ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಶ್ರೀ ಗಣೇಶೋತ್ಸವ: ಆಮಂತ್ರಣ ಬಿಡುಗಡೆ

ಪುತ್ತೂರು: ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಸೆ.18 ಹಾಗೂ ಸೆ.19ರಂದು ನಡೆಯುವ ಪ್ರಥಮ ವರ್ಷದ ಗೌರಿ ಹಬ್ಬ ಹಾಗೂ ಗಣೇಶೋತ್ಸವದ ಆಮಂತ್ರಣ ಬಿಡುಗಡೆ ದೇವಸ್ಥಾನದ ವಠಾರದಲ್ಲಿ ನಡೆಯಿತು. ಆಮಂತ್ರಣ ಬಿಡುಗಡೆಗೆ ಮುನ್ನ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಅರ್ಚಕ ರಾಮ ಕಲ್ಲೂರಾಯ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ಮೋಹನ್ ರೈ ಓಲೆಮುಂಡೋವು, ಮುಂಡೂರು ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಎನ್.ಎಸ್‌.ಡಿ. ಸರ್ವೆ ದೋಳ ಗುತ್ತು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ, ಸಮಿತಿಯ ಕೋಶಾಧಿಕಾರಿ […]

ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಶ್ರೀ ಗಣೇಶೋತ್ಸವ: ಆಮಂತ್ರಣ ಬಿಡುಗಡೆ Read More »

ಹಾಲು ಸಾಗಾಟದ ಟ್ಯಾಂಕರ್ ಪಲ್ಟಿ : ಚಾಲಕನಿಗೆ ಗಾಯ 

ಕಡಬ  : ಹಾಲು ಸಾಗಾಟದ ಟ್ಯಾಂಕರ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಗಾಯಗೊಂಡ ಘಟನೆ ಪಡ್ಪಿನಂಗಡಿಯಿಂದ ವರದಿಯಾಗಿದೆ. ಎಡಮಂಗಲ, ಏನೆಕಲ್ಲು, ಪಂಜ  ಹಾಲು ಉತ್ಪಾದಕರ ಸಹಕಾರ ಸಂಘಗಳ ಬಿ.ಎಂ.ಸಿ.ಯಿಂದ ಹಾಲು ಶೇಖರಿಸಿ ಸಾಗಾಟ ಮಾಡುತ್ತಿದ್ದ ನಂದಿನಿ ಹಾಲಿನ ಟ್ಯಾಂಕರ್ ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿಯ ಪಡ್ಪಿನಂಗಡಿಯಲ್ಲಿ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದೆ. ಘಟನೆಯಿಂದ ಚಾಲಕನಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಟ್ಯಾಂಕರಿನಲ್ಲಿರುವ ಹಾಲು ಸುರಕ್ಷಿತವಾಗಿರುವುದಾಗಿ ತಿಳಿದು ಬಂದಿದೆ.

ಹಾಲು ಸಾಗಾಟದ ಟ್ಯಾಂಕರ್ ಪಲ್ಟಿ : ಚಾಲಕನಿಗೆ ಗಾಯ  Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಸುಧಾಕರ್ ಶೆಟ್ಟಿ ನಿಧನ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ, ಕಿಲ್ಲೆ ಮೈದಾನ ದೇವತಾ ಸಮಿತಿ ಅಧ್ಯಕ್ಷ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸುಧಾಕರ್ ಶೆಟ್ಟಿ (82) ಭಾನುವಾರ ರಾತ್ರಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಪುರಸಭೆ ಸದಸ್ಯರಾಗಿ, ಕಾಂಗ್ರೆಸ್ ಮುಖಂಡರಾಗಿ ಗುರುತಿಸಿಕೊಂಡಿದ್ದ ಅವರು, ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೂ ಸ್ಪರ್ಧಿಸಿದ್ದರು. ಕ್ರೀಡಾಪಟುವೂ ಆಗಿದ್ದ ಇವರು, ಕ್ರೀಡಾ ಪ್ರೋತ್ಸಾಹಕನೂ ಹೌದು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಅವಿಸ್ಮರಣೀಯ ಕಾರ್ಯ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಸುಧಾಕರ್ ಶೆಟ್ಟಿ ನಿಧನ Read More »

