ಪ್ರಗತಿ ಪ್ಯಾರಮೆಡಿಕಲ್‌ ಕಾಲೇಜು ಹಾಗೂ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ 76ನೇ ವರ್ಷದ ಸ್ವಾತಂತ್ರ್ಯೋತ್ಸವ

ಪುತ್ತೂರು: ಪುತ್ತೂರು ಪ್ರಗತಿ ಪ್ಯಾರಮೆಡಿಕಲ್‌ ಕಾಲೇಜು ಹಾಗೂ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ 76ನೇ ವರ್ಷದ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು. ನಿವೃತ್ತ ಭೂಸೇನೆ ಸೈನಿಕ ಸತ್ಯನಾರಾಯಣ ಭಟ್‌ ಧ್ವಜಾರೋಹಣಗೈದು ಶುಭ ಹಾರೈಸಿದರು. ಸಂಸ್ಥೆಯ ಅಧ್ಯಕ್ಷ ಡಾ.ಯು.ಶ್ರೀಪತಿ ರಾವ್‌ ಮಾತನಾಡಿ, ಇಂದಿನ ವಿದ್ಯಾರ್ಥಿಗಳು ಮುಂದಿನ ಭಾರತ ದೇಶದ ಉನ್ನತ್ತೀಕರಣಕ್ಕಾಗಿ ಸ್ವಇಚ್ಛೆಯಿಂದ ತಮ್ಮನ್ನು ತೊಡಗಿಸಿಕೊಳ್ಳಬೇಕು. ಅದೇ ರೀತಿ ಆಸ್ಪತ್ರೆಯ ಸಿಬ್ಬಂದಿಗಳು ರೋಗಿಗಳ ಜೊತೆ ಸೇವಾ ಮನೋಭಾವದಿಂದ ಕೆಲಸ ಮಾಡಬೇಕು ಎಂದರು. ಸಂಸ್ಥೆಯ ನಿರ್ಧೇಶಕ ಡಾ.ಸುಧಾ ಎಸ್‌ ರಾವ್‌, ಪ್ರಾಂಶುಪಾಲೆ ಪ್ರೀತಾ ಹೆಗ್ಡೆ, […]

ಪ್ರಗತಿ ಪ್ಯಾರಮೆಡಿಕಲ್‌ ಕಾಲೇಜು ಹಾಗೂ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ 76ನೇ ವರ್ಷದ ಸ್ವಾತಂತ್ರ್ಯೋತ್ಸವ Read More »

ಭಾರತವನ್ನು ವಿಶ್ವ ಗುರುವನ್ನಾಗಿ ಮಾಡುವುದು ನಮ್ಮ ಜವಾಬ್ದಾರಿ : ಡಾ.ಪ್ರಭಾಕರ ಭಟ್ ಕಲ್ಲಡ್ಕ

ಪುತ್ತೂರು :  ನಮ್ಮ ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 76 ವರ್ಷಗಳು ಕಳೆದಿದೆ. ಅದಕ್ಕಾಗಿ ಕೋಟ್ಯಾಂತರ ಜನರ ಬಲಿದಾನವಾಗಿದ್ದು, ಅವರ ಆ ಬಲಿದಾನದಿಂದಾಗಿಯೇ ನಮ್ಮ ನೆಲದ ಮೌಲ್ಯ, ನಮ್ಮ ಜೀವನದ ಮೌಲ್ಯಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗಿದೆ. ನಮ್ಮ ದೇಶ ಉಳಿದ ದೇಶಗಳಿಗಿಂತ ಭಿನ್ನವಾಗಿದ್ದು ಇಲ್ಲಿ ನಾವು ಕಲ್ಲು, ಮಣ್ಣು, ನೀರಲ್ಲಿ ದೇವರನ್ನು ಕಾಣುತ್ತೇವೆ. ವ್ಯಕ್ತಿಯನ್ನು ಪೂಜೆ ಮಾಡದೆ ದೇಶವನ್ನು ಪೂಜೆ ಮಾಡುವ ಜನ ಭಾರತೀಯರಾಗಿದ್ದಾರೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್  ಹೇಳಿದರು. ಪುತ್ತೂರು

ಭಾರತವನ್ನು ವಿಶ್ವ ಗುರುವನ್ನಾಗಿ ಮಾಡುವುದು ನಮ್ಮ ಜವಾಬ್ದಾರಿ : ಡಾ.ಪ್ರಭಾಕರ ಭಟ್ ಕಲ್ಲಡ್ಕ Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ

ಪುತ್ತೂರು: ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಇದೊಂದು ಉತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಸಾಹಿತ್ಯ,ಸಂಗೀತ,ನೃತ್ಯ,ನಾಟಕ ಮುಂತಾದ ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿತ್ವ, ಉಜ್ವಲ ಭವಿಷ್ಯ ನಿರ್ಮಾಣ ಸಾಧ್ಯ ಎಂದು ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಜೊತೆ ಕಾರ್‍ಯದರ್ಶಿ ರೂಪಲೇಖ ಹೇಳಿದರು. ಅವರು ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ ಕಾರ್‍ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸೋಲು ಗೆಲುವು ಶಾಶ್ವತವಲ್ಲ ಎಂಬ ಸತ್ಯದ ಅರಿವಿನೊಡನೆ ಮುನ್ನಡೆಯಿರಿ. ಅವಕಾಶಗಳನ್ನು ಉತ್ತಮ ಅಭಿಲಾಷೆಯೊಂದಿಗೆ ನಿಮ್ಮದಾಗಿಸಿಕೊಳ್ಳಿ ಮತ್ತು ಈ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ Read More »

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಸಂಭ್ರಮದ 77ನೇ ಸ್ವಾತಂತ್ರ್ಯೋತ್ಸವ

ಸವಣೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ 77ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಸಂಚಾಲಕ ಸವಣೂರು ಸೀತಾರಾಮ ರೈ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಗಲು ಅನೇಕ ವೀರರು ತಮ್ಮ ಬೆವರು, ನೆತ್ತರು ಹರಿಸಿದ್ದಾರೆ. ಇಂದು ಅವರ ತ್ಯಾಗ, ಬಲಿದಾನ ಹಾಗೂ ದೇಶಭಕ್ತಿಯನ್ನು ಕೊಂಡಾಡುವ ಕಾರ್ಯಕ್ರಮಗಳು ಎಲ್ಲೆಡೆ ನಡೆಯುತ್ತಿದೆ .ಇಂದಿನ ವಿದ್ಯಾರ್ಥಿಗಳು ಮುಂದಿನ ಉತ್ತಮ ಪ್ರಜೆಯಾಗಲು ದೇಶಭಕ್ತಿಯನ್ನು ರೂಡಿಸಿಕೊಳ್ಳಬೇಕು ಎಂದು ಹೇಳಿದರು. ದ್ವಜಾರೋಹಣ ನಂತರ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಲಾಯಿತು. ಬಳಿಕ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಭಾಷಣ

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಸಂಭ್ರಮದ 77ನೇ ಸ್ವಾತಂತ್ರ್ಯೋತ್ಸವ Read More »

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ 77ನೇ ಸ್ವಾತಂತ್ರ್ಯೋತ್ಸವ | ಆಕರ್ಷಕ ಪಥಸಂಚಲನ

ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 77ನೇ ಸ್ವಾತಂತ್ರ್ಯೋತ್ಸವ ಕಿಲ್ಲೆ ಮೈದಾನದ ಬಳಿ ಇರುವ ಅಮರ್ ಜವಾನ್ ಜ್ಯೊತಿ ಸ್ಮಾರಕದ ಬಳಿ ನಡೆಯಿತು. ಧ್ವಜಾರೋಹಣದ ಮೊದಲು ಪೊಲೀಸ್ ಇಲಾಖೆ, ಗೃಹರಕ್ಷಕ ದಳ ಹಾಗೂ ವಿವಿಧ ಶಾಲೆಗಳ ಎನ್ ಸಿಸಿ ಕೆಡೆಟ್‍ಗಳಿಂದ ಆಕರ್ಷಕ ಬ್ಯಾಂಡ್, ವಾದ್ಯಗಳೊಂದಿಗೆ ಆಕರ್ಷಕ ಪಥ ಸಂಚಲನ ನಡೆಯಿತು. ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿ, ಪೂರ್ವಜರ ತ್ಯಾಗ, ಬಲಿದಾನಗಳಿಂದ ನಡೆದ ಚಳುವಳಿಯಿಂದಾಗಿ ಸ್ವಾತಂತ್ರ್ಯ ಭಾರತವನ್ನು ಇಂದು

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ 77ನೇ ಸ್ವಾತಂತ್ರ್ಯೋತ್ಸವ | ಆಕರ್ಷಕ ಪಥಸಂಚಲನ Read More »

