ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವುದು ಪ್ರತಿಯೊಬ್ಬರ ಜವಾಬ್ದಾರಿ : ಎಸ್‍ಐ ವಿದ್ಯಾ ಜೆ.ಕೆ. | ಪೋಕ್ಸೋ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಮಾಹಿತಿ ಕಾರ್ಯಕ್ರಮ
ಮಾಣಿಲ : ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ವಿಟ್ಲ ಪೊಲೀಸ್ ಠಾಣೆಯ ಎಸ್ ಐ ವಿದ್ಯಾ ಜೆ ಕೆ ಹೇಳಿದರು. ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು. ಸಮಾಜದಲ್ಲಿ ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಉದಾಹರಿಸುತ್ತಾ ಇಂತಹ ಅಮಾನವೀಯ ಕೃತ್ಯಗಳನ್ನು ತಡೆಗಟ್ಟುವಲ್ಲಿ ಸಮಾಜದ ಪ್ರತಿಯೊಬ್ಬರೂ ಸಹಕರಿಸಬೇಕಾದ ಅನಿವಾರ್ಯತೆಯನ್ನು ಒತ್ತಿ ಹೇಳಿದರು. ವಿದ್ಯಾರ್ಥಿಗಳು ಹಾಗೂ ಪೋಷಕರೊಂದಿಗೆ ಸಂವಾದದಲ್ಲಿ ಇವರು ಪೊಲೀಸ್ […]