ವಿದ್ಯಾಮಾತಾ ಅಕಾಡೆಮಿ ಸ್ಥಾಪಕ ಭಾಗ್ಯೇಶ್ ರೈ ಅವರಿಗೆ ‘ರಾಜ್ಯ ಶಿಕ್ಷಣ ಸೇವಾ ರತ್ನ’ ಪ್ರಶಸ್ತಿ ಪ್ರಧಾನ

ಪುತ್ತೂರು: ಜನಸಿರಿ ಫೌಂಡೇಶನ್ ವತಿಯಿಂದ ಕೊಡ ಮಾಡುವ ರಾಜ್ಯಮಟ್ಟದ ‘ಶಿಕ್ಷಣ ಸೇವಾ ರತ್ನ’ ಪ್ರಶಸ್ತಿಯನ್ನು ವಿದ್ಯಾಮಾತಾ ಅಕಾಡೆಮಿಯ ಭಾಗ್ಯೇಶ್ ರೈ ಅವರಿಗೆ ಬೆಂಗಳೂರಿನ ಟೌನ್ ಹಾಲ್ ನಲ್ಲಿ ಪ್ರಧಾನ ಮಾಡಲಾಯಿತು. ಹಕ್ಕಿ-ಪಿಕ್ಕಿ ಸೇರಿದಂತೆ ನಾನಾ ಬುಡಕಟ್ಟು ಜನಾಂಗದ ವಿದ್ಯಾರ್ಥಿಗಳಿಗೆ ಸರಕಾರದ ಅನೇಕ ಸವಲತ್ತುಗಳನ್ನು ಒದಗಿಸುವಲ್ಲಿ ವಹಿಸಿದ್ದ ಶ್ರಮ, ಸಮಾನ ಶಿಕ್ಷಣ ನೀತಿ ಜಾರಿಗೆ ಬರಬೇಕೆಂಬ ಹೋರಾಟಗಳಲ್ಲಿ ಭಾಗವಹಿಸಿದ್ದಕ್ಕೆ, ವಿದ್ಯಾಮಾತ ಸಂಸ್ಥೆಯ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳಗಳ ಮೂಲಕ ಉದ್ಯೋಗಾವಕಾಶಗಳನ್ನು ಕಲ್ಪಿಸಿ ಕೊಟ್ಟಿರುವುದು, ವಿದ್ಯಾಮಾತಾ ಅಕಾಡೆಮಿಯ ಮೂಲಕ

ವಿದ್ಯಾಮಾತಾ ಅಕಾಡೆಮಿ ಸ್ಥಾಪಕ ಭಾಗ್ಯೇಶ್ ರೈ ಅವರಿಗೆ ‘ರಾಜ್ಯ ಶಿಕ್ಷಣ ಸೇವಾ ರತ್ನ’ ಪ್ರಶಸ್ತಿ ಪ್ರಧಾನ Read More »

“ನೀನೊಂದು ಮುಗಿಯದ ಕವಿತೆ” ಕವನ ಸಂಕಲನ ಬಿಡುಗಡೆ | ಮುಗಿಯದ ಕವಿತೆಗೆ ಮನದ ಕವಿತೆ : ಕವಿಗೋಷ್ಠಿ

ಪುತ್ತೂರು: ಅನಾದಿ ಕಾಲದ ಜನರ ಸಂವಹನವೇ ಕಾವ್ಯ. ಇಂತಹ ಕಾವ್ಯ ಪರಂಪರೆ ಓದುಗರಿಗೆ ಹೊಸತನವನ್ನು ನೀಡುತ್ತದೆ ಎಂದು ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಮನೋಹರ ಪ್ರಸಾದ್ ಹೇಳಿದರು. ಅವರು ಭಾನುವಾರ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪುತ್ತೂರು ಘಟಕ, ಪುತ್ತೂರು ಚಿಗುರೆಲೆ ಸಾಹಿತ್ಯ ಬಳಗ ಹಾಗೂ ಸುದಾನ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಸುದಾನ ವಿದ್ಯಾಸಂಸ್ಥೆಗಳ ಎಡ್ವರ್ಡ್ ಸಭಾಂಗಣದಲ್ಲಿ  ಶಶಿಕಲಾ ವರ್ಕಾಡಿಯವರ ನೀನೊಂದು ಮುಗಿಯದ ಕವಿತೆ ಕವನ ಸಂಕಲನ ಬಿಡುಗಡೆಗೊಳಿಸಿ ಕೃತಿ ಪರಿಚಯ ಮಾಡಿ ಮಾತನಾಡಿದರು. ಕಾವ್ಯದ ಭಾಷೆ

