ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳನ್ನ ಪತ್ತೆ ಹಚ್ಚುವಂತೆ ಆಗ್ರಹ | ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದಿಂದ ಪತ್ರಿಕಾಗೋಷ್ಠಿ
ಮಂಗಳೂರು : ಉಜಿರೆಯಲ್ಲಿ 2011ರಲ್ಲಿ ನಡೆದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆ ನಡೆಸಿ ನೈಜ ಆರೋಪಿಗಳನ್ನು ಬಂಧಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪದ ಹೋರಾಟ ನಡೆಸುವುದಾಗಿ ಮಂಗಳೂರಿನ ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಎಚ್ಚರಿಸಿದೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಅಧ್ಯಕ್ಷ ಗುರುದೇವ್ ಯು.ಬಿ. ಮಾತನಾಡಿ, ಸೌಜನ್ಯ ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಆರೋಪಿ ನಿರಪರಾಧಿ ಎಂದು ನ್ಯಾಯಾಲಯ ಘೋಷಿಸಿದೆ. ಪ್ರಕರಣದ ನೈಜ ಆರೋಪಿಗಳು ಯಾರು […]










