತಂದೆ ಪಿ. ಆನಂದ ಟೈಲರ್,

ಅಮೆರಿಕದ ಅವಳಿ ಕಟ್ಟಡ ದುರಂತಕ್ಕೆ 22 ವರ್ಷ | ಪುತ್ತೂರಿನಲ್ಲಿ ಹೇಮಂತ್ ಕುಮಾರ್ ಸಂಸ್ಮರಣೆ Read More »

error: Content is protected !!
Scroll to Top