ಕಬಕ ಗ್ರಾಮ ಪಂಚಾಯಿತಿಗೆ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಪ್ರಶಸ್ತಿ

ಪುತ್ತೂರು : ಪುತ್ತೂರು ತಾಲೂಕಿನ ಕಬಕ ಗ್ರಾಪಂಗೆ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ 2023 ಪ್ರಶಸ್ತಿ ಲಭಿಸಿದೆ. ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ರಾಜ್ಯ ನಿರ್ದೇಶಕರಿಂದ ಕಬಕ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಶೀಲ, ನಿಕಟಪೂರ್ವ ಅಧ್ಯಕ್ಷ ವಿನಯಕುಮಾರ್ ಮತ್ತು ಪಿಡಿಒ ಸೋಮವಾರ ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪುತ್ತೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ ಎಚ್‍. ಉಪಸ್ಥಿತರಿದ್ದರು.

ಕಬಕ ಗ್ರಾಮ ಪಂಚಾಯಿತಿಗೆ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಪ್ರಶಸ್ತಿ Read More »

ಜನಸಾಮಾನ್ಯರಿಗೆ ನೀಡುವ ಸೇವೆಗಳ ಜ್ಞಾನ ಪಡೆದುಕೊಳ್ಳಿ | ಪುತ್ತೂರಿನಲ್ಲಿ ಪ್ರಶಿಕ್ಷಣ ವರ್ಗ ಉದ್ಘಾಟಿಸಿ ಸಂಸದ ನಳಿನ್ ಕುಮಾರ್ ಕಟೀಲ್ | ಅಭಿವೃದ್ಧಿ, ಸಂಘಟನೆ ಜೊತೆಗೆ ವ್ಯಕ್ತಿತ್ವ ಬೆಳೆಸಿಕೊಳ್ಳಿ: ಸಂಜೀವ ಮಠಂದೂರು

ಪುತ್ತೂರು: ಗ್ರಾ.ಪಂ. ಅಧ್ಯಕ್ಷರು ಅಥವಾ ಸದಸ್ಯರಿಗೆ ತಮ್ಮ ಜವಾಬ್ದಾರಿಯ ಅರಿವಿರಬೇಕು. ಪಂಚಾಯತ್ ಕಾಯಿದೆಯ ತಿಳುವಳಿಕೆ, ಯೋಜನೆಗಳ ಮಾಹಿತಿಗಳನ್ನು ತಿಳಿದುಕೊಂಡು ಜನಸಾಮಾನ್ಯರಿಗೆ ನೀಡಬಹುದಾದ ಸೇವೆಗಳ ಜ್ಞಾನ ಹೊಂದಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಬಿಜೆಪಿ ಗ್ರಾಮಾಂತರ ಮಂಡಲದ ವತಿಯಿಂದ ಸೋಮವಾರ ನಗರದ ತೆಂಕಿಲ ಚುಂಚಶ್ರೀ ಸಭಾಭವನದಲ್ಲಿ ಗ್ರಾಮ ಪಂಚಾಯತ್ಗಳ ಮಾಜಿ ಮತ್ತು ಹಾಲಿ ಅಧ್ಯಕ್ಷ, ಉಪಾಧ್ಯಕ್ಷರಿಗೆ ಆಯೋಜಿಸಲಾದ ಪ್ರಶಿಕ್ಷಣ ವರ್ಗವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಷ್ಠೆ, ದೈಹಿಕ ಶಕ್ತಿ, ಆರ್ಥಿಕ

ಜನಸಾಮಾನ್ಯರಿಗೆ ನೀಡುವ ಸೇವೆಗಳ ಜ್ಞಾನ ಪಡೆದುಕೊಳ್ಳಿ | ಪುತ್ತೂರಿನಲ್ಲಿ ಪ್ರಶಿಕ್ಷಣ ವರ್ಗ ಉದ್ಘಾಟಿಸಿ ಸಂಸದ ನಳಿನ್ ಕುಮಾರ್ ಕಟೀಲ್ | ಅಭಿವೃದ್ಧಿ, ಸಂಘಟನೆ ಜೊತೆಗೆ ವ್ಯಕ್ತಿತ್ವ ಬೆಳೆಸಿಕೊಳ್ಳಿ: ಸಂಜೀವ ಮಠಂದೂರು Read More »

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ಬಿ.ಸಿ.ಟ್ರಸ್ಟ್ ವತಿಯಿಂದ ಮಧ್ಯವರ್ಜನ ಶಿಬಿರ | ಶ್ರೀ ಮಹಾಬಲೇಶ್ವರ  ಸ್ವಾಮೀಜಿ ಆಶೀರ್ವಚನ

