ಎರಡು ಬೈಕ್-ಕಾರ್ ಡಿಕ್ಕಿ | ಓರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲು

ಪುತ್ತೂರು: ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಮುಕ್ರಂಪಾಡಿ ಬಳಿ ಎರಡು ಬೈಕ್‍ ಹಾಗೂ ಕಾರು ಡಿಕ್ಕಿ ಹೊಡೆದುಕೊಂಡ ಪರಿಣಾಮ ಓರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಂಪ್ಯ ಅಕ್ಷಯ ಕಾಲೇಜಿನ ವಿದ್ಯಾರ್ಥಿ ಮೆಲ್ವಿನ್ ಪುರುಷರಕಟ್ಟೆ ಎಂಬವರು ಪಲ್ಸರ್ ಬೈಕ್ ನಲ್ಲಿ ಪುತ್ತೂರು ಕಡೆಗೆ ಹೋಗುತ್ತಿದ್ದಾಗ ಮುಕ್ರಂಪಾಡಿ ತಿರುವಿನಲ್ಲಿ ಓವರ್ ಟೇಕ್ ಮಾಡುವ ಭರದಲ್ಲಿ ಕಾರಿನ ಹಿಂಬದಿ ಟಯರ್‍ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಹಾಗೂ ಕಾರಿನ ಟಯರ್‍ ಗಳು ಒಡೆದು ಹೋಗಿವೆ. ಅಲ್ಲರ್ ಬೈಕ್‍ ನ ಹಿಂದುಗಡೆ ಬರುತ್ತಿದ್ದ […]

ಎರಡು ಬೈಕ್-ಕಾರ್ ಡಿಕ್ಕಿ | ಓರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲು Read More »

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ದ.ಕ.ಜಿಲ್ಲಾ ರೈತ ಸಂಘ, ಹಸಿರುಸೇನೆಯಿಂದ ಮುಖ್ಯಮಂತ್ರಿಗೆ ಮನವಿ

ಪುತ್ತೂರು: ಬೆಳ್ತಂಗಡಿ ಸೌಜನ್ಯ ಕೊಲೆ ಪ್ರಕರಣದ ನೈಜ ಆರೋಪಿಯನ್ನು ಕಂಡು ಹಿಡಿಯುವ ನಿಟ್ಟಿನಲ್ಲಿ ನಿವೃತ್ತ ನ್ಯಾಯಾಧೀಶರ ನೇತೃತ್ವದ ನ್ಯಾಯಾಂಗ ತನಿಖೆ ನಡೆಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಪುತ್ತೂರು ಸಹಾಯಕ ಆಯುಕ್ತರ ಮೂಲಕ ಮುಖ್ಯಮಂತ್ರಿಗಳಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು. ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ಮನೋಹರ ಶೆಟ್ಟಿ ನಡಿಕಂಬಳಗುತ್ತು ಮಾತನಾಡಿ ಹನ್ನೊಂದು ವರ್ಷದ ಹಿಂದೆ ನಡೆದ ಅತ್ಯಾಚಾರ ಮತ್ತು ಕೊಲೆ

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ದ.ಕ.ಜಿಲ್ಲಾ ರೈತ ಸಂಘ, ಹಸಿರುಸೇನೆಯಿಂದ ಮುಖ್ಯಮಂತ್ರಿಗೆ ಮನವಿ Read More »

ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನಲ್ಲಿ ಓಣಂ ಆಚರಣೆ

ಪುತ್ತೂರು: ಕೇರಳದ ಅತ್ಯಂತ ಹಳೆಯ ಹಾಗೂ ಸಾಂಪ್ರದಾಯಿಕ ಹಬ್ಬವಾದ ಓಣಂ ಈಗ ಶ್ರದ್ದೆ ಭಕ್ತಿಯಿಂದ ವಿಶ್ವದೆಲ್ಲೆಡೆ ಆಚರಿಸಲ್ಪಡುತ್ತಿದ್ದು ಇದೊಂದು ಸರ್ವಜನರ ಪ್ರೀತಿಯ ಹಬ್ಬ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಯಲ್ಲಿ ನಡೆದ ತಿತ್ತಿತ್ತೋಮ್-2023 ಓಣಂ ಆಚರಣೆಯಲ್ಲಿ ಮಾತಾಡಿದರು. ಮಹಾಬಲಿಯು ಪ್ರತಿವರ್ಷವೂ ಓಣಂ ಸಂದರ್ಭದಲ್ಲಿ ಭೂಮಿಗೆ ಮರಳಿ ಬಂದು ಜನರ ಕಷ್ಟಗಳನ್ನು ನಿವಾರಿಸುತ್ತಾನೆ ಎನ್ನುವ ನಂಬಿಕೆ ಇದೆ.

ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನಲ್ಲಿ ಓಣಂ ಆಚರಣೆ Read More »

ಕಲ್ಲಾರೆ ಮಠದಲ್ಲಿ ಶ್ರೀ ಗುರು ಸಾರ್ವಭೌಮರ 352ನೇ ಆರಾಧನಾ ಮಹೋತ್ಸವದ ಎರಡನೇ ದಿನದ ಧಾರ್ಮಿಕ ಕಾರ್ಯಕ್ರಮ

ಪುತ್ತೂರು: ಕಲ್ಲಾರೆ ಶ್ರೀ ಗುರುರಾಘವೇಂದ್ರ ಸೇವಾ ಸಮಿತಿ ವತಿಯಿಂದ ಮೂರು ದಿನಗಳ ಕಾಲ ನಡೆಯುವ  ಶ್ರೀ ಗುರು ಸಾರ್ವಭೌಮರ 352ನೇ ಆರಾಧನಾ ಮಹೋತ್ಸವ ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಎರಡನೇ ದಿನವಾದ ಶುಕ್ರವಾರ ವಿಜೃಂಭಣೆಯಿಂದ ಜರಗಿತು. ಮಠದ ಪ್ರಧಾನ ಅರ್ಚಕ ಎ.ರಾಘವೇಂದ್ರ ಉಡುಪ ಅವರ ನೇತೃತ್ವದಲ್ಲಿ ಮುಂಜಾನೆ 6 ಗಂಟೆಗೆ ನಿರ್ಮಾಲ್ಯ ವಿಸರ್ಜನಾ ಪೂಜೆ, 10 ಗಂಟೆಗೆ ಪಂಚಾಮೃತಾಭಿಷೇಕ, ಶ್ರೀ ಗುರುಗಳ ಆರಾಧನೆ, ಮಧ್ಯಾಹ್ನ 1ಕ್ಕೆ ಮಹಾಪೂಜೆ ನಡೆದು ಅನ್ನಸಂತರ್ಪಣೆ ನಡೆಯಿತು. ಗುರುವಾರ ರಾತ್ರಿ ಮಹಾಪೂಜೆ

ಕಲ್ಲಾರೆ ಮಠದಲ್ಲಿ ಶ್ರೀ ಗುರು ಸಾರ್ವಭೌಮರ 352ನೇ ಆರಾಧನಾ ಮಹೋತ್ಸವದ ಎರಡನೇ ದಿನದ ಧಾರ್ಮಿಕ ಕಾರ್ಯಕ್ರಮ Read More »

ಸೆ.3 ರಂದು ಬೆಳ್ತಂಗಡಿಯಲ್ಲಿ ನಡೆಯುವ ಸೌಜನ್ಯ ಕೊಲೆ ಪ್ರಕರಣ ಹೋರಾಟಕ್ಕೆ ಸಕಲ ಸಿದ್ಧತೆ | ಶ್ರೀ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ಭಾಗಿ

ಬೆಳ್ತಂಗಡಿ : ಸೌಜನ್ಯ ಅತ್ಯಾಚಾರ ಹತ್ಯಾ ಪ್ರಕರಣದ ಹೋರಾಟಕ್ಕೆ ಸಂಬಂಧಿಸಿದಂತೆ ಸೆ.3 ರಂದು ಭಾನುವಾರ ಬೆಳ್ತಂಗಡಿಯಲ್ಲಿ ನಡೆಸಲು ಉದ್ದೇಶಿಸಲಾಗಿರುವ ಬೃಹತ್ ಜನಸಮ್ಮೇಳನಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿದ್ದು ಒಕ್ಕಲಿಗ ಸಮಾಜದ ಮಂಗಳೂರಿನ ಕಾವೂರು ಮಠದ ಸ್ವಾಮೀಜಿ ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಬೆಳ್ತಂಗಡಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದ ಜನಪರ ಸಂಘಟನೆಗಳ ಮಹಾ ಸಭೆಗೆ ಭಾಗವಹಿಸಲಿದ್ದಾರೆ. ಜಗದ್ಗುರು ಆದಿಚುಂಚನಗಿರಿಯ ಶ್ರೀ ಶ್ರೀ ಡಾ. ನಿರ್ಮಲಾನಂದ ಸ್ವಾಮೀಜಿಯವರ ಸ್ಪಷ್ಟ ನಿರ್ದೇಶನದ ಮೇರೆಗೆ ಮಂಗಳೂರಿನ

