ಸೌಜನ್ಯ ಕುಟುಂಬಕ್ಕೆ ಇನ್ನೂ ನ್ಯಾಯ ಸಿಗದಿರುವುದು ದುರಾದೃಷ್ಟಕರ | ಸೌಜನ್ಯ ನೈಜ ಆರೋಪಿಗಳನ್ನು ಪತ್ತೆಹಚ್ಚುವಂತೆ ಎಬಿವಿಪಿ ವತಿಯಿಂದ ಪ್ರತಿಭಟನೆ |
ಪುತ್ತೂರು : ಸೌಜನ್ಯ ನೈಜ ಆರೋಪಿಗಳನ್ನು ಪತ್ತೆಮಾಡಿ ಸೌಜನ್ಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕು, ಘಟನೆಯನ್ನು ದಾಳವಾಗಿ ಉಪಯೋಗಿಸಿ ಧಾರ್ಮಿಕ ಶ್ರದ್ಧಾ ಕೇಂದ್ರಗಳಿಗೆ ಧಕ್ಕೆ ತರುವಂತಹ ಪ್ರಕರಣಗಳನ್ನು ತಕ್ಷಣ ಹತ್ತಿಕ್ಕಬೇಕು ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ಆಡಳಿತ ಸೌಧದ ಬಳಿ ಇರುವ ಅಮರ್ ಜವಾನ್ ಸ್ಮಾರಕದ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಎಬಿವಿಪಿ ಸಹ ಕಾರ್ಯದರ್ಶಿ ಹರ್ಷಿತ್ ಕೊಯಿಲ ಮಾತನಾಡಿ, ಸೌಜನ್ಯ ಹತ್ಯೆಗಾಗಿ 11 ವರ್ಷಗಳಾಗಿದ್ದು ಇನ್ನೂ ನ್ಯಾಯ ಸಿಗದಿರುವುದು ದುರಾದೃಷ್ಟಕರ, ನಿಜವಾದ […]