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವಿಟ್ಲ ವತಿಯಿಂದ ವಿಟ್ಲದ  ಅಕ್ಷಯ ಸಭಾಭವನದಲ್ಲಿ  ನಡೆಯುತ್ತಿರುವ 1722 ನೇ ಮದ್ಯವರ್ಜನ ಶಿಬಿರದ 3 ನೇ ದಿನದ ಕಾರ್ಯಕ್ರಮ ನಡೆಯಿತು. ಶಿಬಿರದಲ್ಲಿ ಕಣಿಯೂರು  ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಶ್ರೀ ಮಹಾಬಲೇಶ್ವರ  ಸ್ವಾಮೀಜಿ ಆಶೀರ್ವಾಚನ ನೀಡಿದರು. ಕಾರ್ಯಕ್ರಮದ ಜವಾಬ್ದಾರಿಯನ್ನು ಪೆರ್ನೆವಲಯದ ಪ್ರಗತಿ ಬಂದು ಸ್ವಸಹಾಯ  ಸಂಘದವರು ಮತ್ತು  ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ  ಸದಸ್ಯರು ವಹಿಸಿದ್ದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ಬಿ.ಸಿ.ಟ್ರಸ್ಟ್ ವತಿಯಿಂದ ಮಧ್ಯವರ್ಜನ ಶಿಬಿರ | ಶ್ರೀ ಮಹಾಬಲೇಶ್ವರ  ಸ್ವಾಮೀಜಿ ಆಶೀರ್ವಚನ Read More »

ಸರ್ವೆ ಬಳಿ ಹೊಂಡಕ್ಕೆ ಬಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ | ಮೂವರು ಪ್ರಯಾಣಿಕರಿಗೆ ಗಾಯ

ಪುತ್ತೂರು: ಪುತ್ತೂರಿನಿಂದ ಪಂಜಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ರಸ್ತೆ ಬದಿಯ ಹೊಂಡದಲ್ಲಿ ಜಖಂಗೊಂಡ ಘಟನೆ ಸರ್ವೆಯಲ್ಲಿ ಸೋಮವಾರ ಸಂಜೆ ನಡೆದಿದೆ. ಘಟನೆಯಿಂದ ಮೂವರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ಜಲಜೀವನ್ ಮಿಷನ್ ಯೋಜನೆಗಾಗಿ ಹೊಂಡ ಅಗೆದು ಕಾಮಗಾರಿ ಬಳಿಕ ಮುಚ್ಚಲಾಗಿತ್ತು. ಮಳೆ ಬಂದ ಕಾರಣ ಮಣ್ಣು ಮೆತ್ತಗಾಗಿತ್ತು. ಇದರ ಮೇಲೆ ಬಸ್ ಹೋಗುತ್ತಿದ್ದಂತೆ, ಬಸ್ ಹೂತು ಹೋಗಿ ಜಖಂಗೊಂಡಿತ್ತು. ಎದುರಿನಿಂದ ಬಂದ ವಾಹನವೊಂದಕ್ಕೆ ಸೈಡ್ ಕೊಡಲು ಹೋದಾಗ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಬಳಿಕ ಪ್ರಯಾಣಿಕರನ್ನು

ಸರ್ವೆ ಬಳಿ ಹೊಂಡಕ್ಕೆ ಬಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ | ಮೂವರು ಪ್ರಯಾಣಿಕರಿಗೆ ಗಾಯ Read More »

ಪುತ್ತೂರು ಶ್ರೀ ಸತ್ಯಸಾಯಿ ಸೇವಾ ಸಮಿತಿ ಹಾಗೂ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಧ್ಯಾತ್ಮಿಕ ಶಿಕ್ಷಣ ಶಿಬಿರ

ಸವಣೂರು : ಪುತ್ತೂರು ಶ್ರೀ ಸತ್ಯಸಾಯಿ ಸೇವಾ ಸಮಿತಿ ಹಾಗೂ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಭಗವಾನ್ ಶ್ರೀಸತ್ಯಸಾಯಿ ಬಾಬಾರವರ ದಿವ್ಯ ಅನುಗ್ರಹದೊಂದಿಗೆ ವಿದ್ಯಾರಶ್ಮಿ ಪದವಿ ಕಾಲೇಜಿನ ವಿದ್ಯಾಸಿಂಚನ ಸಭಾಂಗಣದಲ್ಲಿ ಎರಡು ದಿನಗಳ ಆಧ್ಯಾತ್ಮಿಕ ಶಿಕ್ಷಣ ಶಿಬಿರ ನಡೆಯಿತು. ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ  ಅಶ್ವಿನ್ ಎಲ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳ ವೈಯಕ್ತಿಕ ಬೆಳವಣಿಗೆಗೆ ಆಧ್ಯಾತ್ಮಿಕ ಶಿಕ್ಷಣವು ಪೂರಕವಾದದ್ದು ಇದು ನಮ್ಮನ್ನು ಸನ್ಮಾರ್ಗದ ಕಡೆಗೆ ಕೊಂಡೊಯ್ಯುತ್ತದೆ ಎಂದರು. ಸತ್ಯಸಾಯಿ