“ನೀನೊಂದು ಮುಗಿಯದ ಕವಿತೆ” ಕವನ ಸಂಕಲನ ಬಿಡುಗಡೆ | ಮುಗಿಯದ ಕವಿತೆಗೆ ಮನದ ಕವಿತೆ : ಕವಿಗೋಷ್ಠಿ Read More »

ಸೆ.19 : ಮುಕ್ಕೂರಿನಲ್ಲಿ ಗಣೇಶೋತ್ಸವ ಕ್ರೀಡಾಕೂಟ, ಸಮ್ಮಾನ ಸಮಾರಂಭ, ಪ್ರತಿಭಾ ಪುರಸ್ಕಾರ

ಮುಕ್ಕೂರು: ಕುಂಡಡ್ಕ -ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 14 ನೇ ವರ್ಷದ ಗಣೇಶೋತ್ಸವ ಕ್ರೀಡಾಕೂಟ, ಪ್ರತಿಭಾ ಪುರಸ್ಕಾರ, ಸಮ್ಮಾನ ಸಮಾರಂಭ ಸೆ.19 ರಂದು ಮುಕ್ಕೂರಿನಲ್ಲಿ ನಡೆಯಲಿದೆ. ಪ್ರಗತಿಪರ ಕೃಷಿಕ ಮೋಹನ ಬೈಪಡಿತ್ತಾಯ ದೀಪ ಬೆಳಗಿಸಲಿದ್ದಾರೆ. ಅನಂತರ ಪೆರುವಾಜೆ ಶ್ರೀ ಜಲದುರ್ಗಾದೇವಿ ಕುಣಿತ ಭಜನ ತಂಡದಿಂದ ಕುಣಿತ ಭಜನೆ ನಡೆಯಲಿದೆ. ಸಭಾ ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಕು.ಭಾಗೀರಥಿ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭಾಗವಹಿಸಲಿದ್ದು, ಪೆರುವಾಜೆ ಗ್ರಾ.ಪಂ.ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು  ಸಭಾಧ್ಯಕ್ಷತೆ ವಹಿಸಲಿದ್ದು

ಸೆ.19 : ಮುಕ್ಕೂರಿನಲ್ಲಿ ಗಣೇಶೋತ್ಸವ ಕ್ರೀಡಾಕೂಟ, ಸಮ್ಮಾನ ಸಮಾರಂಭ, ಪ್ರತಿಭಾ ಪುರಸ್ಕಾರ Read More »

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜೀರ್ಣೋದ್ಧಾರ | ಪೂರ್ವಭಾವಿ ಸಭೆ

ಕಾಣಿಯೂರು: ಇತಿಹಾಸ ಪ್ರಸಿದ್ಧ ಕುದ್ಮಾರು ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಸಮಿತಿ ಸಭೆಯು ಕ್ಷೇತ್ರದಲ್ಲಿ ಸೆ.10ರಂದು ನಡೆಯಿತು. ಸಭೆಯಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಪದಾಧಿಕಾರಿಗಳು, ಸದಸ್ಯರು, ಜೀರ್ಣೋದ್ಧಾರ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜೀರ್ಣೋದ್ಧಾರ | ಪೂರ್ವಭಾವಿ ಸಭೆ Read More »

ತೀಯಾ ಸಮಾಜ ಸೇವಾ ಸಮಿತಿಯಿಂದ ರಕ್ತದಾನ, ನೇತ್ರದಾನ ಶಿಬಿರ

ಪುತ್ತೂರು: ತೀಯಾ ಸಮಾಜ ಸೇವಾ ಸಮಿತಿ ಪುತ್ತೂರು ಹಾಗೂ ತೀಯಾ ಸಮಾಜ ಸೇವಾ ಸಮಿತಿ ಎಣ್ಮೂರು ನಿಂತಿಕಲ್ಲು ಇದರ ಆಶ್ರಯದಲ್ಲಿ ಪುತ್ತೂರಿನ ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್‌ನಲ್ಲಿ ರಕ್ತದಾನ ಶಿಬಿರ ಹಾಗೂ ನೇತ್ರದಾನ ಶಿಬಿರ ನಡೆಯಿತು. ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್‌ನ ವೈದ್ಯಾಧಿಕಾರಿ ಡಾ.ರಾಮಚಂದ್ರ ಭಟ್ ಅವರು ಉದ್ಘಾಟಿಸಿ ಮಾತನಾಡಿ, ರಕ್ತದಾನ ಪುಣ್ಯ ಕಾರ್ಯ. 5 ತಾಲೂಕಿಗೆ ಪುತ್ತೂರು ಬ್ಲಡ್ ಸೆಂಟರ್‌ನಿಂದ ರಕ್ತ ಪೂರೈಕೆ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಸ್ವಯಂಪ್ರೇರಿತವಾಗಿ ಎಲ್ಲರೂ ರಕ್ತದಾನ ಮಾಡಬೇಕು. ವರ್ಷದ 365