ಸೆ.3 ರಂದು ಬೆಳ್ತಂಗಡಿಯಲ್ಲಿ ನಡೆಯುವ ಸೌಜನ್ಯ ಕೊಲೆ ಪ್ರಕರಣ ಹೋರಾಟಕ್ಕೆ ಸಕಲ ಸಿದ್ಧತೆ | ಶ್ರೀ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ಭಾಗಿ Read More »

ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ ಪ್ರಜ್ಞಾ ಆಶ್ರಮಕ್ಕೆ ಧನಸಹಾಯ ಹಸ್ತಾಂತರ

ಪುತ್ತೂರು: ದ.ಕ.ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ ಪುತ್ತೂರಿನ ಬೀರಮಲೆ ಬೆಟ್ಟದಲ್ಲಿರುವ ಪ್ರಜ್ಞಾ ಆಶ್ರಮದಲ್ಲಿ ನಡೆದ 7ನೇ ವರ್ಷದ ಸಂಭ್ರಮಾಚರಣೆ ಸಂದರ್ಭದಲ್ಲಿ 2023 ಆಗಸ್ಟ್ ((84ನೇ) 2 ತಿಂಗಳ ಮಾಸಿಕ ಸೇವಾ ಯೋಜನೆಯಡಿ ಧನಸಹಾಯ ಹಸ್ತಾಂತರಿಸಲಾಯಿತು. ತಲಾ 20,000 ರೂಪಾಯಿಯಂತೆ ಜಿಲ್ಲೆಯ ಇಬ್ಬರು ಅಶಕ್ತರ ಚಿಕಿತ್ಸೆ ವೆಚ್ಚಕ್ಕಾಗಿ ಧನ ಸಹಾಯವನ್ನು ಅತಿಥಿಗಳ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು. ಈ ಸಂಧರ್ಭದಲ್ಲಿ ಅರ್ಜುನ್ ಭಂಡಾರ್ಕರ್ ಹಾಗೂ ತುಳುನಾಡ ಪೊರ್ಲು ಸೇವಾ ಟ್ರಸ್ಟ್ ನ ಸರ್ವ ಸದಸ್ಯರು ಉಪಸ್ಥಿತರಿದ್ದರು

ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ ಪ್ರಜ್ಞಾ ಆಶ್ರಮಕ್ಕೆ ಧನಸಹಾಯ ಹಸ್ತಾಂತರ Read More »

ಕೇರಳ ನಟಿ ಅಪರ್ಣಾ ನಾಯರ್ ಆತ್ಮಹತ್ಯೆ

ತಿರುವನಂತಪುರ : ಖ್ಯಾತ ಧಾರವಾಹಿ, ಚನಲಚಿತ್ರ ನಟಿ ಅಪರ್ಣಾ ಪಿ. ನಾಯರ್ (31) ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುರುವಾರ ಸಂಜೆ ತಮ್ಮ ಮನೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿರುವ ಅವರ್ಣಾ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದು ಬಂದಿದೆ. ಈ ಮೂಲಕ ನಟಿ ಅರ್ಪಣಾ ನಾಯರ್ ನಿಧನ ಚಿತ್ರರಂಗಕ್ಕೆ ದೊಡ್ಡ ಆಘಾತ ಉಂಟು ಮಾಡಿದೆ. ಆತ್ಮಹತ್ಯೆಗೆ ಕಾರಣಗಳು ಇನ್ನೂ ತಿಳಿದು ಬಂದಿಲ್ಲ. ಗುರುವಾರ

ಕೇರಳ ನಟಿ ಅಪರ್ಣಾ ನಾಯರ್ ಆತ್ಮಹತ್ಯೆ Read More »