ದೆಹಲಿ ಕೆಂಪು ಕೋಟೆಯಲ್ಲಿ 77ನೇ ಸ್ವಾತಂತ್ರ್ಯೋತ್ಸವ | ಪ್ರಧಾನಿಯವರಿಂದ ಧ್ವಜಾರೋಹಣ

ದೆಹಲಿ: ದೆಹಲಿಯ ಕೆಂಪು ಕೋಟೆಯಲ್ಲಿ ಆಯೋಜಿಸಿದ್ದ 77ನೇ ಸ್ವಾತಂತ್ರ್ಯೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿದರು. 77ನೇ ಸ್ವಾತಂತ್ರ್ಯ ದಿನದಂದು ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಪುತ್ಥಳಿಗೆ ಪ್ರಧಾನಿ ಪುಷ್ಪ ನಮನ ಸಲ್ಲಿಸಿದರು. ಬಳಿಕ ಕೆಂಪು ಕೋಟೆ ಕಡೆ ಆಗಮಿಸಿದರು. ಕೆಂಪುಕೋಟೆ ತಲುಪಿದ ಪ್ರಧಾನಿ ಮೋದಿ ಅವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ಮತ್ತು ರಕ್ಷಣಾ ಕಾರ್ಯದರ್ಶಿ ಗಿರಿಧರ್ ಆರಾಮ್ನೆ ಸ್ವಾಗತಿಸಿದರು. ಬಳಿಕ ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ

ದೆಹಲಿ ಕೆಂಪು ಕೋಟೆಯಲ್ಲಿ 77ನೇ ಸ್ವಾತಂತ್ರ್ಯೋತ್ಸವ | ಪ್ರಧಾನಿಯವರಿಂದ ಧ್ವಜಾರೋಹಣ Read More »

ವಿಎಚ್‍ ಪಿ, ಬಜರಂಗದಳ, ಹಿಂಜಾವೇ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ

ಪುತ್ತೂರು: ಪುತ್ತೂರು: ವಿಶ್ವಹಿಂದೂ ಪರಿಷತ್, ಬಜರಂಗದಳ, ಹಿಂದು ಜಾಗರಣ ವೇದಿಕೆ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ ಸೋಮವಾರ ಸಂಜೆ ನಡೆಯಿತು. ಬೊಳುವಾರು ಓಂ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದ ಬಳಿ ಹಿಂಜಾವೇ ಗೌರವಾಧ್ಯಕ್ಷ ಡಾ.ಎಂ ಕೆ ಪ್ರಸಾದ್ ಪಂಜಿನ ಮೆರವಣಿಗೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿಎಚ್‍ಪಿ, ಬಜರಂಗದಳ, ಹಿಂಜಾವೇ ಕಾರ್ಯಕರ್ತರು ಪಾಲ್ಗೊಂಡಿದ್ದರು. ಬಳಿಕ ಮೆರವಣಿಗೆ ಆಡಳಿತ ಸೌಧದ ಬಳಿ ಇರುವ ಅಮರ ಜವಾನ್ ಸ್ಮಾರಕದ ಬಳಿ ಸಮಾಪನಗೊಂಡಿತು. ಬಳಿಕ ನಡೆದ ಸಮಾರೋಪ ಸಮಾರಂಭದಲ್ಲಿ ಡಾ.ಕಲ್ಲಡ್ಕ ಪ್ರಭಾಕರ

ವಿಎಚ್‍ ಪಿ, ಬಜರಂಗದಳ, ಹಿಂಜಾವೇ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ Read More »

ಬೈಕ್-ಓಮ್ನಿ ಡಿಕ್ಕಿ : ಬೈಕ್ ಸವಾರ ಮೃತ್ಯು

ಪುತ್ತೂರು: ನಗರದ ಹೊರವಲಯದ ಮುಕ್ರಂಪಾಡಿಯಲ್ಲಿ ಓಮ್ನಿ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರನ್ನು ಉಪ್ಪಳಿಗೆಯ ಅಜಲಡ್ಕ ನಿವಾಸಿ ನಾರಾಯಣ್ ಎಂದು ಗುರುತಿಸಲಾಗಿದೆ. ಮೂಲತಃ ಕೆಮ್ಮಾಯಿ ನಿವಾಸಿಯಾವಗಿರುವ ನಾರಾಯಣ್ ಉಪ್ಪಳಿಗೆಯಲ್ಲಿ ವಾಸವಾಗಿದ್ದು, ಅಡಕೆ ತೆಗೆಯುವುದು, ಅಡಕೆಗೆ ಔಷಧಿ ಸಿಂಪಡಣೆ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಬೈಕ್-ಓಮ್ನಿ ಡಿಕ್ಕಿ : ಬೈಕ್ ಸವಾರ ಮೃತ್ಯು Read More »