ತೀಯಾ ಸಮಾಜ ಸೇವಾ ಸಮಿತಿಯಿಂದ ರಕ್ತದಾನ, ನೇತ್ರದಾನ ಶಿಬಿರ Read More »

ಸೌಜನ್ಯ ಕೊಲೆ ಪ್ರಕರಣದ ಸೂಕ್ತ ತನಿಖೆಗೆ ಸಿಎಂಗೆ ಮನವಿ | ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ನೇತೃತ್ವದ ಸಭೆ ತೀರ್ಮಾನ | ಪುತ್ತೂರು, ಕಡಬ, ಸುಳ್ಯ, ಬೆಳ್ತಂಗಡಿ ಭಾಗದ ಪ್ರಮುಖರು ಸಭೆಯಲ್ಲಿ ಭಾಗಿ

ಬೆಂಗಳೂರು: ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿ ಸೂಕ್ತ ತನಿಖೆ ನಡೆಸಲು ಆಗ್ರಹಿಸಲಾಗುವುದು ಎಂದು ಆದಿಚುಂಚನಗಿರಿ ಮಠದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ನೇತೃತ್ವದ ಸಭೆ ಮಹತ್ವದ ತೀರ್ಮಾನ ಕೈಗೊಂಡಿದೆ. ಪುತ್ತೂರು, ಸುಳ್ಯ, ಬೆಳ್ತಂಗಡಿ ಹಾಗೂ ಕಡಬ ಭಾಗದ ಪ್ರಮುಖರು ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ಸಂದರ್ಭ ಸಭೆ ನಡೆಸಿದ ಮಹಾಸ್ವಾಮೀಜಿ ಅವರು, ಈ ತೀರ್ಮಾನ ಪ್ರಕಟಿಸಿದರು. ಯಾವುದೇ ಕಾರಣಕ್ಕೂ ಪ್ರಕರಣವನ್ನು ಕಡೆಗಣಿಸದಂತೆ ಎಚ್ಚರ ವಹಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು. ಸರಿಯಾದ ತನಿಖೆ ನಡೆಸಬೇಕು.

ಸೌಜನ್ಯ ಕೊಲೆ ಪ್ರಕರಣದ ಸೂಕ್ತ ತನಿಖೆಗೆ ಸಿಎಂಗೆ ಮನವಿ | ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ನೇತೃತ್ವದ ಸಭೆ ತೀರ್ಮಾನ | ಪುತ್ತೂರು, ಕಡಬ, ಸುಳ್ಯ, ಬೆಳ್ತಂಗಡಿ ಭಾಗದ ಪ್ರಮುಖರು ಸಭೆಯಲ್ಲಿ ಭಾಗಿ Read More »

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ನರಿಮೊಗರು ಸರಸ್ವತಿ ವಿದ್ಯಾಮಂದಿರಕ್ಕೆ ಪ್ರಶಸ್ತಿ

ಪುತ್ತೂರು: ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರದ 10ನೇ ತರಗತಿಯ ವಿದ್ಯಾರ್ಥಿಗಳಾದ ಮೋಕ್ಷಿತ್ ದ್ವಿತೀಯ ಸ್ಥಾನ ಮತ್ತು ವಿಸ್ಮಯ್ ತೃತೀಯ ಸ್ಥಾನ ಪಡೆದಿದ್ದಾರೆ.ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ದೇರಳಕಟ್ಟೆಯಲ್ಲಿ ಸ್ಪರ್ಧೆ ನಡೆದಿತ್ತು.ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ನರಿಮೊಗರು ಸರಸ್ವತಿ ವಿದ್ಯಾಮಂದಿರಕ್ಕೆ ಪ್ರಶಸ್ತಿ Read More »

error: Content is protected !!
Scroll to Top