ಮಾರ್ನಡ್ಕ ಮಹಾಬಲ ರೈ ನಿಧನ

ಪುತ್ತೂರು : ಬನ್ನೂರು ಮಾರ್ನಡ್ಕ ನಿವಾಸಿ ಮಹಾಬಲ ರೈ (80) ಶುಕ್ರವಾರ ಮುಂಜಾನೆ ನಿಧನರಾಗಿದ್ದಾರೆ. ಅಲ್ಪ ಕಾಲದ ಅಸೌಖ್ಯದಿಂದ ಪುತ್ತೂರು ಆಸ್ಪತ್ರೆಗೆ ದಾಖಲಾಗಿದ್ದ ಅವರು ನಿಧನರಾಗಿದ್ದಾರೆ. ಮಹಾಬಲ ರೈಯವರ ಈ ಹಿಂದೆ ಲಾರಿ ಮಾಲಕರಾಗಿದ್ದರು. ಮೃತರು ಇಬ್ಬರು ಪುತ್ರರು, ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಮಾರ್ನಡ್ಕ ಮಹಾಬಲ ರೈ ನಿಧನ Read More »

ವಿವೇಕಾನಂದ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ದ್ವಿತೀಯ ಸೆಮಿಸ್ಟರ್ ಫಲಿತಾಂಶ

ಪುತ್ತೂರು : ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಸ್ನಾತಕೋತ್ತರ ಪದವಿಯ ದ್ವಿತೀಯ ಸೆಮಿಸ್ಟರ್ ಫಲಿತಾಂಶವು ಆ.31 ರಂದು ಪ್ರಕಟವಾಗಿದೆ. ಕಾಲೇಜಿನ ವೆಬ್‌ಸೈಟ್‌  vcputtur.ac.in ನಲ್ಲಿ  ಪ್ರಕಟವಾಗಿದೆ. ಒಟ್ಟು ಶೇ.96 ಉತ್ತೀರ್ಣತೆ ದಾಖಲಾಗಿದ್ದು, ಎಂ.ಎ. (ಪತ್ರಿಕೋದ್ಯಮ) ಶೇ.100, ಎಂ.ಕಾಂ. ಶೇ.100, ಎಂ.ಎಸ್ಸಿ. (ರಸಾಯನಶಾಸ್ತ್ರ) ಶೇ.100, ಎಂ.ಎಸ್ಸಿ. (ಗಣಿತಶಾಸ್ತ್ರ) ಶೇ.40 ರಂತೆ ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ.ವಿ.ಜಿ.ಭಟ್ ಹಾಗೂ ಪರೀಕ್ಷಾಂಗ ವಿಭಾಗದ ಕುಲಸಚಿವ ಡಾ.ಶ್ರೀಧರ ಎಚ್.ಜಿ. ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿವೇಕಾನಂದ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ದ್ವಿತೀಯ ಸೆಮಿಸ್ಟರ್ ಫಲಿತಾಂಶ Read More »

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ | ಶಂಕಿತ ಉಗ್ರರ ನಡುವೆ ಗುಂಡಿನ ದಾಳಿ

ಮಣಿಪುರ : ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಥಮನ್‌ಪೋಕ್ಷಿಯಲ್ಲಿ ಭದ್ರತಾ ಪಡೆಗಳು ಹಾಗೂ ಶಂಕಿತ ಕುಕಿ ಉಗ್ರರ ನಡುವೆ ಗುಂಡಿನ ದಾಳಿ ನಡೆದಿದೆ. ಒಟ್ಟಾರೆ 12 ಗಂಟೆಗಳು ದಾಳಿ ನಡೆದಿದ್ದು, 8ಮಂದಿ ಮೃತಪಟ್ಟಿದ್ದಾರೆ. 18 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಆರು ಮಂದಿ ಸ್ಥಳೀಯ ಶಂಕಿತ ಕುಕಿ ಭಯೋತ್ಪಾದಕರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಗಾಯಗೊಂಡ 18 ಮಂದಿಯಲ್ಲಿ ಭದ್ರತಾ ಪಡೆಗಳ ಸಿಬ್ಬಂದಿಯೂ ಇದ್ದಾರೆ. ಗುಂಡಿನ ದಾಳಿ ನಂತರ ಬಿಷ್ಣುಪುರ ಹಾಗೂ ಕಾಂಗ್ ಭಾಯ್ ಪ್ರದೇಶದಲ್ಲಿ ಬಾಂಬ್ ಸ್ಫೋಟವೂ ಆಗಿದೆ. ಇದರಿಂದಾಗಿ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ | ಶಂಕಿತ ಉಗ್ರರ ನಡುವೆ ಗುಂಡಿನ ದಾಳಿ Read More »

error: Content is protected !!
Scroll to Top