ಪುತ್ತೂರು ಶ್ರೀ ಸತ್ಯಸಾಯಿ ಸೇವಾ ಸಮಿತಿ ಹಾಗೂ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಧ್ಯಾತ್ಮಿಕ ಶಿಕ್ಷಣ ಶಿಬಿರ Read More »

ಪುತ್ತೂರು ವಾಣಿಜ್ಯ ಮತ್ತು ವರ್ತಕ ಸಂಘದ ಅಧ್ಯಕ್ಷರಾಗಿ ವಾಮನ್ ಪೈ

ಪುತ್ತೂರು: ಇಲ್ಲಿನ ವಾಣಿಜ್ಯ ಮತ್ತು ವರ್ತಕ ಸಂಘದ ಅಧ್ಯಕ್ಷರಾಗಿ ವಾಮನ್ ಪೈ ಅವರು ಆಯ್ಕೆಯಾಗಿದ್ದಾರೆ. ಭಾನುವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ ಸರ್ವಾನುಮತದಿಂದ ಈ ಆಯ್ಕೆಯನ್ನು ನಡೆಸಲಾಯಿತು. ಪುತ್ತೂರು ರೋಟರಿ ಕ್ಲಬ್ ನ ಪೂರ್ವಾಧ್ಯಕ್ಷ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಪೆಟ್ರೋಲಿಯಂ ವರ್ತಕರ ಸಂಘದ ಜಿಲ್ಲಾಧ್ಯಕ್ಷನಾಗಿಯೂ ಕೆಲಸ ನಿರ್ವಹಿಸಿದ್ದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾಗಿದ್ದರು. ಬಿರುಮಲೆ ಬೆಟ್ಟ ಅಭಿವೃದ್ಧಿ ಸಮಿತಿಯ ಸದಸ್ಯನಾಗಿಯೂ ಗುರುತಿಸಿಕೊಂಡಿದ್ದಾರೆ. ವಾಮನ್ ಪೈ ಅವರು ಜಿ.ಎಸ್.ಬಿ. ಅಭಿವೃದ್ಧಿ ಸಭಾದ ಅಧ್ಯಕ್ಷರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ದರ್ಬೆ

ಪುತ್ತೂರು ವಾಣಿಜ್ಯ ಮತ್ತು ವರ್ತಕ ಸಂಘದ ಅಧ್ಯಕ್ಷರಾಗಿ ವಾಮನ್ ಪೈ Read More »

ರಿಕ್ಷಾ ಪಲ್ಟಿ: ವಿದ್ಯಾರ್ಥಿಗಳಿಗೆ ಗಾಯ

ಉಪ್ಪಿನಂಗಡಿ: ಇಲ್ಲಿನ ಕಲ್ಲೇರಿ ಸಮೀಪದಿಂದ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ರಿಕ್ಷಾ ಪಲ್ಟಿಯಾಗಿ, ವಿದ್ಯಾರ್ಥಿಗಳು ಗಾಯಗೊಂಡ ಘಟನೆ ವರದಿಯಾಗಿದೆ. ಎದುರಿನಿಂದ ಬಂದ ದ್ವಿಚಕ್ರ ವಾಹನವನ್ನು ತಪ್ಪಿಸುವ ಭರದಲ್ಲಿ ರಿಕ್ಷಾ ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ರಿಕ್ಷಾದಲ್ಲಿದ್ದ ವಿದ್ಯಾರ್ಥಿಗಳು ಗಾಯಗೊಂಡಿದ್ದು, ಉಪ್ಪಿನಂಗಡಿ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ರಿಕ್ಷಾ ಪಲ್ಟಿ: ವಿದ್ಯಾರ್ಥಿಗಳಿಗೆ ಗಾಯ Read More »

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ | ರೈತ ವಿರೋಧಿ, ಜನ ವಿರೋಧಿ ನಿಲುವಿಗೆ ಖಂಡನೆ