ಬಂಟರ ಸಂಘದಿಂದ ಆಟಿಡೊಂಜಿ ದಿನ| ವಿವಿಧ ಕ್ಷೇತ್ರದ ಸಾಧಕ 13 ಮಂದಿಗೆ ಚಿನ್ನದ ಪದಕ ನೀಡಿ ಗೌರವ

ಪುತ್ತೂರು: ಬಂಟರ ಸಮುದಾಯ ಎನ್ನುವುದು ನಮಗೆ ಹೆಮ್ಮೆ ಎನಿಸಿದ್ದು, ಸಂಘ ಇಂದು  ವಿಸ್ತಾರವಾಗಿ ಬೆಳೆದು ಫಲ ನೀಡಿದೆ ಎಂದು ಪುತ್ತೂರು ಬಂಟರ ಸಂಘದ ಮಾಜಿ ಅಧ್ಯಕ್ಷ ಹಾಗೂ ಸವಣೂರು ವಿದ್ಯಾರಶ್ಮಿ ವಿದ್ಯಾಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ಹೇಳಿದರು. ಅವರು ಭಾನುವಾರ ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿ ಆಶ್ರಯದಲ್ಲಿ ಮಹಿಳಾ, ಯುವ, ವಿದ್ಯಾರ್ಥಿ ಬಂಟರ ಸಂಘದ ಸಹಯೋಗದಲ್ಲಿ ಕೊಂಬೆಟ್ಟು ಬಂಟರ ಭವನದಲ್ಲಿ ಜರಗಿದ ಆಟಿಡೊಂಜಿ ದಿನ ಮತ್ತು ಸಾಧಕರಿಗೆ ಚಿನ್ನದ ಪದಕ

ಬಂಟರ ಸಂಘದಿಂದ ಆಟಿಡೊಂಜಿ ದಿನ| ವಿವಿಧ ಕ್ಷೇತ್ರದ ಸಾಧಕ 13 ಮಂದಿಗೆ ಚಿನ್ನದ ಪದಕ ನೀಡಿ ಗೌರವ Read More »

ಎಡನೀರಿನಲ್ಲಿ ಹಿರಿಯರ ಸಮಾವೇಶ, ಕಲಾವಿದರಿಗೆ ಸನ್ಮಾನ

ಎಡನೀರು: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನವು ಕಳೆದೆರಡು ವರ್ಷಗಳಿಂದ ನಡೆಸುತ್ತಿರುವ  ಸೇವಾ ಚಟುವಟಿಕೆಗಳು ಉದಾತ್ತ  ಭಾವನೆಯಿಂದ ಕೂಡಿದ್ದು ಸಮಾಜಕ್ಕೆ ಧೈರ್ಯವನ್ನು ತುಂಬುವ ಕಾರ್ಯವನ್ನು ಮಾಡುತ್ತಿದೆ. ಪರಿಪಕ್ವ ಮನಸ್ಸಿನ ಹಿರಿಯರು ಸಮಾಜಕ್ಕೆ ಮತ್ತು ಯುವ ಜನಾಂಗಕ್ಕೆ ಮಾರ್ಗದರ್ಶನ ನೀಡುವ ಎಲ್ಲಾ ಕಾರ್ಯಕ್ರಮಗಳಿಗೆ ಮಠದಿಂದ ಸದಾ ಪ್ರೋತ್ಸಾಹವಿದೆ ಎಂದು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ತಿಳಿಸಿದರು. ಬಂಟ್ವಾಳ ಮೆಲ್ಕಾರ್ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವತಿಯಿಂದ ಮಠದ ಸಹಯೋಗದಲ್ಲಿ ಚಾತುರ್ಮಾಸ್ಯ ಸಭಾಂಗಣದಲ್ಲಿ ಜರಗಿದ ಹಿರಿಯರ

ಎಡನೀರಿನಲ್ಲಿ ಹಿರಿಯರ ಸಮಾವೇಶ, ಕಲಾವಿದರಿಗೆ ಸನ್ಮಾನ Read More »

error: Content is protected !!
Scroll to Top