ಸುಳ್ಯ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ರೈತ ವಿರೋಧಿ ಮತ್ತು ಜನ ವಿರೋಧಿ ನಿಲುವುಗಳನ್ನು ಖಂಡಿಸಿ ಬಿಜೆಪಿ ಸುಳ್ಯ ಮಂಡಲ ರೈತ ಮೋರ್ಚಾ ವತಿಯಿಂದ ಸೆ. 11ರಂದು ಸುಳ್ಯ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನಾ ಸಭೆ ನಡೆಯಿತು. ಜನಪ್ರತಿನಿಧಿಗಳು, ಸಹಕಾರಿ ಸಂಘಗಳ ಪದಾಧಿಕಾರಿಗಳು, ನಿರ್ದೇಶಕರು, ಬಿಜೆಪಿಯ ಪ್ರಮುಖರು, ಬಿಜೆಪಿ ಸುಳ್ಯ ಮಂಡಲ ಸಮಿತಿ ಹಾಗೂ ರೈತ ಮೋರ್ಚಾ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ | ರೈತ ವಿರೋಧಿ, ಜನ ವಿರೋಧಿ ನಿಲುವಿಗೆ ಖಂಡನೆ Read More »

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ | ಶ್ರೀ ಕೃಷ್ಣನ ವೇಷ  ತೊಟ್ಟು ಸಂಭ್ರಮಿಸಿದ  ಪುಟಾಣಿಗಳು

ಕಾವು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕ್ರೀಡಾಕೂಟ ಹಾಗೂ ಕಾವು ಗೆಳೆಯರ ಬಳಗದ ವತಿಯಿಂದ ಮುದ್ದು ಕೃಷ್ಣ ಸ್ಫರ್ಧೆ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು. ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ ದೀಪ ಪ್ರಜ್ವಲಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಸದಸ್ಯರಾದ ಬಾಲಮುರಳಿ ಸಸ್ಪೆಟ್ಟಿ, ಲಕ್ಷ್ಮಿನಾರಾಯಣ ಭಟ್ ಪೆರ್ನಾಜೆ, ಸುಚೇತಾ ರೈ ಮತ್ತು ಗೀತಾ ಮಾಣಿಯಡ್ಕ ಚೆನ್ನಮಣೆ ಆಡುವುದರ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ | ಶ್ರೀ ಕೃಷ್ಣನ ವೇಷ  ತೊಟ್ಟು ಸಂಭ್ರಮಿಸಿದ  ಪುಟಾಣಿಗಳು Read More »

ಪುತ್ತೂರಿನಲ್ಲಿ ನ. 15ರಿಂದ 18ರತನಕ ರಾಜ್ಯಮಟ್ಟದ ಕ್ರೀಡಾಕೂಟ | ತಾಲೂಕಿನಾದ್ಯಂತ ತೆರಳುವ ಕ್ರೀಡಾಜ್ಯೋತಿಯಿಂದ ಕ್ರೀಡಾ ಸಂದೇಶದೊಂದಿಗೆ ಸ್ವಾಗತ | ಸಮಾಲೋಚನಾ ಸಭೆಯಲ್ಲಿ ರೂಪುರೇಷೆ ಬಗ್ಗೆ ಮಾಹಿತಿ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಹಾಗೂ ರಾಮಕೃಷ್ಣ ಪ್ರೌಢಶಾಲೆ ಇವುಗಳ ಜಂಟಿ ಆಶ್ರಯದಲ್ಲಿ ನ. 15ರಿಂದ 18ರತನಕ ನಡೆಯುವ ರಾಜ್ಯ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕ – ಬಾಲಕಿಯರ ಕ್ರೀಡಾಕೂಟದ ಸಮಾಲೋಚನಾ ಸಭೆ ಸೆ. 11 ಸೋಮವಾರ ಕೊಂಬೆಟ್ಟು ಬಂಟರ ಭವನದಲ್ಲಿ ನಡೆಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಶಾಸಕ ಅಶೋಕ್ ಕುಮಾರ್ ರೈ, ರಾಜ್ಯಮಟ್ಟದ ಕ್ರೀಡಾಕೂಟ ನಡೆಸುವ ಅವಕಾಶ ದೊರೆತಿರುವುದು ಪುತ್ತೂರಿನ ಯೋಗ. ಇದಕ್ಕಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ಕ್ರೀಡಾಪಟುಗಳಿಗೆ ಸೂಕ್ತ ವ್ಯವಸ್ಥೆ

ಪುತ್ತೂರಿನಲ್ಲಿ ನ. 15ರಿಂದ 18ರತನಕ ರಾಜ್ಯಮಟ್ಟದ ಕ್ರೀಡಾಕೂಟ | ತಾಲೂಕಿನಾದ್ಯಂತ ತೆರಳುವ ಕ್ರೀಡಾಜ್ಯೋತಿಯಿಂದ ಕ್ರೀಡಾ ಸಂದೇಶದೊಂದಿಗೆ ಸ್ವಾಗತ | ಸಮಾಲೋಚನಾ ಸಭೆಯಲ್ಲಿ ರೂಪುರೇಷೆ ಬಗ್ಗೆ ಮಾಹಿತಿ Read More »

error: Content is protected !!
Scroll to Top